Breaking News

ರಾಜ್ಯ

ಪ್ರಾಧಿಕಾರ ವಿರುದ್ಧ ಎಫ್‌ಐಆರ್‌: ಕೃಷ್ಣ ಬೈರೇಗೌಡ

ಬೆಂಗಳೂರು: ಅಂಕೋಲಾದ ಶಿರೂರಿನ ಗುಡ್ಡ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ( ಎನ್‌ಎಚ್‌ಎ) ಬೇಜವಾಬ್ದಾರಿಯೇ ಕಾರಣ’ ಎಂದು ಆರೋಪಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಾಧಿಕಾರ ಮತ್ತು ಐಆರ್‌ಬಿ ಕಂಪೆನಿ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದಾಗಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಡ್ಡ ಕುಸಿತ ಆಗಬಹುದು ಎಂಬ ಬಗ್ಗೆ ಕಳೆದ ವರ್ಷವೇ ಮಾಹಿತಿ ನೀಡಿದ್ದೆವು. ಆದರೆ ಗುಡ್ಡ ಕುಸಿತ ತಡೆಗಟ್ಟುವ ಕೆಲಸ ಅವರು ಮಾಡಿಲ್ಲ. ಬುಧವಾರವೂ ತ್ವರಿತವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸ್ಪಂದಿಸಲಿಲ್ಲ. …

Read More »

ಸಮವಸ್ತ್ರ ಧರಿಸಿ 5 ಗಂಟೆ ಗಸ್ತು: ಪೊಲೀಸರಿಗೆ ಐಜಿಪಿ ಆದೇಶ

ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ 11ರ ವರೆಗೆ ಹಾಗೂ ಸಾಯಂಕಾಲ 6ರಿಂದ ರಾತ್ರಿ 9ರ ವರೆಗೆ ಒಟ್ಟು 5 ಗಂಟೆ ಗಸ್ತು ತಿರುಗುವಂತೆ ರಾಜ್ಯ ಡಿಜಿ-ಐಜಿಪಿ ಆಲೋಕ್‌ ಮೋಹನ್‌ ಪೊಲೀಸರಿಗೆ ಆದೇಶಿಸಿದ್ದಾರೆ. ಕಮಿಷನರೆಟ್‌ ವ್ಯಾಪ್ತಿಯಲ್ಲಿ ಡಿಸಿಪಿಗಳು, ಜಿಲ್ಲೆಗಳಲ್ಲಿ ಎಸ್‌ಪಿ ನೇತೃತ್ವದಲ್ಲಿ ಪೊಲೀಸರು ಗಸ್ತು ತಿರುಗಬೇಕು. ಪ್ರಮುಖ ಅಪರಾಧ ಪ್ರಕರಣಗಳು ಘಟಿಸಿದಾಗ ಸ್ಥಳಕ್ಕೆ ಭೇಟಿ ನೀಡಬೇಕು. ಆಯಾ ವಲಯ ಐಜಿಪಿಗಳು, ಹೆಚ್ಚುವರಿ ಪೊಲೀಸ್‌ ಆಯುಕ್ತರು ಠಾಣೆಗಳಿಗೆ ಭೇಟಿ ನೀಡಬೇಕು. ಶಾಲಾ ಕಾಲೇಜು …

Read More »

ಕೃಷ್ಣಾ- ಪಂಚಗಂಗಾ ನದಿಗಳ ಸಂಗಮ ಕ್ಷೇತ್ರದ ಸುಕ್ಷೇತ್ರ ನರಸಿಂಹವಾಡಿ ಶ್ರೀ ದತ್ತಮಂದಿರ ಜಲಾವೃತ

ಚಿಕ್ಕೋಡಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೃಷ್ಣಾ ಮತ್ತು ಪಂಚಗಂಗಾ ನದಿ ನೀರಿನ ಮಟ್ಟದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಗಡಿಭಾಗದ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಶಿರೋಳ ತಾಲೂಕಿನ ಸುಕ್ಷೇತ್ರ ನರಸಿಂಹವಾಡಿ ಶ್ರೀ ದತ್ತ ಮಂದಿರ ಜಲಾವೃತಗೊಂಡಿದೆ. ಕೃಷ್ಣಾ ನದಿ ಮತ್ತು ಪಂಚಗಂಗಾ ನದಿ ಸಂಗಮ ಕ್ಷೇತ್ರವಾದ ನರಸಿಂಹವಾಡಿ ಶ್ರೀ ದತ್ತ ದೇವಸ್ಥಾನಕ್ಕೆ ಮಂಗಳವಾರ ನೀರು ನುಗ್ಗಿದೆ. ದೇವವಸ್ಥಾನ ಅರ್ಧ ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಹೀಗಾಗಿ ದೇವಸ್ಥಾನ …

Read More »

ಗಡಿಯಲ್ಲಿಯ ಘಾಟ್‌ ಹೆದ್ದಾರಿ ಭಾರೀ ಅಪಾಯಕಾರಿ-ಗುಡ್ಡ ಕುಸಿತಕ್ಕೆ ತಡೆ ಇಲ್ಲವೇ?

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಶುರು ವಾಯಿತೆಂದರೆ ಗಡಿ ಭಾಗ ಬೆಳಗಾವಿ ಜಿಲ್ಲೆಯಿಂದ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಹಾಗೂ ಮಣ್ಣು ಕುಸಿತ ಆಗುವುದು ಸಾಮಾನ್ಯವಾಗಿದ್ದು, ಕುಸಿತಕ್ಕೆ ತಡೆ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುವ ಧಾರಾಕಾರ ಮಳೆಯಿಂದ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ಅಪಾಯಕಾರಿ ಮಟ್ಟಕ್ಕೆ ತಲುಪುತ್ತವೆ. ಗುಡ್ಡ ಕುಸಿತ ಆಗುವುದು ಈ ಪ್ರದೇಶದಲ್ಲಿ ಸಾಮಾನ್ಯವಾಗಿದೆ. …

Read More »

ಸದನದಲ್ಲಿ ಮುಖ್ಯಮಂತ್ರಿ Vs ಬಿಜೆಪಿ ರೋಷಾವೇಶ!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸದನದಲ್ಲಿ ಭಾರೀ ಸದ್ದು ಮಾಡಿದ್ದು, ಗುರುವಾರ ಚರ್ಚೆ ವೇಳೆ, ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಡಿಸಿಎಂ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಮಧ್ಯೆ ಜಟಾಪಟಿಗೆ ಕಾರಣವಾಗಿದೆ. “ನಿಮ್ಮಲ್ಲಿ ಕೆಲವರದ್ದು ತೆಗೆಯುತ್ತೇನೆ ಈಗ, ಯಾರ ಯಾರ ಕಾಲದಲ್ಲಿ ಏನೇನು ಆಯ್ತು ಎಂಬುದನ್ನು ಬಿಚ್ಚಿಡುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ವಿಧಾನಸಭೆಯಲ್ಲಿ ತೀವ್ರ ವಾಗ್ವಾದಕ್ಕೆ ಕಾರಣವಾಗಿದ್ದು, ಸಿಎಂ ಸಿದ್ದರಾಮಯ್ಯ-ಮಾಜಿ ಡಿಸಿಎಂ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಮಧ್ಯೆ ಏಕವಚನ …

Read More »

ನಾಗೇಂದ್ರ ಮತ್ತೆ 5 ದಿನ ಇ.ಡಿ. ವಶಕ್ಕೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಬಂಧಿತರಾಗಿ ರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲ ಯವು ಮತ್ತೆ 5 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಇಡಿ) ವಶಕ್ಕೆ ನೀಡಿದೆ. ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಅವಧಿಯು ಗುರುವಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಇಡಿ ಪರ ವಕೀಲ ಪ್ರಸನ್ನಕುಮಾರ್‌ ಇನ್ನೂ ವಿಚಾರಣೆ ಬಾಕಿ ಇರುವುದರಿಂದ 8 …

Read More »

ನಟ ದರ್ಶನ್‌ಗೆ ಮತ್ತೆ ನ್ಯಾಯಾಂಗ ಬಂಧನ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತ ನಟ ದರ್ಶನ್, ಸ್ನೇಹಿತೆ ಪವಿತ್ರಾ ಗೌಡ ಸೇರಿ ಇತರ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಗುರುವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದಲೇ ದರ್ಶನ್ ಮತ್ತು ಇತರ ಆರೋಪಿಗಳನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಂಗ, ಆಗಸ್ಟ್ 1ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

Read More »

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ವಿರುದ್ಧವೂ ದೂರು

ಬೆಳಗಾವಿ: ಪತಿ ಹಾಗೂ ಅವರ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ವಿರುದ್ಧವೇ ಪ್ರತಿ ದೂರು ದಾಖಲಾಗಿದೆ. ಇಲ್ಲಿನ ಗಣೇಶಪುರದ ನಿವಾಸಿ ಕನ್ವಿಕಾ ಗಣೇಶ ಗುಡ್ಯಾಗೋಳ (22) ಮಂಗಳವಾರ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಪತಿ ಹಾಗೂ ಅವರ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ಪತಿ ಗಣೇಶ ಅವರ ತಂದೆ ಹಾಗೂ ಸೋದರಮಾವ ಇಲ್ಲಿನ ಕ್ಯಾಂಪ್‌ ಠಾಣೆಗೆ ಪ್ರತಿ ದೂರು ನೀಡಿದ್ದಾರೆ. ‘ಕನ್ವಿಕಾ …

Read More »

ಚಿಕ್ಕೋಡಿ‌ | ಸಮಸ್ಯೆಗಳ ಆಗರದಲ್ಲಿ ಸರ್ಕಾರಿ ಪಾಲಿಟೆಕ್ನಿಕ್: ವಿದ್ಯಾರ್ಥಿಗಳ ಪರದಾಟ

ಚಿಕ್ಕೋಡಿ: ₹8 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಆದರೆ, ಆವರಣ ಗೋಡೆಯೇ ಇಲ್ಲ. ಬೋಧನೆಗೆ ಕಾಯಂ ಉಪನ್ಯಾಸಕರಿಲ್ಲ. ಕೊಳವೆಬಾವಿ ಇದ್ದರೂ, ಶುದ್ಧ ಕುಡಿಯುವ ನೀರಿನ ಘಟಕವಿಲ್ಲ. ಕಾಲೇಜಿಗೆ ಬರಲು ಸರಿಯಾಗಿ ಬಸ್‌ ವ್ಯವಸ್ಥೆಯೂ ಇಲ್ಲ. ಹೀಗೆ ಸಾಲು ಸಾಲು ಸಮಸ್ಯೆಗಳಿಂದ ತಾಲ್ಲೂಕಿನ ಸದಲಗಾ ಹೊರವಲಯದ ಸರ್ಕಾರಿ ಪಾಲಿಟೆಕ್ನಿಕ್ ಬಳಲುತ್ತಿದೆ. ಸ್ಥಳೀಯ ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಪ್ರಯತ್ನದಿಂದ ಇಲ್ಲಿ ಸುಸಜ್ಜಿತ ಕಟ್ಟಡ ತಲೆ ಎತ್ತಿ, …

Read More »

ರಾಹುಲ್‌ ಗಾಂಧಿ ಕ್ಷಮೆ ಕೇಳಲಿ: ಕುಮಾರ ಹೀರೆಮಠ

ಬೆಳಗಾವಿ: ‘ಅಗ್ನಿಪಥ ಯೋಜನೆ ಕುರಿತಾಗಿ ಅವಹೇಳನಾಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತಕ್ಷಣವೇ ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ಪೂರ್ವ ಸೈನಿಕರ ‌ಪ್ರಕೋಷ್ಠದ ರಾಜ್ಯ ಸಂಚಾಲಕ ಕುಮಾರ ಹೀರೆಮಠ ಒತ್ತಾಯಿಸಿದರು. ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಜಾರಿಗೆ ತಂದ ಈ ಯೋಜನೆ ಆದರ್ಶ ಸೈನಿಕನನ್ನು ರೂಪಿಸುತ್ತದೆ. ಬಹಳಷ್ಟು ಯುವಕ-ಯುವತಿಯರು ಇದರ ಲಾಭ ಪಡೆದಿದ್ದಾರೆ. ಆದರೆ, ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ರಾಹುಲ್‌ ಗಾಂಧಿ ಈ ಯೋಜನೆ ವಿರೋಧಿಸಬಾರದು. ಇದರ …

Read More »