ಬಾಗಲಕೋಟೆ: ರಾಜ್ಯದಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು, ಅದರಲ್ಲೂ ಜಿಲ್ಲೆಯ ಮುಧೋಳ ತಾಲೂಕಿನ ರೈತರಿಗೆ ಎದುರಾಗುತ್ತಿರುವ ತೀವ್ರ ಸಮಸ್ಯೆಗಳ ಕುರಿತು ಅಬಕಾರಿ ಸಚಿವ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರ್.ಬಿ.ತಿಮ್ಮಾಪುರ ಅವರು ಕೇಂದ್ರ ಕಬ್ಬು ಮತ್ತು ತೈಲ ಬೀಜಗಳ ನಿರ್ದೇಶನಾಲಯದ ನಿರ್ದೇಶಕ ಅರವಿಂದ ಕುಮಾರ್ ರಾವತ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ …
Read More »ಎಚ್.ಡಿ.ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪರಿಗಣಿಸಲು ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದ ಹೈಕೋರ್ಟ್
ಬೆಂಗಳೂರು: ಮನೆ ಕೆಲಸದ ಮಹಿಳೆಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಆರೋಪವನ್ನು ಪರಿಗಣಿಸಲು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿರುವ ಹೈಕೋರ್ಟ್, ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ ಆರೋಪದಲ್ಲಿ ಸಂಜ್ಞೆ ಪರಿಗಣಿಸಿದ್ದ ಕ್ರಮವನ್ನು ರದ್ದುಪಡಿಸಿ ಆದೇಶಿಸಿದೆ. ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ …
Read More »ಚಳಿಗಾಲದ ಅಧಿವೇಶನಕ್ಕೆ ಸಕಲ ಸಿದ್ಧತೆ: ಸಭಾಪತಿ ಬಸವರಾಜ ಹೊರಟ್ಟಿ
ಹಾವೇರಿ: ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಳಗಾವಿ ಚಳಿಗಾಲದ ಅಧಿವೇಶನ ಎಂದರೆ ಪ್ರತಿಭಟನೆಗೆ ಸೀಮಿತ ಎನ್ನುವ ಮಾತು ಇದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಈ ಆರೋಪದಿಂದ ಅದನ್ನು ದೂರ ಮಾಡಬೇಕು. ಶಿಕ್ಷಣ, ಉದ್ಯೋಗ ಸೇರಿದಂತೆ ಅಭಿವೃದ್ಧಿ ವಿಷಯ ಚರ್ಚೆಯಾಗಬೇಕು ಎಂದು ತಿಳಿಸಿದರು. ಕಬ್ಬು ಬೆಳೆಗಾರರ ಅನೇಕ ಸಮಸ್ಯೆಗಳು …
Read More »ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಆರೋಪ, ನಾಲ್ವರ ಬಂಧನ
ಕೊಪ್ಪಳ : ಯಲಬುರ್ಗಾ ತಾಲೂಕಿನ ಮದ್ಲೂರ ಗ್ರಾಮದ ಬಳಿ ಮಹಿಳೆಯೊಬ್ಬರ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಅಸ್ವಸ್ಥಗೊಂಡ (39) ವರ್ಷದ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಕುರಿತು ಎಸ್ಪಿ ಡಾ. ರಾಮ್ ಎಲ್ ಅರಸಿದ್ದಿ ಅವರು ಪ್ರತಿಕ್ರಿಯಿಸಿದ್ದು, ‘ನಿನ್ನೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ಕೊಟ್ಟ ಹಿನ್ನೆಲೆ ಯಲಬುರ್ಗಾ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕೊಟ್ಟಿರುವ …
Read More »ಬೆಳಗಾವಿ ಸಮೀಪದ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಭೇಟಿ
ಬೆಳಗಾವಿ ಸಮೀಪದ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಇಂದು ಭೇಟಿ ನೀಡಿ, ಸೋಂಕಿನಿಂದ ಬಳಲುತ್ತಿರುವ ಕೃಷ್ಣಮೃಗಗಳಿಗೆ ಚಿಕಿತ್ಸೆ ನೀಡುತ್ತಿರುವ ನುರಿತ ವೈದ್ಯರ ತಂಡವನ್ನು ಭೇಟಿಯಾಗಿ ಸಂಪೂರ್ಣ ಮಾಹಿತಿಯನ್ನು ಪಡೆಯಲಾಯಿತು. ಇತ್ತೀಚೆಗೆ ಸೋಂಕಿನ ಹರಡುವಿಕೆಯಿಂದ ಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ, ಉಳಿದಿರುವ ಕೃಷ್ಣಮೃಗಗಳಿಗೆ ತುರ್ತು ಆಂಟಿಬಯೋಟಿಕ್ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದರು. ಮೃಗಗಳ ರಕ್ಷಣೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ನಿರಂತರ …
Read More »ಹುಕ್ಕೇರಿ ನಗರದ ತಾ.ಪಂ. ಭವನದಲ್ಲಿ ಇಂದು ಹುಕ್ಕೇರಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ
ಹುಕ್ಕೇರಿ ನಗರದ ತಾ.ಪಂ. ಭವನದಲ್ಲಿ ಇಂದು ಹುಕ್ಕೇರಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಸತೀಶ್ ಜಾರಕಿಹೊಳಿ ನಡೆಸಿದರು. ವಿವಿಧ ಇಲಾಖೆಗಳ ಅನುದಾನದಡಿ ಈಗಾಗಲೇ ಅನುಮೋದನೆಯಾದ ಅಂಬೇಡ್ಕರ್ ಭವನಗಳು, ವಾಲ್ಮೀಕಿ ಭವನಗಳು, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ, ರಸ್ತೆ ನಿರ್ಮಾಣ, ಹೈ ಮಾಸ್ಟ್ ದೀಪಗಳು, ಸ್ಮಶಾನ ಅಭಿವೃದ್ಧಿ ಸೇರಿದಂತೆ ಅನೇಕ ಪ್ರಮುಖ ಕಾಮಗಾರಿಗಳಿಗೆ ಒಂದು ತಿಂಗಳೊಳಗೆ ಚಾಲನೆ ನೀಡಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು ಸಭೆಯಲ್ಲಿ ಸಾರ್ವಜನಿಕರಿಂದ ಬಂದ …
Read More »ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನಕ್ಕೆ ಭಕ್ತ ಸಾಗರ: ಪಾದಯಾತ್ರೆಯಲ್ಲಿ ದಾನಮ್ಮದೇವಿ ಜೈಕಾರ
ವಿಜಯಪುರ…ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನಕ್ಕೆ ಭಕ್ತ ಸಾಗರ: ಪಾದಯಾತ್ರೆಯಲ್ಲಿ ದಾನಮ್ಮದೇವಿ ಜೈಕಾರ ಕಾರ್ತಿಕ ಮಾಸದ ಪವಿತ್ರ ಛಟ್ಟಿ ಅಮವಾಸ್ಯೆ ಪ್ರಯುಕ್ತ ಗುಡ್ಡಾಪುರದಲ್ಲಿನ ಅನ್ನದಾಸೋಹಿ ತ್ರಿಕಾಲಪೂಜಿತೆ ದಾನಮ್ಮದೇವಿ ದೇವಾಲಯಕ್ಕೆ ಪಾದಯಾತ್ರೆಯ ಜೋರು ಆರಂಭವಾಗಿದೆ. ನಾಳೆಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತ ತಾಲ್ಲೂಕಿನ ಸುಕ್ಷೇತ್ರ ಗುಡ್ಡಾಪುರದಲ್ಲಿ ನಡೆಯಲಿರುವ ಕಾರ್ತಿಕೋತ್ಸವದಲ್ಲಿ ಭಾಗವಹಿಸಲು ಭಕ್ತಸಾಗರವೇ ಸಾಗುತ್ತಿರುವ ದೃಶ್ಯ ಎಲ್ಲೆಡೆ ಕಾಣುತ್ತಿದೆ. ವಿಜಯಪುರ ನಗರದಿಂದಲೇ ಸಾವಿರಾರು ಭಕ್ತರು ದಾನಮ್ಮದೇವಿ ದರ್ಶನಕ್ಕಾಗಿ ನಡಿಗೆಯ ಮಹಾಯಾತ್ರೆಯನ್ನು ಪ್ರಾರಂಭಿಸಿದ್ದು, ಮಧ್ಯಾಹ್ನದ ಬಿಸಿಲಿನಲ್ಲೂ, …
Read More »ರಂಗೋಲಿ ಬಿಡಿಸುವ ಮೂಲಕ ಮಹಿಳೆಯರಿಂದ ಪಿಪಿಪಿ ಮಾದರಿ ಕಾಲೇಜು ವಿರುದ್ಧ ಹೋರಾಟ
ವಿಜಯಪುರ :ರಂಗೋಲಿ ಬಿಡಿಸುವ ಮೂಲಕ ಮಹಿಳೆಯರಿಂದ ಪಿಪಿಪಿ ಮಾದರಿ ಕಾಲೇಜು ವಿರುದ್ಧ ಹೋರಾಟ ರಾಜ್ಯ ಸರ್ಕಾರ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ನಿರ್ಮಾಣ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ಮಹಿಳೆಯರು ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ವೃತ್ತಗಳಲ್ಲಿ ರಂಗೋಲಿ ಬಿಡಿಸಿ, ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಈ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಸಿದ್ದೇಶ್ವರ ದೇವಸ್ಥಾನ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ 25 ಕಡೆಗಳಲ್ಲಿ ರಂಗೋಲಿ …
Read More »NDPS ಕಾಯ್ದೆ & ಅಬಕಾರಿ ಕಾಯ್ದೆಯಡಿ ಒಟ್ಟು 4 ಪ್ರಕರಣ ದಾಖಲು; ನಾಲ್ವರು ಆರೋಪಿಗಳ ಬಂಧನ!
NDPS ಕಾಯ್ದೆ & ಅಬಕಾರಿ ಕಾಯ್ದೆಯಡಿ ಒಟ್ಟು 4 ಪ್ರಕರಣ ದಾಖಲು; ನಾಲ್ವರು ಆರೋಪಿಗಳ ಬಂಧನ! ಬೆಳಗಾವಿ ನಗರ ಪೊಲೀಸರು ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಒಟ್ಟು 4 ಪ್ರಕರಣಗಳನ್ನು ದಾಖಲಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯ ವಡಗಾಂವದ ಜೈಲ್ ಸ್ಕೂಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ಪದಾರ್ಥಗಳನ್ನು ಸೇವಿಸಿ ಅಸಹಜವಾಗಿ ವರ್ತಿಸುತ್ತಿದ್ದ ಮೂವರನ್ನು …
Read More »ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್
ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಇಂದು ರದ್ದುಪಡಿಸಿ ಆದೇಶಿಸಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಅವರು ಹೊರಡಿಸಿರುವ ಆದೇಶ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ …
Read More »
Laxmi News 24×7