ಬೆಳಗಾವಿ, ಜುಲೈ 28: ಜಿಲ್ಲೆಯಲ್ಲಿ 7 ನದಿಗಳಿಂದ ಪ್ರವಾಹ(flood)ಪರಿಸ್ಥಿತಿ ನಿರ್ಮಾಣವಾಗಿದೆ. 40 ಗ್ರಾಮಗಳಲ್ಲಿ ನದಿಗಳ ಪ್ರವಾಹದಿಂದ ಜನರು ಅತಂತ್ರವಾಗಿದ್ದಾರೆ. ಘಟಪ್ರಭಾ ನದಿ (Ghataprabha River) ಸೃಷ್ಟಿಸಿರುವ ಅವಾಂತರಕ್ಕೆ ಈಗ ಜನ ತತ್ತರಿಸಿ ಹೋಗಿದ್ದಾರೆ. ತನ್ನ ಪಾತ್ರವನ್ನ ಬಿಟ್ಟು ಹರಿಯುತ್ತಿರುವ ನದಿ ಊರಿಗೆ ಊರನ್ನೇ ತನ್ನ ಒಡಲಿಗೆ ಹಾಕಿಕೊಂಡಿದೆ. ಸೇತುವೆ, ದೇವಸ್ಥಾನ, ಬ್ಯಾಂಕ್ ಮತ್ತು ಮನೆಗಳು ಹೀಗೆ ಎಲ್ಲವೂ ಜಲಾವೃತವಾಗಿವೆ. ಪ್ರವಾಹದಿಂದ ಬಿದಿಗೆ ಬಿದ್ದ 1 ಸಾವಿರಕ್ಕೂ ಹೆಚ್ಚು ಕುಟುಂಬಗಳು ಗೋಕಾಕ್, ನಿಪ್ಪಾಣಿ, ಅಥಣಿ, ಮೂಡಲಗಿ, …
Read More »ಮುಡಾ ಹಗರಣ ಸ್ವಪಕ್ಷದವರ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ ಯತ್ನಾಳ್
ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡಾ ಪಾಟೀಲ ಯತ್ನಾಳ್, ರಾಜೀವ್ ಯಡ್ಡಿಯೂರಪ್ಪ ಶಿಷ್ಯನೋ, ವಿಜಯೇಂದ್ರ ಶಿಷ್ಯನೋ ಯಾರೆಂದು ಹೇಳಬೇಕು. ಮುಡಾ ಹಗರಣ ರಾಜೀವ್ ಬಿಜೆಪಿಯಲ್ಲೇ ಇದ್ದಾಗ ನಡೆದ ವಿಚಾರ. ಈಗ ಅವನು ಕಾಂಗ್ರೆಸ್ ಸೇರಿದ್ದಾನೆ ಎಂದು ಸ್ವಪಕ್ಷದವರ ವಿರುದ್ಧವೇ ಹೊಸ ಬಾಂಬ್ ಸಿಡಿಸಿದಿದ್ದಾರೆ. ವಿಜಯಪುರ, ಜುಲೈ 28: ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್(HV Rajeeva)ಬಿಜೆಪಿಯಲ್ಲೆ ಇದ್ದಾಗ ಆದ ಹಗರಣ ನಡೆದಿದೆ. ಈಗ ಅವರು ಕಾಂಗ್ರೆಸ್ ಸೇರಿದ್ದಾನೆ. ಕಾಂಗ್ರೆಸ್ಗೆ ಯಾಕೆ ಸೇರಿದ್ದಾರೆ …
Read More »ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ!
ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ! ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಬರೋಬ್ಬರಿ 560 ರೂನಷ್ಟು ಬೆಲೆ ಇಳಿಕೆ ಆಗಿರುವುದು ಗಮನಾರ್ಹ. ಬಜೆಟ್ ಪೂರ್ವದಿಂದಲೇ ಚಿನ್ನದ ಬೆಲೆ ಇಳಿಯಲು ಆರಂಭಿಸಿತಾದರೂ ಬಜೆಟ್ನಲ್ಲಿ ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಇಳಿಸಿದ ಬಳಿಕ ತೀವ್ರ ಮಟ್ಟದಲ್ಲಿ ಭಾರತದಲ್ಲಿ ಬೆಲೆ ಕುಸಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ …
Read More »ಅಂದು ಕಾನ್‌ಸ್ಟೆಬಲ್, ಇಂದು ರಾಣೆಬೆನ್ನೂರು ಪೌರಾಯುಕ್ತ
ಹಾವೇರಿ: ರಾಣೆಬೆನ್ನೂರು ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ಫಕ್ಕೀರಪ್ಪ ಇ. ಇಂಗಳಗಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ಕೆಲಸ ಮಾಡುತ್ತಿದ್ದ ಇಂಗಳಗಿ ಅವರನ್ನು ರಾಣೆಬೆನ್ನೂರು ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿತ್ತು. ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ತರ್ಲಘಟ್ಟ ಗ್ರಾಮದ ಫಕ್ಕೀರಪ್ಪ, ಸ್ವಂತ ಊರಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದಿದ್ದಾರೆ. ನಂತರ, ಕುಂದಗೋಳ …
Read More »ರಾಣೆಬೆನ್ನೂರು | ಯೂರಿಯಾ ಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ; ರೈತರ ಆಕ್ರೋಶ
ರಾಣೆಬೆನ್ನೂರು: ‘ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮುಂಗಾರು ಹಂಗಾಮಿಗೆ ಬಿತ್ತನೆ ಮಾಡಿದ ಬೆಳೆಗಳಿಗೆ ಮೇಲು ಗೊಬ್ಬರವಾಗಿ ನೀಡಲು ಯೂರಿಯಾ ಗೊಬ್ಬರ ಅತ್ಯವಶ್ಯ. ಸರ್ಕಾರ ಯೂರಿಯಾ ಗೊಬ್ಬರ ಪೂರೈಸಲು ಮುಂಜಾಗ್ರತಾ ಕ್ರಮ ಕೈಗೊಂಡರೂ ನಗರದ ಆಗ್ರೋ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿದ ದರ ₹266 ಇದ್ದರೂ, ವ್ಯಾಪಾರಸ್ಥರು ₹ 300 ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಕೃಷಿ ಅಧಿಕಾರಿಗಳು ಕ್ರಮಕೈಗೊಂಡಿಲ್ಲ’ ಎಂದು ತಾಲ್ಲೂಕಿನ ಹುಲ್ಲತ್ತಿ ಗ್ರಾಮದ ಜಗದೀಶ ಕೆರೂಡಿ ಆರೋಪಿಸಿದ್ದಾರೆ. …
Read More »ಹುಬ್ಬಳ್ಳಿ | ಪಾಲಿಕೆಯ ವ್ಯಾಯಾಮ ಶಾಲೆ ಕಟ್ಟಡ ಶಿಥಿಲ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಚೆನ್ನಪೇಟೆಯಲ್ಲಿನ ನಾರಾಯಣ ಸೋಪಾದಲ್ಲಿರುವ ಮಹಾನಗರ ಪಾಲಿಕೆಯ ವ್ಯಾಯಾಮ ಶಾಲೆ ಕಟ್ಟಡವು ಸಂಪೂರ್ಣವಾಗಿ ಶಿಥಿಲವಾಗಿದ್ದು, ಇಡೀ ಕಟ್ಟಡ ಕುಸಿಯುವ ಸ್ಥಿತಿಯಲ್ಲಿದೆ. ಅರವಿಂದ ನಗರದ ಸೇರಿದಂತೆ ಚೆನ್ನಪೇಟೆ, ನಾರಾಯಣ ಸೋಪಾ, ಪಾಂಡುರಂಗ ಕಾಲೊನಿಯ ಯುವಕರ ವ್ಯಾಯಾಮಕ್ಕೆ ಅನುಕೂಲವಾಗಲಿ ಎಂದು 40 ವರ್ಷಗಳ ಹಿಂದೆ 50X50 ಅಳತೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ವ್ಯಾಯಾಮ ಶಾಲೆ ಕಟ್ಟಡ ನಿರ್ಮಿಸಲಾಗಿತ್ತು. ಕಟ್ಟಡವು ಕ್ರಮೇಣ ಶಿಥಿಲ ಹಂತ ತಲುಪಿದಂತೆ, ನಿರ್ವಹಣೆ ಇಲ್ಲದೇ ಪಾಳು ಬಿದ್ದಿತು. …
Read More »ಮಲಪ್ರಭಾ ನದಿ ದಡದಲ್ಲಿ ಮೊಸಳೆಗಳು
ಬೈಲಹೊಂಗಲ: ಸಮೀಪದ ಮಾಟೊಳ್ಳಿ, ಮಲ್ಲೂರ, ಹೊಸೂರ ಗ್ರಾಮದ ಮಲಪ್ರಭಾ ನದಿ ದಡದಲ್ಲಿ ಬೃಹತ್ ಗಾತ್ರದ ಮೊಸಳೆಗಳು ಶನಿವಾರ ಪ್ರತ್ಯಕ್ಷವಾಗಿವೆ. ಖಾನಾಪೂರ ಭಾಗದಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಮಲಪ್ರಭಾ ನದಿಯ ಒಡಲು ದಿನೇ, ದಿನೇ ಹೆಚ್ಚುತ್ತಿದೆ. ಹರಿಯುವ ನದಿಯ ನೀರಿನಲ್ಲಿ ಸರಾಗ ಹರಿದು ಬರುತ್ತಿರುವ ಬೃಹತ್ ಗಾತ್ರದ ಮೊಸಳೆಗಳು ನದಿ ಪಾತ್ರದ ಗ್ರಾಮಸ್ಥರಲ್ಲಿ, ರೈತರಲ್ಲಿ ಆತಂಕ ಉಂಟು ಮಾಡಿವೆ. ನದಿಯ ದಂಡೆಯ ಮೇಲೆ ಆಗಾಗ ಕಾಣಿಸಿಕೊಳ್ಳುತ್ತಿರುವ ಬೃಹತ್ ಗಾತ್ರದ ಮೊಸಳೆಗಳನ್ನು ಯುವಕರು …
Read More »ಬೆಳಗಾವಿ | ಮನೆಗಳು ಜಲಾವೃತ: ಕಾಳಜಿ ಕೇಂದಲ್ಲಿ ಆಶ್ರಯ
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಜಿಲ್ಲೆಯ ಜಲಾನಯನ ಪ್ರದೇಶಗಳಲ್ಲಿ ಶನಿವಾರ ಮಳೆ ಅಬ್ಬರ ತುಸು ತಗ್ಗಿದೆ. ಅಣೆಕಟ್ಟೆಗಳಿಂದ ನಿರಂತರ ನೀರು ಹರಿಸುತ್ತಿರುವ ಕಾರಣ, ಜಿಲ್ಲೆಯ 41 ಸೇತುವೆಗಳು ಇನ್ನೂ ನೀರಿನಲ್ಲಿ ಮುಳುಗಿವೆ. ಅಂದಾಜು 700ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಹುಕ್ಕೇರಿ ತಾಲ್ಲೂಕಿನ ಹೆಬ್ಬಾಳ ಬಳಿ ರಾಷ್ಟ್ರೀಯ ಹೆದ್ದಾರಿ-48ರ ಮೇಲೆ ಅಪಾರ ಪ್ರಮಾಣ ನೀರು ಹರಿಯಿತು. ಇದರಿಂದ ಕೆಲ ಸಮಯ ಸಂಚಾರ ಬಂದ್ ಆಯಿತು. ಹೆದ್ದಾರಿ ಮೇಲೆಯೇ ಮಣ್ಣು-ಕಲ್ಲು ಸುರಿದು ಅದರ ಮೇಲೆ …
Read More »ಗದಗ: ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಜಿಲ್ಲಾ ಪ್ರವಾಸ
ಗದಗ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಭಾನುವಾರ ಮತ್ತು ಸೋಮವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಭಾನುವಾರ ಬೆಳಿಗ್ಗೆ 10ಕ್ಕೆ ನಗರದ ಡಾ. ಅಂಬೇಡ್ಕರ್ ಭವನದಲ್ಲಿ ನಡೆಯುವ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿಯಿಂದ ಏರ್ಪಡಿಸಿರುವ ಎರಡನೇ ಜಿಲ್ಲಾ ಮಟ್ಟದ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 11ಕ್ಕೆ ಕೆ.ಎಚ್.ಪಾಟೀಲ ಸಭಾ ಭವನದಲ್ಲಿ ನಡೆಯುವ ಪಂಚಮಸಾಲಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ …
Read More »ಕಾಗವಾಡ | ಪ್ರವಾಹ: ಐದು ಪ್ರಮುಖ ರಸ್ತೆಗಳು ಮುಳುಗಡೆ
ಕಾಗವಾಡ: ತಾಲ್ಲೂಕಿನ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗುತ್ತಿದ್ದು, ಪ್ರಮುಖ ಐದು ರಸ್ತೆಗಳ ಮೇಲೆ ನದಿಯ ನೀರು ಹರಿಯುತ್ತಿದ್ದರಿಂದ ಸಂಚಾರ ಬಂದ್ ಮಾಡಲಾಗಿದೆ. ತಾಲ್ಲೂಕಿನ ಅಥಣಿ-ಕಾತ್ರಾಳ, ಉಗಾರ ಬಿ.ಕೆ. ಕುಸುನಾಳ, ಉಗಾರ ಬಿ.ಕೆ- ಶಿರಗುಪ್ಪಿ,ಕಾತ್ರಾಳ-ಬಣಜವಾಡ, ಮೋಳವಾಡ-ಇಂಗಳಿ ರಸ್ತೆಗಳು ಜಲಾವೃತ ಆಗಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಕಾಗವಾಡ ಪಿಎಸ್‌ಐ ಎಂ.ಬಿ. ಬಿರಾದಾರ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಿಬ್ಬಂದಿ ನಿಯೋಜಿಸಿ ಸಂಚಾರ ಬಂದ್ ಮಾಡಿದ್ದಾರೆ. ತಾಲ್ಲೂಕಿನ ನದಿ ತೀರದ ಗ್ರಾಮಗಳಾದ ಕಾತ್ರಾಳ, ಐನಾಪುರ, …
Read More »
Laxmi News 24×7