ಶ್ರೀನಗರ : ಮನಸ್ಸು ಮತ್ತು ದೇಹದ ನಡುವೆ ಏಕತೆಯನ್ನು ಸ್ಥಾಪಿಸುವ ಪ್ರಾಚೀನ ಭಾರತೀಯ ಶಿಸ್ತಾಗಿರುವ ಯೋಗವು ಅಧಿಕೃತವಾಗಿ ವಿಶ್ವ ರಂಗವನ್ನು ಪ್ರವೇಶಿಸಿ ಹತ್ತನೇ ವರ್ಷವಾಗಿದೆ. ಇಂದು ವಿಶ್ವದಾದ್ಯಂತ 10ನೇ ವಿಶ್ವ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಇಂದು ವಿಶ್ವದಾದ್ಯಂತ 170 ಕ್ಕೂ ಹೆಚ್ಚು ದೇಶಗಳು ಮತ್ತು ದೊಡ್ಡ ಸಂಸ್ಥೆಗಳು ಮತ್ತು ಕಚೇರಿಗಳಲ್ಲಿ ಶತಕೋಟಿ ಜನರು ಯೋಗ ಮಾಡಲಿದ್ದಾರೆ. ಶ್ರೀನಗರದ ದಾಲ್ ಸರೋವರದ ದಡದಲ್ಲಿರುವ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್ಕೆಐಸಿಸಿ) ನಲ್ಲಿ …
Read More »ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ
ಬೆಳಗಾವಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಇಲ್ಲಿನ ಧರ್ಮವೀರ ಸಂಭಾಜಿ ವೃತ್ತದಲ್ಲಿ ಬಿಜೆಪಿ ಉತ್ತರ ಮಂಡಳದವರು ಗುರುವಾರ ಪ್ರತಿಭಟನೆ ನಡೆಸಿದರು. ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನೇತೃತ್ವ ವಹಿಸಿದ್ದ ಸಂಸದ ಜಗದೀಶ ಶೆಟ್ಟರ್, ‘ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ದರ ಹೆಚ್ಚಿಸುತ್ತಿದೆ. ಅದರಲ್ಲೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಎಲ್ಲದರ ಮೇಲೆ ಪರಿಣಾಮ ಬೀರುತ್ತದೆ. …
Read More »ಸೋರಿಕೆಯಿಲ್ಲದೆ ಪರೀಕ್ಷೆ ನಡೆಸುವುದು ಮೋದಿ ಸರ್ಕಾರಕ್ಕೆ ಅಸಾಧ್ಯ: ಖರ್ಗೆ
ನವದೆಹಲಿ: ಯುಜಿಸಿ-ನೆಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಪ್ರತಿ ದಿನ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದ್ದು, ಇದು ಯಾವ ರೀತಿಯ ಪರೀಕ್ಷಾ ಪೇ ಚರ್ಚಾ?’ ಎಂದು ಕೇಳಿದ್ದಾರೆ. ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, ‘ಪ್ರತಿ ವರ್ಷ ‘ಪರೀಕ್ಷಾ ಪೇ ಚರ್ಚಾ’ ಎಂಬ ಹಾಸ್ಯಾಸ್ಪದ ಕಾರ್ಯಕ್ರಮವನ್ನು ನಡೆಸುತ್ತಿದ್ದರೂ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಂಚನೆಯಿಲ್ಲದೆ ಯಾವುದೇ ಪರೀಕ್ಷೆಯನ್ನು ನಡೆಸಲು …
Read More »ಹುಬ್ಬಳ್ಳಿ: ನಗರ ಚಿಕಿತ್ಸಾಲಯ ನಿಷ್ಕ್ರಿಯ
ಹುಬ್ಬಳ್ಳಿ: ಸಾರ್ವಜನಿಕರಿಗೆ ತಕ್ಷಣದ ಆರೋಗ್ಯ ಸೇವೆ ಒದಗಿಸಲು ಅಭಿವೃದ್ಧಿಪಡಿಸಲಾದ ಇಲ್ಲಿನ ಹೊಸ ಮೇದಾರ ಓಣಿಯ ನಗರ ಚಿಕಿತ್ಸಾಲಯ ಇನ್ನೂ ಕಾರ್ಯಾರಂಭ ಮಾಡಿಲ್ಲ. ಸ್ಮಾರ್ಟ್ ಸಿಟಿ ಯೋಜನೆಯಡಿ ₹4 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಿದ ಕಟ್ಟಡ ಉದ್ಘಾಟನೆಯಾಗಿ ವರ್ಷವಾಗಿದೆ. ಆದರೆ, ಈವರೆಗೆ ಇಲ್ಲಿ ಆರೋಗ್ಯ ಸೇವೆ ಲಭ್ಯವಾಗಿಲ್ಲ. ಇದರಿಂದ ಸುತ್ತಲಿನ ವ್ಯಾಪಾರಸ್ಥರು, ಗ್ರಾಹಕರು, ನಿವಾಸಿಗಳು ಚಿಕ್ಕ-ಪುಟ್ಟ ಚಿಕಿತ್ಸೆಗೂ ಕಿಮ್ಸ್‌ಗೆ ಹೋಗಬೇಕು ಇಲ್ಲವೇ ಖಾಸಗಿ ಆಸ್ಪತ್ರೆಗೆ ತೆರಳಿ ಹೆಚ್ಚು ಹಣ ನೀಡಬೇಕು. ‘ಬಹಳ …
Read More »ಹದಗೆಟ್ಟ ರಸ್ತೆಗಳು: ಸಂಚಾರಕ್ಕೆ ಸಂಚಕಾರ
ಶಿರಹಟ್ಟಿ: ರಾಜ್ಯದಲ್ಲಿಯೇ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ತಾಲ್ಲೂಕು ಕೇಂದ್ರವು ಇಲ್ಲಗಳ ಮಧ್ಯಯೇ ಸಾಗುತ್ತಿದೆ. ಮೂಲ ಸೌಕರ್ಯಗಳಿಂದ ವಂಚಿತವಾದ ತಾಲ್ಲೂಕಿನ ಜನರು ಸುಗಮ ಸಂಚಾರವಿಲ್ಲದೆ ಜೀವ ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಸುತ್ತಿದ್ದಾರೆ. ತಾಲ್ಲೂಕಿನ ಬಹುತೇಕ ಗ್ರಾಮೀಣ ಪ್ರದೇಶದ ರಸ್ತೆಗಳು ಹದಗೆಟ್ಟಿದ್ದು, ವಾಹನ ಸವಾರರ ಸಂಚಾರಕ್ಕೆ ಸಂಚಕಾರ ತಂದೊಡ್ಡಿವೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಕುರಿತು ನಿರ್ಲಕ್ಷ್ಯ ವಹಿಸುತ್ತಿದ್ದು, ಸಾರ್ವಜನಿಕರ ಶಾಪಕ್ಕೆ ಗುರಿಯಾಗಿದ್ದಾರೆ. ಹದಗೆಟ್ಟ ಗ್ರಾಮೀಣ ರಸ್ತೆಗಳು: ತಾಲ್ಲೂಕಿನ ತಂಗೋಡ, ಕೊಗನೂರು, …
Read More »ಜಿ.ಪಂ, ತಾ.ಪಂ ಚುನಾವಣೆಗೆ ಸಿದ್ಧರಾಗಿ: ಬಾಲರಾಜ್ ಗುತ್ತೇದಾರ
ಕಲಬುರಗಿ: ‘ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಎದುರಿಸಲು ಜೆಡಿಎಸ್ ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಿಂದ ಸಿದ್ಧರಾಗಬೇಕು’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಹೇಳಿದರು. ನಗರದ ಜೆಡಿಎಸ್ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತದ ಅವಧಿಯಲ್ಲಿ ರೈತರ ಸಾಲಮನ್ನಾ, ಗ್ರಾಮ ವಾಸ್ತವ್ಯ, ನೀರಾವರಿ ಯೋಜನೆ ಸೇರಿದಂತೆ …
Read More »ನಟ ʻದರ್ಶನ್ʼಗೆ ಶಾಸಕ, ಮಂತ್ರಿಯಾಗುವ ರಾಜಯೋಗವಿದೆ : ಖ್ಯಾತ ಜ್ಯೋತಿಷಿಯಿಂದ ಸ್ಪೋಟಕ ಭವಿಷ್ಯ!
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಗೆ ರಾಜಯೋಗವಿದ್ದು, ಮುಂದೊಂದು ದಿನ ಅವರು ಶಾಸಕ, ಸಚಿವನಾದ್ರೂ ಆಗಬಹುದು ಎಂದು ಖ್ಯಾತ ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ನಟ ದರ್ಶನ್ ಅವರ ಹೆಸರು ಮತ್ತು ಜನ್ಮ ದಿನಾಂಕವನ್ನು ಗಣನೆಗೆ ತೆಗೆದುಕೊಂಡ ಗುರೂಜಿ ಸಂಖ್ಯಾಶಾಸ್ತ್ರದ ಪ್ರಕಾರ ಅವರ ಜನ್ಮ ದಿನಾಂಕವನ್ನು ವಿರೋಧಿಸುವ ಸಂಖ್ಯೆ 21ರೊಂದಿಗೆ ಹೋಲಿಕೆ ಮಾಡಿದರೆ ಅವರಿಗೆ ದರ್ಶನ್ ಹೆಸರು ಮಂಗಳಕರವಲ್ಲ. ಇದರಿಂದ ಅವರು …
Read More »ಪಶುಪಾಲನೆ ಇಲಾಖೆಯಲ್ಲಿ ಭಾರಿ ಉದ್ಯೋಗಾವಕಾಶ.!
ಬೆಂಗಳೂರು:- ಕರ್ನಾಟಕದಲ್ಲಿ ವಾಸವಾಗಿರುವ ಪದವೀಧರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪಶುಪಾಲನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೀಗಾಗಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಒಟ್ಟು 400 ಹುದ್ದೆಗಳು ಖಾಲಿಯಿದ್ದು, ಅದನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್ …
Read More »14 ತಿಂಗಳಾದರೂ ಪುಸ್ತಕಗಳೇ ಪ್ರಕಟವಾಗಿಲ್ಲ
ಬಾಗಲಕೋಟೆ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ 29 ರಿಂದ ಎರಡು ದಿನಗಳ ಕಾಲ ನಡೆಯಲಿದೆ. ಈ ಬಾರಿ ಹತ್ತು ಪುಸ್ತಕಗಳ ಪ್ರಕಟಣೆಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಮುಂದಾಗಿದೆ. ಆದರೆ, 16 ತಿಂಗಳ ಹಿಂದೆ ನಡೆದಿದ್ದ ಸಮ್ಮೇಳನದಲ್ಲಿ ಘೋಷಿಸಿದ್ದ ಪುಸ್ತಕಗಳೇ ಹೊರ ಬಂದಿಲ್ಲ. ಬೀಳಗಿಯಲ್ಲಿ ಅದ್ದೂರಿಯಾಗಿ ಸಮ್ಮೇಳನ ನಡೆದಿತ್ತು. ಸಮ್ಮೇಳನದಲ್ಲಿ ಪುಸ್ತಕಗಳ ಬಿಡುಗಡೆಯೂ ನಡೆದಿತ್ತು. ಬಿಡುಗಡೆಗಾಗಿ ಕೇವಲ ಐದು ಪ್ರತಿಗಳನ್ನು ತರಲಾಗಿತ್ತು. ನಂತರ ಅವುಗಳ ಪ್ರಕಟಣೆಗೆ ಕನ್ನಡ …
Read More »ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ: ಪ್ರಯಾಣಿಕರಿಗೆ 2.50 ಲಕ್ಷ ರೂ. ಬ್ಯಾಗ್ ವಾಪಸ್
ರಾಯಚೂರು: ಬಸ್ ನಲ್ಲಿಯೇ ಹಣ ಇದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಅದನ್ನು ಮರಳಿಸಿದ್ದಾರೆ. ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್ ನಲ್ಲಿ ಮಾನ್ವಿ ಬಸ್ ನಿಲ್ದಾಣದಿಂದ ರಾಯಚೂರಿಗೆ ಬರುತ್ತಿದ್ದ ಪ್ರಯಾಣಿಕ ಸೋಮಶೇಖರ ಪಾಟೀಲ ಅವರು 2.50 ಲಕ್ಷ ರೂ. ಇದ್ದ ಬ್ಯಾಗ್ ಅನ್ನು ಬಸ್ ನಲ್ಲಿ ಬಿಟ್ಟು ರಾಯಚೂರಿನಲ್ಲಿ ಇಳಿದು ಹೋಗಿದ್ದಾರೆ. ಹೈದರಾಬಾದ್ ಬಸ್ ನಿಲ್ದಾಣದಲ್ಲಿ ಎಲ್ಲಾ ಪ್ರಯಾಣಿಕರು ಬಸ್ ನಿಂದ ಇಳಿದ ನಂತರ ಕಂಡಕ್ಟರ್ …
Read More »
Laxmi News 24×7