ವಿಯೆನ್ನಾ(ಜು.10): ರಷ್ಯಾ ನಂತರ ಪ್ರಧಾನಿ ನರೇಂದ್ರ ಮೋದಿ ಈಗ ಆಸ್ಟ್ರಿಯಾ ಪ್ರವಾಸದಲ್ಲಿದ್ದಾರೆ. ವಿಯೆನ್ನಾದಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ದೊರೆಯಿತು. ತಮ್ಮ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರು ಆಸ್ಟ್ರಿಯಾ ಅಧ್ಯಕ್ಷ ವ್ಯಾನ್ ಡೆರ್ ಬೆಲ್ಲೆನ್ ಮತ್ತು ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರನ್ನು ಭೇಟಿಯಾಗಲಿದ್ದಾರೆ. ಪ್ರಧಾನಿಯವರು ಅಲ್ಲಿ ನೆಲೆಸಿರುವ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವರದಿಗಳ ಪ್ರಕಾರ, ಈ ಭೇಟಿಯ ವೇಳೆ ಉಭಯ ದೇಶಗಳ ನಡುವೆ ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಬಹುದು. …
Read More »ವಾಲ್ಮೀಕಿ ನಿಗಮ ಹಗರಣ: ಶಾಸಕ ಬಿ. ನಾಗೇಂದ್ರ ಆಪ್ತ ಸಹಾಯಕರು ಇ.ಡಿ ವಶಕ್ಕೆ
ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ವಿಜಯಕುಮಾರ್ ಮತ್ತು ಚೇತನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಈ ಇಬ್ಬರೂ ನಾಗೇಂದ್ರ ಅವರ ಆಪ್ತ ಸಹಾಯಕರಾಗಿದ್ದರು. ಬುಧವಾರ ಮುಂಜಾನೆ, ಸಿಆರ್ಪಿಎಫ್ ಭದ್ರತೆಯೊಂದಿಗೆ ಮೂರು ತಂಡಗಳಾಗಿ ಬಳ್ಳಾರಿಗೆ ಆಗಮಿಸಿದ ಇ.ಡಿ, ದಾಳಿ ನಡೆಸಿತು. ನಾಗೇಂದ್ರ ಅವರ ಬೆಂಗಳೂರಿನ ನಿವಾಸದಲ್ಲೂ ಶೋಧ ನಡೆಯುತ್ತಿದೆ. ಸ್ಥಳೀಯ ಪೊಲೀಸರಿಗೂ …
Read More »ಬಸನಗೌಡ ದದ್ದಲ್ ನಿವಾಸದ ಮೇಲೆ ಇಡಿ ದಾಳಿ
ರಾಯಚೂರು ಜುಲೈ 10: ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸದ ಮೇಲೆ ಬೆಳಿಗ್ಗೆ 7 ಗಂಟೆಗೆ ದಾಳಿ ಮಾಡಿದ್ದು, ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಮಂಗಳವಾರ ಎಸ್ ಐಟಿ ಅಧಿಕಾರಿಗಳು ದದ್ದಲ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಇವತ್ತು ಮತ್ತೆ ವಿಚಾರಣೆಗೆ ಕರೆದಿದ್ದಾರೆ. ಇದೇ ಅವಧಿಯಲ್ಲೇ 18 ದಾಳಿ ನಡೆಸಿರುವ ಮಾಹಿತಿ ಇದೆ. ಜೊತೆಗೆ …
Read More »ಸತತ ಏಳು ಬಾರಿ ಸಂಸದರಾಗಿ ಆಯ್ಕೆಸಂಪುಟದಲ್ಲಿ ಸಿಗದ ಸಚಿವ ಸ್ಥಾನಜಿಗಜಿಣಗಿ ತೀವ್ರ ಅಸಮಾಧಾನ
ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಹೆಗ್ಗಳಿಕೆ ಹೊಂದಿರುವ ರಮೇಶ್ ಜಿಗಜಿಣಗಿ, ಈ ಬಾರಿಯ ಕೇಂದ್ರ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಂಗಳವಾರದಂದು ನಡೆದ ಸಂಸದರ ಕಚೇರಿಯ ಪೂಜಾ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆಯಾಗುವ ಸಂದರ್ಭದಲ್ಲಿಯೇ ನನ್ನ ಅನೇಕ ಸ್ನೇಹಿತರು ಆ ಪಕ್ಷ ದಲಿತ ವಿರೋಧಿ. ಸೇರ್ಪಡೆಯಾಗುವುದು ಬೇಡ ಎಂದು ಹೇಳಿದ್ದರು. ಇಷ್ಟಾದರೂ ನಾನು ಆ …
Read More »ರಾಜ್ಯದಲ್ಲಿ ಮತ್ತೆ ಮೂರು ವೈದ್ಯ ಕಾಲೇಜು ಆರಂಭಕ್ಕೆ ‘ಗ್ರೀನ್ ಸಿಗ್ನಲ್’
ರಾಜ್ಯದಲ್ಲಿ ಮತ್ತೆ ಮೂರು ಹೊಸ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಇದರಿಂದಾಗಿ ವೈದ್ಯಕೀಯ ಕಾಲೇಜುಗಳ ಒಟ್ಟು ಸಂಖ್ಯೆ 73ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆ ಎಸ್‌ಆರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ ಕಾಲೇಜು ಆರಂಭಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ ಎಂ ಸಿ) ಅನುಮತಿ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಈ ಮೂರೂ ಕಾಲೇಜುಗಳು ಆರಂಭವಾಗಲಿವೆ. …
Read More »ಬೆಳೆ ವಿಮಾ ಯೋಜನೆಗೆ ಅರ್ಜಿ ಆಹ್ವಾನ
ಹೊಸಕೋಟೆ: 2024-25ನೇ ಸಾಲಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅಡಿಯಲ್ಲಿ ಹೊಸಕೋಟೆ ತಾಲ್ಲೂಕಿಗೆ ಮಾವು ಮತ್ತು ದ್ರಾಕ್ಷಿ ಬೆಳೆಗಳನ್ನು ವಿಮಾ ವ್ಯಾಪ್ತಿಗೆ ಒಳಪಡಿಸಲಾಗಿದೆ. ರೈತ ಬಾಂಧವರು ಸ್ವಇಚ್ಛೆಯಿಂದ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕಾ ಇಲಾಖೆ ತಿಳಿಸಿದೆ. ಪ್ರತಿ ಹೆಕ್ಟೇರ್ ಮಾವಿಗೆ ₹80 ಸಾವಿರ, ದ್ರಾಕ್ಷಿಗೆ ₹2.80 ಲಕ್ಷ ವಿಮಾ ಮೊತ್ತವಾಗಿದ್ದು, ಅದರಲ್ಲಿ ಶೇ 5ರಷ್ಟು ರೈತರು ವಂತಿಗೆ ಪಾವತಿಸಬೇಕಿದ್ದು, ಅದರಂತೆ ಮಾವಿಗೆ ₹5 ಸಾವಿರ, ದ್ರಾಕ್ಷಿಗೆ ₹ 14 …
Read More »ಬೆಳಗಾವಿ | ಬಿಟ್ ಕಾಯಿನ್ ಪ್ರಕರಣ: ದೂರುದಾರ ಕೈದಿಯ ಹೇಳಿಕೆ ದಾಖಲು
ಬೆಳಗಾವಿ: ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನ ಹೇಳಿಕೆ ಪಡೆಯಲು, ಎಸ್.ಐ.ಟಿ ತಂಡವು ಇಲ್ಲಿನ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿತು ಎಂದು ಮೂಲಗಳು ಖಚಿತಪಡಿಸಿವೆ. ‘ಈ ಹಗರಣದಲ್ಲಿ ಬಂದಿಖಾನೆ ಇಲಾಖೆ ಡಿಐಜಿ ಟಿ.ಪಿ. ಶೇಷ ಭಾಗಿಯಾದ ಬಗ್ಗೆ ನಾಗೇಂದ್ರ ಅಲಿಯಾಸ್ ನಾಗ ಎಂಬ ಕೈದಿ ಎಡಿಜಿಪಿ ಅವರಿಗೆ ಜೂನ್ 26ರಂದು ದೂರು ನೀಡಿದ್ದ. ಈ ಕೈದಿ ಈಗ ಇಲ್ಲಿನ ಹಿಂಡಲಗಾ ಜೈಲಿನಲ್ಲಿದ್ದ ಕಾರಣ ತನಿಖಾಧಿಕಾರಿಗಳು ವಿಚಾರಣೆ ನಡೆಸಿದರು. ದೂರಿನ ಅರ್ಜಿ ಇಟ್ಟುಕೊಂಡು …
Read More »ರಾಮದುರ್ಗ: ತಾಲ್ಲೂಕಿನ ಕಡೇ ಗ್ರಾಮ ನಂದಿಹಾಳಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯೇ ಹದಗೆಟ್ಟಿದೆ.
ರಾಮದುರ್ಗ: ತಾಲ್ಲೂಕಿನ ಕಡೇ ಗ್ರಾಮ ನಂದಿಹಾಳಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯೇ ಹದಗೆಟ್ಟಿದೆ. ಇಲ್ಲಿನ ಜನರು ಪಕ್ಕದ ಕಲಾದಗಿ, ಕಾಡರಕೊಪ್ಪ, ಲೋಕಾಪುರಕ್ಕೆ ತೆರಳಲು ನಿತ್ಯ ಯಾತನೆ ಅನುಭವಿಸುವಂತಾಗಿದೆ. ನಂದಿಹಾಳದಿಂದ ಅಕ್ಕಪಕ್ಕದ ಗ್ರಾಮಗಳು ಮತ್ತು ಹೊಲಗಳಿಗೆ ತೆರಳಲು ಇರುವುದು ಇದೊಂದೇ ರಸ್ತೆ. ಆದರೆ, ಜಿಟಿಜಿಟಿ ಮಳೆಯಾದರೂ ಅದು ಕೆಸರುಮಯವಾಗಿ ಮಾರ್ಪಡುತ್ತದೆ. ಅಪಾರ ಪ್ರಮಾಣದಲ್ಲಿ ಮಳೆನೀರು ರಸ್ತೆ ಮೇಲೆಯೇ ಸಂಗ್ರಹವಾಗುತ್ತದೆ. ಇದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಹೈರಾಣಾಗಿದ್ದಾರೆ. ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡದ …
Read More »ಹುಬ್ಬಳ್ಳಿ: ಆಗದ ವಲಯ ವರ್ಗಾವಣೆ; ಶಿಕ್ಷಕರಿಗೆ ನಿರಾಸೆ
ಹುಬ್ಬಳ್ಳಿ: ವಲಯ ವರ್ಗಾವಣೆ ನಡೆಸದಿರಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿರುವುದು ಬಹುತೇಕ ಶಿಕ್ಷಕರಲ್ಲಿ ನಿರಾಸೆ ಮೂಡಿಸಿದೆ. ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ವರ್ಗಾವಣೆ ಆಗುವ ಅವರ ನಿರೀಕ್ಷೆ ಹುಸಿಯಾಗಿದೆ. ಕರ್ನಾಟಕ ಶಿಕ್ಷಕರ ವರ್ಗಾವಣೆ ಮತ್ತು ನಿಯಂತ್ರಣ ಕಾಯ್ದೆ (ತಿದ್ದುಪಡಿ)-2022ರ ಪ್ರಕಾರ, ಹೆಚ್ಚುವರಿ ವರ್ಗಾವಣೆ ನಂತರದ ವರ್ಷದಲ್ಲಿ ವಲಯ (ಕಡ್ಡಾಯ) ವರ್ಗಾವಣೆ ಮಾಡಬೇಕು. ಈ ಪ್ರಕ್ರಿಯೆಯಲ್ಲಿ 10 ವರ್ಷಕ್ಕೂ ಹೆಚ್ಚು ಸಮಯದಿಂದ ನಗರ ಪ್ರದೇಶದಲ್ಲಿ (ಎ-ವಲಯ) ಕೆಲಸ ಮಾಡುತ್ತಿರುವ ಶಿಕ್ಷಕರನ್ನು ಗ್ರಾಮೀಣ (ಸಿ-ವಲಯ) …
Read More »ಅವ್ಯವಸ್ಥೆಯ ಆಗರವಾದ ಕೋಟೆವಾಡಾ ರುದ್ರಭೂಮಿ
ಅಂಕೋಲಾ: ಪಟ್ಟಣದ ಕೋಟೆವಾಡದಲ್ಲಿರುವ ಹಿಂದೂ ರುದ್ರ ಭೂಮಿ ನಿರ್ವಹಣೆಯ ಕೊರತೆಯಿಂದ ಅವ್ಯವಸ್ಥೆಯ ಆಗರವಾಗಿದ್ದು ಮಳೆಗಾಲದಲ್ಲಿ ಚಿತೆ ದಹಿಸುವುದೇ ದೊಡ್ಡ ಚಿಂತೆಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಪಟ್ಟಣದ ಸುತ್ತ ಮುತ್ತಲಿನ ವ್ಯಾಪ್ತಿಯ ಬಹುತೇಕ ಸಮಾಜದ ಜನರು ಶವ ಸಂಸ್ಕಾರಕ್ಕೆ ಬಳಕೆ ಮಾಡುವ ಈ ರುದ್ರಭೂಮಿಯಲ್ಲಿ ಶವ ಸಂಸ್ಕಾರ ನಡೆಸುವ ಸ್ಥಳದಲ್ಲಿ ಶೆಡ್‍ನ ಚಾವಣಿ ಮಳೆ-ಗಾಳಿಗೆ ಹಾರಿ ಹೋಗಿದ್ದು, ಮಳೆಯ ನೀರು ಶವ ದಹಿಸುವ ತೊಟ್ಟಿಯಲ್ಲೇ ನೇರವಾಗಿ ಸುರಿಯುತ್ತಿದೆ. ಇದರಿಂದ ಅಂತಿಮ ಸಂಸ್ಕಾರ …
Read More »
Laxmi News 24×7