Breaking News

ರಾಜ್ಯ

ಸೂರಜ್ ರೇವಣ್ಣ ಪರ ದೂರು ನೀಡಿದ್ದ ಶಿವಕುಮಾರ್ ನಾಪತ್ತೆ

ಹಾಸನ, (ಜೂನ್ 23): ಇತ್ತ ಬೆಂಗಳೂರಿನಲ್ಲಿ ಜೆಡಿಎಸ್ ಕಾರ್ಯಕರ್ತನೋರ್ವ, ಸೂರಜ್ ರೇವಣ್ಣ (Suraj Revanna) ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುತ್ತಿದ್ದಂತೆಯೇ ಇತ್ತ ಹೊಳೆನರಸೀಪುರದಲ್ಲಿ ಸಂತ್ರಸ್ತನ ವಿರುದ್ಧವೇ ದೂರು ದಾಖಲಾಗಿದೆ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎನ್ನುವಾತ ಸಂತ್ರಸ್ತನ ವಿರುದ್ಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಬ್ಲ್ಯಾಕ್​ ಮೇಲ್​ ದೂರು ನೀಡಿದ್ದಾನೆ. ಆದ್ರೆ, ಇದೀಗ ಸಂತ್ರಸ್ತನ ದೂರಿನ ಅನ್ವಯ ಸೂರಜ್​ನನ್ನು ಪೊಲೀಸರು ಅರೆಸ್ಟ್ ಮಾಡುತ್ತಿದ್ದಂತೆಯೇ ಆಪ್ತ ಶಿವಕುಮಾರ್ …

Read More »

ಉಪಮುಖ್ಯಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ; ಜಮೀರ್ ಅಹ್ಮದ್

ಬೆಂಗಳೂರು: ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳ ಸ್ಥಾನ ಸೃಷ್ಟಿ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ. ಸಚಿವ ಸತೀಶ ಜಾರಕಿಹೊಳಿ ಅವರು, ಉಪ ಮುಖ್ಯಮಂತ್ರಿ ಹುದ್ದೆ ಕುರಿತಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತಿಬ್ಬರು ಪ್ರಭಾವಿ ಸಚಿವರಾದ ಜಮೀರ್ ಅಹ್ಮದ್ ಮತ್ತು ಕೆ.ಎನ್. ರಾಜಣ್ಣ ಕೂಡ ಉಪಮುಖ್ಯಮಂತ್ರಿ ವಿಚಾರವಾಗಿ ಪ್ರಸ್ತಾಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಮೂವರು ಡಿಸಿಎಂ ಮಾಡಿದರೆ ತೊಂದರೆ ಏನು? ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸುವಂತೆ …

Read More »

ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ

ಮೇಷ: ಕೆಲಸಕ್ಕೆ ವಿರಾಮವಾಗಿರುವುದರಿಂದ ಮನಸ್ಸಿಗೂ ವಿರಾಮ. ಸಂಸಾರದ ಆವಶ್ಯ ಕತೆಗಳತ್ತ ಗಮನ. ಉದ್ಯಮಿಗಳಿಗೆ ಅಭಿವೃದ್ಧಿಯ ಮಾರ್ಗಗಳ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ಲಾಭ. ಸಂಜೆ ಬಂಧು- ಮಿತ್ರರ ಭೇಟಿ. ವೃಷಭ: ಕೆಲವರಿಗೆ ಅನಿರೀಕ್ಷಿತ ಧನಪ್ರಾಪ್ತಿಯ ಸಾಧ್ಯತೆ. ವ್ಯವಹಾರ ವಿಸ್ತರಣೆಗೆ ವಿವಿಧ ಮೂಲಗಳಿಂದ ಸಹಾಯ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಸಾಮಾಜಿಕ ಸಮಸ್ಯೆಗಳ ಕುರಿತು ಚಿಂತನೆ. ಮಿಥುನ: ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಬಂಧುಗಳ ಆಗಮನ. ಅನವಶ್ಯ ವೆಚ್ಚಗಳ ಬಗ್ಗೆ ಎಚ್ಚರ. …

Read More »

PFʼ ಖಾತೆದಾರರೇ ಗಮನಕ್ಕೆ : ʻUANʼ ಸಂಖ್ಯೆಗೆ ʻಆಧಾರ್‌ ಕಾರ್ಡ್‌ʼ ಲಿಂಕ್‌ ಮಾಡೋದು ಕಡ್ಡಾಯ

ನವದೆಹಲಿ : ಪಿಎಫ್ ಖಾತೆದಾರರು ತಮ್ಮ ಯುಎಎನ್ ಸಂಖ್ಯೆಯನ್ನು ಆಧಾರ್ ನೊಂದಿಗೆ ಲಿಂಕ್ ಮಾಡಬೇಕಾಗುತ್ತದೆ. ಇಲ್ಲದಿದ್ದರೆ, ಪಿಎಫ್ ಮೊತ್ತವನ್ನು ಹಿಂಪಡೆಯುವಾಗ ಸಮಸ್ಯೆಗಳು ಉಂಟಾಗುತ್ತವೆ. ಸಾಮಾಜಿಕ ಭದ್ರತಾ ಸಂಹಿತೆ, 2020 ರ ಸೆಕ್ಷನ್ 142 ರ ಪ್ರಕಾರ, ಸಂಸ್ಥೆಯಲ್ಲಿ ಕೆಲಸ ಮಾಡುವ ನೌಕರರು ಮತ್ತು ಕಾರ್ಮಿಕರು ತಮ್ಮ ಆಧಾರ್ ಖಾತೆಯನ್ನು ಇಪಿಎಫ್ ಖಾತೆಯೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಲಿಂಕ್ ಪ್ರಕ್ರಿಯೆಯನ್ನು ಆನ್ಲೈನ್ ಅಥವಾ ಆಫ್ಲೈನ್ನಲ್ಲಿ ಮಾಡಬಹುದು. ಆನ್ ಲೈನ್ ನಲ್ಲಿ ಹೇಗೆ …

Read More »

‘ಅಕ್ರಮ ಸರ್ಕಾರಿ ಭೂಮಿ’ ಒತ್ತುವರಿದಾರರ ವಿರುದ್ಧ ‘FIR’ ದಾಖಲು

ಬೆಂಗಳೂರು: ನಗರದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಸರ್ಕಾರಿ ಭೂಮಿ ಒತ್ತುವರಿದಾರರ ವಿರುದ್ಧ ಸಮರ ಸಾರಿದ್ದಾರೆ. ಇಂದು ಅಕ್ರಮ ಸರ್ಕಾರಿ ಭೂ ಒತ್ತುವರಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಿಸಿ ಮುಟ್ಟಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕಂದಾಯ ಇಲಾಖೆಯ ಸಚಿವನಾಗಿ ನಾನು ಜವಾಬ್ದಾರಿ ವಹಿಸುತ್ತಿದ್ದಂತೆ ನಿರ್ಧರಿಸಿದ ಮೊದಲ ಕೆಲಸ ಸರ್ಕಾರಿ ಜಮೀನಿನ ಒತ್ತುವರಿ ತೆರವು. ಕಳೆದ ವರ್ಷ 2023ರ ಜೂನ್‌ ತಿಂಗಳ ಮೊದಲ ವಾರವೇ …

Read More »

ಇಲ್ಲಿದೆ ಇಂದಿನ ’53ನೇ GST ಕೌನ್ಸಿಲ್ ಸಭೆ’ಯ ಪ್ರಮುಖ ಅಂಶಗಳು

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 53 ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಜಿಎಸ್ಟಿ ಅನುಸರಣೆಯನ್ನು ಸುವ್ಯವಸ್ಥಿತಗೊಳಿಸುವ ಮತ್ತು ತೆರಿಗೆದಾರರ ಹೊರೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಶಿಫಾರಸುಗಳನ್ನು ತರಲಾಯಿತು. ಹೊಸ ಸರ್ಕಾರ ರಚನೆಯಾದ ನಂತರ ಇದು ಜಿಎಸ್ಟಿ ಮಂಡಳಿಯ ಮೊದಲ ಸಭೆಯಾಗಿದೆ. ಹೀಗಿವೆ ಇಂದಿನ 53ನೇ ಜಿಎಸ್ಟಿ ಕೌನ್ಸಿಲ್ ಸಭೆಯ ಹೈಲೈಟ್ಸ್ ಬಡ್ಡಿ ಮತ್ತು ದಂಡ ಮನ್ನಾ: 2017-18, 2018-19 ಮತ್ತು 2019-20ರ ಹಣಕಾಸು …

Read More »

ಜ್ಞಾನವಿದ್ದವರೇ ಶ್ರೀಮಂತರು: ಸಿದ್ಧಗಂಗಾ ಶ್ರೀ

ಬೆಂಗಳೂರು: ‘ಜ್ಞಾನಕ್ಕೆ ಸಮಾನವಾದುದು ಯಾವುದೂ ಇಲ್ಲ. ಜ್ಞಾನ ಯಾರಲ್ಲಿ ಇರುತ್ತದೆಯೋ ಅವರೇ ಶ್ರೀಮಂತರು. ಶಿಕ್ಷಣದಿಂದ ಮಾತ್ರ ಶಕ್ತಿ ಬರುತ್ತದೆ’ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಕರ್ನಾಟಕದ ವಿವಿಧ ಶಾಲೆಗಳ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಕ್ಷಾ ಫೌಂಡೇಷನ್‌ ವತಿಯಿಂದ 2 ಲಕ್ಷ ನೋಟ್‌ ಬುಕ್‌ಗಳನ್ನು ವಿತರಿಸಿದ ಸಮಾರಂಭದಲ್ಲಿ ಶನಿವಾರ ಅವರು ಮಾತನಾಡಿದರು.   ಸರ್ಕಾರಿ ಶಾಲೆಯ ಮಕ್ಕಳು ಹೆಚ್ಚು ಪ್ರತಿಭಾವಂತರಾಗಿದ್ದು, ಅವರಿಗೆ ಸರಿಯಾದ ಪ್ರೋತ್ಸಾಹ ದೊರಕಿದರೆ ಸಾಧಕರಾಗಿ …

Read More »

ಮಾರಾಟಕ್ಕೆ ಇಟ್ಟಿದ್ದ ಮಗು ಸಾವು

ಬೆಳಗಾವಿ: ಮಾರಾಟಕ್ಕೆ ಒಳಗಾಗುವುದನ್ನು ತಪ್ಪಿಸಿ, ರಕ್ಷಿಸಲಾಗಿದ್ದ ಹೆಣ್ಣು ಮಗು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣುಮಗು ಗುರುವಾರ (ಜೂನ್‌ 20) ಮೃತಪಟ್ಟಿದೆ. ‘ಮಗು ಎಂಟೇ ತಿಂಗಳಿಗೆ ಜನಿಸಿತ್ತು. ತೂಕ 1 ಕೆಜಿ 200 ಗ್ರಾಂ ಮಾತ್ರ ಇತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು. ಮಗು ಜನ್ಮತಃ ಸೆಪ್ಟಿಸಿನಿಯಾ ಎಂಬ ಕಾಯಿಲೆಗೆ ಒಳಗಾಗಿತ್ತು. ನಾವು ಸಾಕಷ್ಟು ಪ್ರಯತ್ನ ಮಾಡಿದರೂ ಮಗು ಚೇತರಿಸಿಕೊಳ್ಳಲಿಲ್ಲ’ ಎಂದು ಜಿಲ್ಲಾಸ್ಪತ್ರೆಯ ಮಕ್ಕಳ ರೋಗತಜ್ಞ ಡಾ.ಶೈಲೇಶ್‌ ಪಾಟೀಲ ತಿಳಿಸಿದರು. ಏನಿದು ಪ್ರಕರಣ: ‘ಪವಿತ್ರಾ …

Read More »

ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಾರಥ್ಯ

ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಾರಥ್ಯ ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿ.., ಆಡಳಿತ ಮಂಡಳಿಗೆ 14 ಸ್ಥಾನಗಳಿಗೆ ಅವಿರೋಧ ಆಯ್ಕೆ ಸವದತ್ತಿ ಮತ್ತು ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಕ್ಷೇತ್ರಗಳ ಎರಡು ಸ್ಥಾನಗಳಿಗೆ ಜೂ. 28 ರಂದು ಚುನಾವಣೆ   ಬೆಳಗಾವಿ: ಅರಭಾವಿ ಶಾಸಕ ಹಾಗೂ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬರುವ ದಿ 28 ರಂದು …

Read More »

ಶಿಕ್ಷಣದಲ್ಲಿ ರಾಜಕೀಯ ಬೇಡ; ಶಾಸಕ ಬಾಬಾಸಾಹೇಬ್ ಪಾಟೀಲ್

ಚನ್ನಮ್ಮನ ಕಿತ್ತೂರು: ಮಕ್ಕಳ ಹಾಗೂ ಶಾಲೆಗಳ ಅಭಿವೃದ್ಧಿಗಳನ್ನು ಗಮನದಲ್ಲಿಟ್ಟುಕೊಂಡು ಪಾಲಕರು ಶ್ರಮ ವಹಿಸಬೇಕು. ಶಾಲೆಗಳ ಅಭಿವೃದ್ಧಿಯಲ್ಲಿ ಹಾಗೂ ಶಿಕ್ಷಣದಲ್ಲಿ ರಾಜಕೀಯ ಬೆರೆಸಬಾರದು ಎಂದು ಶಾಸಕ ಬಾಬಾ ಸಾಹೇಬ್ ಪಾಟೀಲ್ ಹೇಳಿದರು. ಅವರು ಕಾದ್ರೊಳ್ಳಿ ಗ್ರಾಮದಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಪಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪಾಲಕರು ಮಕ್ಕಳಿಗಾಗಿ ಆಸ್ತಿಯನ್ನು ಮಾಡದೆ ಉತ್ತಮ ಶಿಕ್ಷಣ ದೊರಕಿಸುವುದರ ಮೂಲಕ ಮಕ್ಕಳನ್ನು ಆಸ್ತಿಯಾಗಿ ಮಾಡಬೇಕು. ಈ …

Read More »