Breaking News

ರಾಜ್ಯ

ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

ಹುಬ್ಬಳ್ಳಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ 2024-25ರ ವಾರ್ಷಿಕ ಯೋಜನೆಯಲ್ಲಿ ಕರ್ನಾಟಕದ ಒಟ್ಟು 470 ಕಿ.ಮೀ. ರಸ್ತೆ ಅಭಿವೃದ್ಧಿಗಾಗಿ 8,006 ಕೋಟಿ ರೂ., ಹೊಸದಾಗಿ 459 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲು 15 ಕೋಟಿ ರೂ. ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಹೆದ್ದಾರಿ ಕಾಮಗಾರಿ ಯೋಜನೆ ಅನುಮೋದನೆಗೆ ಸಂಸದ ಮನವಿ ಸಂಸದ ಬಿ.ವೈ. ರಾಘವೇಂದ್ರ …

Read More »

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಡಿಕೆಶಿ

ಬೆಂಗಳೂರು: ದಿಲ್ಲಿಯಲ್ಲಿ ವರಿಷ್ಠರನ್ನು ಭೇಟಿಯಾಗಿ ಬರುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿರುವ ಬಣ ಬೇಗುದಿಗೆ ತಡೆ ಹಾಕಲು ರಾಜ್ಯ ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ. ಸಿಎಂ-ಡಿಸಿಎಂ ಕುರಿತು ಬೇಕಾಬಿಟ್ಟಿ ಹೇಳಿಕೆ ನೀಡುವವರಿಗೆ ಶೋಕಾಸ್‌ ನೋಟಿಸ್‌ ಜಾರಿಗೊ ಳಿಸಲು ನಿರ್ಧರಿಸಿದ್ದಾರೆ.   ವಿವಾದದ ಹಿನ್ನೆಲೆಯಲ್ಲಿ ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿದ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬಾಯಿಗೆ ಬಂದಂತೆ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಲೋಕಸಭಾ ಚುನಾವಣೆಯ ಅನಂತರ ಪಕ್ಷದಲ್ಲಿ ಬಣ …

Read More »

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಈ ವಿಷಯ ಈಗ ಬಹಳ ಚರ್ಚೆಯಲ್ಲಿದೆ ಎಂದು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾಗಲು ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ಈಗ ಯಾವುದೇ ಚುನಾವಣೆ ಇಲ್ಲ. ಆದರೆ ಮತಗಳನ್ನು ತಂದುಕೊಡುವ ಹಾಗೂ ಪಕ್ಷವನ್ನು ಸಂಘಟಿಸುವವರಿಗೆ ಈ ಹುದ್ದೆ ನೀಡಬೇಕು ಎಂದರು. ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನು ಕೇಳಿಲ್ಲ. ಅದೇನೇ ಇದ್ದರೂ ಹೈಕಮಾಂಡ್ ಮಟ್ಟದಲ್ಲಿ …

Read More »

ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕಾಳಮ್ಮವಾಡಿ ಡ್ಯಾಂನಲ್ಲಿ ನಿಪ್ಪಾಣಿಯ ಯುವಕರಿಬ್ಬರು ನೀರುಪಾಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಷ್ಡ್ರದ ಕೊಲ್ಲಾಪೂರ ಜಿಲ್ಲೆಯ ರಾಧಾನಗರಿ ತಾಲೂಕಿನ ಕಾಳಮ್ಮವಾಡಿ ಜಲಾಶಯಕ್ಕೆ ನಿಪ್ಪಾಣಿ ಮೂಲದ 13 ಜನ ಯುವಕರು ಪ್ರವಾಸಕ್ಕೆ ತೆರಳಿದರು. ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾರೆ. ನಿಪ್ಪಾಣಿಯ ಗಣೇಶ ಕದಮ್, ಪ್ರತೀಕ್ ಪಾಟೀಲ್ ನೀರುಪಾಲಾದ ಯುವಕರು. ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಸದ್ಯ ಮಳೆಯ ಅಬ್ಬರ ಮುಂದುವರಿದಿದೆ. ಆದರೂ ಶವ …

Read More »

ರಾಜ್ಯದಲ್ಲಿ ಹೊಸ ಕ್ರಿಮಿನಲ್‌ ಕಾನೂನು ಜಾರಿಯಾದ ಮೊದಲ ದಿನವೇ 80 ಪ್ರಕರಣಗಳು ದಾಖಲು!

ರಾಜ್ಯದಲ್ಲಿ ಹೊಸ ಕ್ರಿಮಿನಲ್‌ ಕಾನೂನು ಜಾರಿಯಾದ ಮೊದಲ ದಿನವೇ 80 ಪ್ರಕರಣಗಳು ದಾಖಲು! ಬೆಂಗಳೂರು: ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬಂದ ನಂತರ ಕರ್ನಾಟಕ ಪೊಲೀಸರು ಸೋಮವಾರ ರಾತ್ರಿ 9.30 ರವರೆಗೆ 80 ಪ್ರಥಮ ಮಾಹಿತಿ ವರದಿಗಳನ್ನು (ಎಫ್‌ಐಆರ್) ದಾಖಲಿಸಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರ್ದೇಶಕರ (ಡಿಜಿ ಮತ್ತು ಐಜಿಪಿ) ಕಚೇರಿಯ ಹೇಳಿಕೆ ತಿಳಿಸಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ …

Read More »

ಹೃದಯಗೆದ್ದ ʻಪುನೀತ್‌ ರಾಜ್‌ ಕುಮಾರ್‌ ಹೃದಯ ಜ್ಯೋತಿ ಯೋಜನೆʼ : 10 ಅಮೂಲ್ಯ ಜೀವಗಳಿಗೆ ಮರುಜನ್ಮ

ಬೆಂಗಳೂರು : ಹಠಾತ್‌ ಹೃದಯಾಘಾತ ತಡೆಯಲು ಜಾರಿಗೆ ತಂದಿರುವ ‘ಪುನೀತ್‌ ರಾಜ್‌ಕುಮಾರ್‌ ಹೃದಯ ಜ್ಯೋತಿ ಯೋಜನೆ’ ಅಡಿ ಸುಮಾರು 11 ಸಾವಿರ ಜನರಲ್ಲಿ ಗಂಭೀರವಾಗಿರುವ ಸಮಸ್ಯೆ ಪತ್ತೆ ಮಾಡಲಾಗಿದ್ದು, ನಾಲ್ಕು ತಿಂಗಳಲ್ಲಿ ಅಮೂಲ್ಯ ಸಮಯದಲ್ಲಿ 10 ಜೀವ ರಕ್ಷಣೆ ಮಾಡಲಾಗಿದೆ. ಈ ಯೋಜನೆಯನ್ನು ಹಬ್‌ ಮತ್ತು ಸ್ಟೋಕ್‌ ಮಾದರಿಯಲ್ಲಿ ಜಾರಿಗೆ ತರಲಾಗಿದ್ದು, 71 ತಾಲೂಕು ಆಸ್ಪತ್ರೆಗಳೂ ಸೇರಿದಂತೆ ಒಟ್ಟು 86 ಸರ್ಕಾರಿ ಆಸ್ಪತ್ರೆಗಳನ್ನು ಸ್ಟೋಕ್‌ ಕೇಂದ್ರಗಳನ್ನಾಗಿ ಹಾಗೂ ಜಯದೇವ ಸೇರಿದಂತೆ …

Read More »

LPGʼ ಸಿಲಿಂಡರ್‌ ಸಬ್ಸಿಡಿ ಸೌಲಭ್ಯ ಪಡೆಯುವ ಗ್ರಾಹಕರೇ ಗಮನಿಸಿ : ತಪ್ಪದೇ ʻಇ-ಕೆವೈಸಿʼ ಮಾಡಿಸಿ

ಬೆಂಗಳೂರು : ನೀವು ಗ್ಯಾಸ್ ಸಿಲಿಂಡರ್ ಹೊಂದಿರುವವರಾಗಿದ್ದರೆ ಮತ್ತು ಕೇಂದ್ರ ಸರ್ಕಾರ ನೀಡುವ ಸಬ್ಸಿಡಿಯನ್ನ ಪಡೆಯುತ್ತಿದ್ದರೆ, ಈ ಸುದ್ದಿ ನಿಮಗಾಗಿ. ವಾಸ್ತವವಾಗಿ, ನೀವು ಗ್ಯಾಸ್ ಸಿಲಿಂಡರ್ಗಳ ಮೇಲಿನ ಸಬ್ಸಿಡಿಯನ್ನ ನಿರಂತರವಾಗಿ ಪಡೆಯಲು ಬಯಸಿದರೆ, ಇದಕ್ಕಾಗಿ ನೀವು ಈಗ ಕೆವೈಸಿ ಮಾಡಬೇಕಾಗುತ್ತದೆ. ನೀವು ಗ್ಯಾಸ್ ಸಿಲಿಂಡರ್ಗೆ ಕೆವೈಸಿ ಮಾಡದಿದ್ದರೆ, ಸಬ್ಸಿಡಿ ಪಡೆಯಲು ಸಾಧ್ಯವಾಗೋದಿಲ್ಲ. ಪ್ರಸ್ತುತ, ಕೆವೈಸಿಯನ್ನ ಎರಡು ರೀತಿಯಲ್ಲಿ ಮಾಡಬಹುದು. ಗ್ಯಾಸ್ ಏಜೆನ್ಸಿ ಕಚೇರಿಗೆ ಭೇಟಿ ನೀಡುವ ಮೂಲಕ ನೀವು ವೈಸಿ …

Read More »

ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ

ಹಾರೂಗೇರಿ : ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮ ವಿರುದ್ಧ ಸ್ವ ಪಕ್ಷದರೇ ಕೆಲಸ ಮಾಡಿದ್ದರು, ನಾನು ಮಾಜಿ ಶಾಸಕ ಶಾಮ್ ಘಾಟಗೆ ಮಾತು ಕೇಳುತ್ತೇನೆ ಎಂದು ಆರೋಪ ಮಾಡುತ್ತಾರೆ ಘಾಟಗೆ ಅಷ್ಟೇ ಅಲ್ಲ ಮನೆಯಲ್ಲಿ ನಾನು ನನ್ನ ಹೆಂಡತಿ, ಮಕ್ಕಳ ಮಾತೂ ಕೇಳಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ವಿರುದ್ಧ ವಾಗ್ದಾಳಿ ನಡೆಸಿದರು. ಹಾರೂಗೇರಿ ಪಟ್ಟಣದಲ್ಲಿ ನೂತನ ಸಂಸದರ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಇವರು. …

Read More »

ನ್ಯೂ ಇಂಡಿಯನ್ ಕ್ರಾಫ್ಟ್ ಪ್ರದರ್ಶನ

ಹಾವೇರಿ: ದೇಶದ ವಿವಿಧ ಭಾಗಗಳಲ್ಲಿ ಹೆಸರುವಾಸಿಯಾಗಿರುವ ‘ನ್ಯೂ ಇಂಡಿಯನ್ ಕ್ರಾಫ್ಟ್’ ಪ್ರದರ್ಶನ ಜೂನ್ 19ರಿಂದ ಹಾವೇರಿಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಆರಂಭವಾಗಿದ್ದು, ತರಹೇವಾರಿ ವಸ್ತುಗಳು ಖರೀದಿಗೆ ಲಭ್ಯವಿವೆ. ದೇಶದಾದ್ಯಂತ ಪ್ರಸಿದ್ಧಿ ಪಡೆದಿರುವ ವಿವಿಧ ವಸ್ತುಗಳ ಮಾರಾಟಗಾರರ 60ಕ್ಕೂ ಹೆಚ್ಚು ಮಳಿಗೆಗಳು ಪ್ರದರ್ಶನದಲ್ಲಿವೆ. ಕರ್ನಾಟಕ, ಉತ್ತರ ಪ್ರದೇಶ, ಮಧ್ಯಪ್ರದೇಶ, ಒಡಿಶಾ, ಕಾಶ್ಮೀರ, ಶಿಮ್ಲಾ, ಪಂಜಾಬ್, ಅಸ್ಸಾಂ, ಅರುಣಾಚಲ, ಪಶ್ಚಿಮ ಬಂಗಾಳ, ರಾಜಸ್ಥಾನ, ಹರಿಯಾಣ, ಉತ್ತರಾಖಂಡ, ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕುಶಲಕರ್ಮಿಗಳ ಕರಕುಶಲ …

Read More »

ತೋಟಗಾರಿಕೆ ಬೆಳೆ ವಿಮೆ: 31 ಕೊನೆ ದಿನ

ಬ್ಯಾಡಗಿ: ತಾಲ್ಲೂಕಿನ ತೋಟಗಾರಿಕೆ ಬೆಳೆಗಳಾದ ಮೆಣಸಿನಕಾಯಿ, ಅಡಿಕೆ, ಶುಂಠಿ, ಹಸಿ ಮೆಣಸಿನಕಾಯಿ ಹಾಗೂ ಮಾವು ಬೆಳೆಗಳಿಗೆ ಸರ್ಕಾರ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ. 2024-25ನೇ ಸಾಲಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಕಂತು ತುಂಬಲು ಜುಲೈ 31 ಕೊನೆಯ ದಿನವಾಗಿದೆ.   ಪ್ರತಿ ಹೆಕ್ಟೇರ್‌ ಅಡಿಕೆ ಬೆಳೆಗೆ ₹6,400, ಹಸಿಮೆಣಸಿನಕಾಯಿ ₹3,550, ಶುಂಠಿ ₹6,500, ಮಾವು ₹4,000 ದಂತೆ ವಿಮಾ ಕಂತನ್ನು ನಿಗದಿಪಡಿಸಿದೆ. …

Read More »