ಖಾನಾಪುರ: ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಮಳೆರಾಯನ ಅಬ್ಬರ ಮುಂದುವರೆದಿದೆ. ಗುರುವಾರ ಇಡೀ ರಾತ್ರಿ ಮತ್ತು ಶುಕ್ರವಾರ ಇಡೀ ದಿನ ಪಟ್ಟಣ ಸೇರಿದಂತೆ ತಾಲ್ಲೂಕಿನ ಲೋಂಡಾ, ಕಣಕುಂಬಿ, ಹೆಮ್ಮಡಗಾ, ಜಾಂಬೋಟಿ, ಶಿರೋಲಿ, ಗುಂಜಿ ಅರಣ್ಯದಲ್ಲಿ ಧಾರಾಕಾರ ಮಳೆ ಸುರಿದಿದೆ. ಗುರುವಾರ ಮುಳುಗಿದ್ದ ಸೇತುವೆಗಳು ಶುಕ್ರವಾರವೂ ಸಂಚಾರಕ್ಕೆ ತೆರೆದುಕೊಳ್ಳಲಿಲ್ಲ. ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇಟಗಿ, ಗಂದಿಗವಾಡ, ಬೀಡಿ, ಪಾರಿಶ್ವಾಡ, ದೇವಲತ್ತಿ ಸುತ್ತಮುತ್ತ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿದ್ದು, ತಾಲ್ಲೂಕಿನಾದ್ಯಂತ ಮೋಡ ಮುಸುಕಿದ ಶೀತ ವಾತಾವರಣ …
Read More »ಗೋಕಾಕ- ಶಿಂಗಳಾಪುರ ಸೇತುವೆ ಮುಳುಗಡೆ
ಗೋಕಾಕ: ಘಟಪ್ರಭಾ ನದಿಯ ಹಿನ್ನೀರಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹದಲ್ಲಿ ಏರಿಕೆ ಉಂಟಾಗುತ್ತಿರುವ ಪರಿಣಾಮ ಗೋಕಾಕ-ಶಿಂಗಳಾಪುರ ಸೇತುವೆ ಶುಕ್ರವಾರ ಸಂಜೆ ಪ್ರವಾಹದಲ್ಲಿ ಮುಳುಗಡೆ ಆಗಿದೆ. ಬ್ರಿಜ್ ಕಂ ಬ್ಯಾರೇಜ್ ಪ್ರವಾಹದಲ್ಲಿ ಮುಳುಗಿದ್ದರಿಂದ ಶಿಂಗಳಾಪುರ ಮತ್ತು ಟಕ್ಕೆ ನಿವಾಸಿಗಳು ಅಪಾಯವನ್ನೂ ಲೆಕ್ಕಿಸದೇ ಪ್ರವಾಹದ ಮಧ್ಯೆಯೇ ಸೇತುವೆ ದಾಟುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ ಮೋಹನ ಭಸ್ಮೆ ಸ್ಥಳಕ್ಕೆ ಭೇಟಿ ನೀಡಿದರು. ಪೊಲೀಸ್ ಬಂದೋಬಸ್ತ್ ಕಲ್ಪಿಸಲು ಗೋಕಾಕ ಶಹರ ಮತ್ತು …
Read More »ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿದ್ದು ನಿಜ
ಬೆಂಗಳೂರು, ಜುಲೈ20: ವಾಲ್ಮೀಕಿ ನಿಗಮದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ನಾವು ಹೇಳುತ್ತಿಲ್ಲ. ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ …
Read More »ಗಂಧದ ಮರ ಕಡಿದರೆ 5 ವರ್ಷ ಜೈಲು ಶಿಕ್ಷೆ
ಬೆಂಗಳೂರು : ಗಂಧದ ಮರ ಕಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಗಂಧದ ಮರ ಕಡಿದು ಕಳುವು ಮಾಡಲು ಯತ್ನಿಸಿದ ಆರೋಪಿಗೆ 10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ದಂಡದ ಮೊತ್ತವನ್ನು 50 ಸಾವಿರಕ್ಕೆ ಹೆಚ್ಚಿಸಿ 5 ವರ್ಷ ಶಿಕ್ಷೆ ಖಾಯಂಗೊಳಿಸಿದೆ. ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ದೇವಾರಾಜಾಚಾರಿ ಎಂಬುವವರಿಗೆ ಈ ಶಿಕ್ಷೆನೀಡಲಾಗಿದೆ. ಸೆಕ್ಷನ್ …
Read More »ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ರೂ.300 ಕೋಟಿಗೂ ಹೆಚ್ಚು ಅಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ₹87 ಕೋಟಿ. ಎಪಿಎಂಸಿಯ ₹47 ಕೋಟಿ, 2019 ರಲ್ಲಿ ಅಂಗವಿಕಲ …
Read More »ಏರ್ ಲೈನ್ಸ್, ಬ್ಯಾಂಕಿಂಗ್ ಗೂ ತಟ್ಟಿದ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ!
ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ ಏರ್ ಲೈನ್ಸ್, ಬ್ಯಾಂಕಿಂಗ್ ಸೇರಿದಂತೆ ಭಾರತದಲ್ಲಿ ಹಲವು ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದೆ. ಹೊಸ ಕ್ರೌಡ್‌ಸ್ಟ್ರೈಕ್ (ಸೈಬರ್ ಸೆಕ್ಯುರಿಟಿ ಸಾಫ್ಟ್‌ವೇರ್ ಸಂಸ್ಥೆ) ಅಪ್‌ಡೇಟ್ ಸ್ಥಗಿತಕ್ಕೆ ಕಾರಣ ಎಂದು ಉಲ್ಲೇಖಿಸಲಾಗಿದೆ. ಏರ್ ಲೈನ್ಸ್ ಮೇಲೆ ಪರಿಣಾಮ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ ತಟ್ಟಿದ್ದು ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಉಂಟಾಗಿದೆ. ಚೆಕ್ ಇನ್, ಬೋರ್ಡಿಂಗ್ ಗಳಲ್ಲಿ ವಿಳಂಬ ಉಂಟಾಗಿ, ಹಲವು …
Read More »ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ವಿಶೇಷ ರೈಲು ಸಂಚಾರ
ಬೆಂಗಳೂರು: ಗುಡ್ಡ ಕುಸಿತದಿಂದಾಗಿ ಬೆಂಗಳೂರು-ಮಂಗಳೂರು ಸಂಪರ್ಕಿಸುವ ಎರಡು ಮುಖ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಸ್ ಸಂಚಾರ ವ್ಯತ್ಯಯವಾಗಿರುವ ಹಿನ್ನಲೆ, ಜನರ ಅನುಕೂಲಕ್ಕಾಗಿ ಎರಡು ಹೆಚ್ಚುವರಿ ವಿಶೇಷ ರೈಲು ಸಂಚಾರ ಆರಂಭಿಸಲು ನೈಋತ್ಯ ರೈಲ್ವೆ ಮುಂದಾಗಿದೆ. ರೈಲು ಸಂಖ್ಯೆ 06547 ಜುಲೈ 19 ರಂದು ರಾತ್ರಿ 11 ಗಂಟೆಗೆ ಕೆಎಸ್‌ಆರ್ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 11:40 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಬೆಂಗಳೂರು ಕಂಟೋನ್ಮೆಂಟ್, ಎಸ್‌ಎಂವಿಟಿ ಬೆಂಗಳೂರು, ಚಿಕ್ಕಬಾಣಾವರ, ನೆಲಮಂಗಲ, …
Read More »ಅನ್ಮೋದ್ ಘಾಟ್‍ನಲ್ಲಿ ಭಾರಿ ಭೂಕುಸಿತ
ಪಣಜಿ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಕಾರವಾರದಂತೆಯೇ ಗೋವಾದಲ್ಲಿಯೂ ಭೂಕುಸಿತ ಉಂಟಾಗಿರುವ ಬಗ್ಗೆ ವರದಿಯಾಗಿದೆ. ದೂಧ್ ಸಾಗರ ದೇವಸ್ಥಾನದ ಸಮೀಪವಿರುವ ಅನ್ಮೋದ್ ಘಾಟ್‍ನಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತವುಂಟಾಗಿದೆ. ಇಡೀ ರಸ್ತೆಯಲ್ಲಿ ಮಣ್ಣು ಹರಡಿರುವುದರಿಂದ ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅನಮೋಡ ಘಾಟ್ ರಸ್ತೆಯು ಗೋವಾ ಮತ್ತು ಬೆಳಗಾವಿ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಉಂಟಾಗುತ್ತಿದೆ. ಸದ್ಯ ಅನ್ಮೋದ್ ಘಾಟ್ ರಸ್ತೆಯಲ್ಲಿ …
Read More »ಜಲಾಶಯ ಭರ್ತಿಗೆ ಕೆಲವೇ ಅಡಿ ಬಾಕಿ,
ಬೆಂಗಳೂರು, ಜುಲೈ 19: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ 10 ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ಉಪನದಿಗಳು ಅವುಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯಗಳಲ್ಲಿ ಅತ್ಯಧಿಕ ನೀರು ಸಂಗ್ರಹವಾಗಿದೆ. ಈ ಪೈಕಿ ಹೇಮಾವತಿ ಜಲಾಶಯದಲ್ಲೂ ಸಹ ಅತ್ಯಧಿಕ ಒಳಹರಿವು ದಾಖಲಾಗಿದೆ. ಇಂದು ಜುಲೈ 19ರಂದು ನೀರಿನ ಸಂಗ್ರಹ ಮಟ್ಟ ಎಷ್ಟಿದೆ, ಅಪ್ಡೇಟ್ ಮಾಹಿತಿ ಇಲ್ಲಿದೆ. ಹೇಮಾವತಿ ನದಿಯು ಕಾವೇರಿ ಉಪನದಿಗಳಲ್ಲಿ ಒಂದಾಗಿದೆ. ಈ ನದಿಗೆ ಹಾಸನ ಜಿಲ್ಲೆಯ ಗೂರೂರು …
Read More »ಮೈಕ್ರೋಸಾಫ್ಟ್ ತಾಂತ್ರಿಕ ದೋಷ.ಜಾಗತಿಕವಾಗಿ ಬಳಕೆದಾರರ ಪರದಾಟ
ಮೈಕ್ರೋಸಾಫ್ಟ್ ತಾಂತ್ರಿಕ ದೋಷ.ಜಾಗತಿಕವಾಗಿ ಬಳಕೆದಾರರ ಪರದಾಟ ನವದೆಹಲಿ: ಸಾಫ್ಟ್ ವೇರ್ ಕ್ಷೇತ್ರದ ದಿಗ್ಗಜ ಮೈಕ್ರೋಸಾಫ್ಟ್ ವಿಂಡೋಸ್ ನಲ್ಲಿ ತಾಂತ್ರಿಕ ದೋಷ ( Technical Issues) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ (ಜುಲೈ 19) ಭಾರತ ಸೇರಿದಂತೆ ಜಾಗತಿಕವಾಗಿ ಮೈಕ್ರೋಸಾಫ್ಟ್ ಬಳಕೆದಾರರು ಪರದಾಡುವಂತಾಗಿತ್ತು. ಭಾರತದಲ್ಲಿ ವಿಸ್ತಾರ, ಇಂಡಿಗೋ, ಸ್ಪೈಸ್ ಜೆಟ್ ಮತ್ತು ಅಕ್ಸಾ ವಿಮಾನ ಸಂಸ್ಥೆಗಳು ಟಿಕೆಟ್ ಬುಕ್ಕಿಂಗ್, ಚೆಕ್ ಇನ್ ಸೇರಿದಂತೆ ಹಲವು ತಾಂತ್ರಿಕ ದೋಷಗಳನ್ನು ಎದುರಿಸಿದ್ದು, ಏರ್ ಲೈನ್ಸ್ ಸದ್ಯ ಪ್ರಯಾಣಿಕರನ್ನು …
Read More »
Laxmi News 24×7