Breaking News

ರಾಜ್ಯ

170 ಲಕ್ಷ ಕೋಟಿ ಮೀರಿದ ಕೇಂದ್ರದ ಸಾಲ

ಕೇಂದ್ರ ಸರ್ಕಾರದ ಒಟ್ಟು ಸಾಲವು 2024ರ ಮಾರ್ಚ್‌ ಅಂತ್ಯದ ವೇಳೆಗೆ ₹171.78 ಲಕ್ಷ ಕೋಟಿಗೆ ಏರಿಕೆಯಾಗಿದೆ. 2023ರ ಡಿಸೆಂಬರ್‌ ಅಂತ್ಯದಿಂದ ಆರಂಭಗೊಂಡು 2024ರ ಮಾರ್ಚ್‌ ಅಂತ್ಯದ ವೇಳೆದ ವೇಳೆ ಶೇ 3.4ರಷ್ಟು ಏರಿಕೆಯಾಗಿದೆ ಎಂದು ಹಣಕಾಸು ಸಚಿವಾಲಯದ ಸಾರ್ವಜನಿಕ ಸಾಲದ ನಿರ್ವಹಣಾ ತ್ರೈಮಾಸಿಕ ವರದಿಯಲ್ಲಿ (ಜನವರಿ-ಮಾರ್ಚ್‌, 2024) ಹೇಳಲಾಗಿದೆ ₹166.14 ಲಕ್ಷ ಕೋಟಿ;2023ರ ಡಿಸೆಂಬರ್‌ ಅಂತ್ಯದಲ್ಲಿ ಇದ್ದ ಸಾಲದ ಮೊತ್ತ ₹171.78 ಲಕ್ಷ ಕೋಟಿ;2024ರ ಮಾರ್ಚ್‌ ಅಂತ್ಯದ ವೇಳೆ ಇದ್ದ …

Read More »

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮಕ್ಕೆ ಹನಿ ಟ್ರ್ಯಾಪ್‌ ನಂಟು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮದ ಹಿಂದೆ ಹನಿಟ್ರ್ಯಾಪ್‌ ಇದೆ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಗಂಭೀರ ಆರೋಪ ಮಾಡಿದ್ದು, ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾರೆ. ಆಂಧ್ರಪ್ರದೇಶದ ಸತ್ಯನಾರಾಯಣ ವರ್ಮ ಎಂಬಾತ ಈ ಪ್ರಕರಣದ ಸೂತ್ರಧಾರ. ವರ್ಮ ಒಬ್ಬ ವೃತ್ತಿಪರ ಕೇಡಿ ಎನ್ನುವ ಮಾಹಿತಿಯಿದೆ. ಹಲವು ರಾಜ್ಯಗಳಲ್ಲಿ ನಡೆದ ಅಕ್ರಮಗಳಲ್ಲಿ ಈತನ ಪಾತ್ರವಿದೆ ಎಂಬ ಆರೋಪಗಳು ಕೇಳಿಬಂದಿವೆ. ಈತನಿಗೆ ನಮ್ಮ ರಾಜ್ಯದ ಸಚಿವರು, ಶಾಸಕರು, …

Read More »

ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಸಂಬಂಧ ಇತ್ತೀಚೆಗೆ ಅವರನ್ನು ಧ್ವನಿ ಪರೀಕ್ಷೆಗೆ ಒಳಪಡಿಸಿದಾಗ ಕೊಂಚ ಧ್ವನಿ ಬದಲಾಯಿಸಿ ಮಾತನಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿತ್ತು. ಹಾಸನದ ಅಶ್ಲೀಲ ಚಿತ್ರವಿರುವ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ಚುರುಕುಗೊಳಿಸಿದ್ದು ಪ್ರಜ್ವಲ್‌ ವಿರುದ್ಧ ದಾಖಲಾಗಿರುವ ಸಾಲು-ಸಾಲು ದೂರುಗಳ ಪೈಕಿ ಒಂದೊಂದೇ ಪ್ರಕರಣದ ಸಾಕ್ಷ್ಯ ಕಲೆ ಹಾಕಲಾಗುತ್ತಿದೆ. …

Read More »

ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಗದಗ: ಸರಣಿಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ನಾಲ್ವರು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಗರದ ಬೆಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿ ನಡೆದಿದ್ದ ಸರಣಿಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಜಾಡು ಹಿಡಿದು ನಗರಕ್ಕೆ ಆಗಮಿಸಿದ್ದ ಗಂಗಾವತಿ ಶಹರ ಪೊಲೀಸ್ ಠಾಣೆಯ ಪೊಲೀಸರು ಸ್ಥಳೀಯ ಎಸ್.ಎಂ. ಕೃಷ್ಣ ನಗರದಲ್ಲಿ ವಾಸವಿದ್ದ ಅಮ್ಜದ್ …

Read More »

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಎರಡು ಕಾರುಗಳು ನುಜ್ಜುಗುಜ್ಜಾಗಿದ್ದು ದೇಹಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿ

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ ಮುಂಬಯಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಶುಕ್ರವಾರ ರಾತ್ರಿ ಸುಮಾರು ಹನ್ನೊಂದು ಗಂಟೆಯ ಸುಮಾರಿಗೆ ಕಾರು ಚಾಲಕ ಕಾರಿಗೆ ಪೆಟ್ರೋಲ್ ಹಾಕಲೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಕಾರನ್ನು ಚಲಾಯಿಸಿದ ಪರಿಣಾಮ ಎದುರಿನಿಂದ ವೇಗವಾಗಿ ಬರುತಿದ್ದ ಮತ್ತೊಂದು ಕಾರು …

Read More »

ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ

ಕುಷ್ಟಗಿ: ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಕೋತಿಯ ಹುಚ್ಚಾಟಕ್ಕೆ ಜನ ಆತಂಕಗೊಂಡಿದ್ದಾರೆ. ಕೋತಿ ಕಚ್ಚುವಿಕೆ ಮುಂದುವರಿದ ಹಿನ್ನೆಲೆಯಲ್ಲಿ ಜೂ.29ರ ಶನಿವಾರ ಶಾಲೆಗೆ ರಜೆ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಜೂನ್ 27 ರಿಂದ ಕೋತಿಯ ಉಪಟಳ ಜಾಸ್ತಿಯಾಗಿದೆ. ಗಿಡ, ಮನೆಯ ಮಾಳಿಗೆಯ ಮೇಲೆ ಕೂರುವ ಕೋತಿ ಜ‌ನರ ಮೇಲೆ ಏಕಾಏಕಿ ದಾಳಿ ಮಾಡಿ ಸಿಕ್ಕ ಸಿಕ್ಕಲ್ಲಿ ಕಚ್ಚಿ ಗಾಯಗೊಳಿಸಿದೆ. ಹುಚ್ಚು ಕೋತಿಯ ದಾಳಿಗೆ ಮಕ್ಕಳಿಂದ ಹಿಡಿದು ವೃದ್ದರವರೆಗೆ ಒಟ್ಟು 15 …

Read More »

ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ಇಷ್ಟು ದೊಡ್ಡ ಮಟ್ಟದ ಹಗರಣ ನಡೆದಿದೆ. ವಾಲ್ಮೀಕಿ ಸಮಾಜಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರ ಲೂಟಿ ಮಾಡಿದೆ. ಸರ್ಕಾರಿ ಹಣ ಲೂಟಿ ಮಾಡಿರುವ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಶರಣ ಪ್ರಕಾಶ್ ಪಾಟೀಲ್, ಬೋರ್ಡ್ ಅಧ್ಯಕ್ಷರು ಸೇರಿ ಮುಖ್ಯಮಂತ್ರಿ ಗಳು ಸಹ ರಾಜೀನಾಮೆ ಕೊಡಬೇಕಾಗುತ್ತದೆ. ಸಿಎಂ ಅವರೇ ಹಣಕಾಸಿನ ಸಚಿವರಾಗಿದ್ದಾರೆ. ಅವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಹಗರಣ ನಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. …

Read More »

ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆಗೆ ಶೆಟ್ಟರ್ ಮನವಿ

ಬೆಳಗಾವಿ: ಬೆಳಗಾವಿ – ಕಿತ್ತೂರು – ಧಾರವಾಡ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಜಗದೀಶ ಶೆಟ್ಟರ ಮನವಿ ಸಲ್ಲಿಸಿದರು. ನವದೆಹಲಿಯಲ್ಲಿ ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್ ಬೆಳಗಾವಿ – ಕಿತ್ತೂರು – ಧಾರವಾಡ ಮಾರ್ಗಕ್ಕೆ ಹೊಸ ರೈಲು ಮಾರ್ಗ ಯೋಜನೆ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಎರಡು ವರ್ಷಗಳ ಹಿಂದೆ ಭೂಸ್ವಾಧೀನಕ್ಕಾಗಿ …

Read More »

ಸುಳ್ಳು ಅತ್ಯಾಚಾರ ಕೇಸ್ ಹಾಕಿದ್ದ 13 ಮಂದಿಗೆ ಮೂರುವರೆ ವರ್ಷ ಕಾರಾಗೃಹ ಶಿಕ್ಷೆ

ಬೆಳಗಾವಿ: ಹೆಸ್ಕಾಂ ಅಧೀಕ್ಷಕ ಅಭಿಯಂತರ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಹೆಸ್ಕಾಂ ಸಹಾಯಕ ಅಭಿಯಂತೆ ಸೇರಿ ಒಟ್ಟು ಜನ ಹೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮೂರುವರೆ ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ ತಲಾ 86 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಎಲ್. ವಿಜಯಲಕ್ಷ್ಮೀ ದೇವಿ ಅವರು ಗುರುವಾರ ಮಹತ್ವದ ತೀರ್ಪು ಪ್ರಕಟಿಸಿದರು. ಮೈಸೂರಿನ ಬೆಸ್ಕಾಂ ಸಹಾಯಕ ಅಭಿಯಂತೆ ಬಿ.ವಿ. …

Read More »

ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

ಬೆಳಗಾವಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ಗ್ರಾಮದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಾಗಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು.ಕಳಪೆ ಆಹಾರಗಳ ಪೂರೈಕೆಯನ್ನು …

Read More »