Breaking News

ರಾಜ್ಯ

ತಾ.ಪಂ.-ಜಿ.ಪಂ. ಮೀಸಲಾತಿ ನಿಗದಿ ವಿಳಂಬ: ಸರಕಾರಕ್ಕೆ ನ್ಯಾಯಾಂಗ ನಿಂದನೆ ತೂಗುಗತ್ತಿ

ಬೆಂಗಳೂರು: ನ್ಯಾಯಾಲಯಕ್ಕೆ ಕೊಟ್ಟ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರಕಾರದ ವಿರುದ್ಧ ರಾಜ್ಯ ಚುನಾವಣ ಆಯೋಗ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಆಯೋಗ ಸಲ್ಲಿಸಿರುವ ಈ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.   ಈ ವೇಳೆ ರಾಜ್ಯ ಚುನಾವಣ …

Read More »

ಮಂಚೂರಿ, ಬಾಂಬೇ ಮಿಠಾಯಿ ಬಳಿಕ ಕಬಾಬ್‌ಗೂ ನಿಷೇಧ

ಬೆಂಗಳೂರು: ರಾಜ್ಯಾ ದ್ಯಂತ ವೆಜ್‌ ಕಬಾಬ್‌, ಕೋಳಿ ಹಾಗೂ ಮೀನಿನ ಕಬಾಬ್‌ ತಯಾರಿಗೆ ಕೃತಕ ಬಣ್ಣ ಉಪಯೋಗಿಸುವುದನ್ನು ನಿಷೇ ಧಿಸಿ ರಾಜ್ಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಇಲಾಖೆ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದರೆ ಜೀವಾವಧಿವರೆಗೆ ಜೈಲು ಶಿಕ್ಷೆಯ ಎಚ್ಚರಿಕೆಯನ್ನೂ ನೀಡಲಾಗಿದೆ.   ಕೋಳಿ ಕಬಾಬ್‌ಗಳಲ್ಲಿ ಕೃತಕ ಬಣ್ಣಗಳ ಬೆರೆಸುವಿಕೆಯಿಂದಾಗುವ ದುಷ್ಪರಿ ಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ, ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ …

Read More »

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

ಬೆಂಗಳೂರು: ಮುಂದಿನ 3 ದಿನಗಳಲ್ಲಿ ಅಸುರಕ್ಷಿತ ಮಸಾಲಪೂರಿ ಹಾಗೂ ಪಾನಿಪೂರಿ ಮಾರಾಟ ವನ್ನು ರಾಜ್ಯಾದ್ಯಂತ ನಿಷೇಧ ಮಾಡಲಾಗುತ್ತದೆಯೇ? ಅಂಥದ್ದೊಂದು ತೂಗುಕತ್ತಿ ಈ ಮಸಾಲಾ ತಿಂಡಿಗಳ ಮೇಲಿದೆ. ಇದಕ್ಕೆ ಬಳಸುವ ಕೆಮಿಕಲ್‌ ಸಾಸ್‌ ಮಕ್ಕಳ ಜೀರ್ಣಾಂಗದ ಮೇಲೂ ಪರಿಣಾಮ ಬೀರಿ, ಹೈಪರ್‌ ಆಕ್ವಿವ್‌ನೆಸ್‌ ಗೆ ಕಾರಣವಾಗುತ್ತಿದೆ ಎಂಬ ಅಂಶ ಗೊತ್ತಾಗಿದೆ. ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಅಸುರಕ್ಷಿತ ಗೋಬಿ ಹಾಗೂ ಕಾಟನ್‌ ಕ್ಯಾಂಡಿಗಳ …

Read More »

ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹ

ನವದೆಹಲಿ: ಎಂಟನೆಯ ವೇತನ ಆಯೋಗ ರಚಿಸಬೇಕು, ವೇತನ ಪಡೆಯುವ ವರ್ಗದವರಿಗೆ ಆದಾಯ ತೆರಿಗೆ ವಿನಾಯಿತಿ ಹೆಚ್ಚು ಮಾಡಬೇಕು ಮತ್ತು ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಬೇಕು ಎನ್ನುವ ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳ ಮುಖಂಡರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮುಂದಿರಿಸಿದ್ದಾರೆ. ನಿರ್ಮಲಾ ಅವರು ಕೇಂದ್ರ ಬಜೆಟ್‌ಗೆ ಪೂರ್ವಭಾವಿಯಾಗಿ ಕಾರ್ಮಿಕ ಸಂಘಟನೆಗಳ ಮುಖಂಡರ ಜೊತೆ ಸೋಮವಾರ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಮಾಲೀಕತ್ವದ ಉದ್ದಿಮೆಗಳ ಖಾಸಗೀಕರಣವನ್ನು ಸ್ಥಗಿತಗೊಳಿಸಬೇಕು …

Read More »

ಮದ್ಯ ಅಕ್ರಮ ಮಾರಾಟ ನಿಷೇಧಕ್ಕೆ ಮಹಿಳೆಯರ ಆಗ್ರಹ: ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ

ದೇವರಹಿಪ್ಪರಗಿ: ಪಟ್ಟಣ, ದೇವೂರ ಗ್ರಾಮ ಸೇರಿದಂತೆ ತಾಲ್ಲೂಕಿನಾದ್ಯಂತ ಅವ್ಯಾಹತವಾಗಿ ನಡೆಯುತ್ತಿರುವ ಮದ್ಯ ಅಕ್ರಮ ಮಾರಾಟ ಹಾಗೂ ಪಾನ್‌ ಶಾಪ್‌ಗಳಲ್ಲಿ ಗಾಂಜಾ ಮಿಶ್ರಿತ ಮಾವಾ ಎಂಬ ಮಾದಕ ಪದಾರ್ಥ ಮಾರಾಟ ತಡೆಯಬೇಕೆಂದು ಮಹಿಳೆಯರು ಆಗ್ರಹಿಸಿದರು. ಪಟ್ಟಣದ ತಹಶೀಲ್ದಾರ್‌ ಕಚೇರಿಗೆ ಸೋಮವಾರ ದೇವೂರ ಹಾಗೂ ವಿವಿಧ ಗ್ರಾಮಗಳ ಮಹಿಳೆಯರು ಆಗಮಿಸಿ, ತಹಶೀಲ್ದಾರ್‌ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು. ರೇಣುಕಾ ಪಾಟೀಲ ಮಾತನಾಡಿ, ಪಟ್ಟಣದ ಹಲವು ಅಂಗಡಿ ಹಾಗೂ ದೇವೂರ ಗ್ರಾಮದ ವಿವಿಧೆಡೆ ಮದ್ಯ …

Read More »

ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ?ತಿಮ್ಮಾಪುರ

ಬಾಗಲಕೋಟೆ: ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ? ಪ್ರಜ್ವಲ್ ಮತ್ತು ಸೂರಜ್ ಆ ಕೆಲಸ ಮಾಡಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಅವದರೂ ಹೇಳಲಿ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿದರು. ನಗರದಲ್ಲಿ ಕೆಡಿಪಿ ಸಭೆಯ ಮುಂಚೆ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡುತ್ತಾ ಎಚ್ ಡಿಡಿ ಕುಟುಂಬ ಮುಗಿಸಲು ಹುನ್ನಾರ ನಡಿತಿದೆಯೆಂಬ ಎಚ್ ಡಿಕೆ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಎಚ್ ಡಿಕೆ ಕೇಂದ್ರ …

Read More »

ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ. ತಪ್ಪಿದ ಅನಾಹುತ

ಮುಧೋಳ: ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಶಿರೋಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಸಿದ್ದಪ್ಪ ಮುಂಡಗನೂರ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ‌ ಸಿಲಿಂಡರ್ ಸ್ಫೋಟಗೊಂಡಿದ್ದು ಸ್ಫೋಟದ ಭಿಕರತೆಗೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ತಪ್ಪಿದ ಅನಾಹುತ: ಮಧ್ಯಾಹ್ನದ ಸಮಯದಲ್ಲಿ‌ ಮನೆಯ ಮಂದಿಯೆಲ್ಲ ಬೀಗ ಹಾಕಿಕೊಂಡು ಕೂಲಿ‌ ಕೆಲಸಕ್ಕೆ ತೆರಳಿದ್ದರು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಮನೆಯ ಕೆಲ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. …

Read More »

ಕಾಂಗ್ರೆಸ್ ಮುಖಂಡರನ್ನು ಮತ್ತು ಕಾರ್ಯಕರ್ತರನ್ನ ಭೇಟಿ ಮಾಡಿ ಅಭಿನಂದನೆ ಸ್ವೀಕರಿಸಿದ ;ಕು. ಪ್ರಿಯಾಂಕಾ ಜಾರಕಿಹೊಳಿ

ಅಥಣಿ : ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಅಥಣಿ ಮತಕ್ಷೇತ್ರಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿದ ನೂತನ ಸಂಸದೆ ಕು. ಪ್ರಿಯಾಂಕಾ ಜಾರಕಿಹೊಳಿ ಕಾಂಗ್ರೆಸ್ ಮುಖಂಡರನ್ನು ಮತ್ತು ಕಾರ್ಯಕರ್ತರನ್ನ ಭೇಟಿ ಮಾಡಿ ಅಭಿನಂದನೆ ಸ್ವೀಕರಿಸಿದರು. ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ ಪುತ್ತಳಿ ಸೇರಿದಂತೆ ಅಥಣಿ ಪಟ್ಟಣದ ಎಲ್ಲ ಮಹಾತ್ಮರ ಪುತ್ತಳಿಗೆ ಮಾಲಾರ್ಪಣೆ ಸಲ್ಲಿಸಿ ಗೌರವ ಸಮರ್ಪಿಸಿದರು. ನಂತರ ಅಥಣಿಯ ಆರಾಧ್ಯ ದೈವ ಶ್ರೀ ಸಿದ್ದೇಶ್ವರ …

Read More »

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಮುಂದಿನ ಮೂರು ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಈಗಾಗಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ದಕ್ಷಿಣ ಕನ್ನಡ ಉಡುಪಿ ಸೇರಿದಂತೆ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬರೆದಿದ್ದಾನೆ. ಹಾಗೆಯೇ ಮುಂದಿನ ಮೂರು ಗಂಟೆಗಳ ಕಾಲ ಅಂದರೆ ಇನ್ನು ಕೆಲವೇ ಕ್ಷಣಗಳಲ್ಲಿ ಕರಾವಳಿ ಕರ್ನಾಟಕದ …

Read More »

ಚನ್ನಪಟ್ಟಣ ಉಪಚುನಾವಣೆ: ಶಾಕಿಂಗ್ ಸುದ್ದಿ ಕೊಟ್ಟ ಮಾಜಿ ಸಂಸದ ಡಿಕೆ ಸುರೇಶ್!

ಬೆಂಗಳೂರು, ಜೂನ್.24: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಡಿಕೆ ಸುರೇಶ್ ಅವರು ತಮ್ಮ ಸೋಲಿನಿಂದ ಬೇಸರದಲ್ಲಿದ್ದಾರೆ ಎಂಬುದು ಎಲ್ಲರಿಗೂ ತಿಳಿಯುತ್ತಿದೆ. ತಮ್ಮನನ್ನು ಮತ್ತೆ ರಾಜಕೀಯಕ್ಕೆ ಕರೆತರಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಹೀಗಾಗಿಯೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ತಾವೇ ಕಣಕ್ಕಿಳಿಯುವ ಬಗ್ಗೆ ಮಾತನಾಡಿದ್ದಾರೆ. ಆದರೆ, ಲೋಕಸಭಾ ಚುನಾವಣಾ ಸೋಲಿನಿಂದ ಒತ್ತಡದಲ್ಲಿದ್ದ ಮಾಜಿ ಸಂಸದ ಡಿಕೆ ಸುರೇಶ್ ರಾಜಕೀಯದಿಂದ ದೂರ ಸರಿಯುವ ಬಗ್ಗೆ ಮಾತನಾಡಿ ಎಲ್ಲರಿಗೂ ಅಚ್ಚರಿ …

Read More »