Breaking News

ರಾಜ್ಯ

ಬೀಡಾಡಿ ದನ ತಿವಿದು ವೃದ್ಧ ಸಾವು

ಗದಗ: ಬೀಡಾಡಿ ದನವೊಂದು ತಿವಿದ ಪರಿಣಾಮ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಟಗೇರಿಯ ಹೊಸ ಬನಶಂಕರಿ ಗುಡಿ ಸಮೀಪ ಬುಧವಾರ ಬೆಳಿಗ್ಗೆ ನಡೆದಿದೆ. ಬೆಟಗೇರಿಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಲಕ್ಷ್ಮೇಶ್ವರ ತಾಲ್ಲೂಕಿನ ಶಿಗ್ಲಿ ಗ್ರಾಮದ ಶಂಕರಪ್ಪ ಹೊಳೆ (70) ಮೃತಪಟ್ಟವರು.   ಬುಧವಾರ ಬೆಳಿಗ್ಗೆ 8ರ ಸುಮಾರಿಗೆ ಬೆಟಗೇರಿಯ ಸರ್ಕಾರಿ ಪ್ರಾಥಮಿಕ ಶಾಲೆ ನಂ.7ರ ಸಮೀಪ ಬೀಡಾಡಿ ದನಗಳು ಕಾದಾಡುತ್ತಿದ್ದವು. ಈ ವೇಳೆ ರಸ್ತೆ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ಶಂಕಪ್ಪ …

Read More »

ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ …

Read More »

BJP, ಕಾಂಗ್ರೆಸ್‌ಗೆ ದಲಿತರು, ಮುಸ್ಲಿಮರ ಬಗ್ಗೆ ಕಾಳಜಿ ಇಲ್ಲ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ‘ಆರಕ್ಷಣ ಬಚಾವೊ ಯಾತ್ರೆ’ ನಡೆಸುತ್ತಿರುವ ವಂಚಿತ್ ಬಹುಜನ ಅಘಾಡಿ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಅವರು ಬಿಜೆಪಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ಆ ಎರಡು ಪಕ್ಷಗಳಿಗೂ ದಲಿತರು, ಆದಿವಾಸಿಗಳು, ಮುಸ್ಲಿಮರು ಮತ್ತು ಇತರ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಲ್ಲ. ಆದರೆ, ಚುನಾವಣೆಗಳಲ್ಲಿ ಅವರ ಮತಗಳ ಪಡೆಯಲು ಬಯಸುತ್ತಾರೆ ಎಂದು ಪ್ರಕಾಶ್ ಟೀಕಿಸಿದ್ದಾರೆ. …

Read More »

ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶ , ಕಲ್ಯಾಣ’ದಲ್ಲಿ ‘ದಮ್‌ ಮಾರೊ ದಮ್’!

ಕಲಬುರಗಿ: ನೆರೆಯ ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶದ ರಾಜ್ಯಗಳಿಗೆ ಗಡಿ ಹಂಚಿಕೊಂಡಿರುವ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಪೈಕಿ ಕಲಬುರಗಿ ಮತ್ತು ಬಳ್ಳಾರಿಯಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿದ್ದು, ‘ಕಲ್ಯಾಣ’ದ ನಾಡಿಗೆ ಅಪಕೀರ್ತಿ ತಟ್ಟುತ್ತಿದೆ.   ಕಲ್ಯಾಣದ ಹೆಬ್ಬಾಗಿಲು ಎಂದು ಕರೆಸಿಕೊಳ್ಳುತ್ತಿರುವ ಕಲಬುರಗಿ ಈಗ ಗಾಂಜಾ, ಅಫೀಮು ಸೇರಿದಂತೆ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಣೆ ಪ್ರಕರಣಗಳ ಹಣೆಪಟ್ಟಿಯನ್ನೂ ಕಟ್ಟಿಕೊಳ್ಳುತ್ತಿದೆ. ಇದಕ್ಕೆ ಬೀದರ್, ವಿಜಯನಗರ ಹಾಗೂ …

Read More »

ತಿಂಗಳಲ್ಲೇ ಕಿತ್ತು ಹೋದ ಡಾಂಬರು

ಚಿಂಚೋಳಿ: ಪಟ್ಟಣದ ಹೊರವಲಯದ ಸಿದ್ಧಸಿರಿ ಎಥೆನಾಲ್ ಕಂಪನಿಯಿಂದ ಚಿಮ್ಮಾಈದಲಾಯಿ ಗ್ರಾಮದವರೆಗೆ ಲೋಕೋಪಯೋಗಿ ಇಲಾಖೆ ನಡೆಸಿದ ರಸ್ತೆ ಕಾಮಗಾರಿ ಹಳ್ಳ ಹಿಡಿದಿದೆ. ಮಳೆಯನ್ನೂ ಲೆಕ್ಕಿಸದೇ ರಸ್ತೆಗೆ ಹಾಕಿದ್ದ ಡಾಂಬರು ಒಂದು ವಾರದೊಳಗೆ ಕಿತ್ತುಹೋಗಿದ್ದು,ರಸ್ತೆ ಹದಗೆಟ್ಟಿದೆ.   ಹೆದ್ದಾರಿಯ ಅಗಲೀಕರಣ, ಡಾಂಬರೀಕರಣ ಸೇರಿದಂತೆ ಹಲವು ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. 2023ರ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಮಗಾರಿ ಆರಂಭಿಸಿ ರಸ್ತೆಯ ಎರಡು ಬದಿಯ ಭುಜವನ್ನು ಅಗೆದು ಮುರುಮ್ ಮತ್ತು ಕಾಂಕ್ರಿಟ್ ಭರ್ತಿ ಮಾಡುವುದರ …

Read More »

ಬಾಲಕನ ಮೇಲೆ ಬೀದಿ ನಾಯಿ ದಾಳಿ

(ವಿಜಯನಗರ): ನಗರದ ಚಿತ್ತವಾಡ್ಗಿ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿದ್ದು, ಬಾಲಕನ ಕೆನ್ನೆ, ಬೆನ್ನು, ಕಾಲಿಗೆ ಗಂಭೀರ ಗಾಯವಾಗಿದೆ. ಒಂದನೇ ವಾರ್ಡ್‌ ಚಿತ್ತವಾಡ್ಗಿ ಕಾಕರ ಓಣಿಯ ಗಂಕಪ್ಪ ಅವರ ಪುತ್ರ ಪರಶುರಾಮ ಮನೆ ಸಮೀಪ ಆಟವಾಡುತ್ತಿದ್ದಾಗ ಒಂದು ನಾಯಿ ದಾಳಿ ನಡೆಸಿ ಆತನ ಕೆನ್ನೆಯ ಮಾಂಸ ಕಚ್ಚಿ ಎಳೆದಿದೆ. ಜತೆಗೆ ಬೆನ್ನು, ಕಾಲಿಗೂ ಗಾಯವಾಗಿದೆ. ತಕ್ಷಣ ಬಾಲಕನನ್ನು ಇಲ್ಲಿನ 100 ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, …

Read More »

ಜೀವ ವಿಮೆ ಮತ್ತು ವೈದ್ಯಕೀಯ ವಿಮೆ ಪ್ರೀಮಿಯಂ ಮೇಲಿನ ‘GST’ ತೆಗೆದುಹಾಕಿ : ಹಣಕಾಸು ಸಚಿವರಿಗೆ ನಿತಿನ್ ಗಡ್ಕರಿ ಪತ್ರ

ಜೀವ ವಿಮೆ ಮತ್ತು ವೈದ್ಯಕೀಯ ವಿಮೆ ಪ್ರೀಮಿಯಂ ಮೇಲಿನ ‘GST’ ತೆಗೆದುಹಾಕಿ : ಹಣಕಾಸು ಸಚಿವರಿಗೆ ನಿತಿನ್ ಗಡ್ಕರಿ ಪತ್ರ ನವದೆಹಲಿ : ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಜೀವ ಮತ್ತು ವೈದ್ಯಕೀಯ ವಿಮಾ ಪ್ರೀಮಿಯಂಗಳ ಮೇಲಿನ 18% ಸರಕು ಮತ್ತು ಸೇವಾ ತೆರಿಗೆಯನ್ನು (GST) ಹಿಂತೆಗೆದುಕೊಳ್ಳುವಂತೆ ಕೋರಿದ್ದಾರೆ. ಜಿಎಸ್ಟಿ ಜೀವನದ ಅನಿಶ್ಚಿತತೆಗಳಿಗೆ ತೆರಿಗೆ …

Read More »

ಬೆಳಗಾವಿ ಹುಡುಗನ ಫ್ಯೂಸ್ ಕಿತ್ತ ಗೌಡ್ತಿ

ಬೆಳಗಾವಿ : ಬೆಂಗಳೂರಿನ ಕಸ್ತೂರಬಾ ನಗರದ ಯುವತಿ ಪ್ರಿಯಾಂಕಾ(24) ಬೆಳಗಾವಿಯ ಅಲಾರವಾಡ ಗ್ರಾಮದ ರಾಹುಲ್ ಎಂಬ ಯುವಕ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿ ಪರಿಚಯ ಪ್ರೀತಿಗೆ ತಿರುಗಿ ಈಗ ಮದುವೆಯಾಗಿದ್ದ ಸುದ್ದಿ ನಿನ್ನೆ ವೈರಲ್ ಆಗಿತ್ತು. ಆದರೆ ಸಧ್ಯ ಈ ಪ್ರಕರಣ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಪ್ರಾರಂಭವಾದ ಪ್ರೀತಿ ಮದುವೆಗೆ ಬಂದು ನಿಂತಿತ್ತು. ನಿನ್ನೆಯಷ್ಟೇ ಯುವತಿ ಹಾಗೂ ಬೆಳಗಾವಿ ಯುವಕನ ಜೊತೆ ಮದುವೆಯಾಗಿತ್ತು.

Read More »

ಕೃಷ್ಣಾ ನದಿ ನೀರಿನ‌ ಮಟ್ಟ ಹೆಚ್ಚಳ

ಬೆಳಗಾವಿ : ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ಕೃಷ್ಣಾ ನದಿ ಪ್ರವಾಹ ಹೆಚ್ಚಳವಾಗಿದೆ. ಈಗಾಗಲೇ ಜಿಲ್ಲೆಯ 35 ಕ್ಕೂ ಅಧಿಕ ಸೇತುವೆಗಳು ಜಲಾವೃತಗೊಂಡಿದ್ದು ಕೃಷ್ಣಾ ನದಿ ಪಾತ್ರದ ಸುಮಾರು 60 ಕ್ಕೂ ಅಧಿಕ ಗ್ರಾಮಗಳಿಗೆ ನೀರು ಆವರಿಸಿದೆ. ನದಿ ಪಾತ್ರದ ಮನೆಗಳು ನೀರಿನಲ್ಲಿ ಮುಳುಗಡೆಯಾಗಿವೆ. ಕೃಷ್ಣಾ ನದಿ‌ ನೀರಿನ ಮಟ್ಟದಲ್ಲಿ ಏರಿಕೆ ಖಂಡಿದ್ದು ಜನರಲ್ಲಿ ಆತಂಕ ಮನೆಮಾಡಿದೆ. ಸಧ್ಯ ಮಳೆ ಆರ್ಭಟ ಕಡಿಮೆಯಾದರು ಪ್ರವಾಹದಲ್ಲಿ ಕಡಿಮೆಯಾಗುವ ಲಕ್ಷಣ …

Read More »

ಪತಿ ಕೊಲೆ: ಪತ್ನಿ, ಪ್ರಿಯಕರಗೆ ಜೀವಾವಧಿ ಶಿಕ್ಷೆ

ಮೂಡಲಗಿ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ವಡೇರಹಟ್ಟಿ ಗ್ರಾಮದಲ್ಲಿ 2023ರಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ ಮೃತ ವ್ಯಕ್ತಿಯ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಿ, 12ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ತೀರ್ಪು ನೀಡಿದೆ. ಘಟನೆ ಹಿನ್ನೆಲೆ: ಗ್ರಾಮದ ಶಂಕರ ಜಗಮುತ್ತಿ ಅವರ ಪತ್ನಿ ಸಿದ್ದವ್ವ, ಭೈರನಟ್ಟಿಯ ಶ್ರೀಧರ ತಳವಾರ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇಬ್ಬರೂ ಸಂಚು ರೂಪಿಸಿ …

Read More »