ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾದ ಬೆನ್ನಲ್ಲೇ ಸರ್ಕಾರಿ ಬಸ್ ಪ್ರಯಾಣ ದರ, ನೀರಿನ ದರ ಏರಿಕೆಯ ಸುಳಿವು ದೊರೆತಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಬಸ್ ಪ್ರಯಾಣತರ ಹೆಚ್ಚಳ ಬಗ್ಗೆ ಸಾರಿಗೆ ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲಿಸಿ ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗದಂತೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಜೂನ್ 15ರಂದು ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ …
Read More »ಅಂಗನವಾಡಿ ಕೇಂದ್ರಗಳ ಹಿತಾಸಕ್ತಿ ಕಾಪಾಡಲು ಬದ್ಧ: ಸಚಿವೆ ಹೆಬ್ಬಾಳ್ಕರ್
ಬೆಂಗಳೂರು: ಅಂಗನವಾಡಿ ಕೇಂದ್ರದಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಸಾವಿರಾರು ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರದಿಂದ ಅಹೋರಾತ್ರಿ ಧರಣಿ ಪ್ರಾರಂಭಿಸಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಫ್ರೀಡಂ ಪಾರ್ಕ್‌ಗೆ ಆಗಮಿಸಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಧಾವಿಸಿ ನಿಮ್ಮ ಪರವಾಗಿ ನಾವಿದ್ದೇವೆ ಎನ್ನುವ ಭರವಸೆ ನೀಡಿದರು. …
Read More »ದೈಹಿಕ ಶಿಕ್ಷಣ ಶಿಕ್ಷಕರ ಒತ್ತಾಯ ಮುಂಬಡ್ತಿಗೆ
ದೈಹಿಕ ಶಿಕ್ಷಣ ಶಿಕ್ಷಕರನ್ನು ಶಿಕ್ಷಕರೆಂದು ಪರಿಗಣಿಸಿ, ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ನೀಡಬೇಕೆಂದು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಶಾಖೆ ಆಗ್ರಹಿಸಿದೆ. ಶಿಕ್ಷಣ ಸಚಿವ ಮಧು.ಎಸ್. ಬಂಗಾರಪ್ಪ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಬೆಂಗಳೂರಿನಲ್ಲಿ ಬುಧವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಿಗೆ ಸಲ್ಲಿಸಿ ಒತ್ತಾಯಿಸಿದರು. ಬರುವ ಜುಲೈ ಒಳಗೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಪ್ರಸ್ತುತ ವರ್ಷದ ಇಲಾಖೆಯ ಕ್ರೀಡಾಕೂಟಗಳನ್ನು ಬಹಿಷ್ಕರಿಸಿ ಅನಿರ್ದಿಷ್ಟಾವಧಿ …
Read More »ಭತ್ತ ಸೇರಿ 14 ಬೆಳೆಗಳ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ
ನವದೆಹಲಿ: ಪ್ರಸಕ್ತ ಸಾಲಿನ ಮುಂಗಾರು ಬೆಳೆಯಾಗಿ ಬೆಳೆದ ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿಪಡಿಸಿದ್ದು, ಪ್ರತಿ ಕ್ವಿಂಟಾಲ್‌ಗೆ ಶೇ 5.35ರಂತೆ ₹2,300ಕ್ಕೆ ಬುಧವಾರ ಹೆಚ್ಚಿಸಿದೆ. ಇದರಂತೆ ಇತರ 13 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನೂ ಸರ್ಕಾರ ಹೆಚ್ಚಿಸಿದೆ. ಸರ್ಕಾರಿ ಗೋದಾಮಿನಲ್ಲಿ ಅಕ್ಕಿಯ ದಾಸ್ತಾನು ಸಾಕಷ್ಟು ಇರುವಾಗಲೇ, ಭತ್ತಕ್ಕೆ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ ₹117ರಷ್ಟು ಹೆಚ್ಚಳ ಮಾಡಿರುವುದರ ಹಿಂದೆ ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ದೆಹಲಿ ವಿಧಾನಸಭಾ ಚುನಾವಣೆಯ …
Read More »NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ!
ನವದೆಹಲಿ: ಜೂನ್ 18ರಂದು (ಮಂಗಳವಾರ) ನಡೆದಿದ್ದ ಯುಜಿಸಿ ನೆಟ್ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಶಿಕ್ಷಣ ಸಚಿವಾಲಯವು, ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಯುಜಿಸಿ ನೆಟ್ ಪರೀಕ್ಷೆ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್ …
Read More »ವಾಹನ ಸವಾರ’ರಿಗೆ ಬಿಗ್ ರಿಲೀಫ್: ರಾಜ್ಯ ಸರ್ಕಾರದಿಂದ ಮತ್ತೆ ‘HSRP ನಂಬರ್ ಪ್ಲೇಟ್’ ಅಳವಡಿಕೆ ಗಡುವು ವಿಸ್ತರಣೆ
ಬೆಂಗಳೂರು: ಈಗಾಗಲೇ ಹಲವು ಬಾರಿ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿತ್ತು. ಈಗ ಮತ್ತೊಮ್ಮೆ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆಪ್ಟೆಂಬರ್.15ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರದಿಂದ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸೋದನ್ನು ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕಡ್ಡಾಯಗೊಳಿಸಲಾಗಿತ್ತು. ಕರ್ನಾಟಕದಲ್ಲಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ. ಈಗಾಗಲೇ ಅನೇಕ …
Read More »77 ಮಕ್ಕಳಿದ್ದರೂ ಪ್ರೌಢಶಾಲೆ ಇಲ್ಲ
ರಾಯಬಾಗ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಂಟೂರ ಗ್ರಾಮದಲ್ಲಿ 77 ವಿದ್ಯಾರ್ಥಿಗಳಿದ್ದರೂ ಪ್ರೌಢಶಾಲೆ ಇಲ್ಲ. ಪ್ರೌಢಶಿಕ್ಷಣಕ್ಕಾಗಿ ಮಕ್ಕಳು ಪಕ್ಕದ ನಿಪನಾಳ ಗ್ರಾಮಕ್ಕೆ ಅಲೆಯಬೇಕಾದ ಪರಿಸ್ಥಿತಿ ಇದೆ. ಇದು ಮಕ್ಕಳ ಕಲಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಗ್ರಾಮಕ್ಕೆ ಒಂದು ಪ್ರೌಢಶಾಲೆ ಮಂಜೂರು ಮಾಡುವಂತೆ ಗ್ರಾಮಸ್ಥರು ಶಾಸಕರಿಗೆ, ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ. ಯಾರೊಬ್ಬರೂ ಕಿವಿಗೊಟ್ಟಿಲ್ಲ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ, ಮಕ್ಕಳ ಸಂಕಷ್ಟ ದೂರು ಮಾಡುವ …
Read More »ಬೆಳಗಾವಿ | ಉದ್ಯೋಗ ಮೇಳ 22ರಂದು
ಬೆಳಗಾವಿ: ‘ಇಲ್ಲಿನ ಭಾವುರಾವ್ ಕಾಕತಕರ ಕಾಲೇಜಿನಲ್ಲಿ ರೋಟರಿ ಕ್ಲಬ್ ಬೆಲಗಮ್-ವೇಣುಗ್ರಾಮ ಹಾಗೂ ಬೆಂಗಳೂರಿನ ಸ್ಪೆಕ್ಟ್ರಂ ಟ್ಯಾಲೆಂಟ್ ಮ್ಯಾನೇಜ್‌ಮೆಂಟ್ ಲಿಮಿಟೆಡ್ ಸಹಯೋಗದಲ್ಲಿ ಜೂನ್ 22ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ಎರಡನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದು ಕ್ಲಬ್ ಅಧ್ಯಕ್ಷ ಸಂಜೀವ್ ದೇಶಪಾಂಡೆ ಹೇಳಿದರು. ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಭಾಗದ ಉದ್ಯೋಗಕಾಂಕ್ಷಿಗಳಿಗೆ ನೆರವಾಗುವ ದೃಷ್ಟಿಯಿಂದ ಆಯೋಜಿಸಿದ ಮೇಳದಲ್ಲಿ 50ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. …
Read More »ಅಮೆಜಾನ್ ಪಾರ್ಸೆಲ್ ನೊಳಗೆ ವಿಷಕಾರಿ ಹಾವು-ಮಹಿಳೆ ಬಚಾವ್
ಬೆಂಗಳೂರು: ಆನ್ ಲೈನ್ ವಸ್ತುಗಳು ಡೆಲಿವರಿ ಮಾಡಿದ ನಂತರ ತಾವು ಆರ್ಡರ್ ಮಾಡಿದ ವಸ್ತುವಿನ ಬದಲು ಬೇರೇನೊ ಬಂದಿರುವುದು ಸಾಮಾನ್ಯವಾಗಿದ್ದು, ಈಗಾಗಲೇ ಇಂತಹ ಹಲವು ಘಟನೆ ನಡೆದಿತ್ತು. ಆದರೆ ಈ ಬಾರಿ ಅಮೆಜಾನ್ ಕಳುಹಿಸಿದ್ದ ವಸ್ತು ಕಂಡು ಬೆಂಗಳೂರಿನ ಮಹಿಳೆಯೊಬ್ಬರು ಕಂಗಾಲಾಗಿ ಹೋದ ಘಟನೆ ನಡೆದಿದೆ. ಉದ್ಯಾನನಗರಿಯ ಸರ್ಜಾಪುರ್ ರಸ್ತೆ ನಿವಾಸಿಯಾಗಿರುವ ಮಹಿಳೆ ಅಮೆಜಾನ್ ನಲ್ಲಿ Xbox ಕಂಟ್ರೋಲರ್ ಅನ್ನು ಆರ್ಡರ್ ಮಾಡಿದ್ದರು. ಕೆಲವು ದಿನಗಳ ನಂತರ ಅಮೆಜಾನ್ ನಿಂದ …
Read More »ದರ್ಶನ್‌ಗೆ ಜಾಮೀನು ಸಿಗೋ ಹಿಂದಿನ ದಿನ ಎಲ್ಲಾ ಊರು ಬಿಟ್ಬಿಡಿ; ವಾರ್ನಿಂಗ್ ಕೊಟ್ಟ ಅಭಿಮಾನಿ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ದರ್ಶನ್ ಮತ್ತು ಗ್ಯಾಂಗ್‌ಗೆ ಪೊಲೀಸರು ಶಾಕ್ ಮೇಲೆ ಶಾಕ್ ಕೊಡುತ್ತಿದ್ದಾರೆ. ಪ್ರಕರಣದಲ್ಲಿ ಯಾರೊಬ್ಬರು ತಪ್ಪಿಸಿಕೊಳ್ಳದಂತೆ ಎಲ್ಲಾ ಸಾಕ್ಷಿಗಳನ್ನು ಕಲೆಹಾಕುತ್ತಿದ್ದಾರೆ. ದರ್ಶನ್ ಅಭಿಮಾನಿಗಳು ಮಾತ್ರ ತಮ್ಮ ಬಾಸ್ ತಪ್ಪೇ ಮಾಡಿಲ್ಲ, ಇದೆಲ್ಲಾ ಕುತಂತ್ರ ಎಂದು ನೆಚ್ಚಿನ ನಟನ ಬೆಂಬಲಕ್ಕೆ ನಿಂತಿದ್ದಾರೆ. ನಿರ್ಮಾಪಕ ಉಮಾಪತಿ ಗೌಡ ದರ್ಶನ್‌ರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದವರು. ಬಳಿಕ ಇಬ್ಬರ ಜೊತೆ ಮನಸ್ತಾಪವಾಗಿ ದೂರವಾಗಿದ್ದರು. ದರ್ಶನ್ ಉಮಾಪತಿಗೆ ಬಹಿರಂಗವಾಗಿಯೇ ವಾರ್ನಿಂಗ್ ಮಾಡಿದ್ದರು. ತಗಡು …
Read More »
Laxmi News 24×7