ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ: 6 ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ಬೆಳಗಾವಿ: ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ಯಮಕನಮರಡಿ ಠಾಣೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸುವ ಮೂಲಕ ಕಿಡಿಗೇಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ನವೆಂಬರ್ 7ರಂದು ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಡಿವೈಎಸ್ಪಿ ಮಹಾಂತೇಶ ಸಜ್ಜನ ಸೇರಿ 12 ಪೊಲೀಸ್ …
Read More »ಬೈಕ್‌ಗಳ ನಡುವೆ ಅಪಘಾತ: ಇಬ್ಬರು ಸಾವು
ರಾಯಚೂರು: ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ, ಪ್ರೀತಮ್ (18) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಸಿದ್ದಯ್ಯ ಸ್ವಾಮಿ ಯರಡೋಣಿ (39) ಎಂಬವರು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಆನಂದ ಪತ್ತರ್ ಸೇರಿದಂತೆ ಇಬ್ಬರು ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದಯ್ಯ ಸ್ವಾಮಿ ಹಾಗೂ ಆನಂದ …
Read More »ಮೈ ತುಂಬಾ ಸಾಲ – ಕಣ್ಣು ಕುಕ್ಕಿದ ವೃದ್ದನ ಮೈ ಮೇಲಿನ ಚಿನ್ನ; ಕೊಲೆ ಮಾಡಿದ್ದ ಮೂವರು ಅಂದರ್
ಚಾಮರಾಜನಗರ : ಮೈ ತುಂಬಾ ಸಾಲ ಮಾಡಿಕೊಂಡಿದ್ದವನಿಗೆ ವೃದ್ಧನ ಮೈ ಮೇಲಿದ್ದ ಬಂಗಾರ ಮಾಡಬಾರದ ಕೆಲಸವನ್ನೇ ಮಾಡಿಸಿದೆ. ಸಾಲದ ಹಣವನ್ನು ಕೇಳಿದ್ದಕ್ಕೆ ವಯೋವೃದ್ಧನನ್ನು ಕೊಂದ ಮೂವರು ಈಗ ಜೈಲುಪಾಲಾಗಿದ್ದಾರೆ. ಜೀವನದ ಸಂಧ್ಯಾಕಾಲದಲ್ಲಿದ್ದ ವೃದ್ದನನ್ನು ಮಿಸುಕಾಡದಂತೆ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ ಡೆಡ್ಲಿ ಗ್ಯಾಂಗ್ ಕೊನೆಗೂ ಬಂಧನವಾದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೇಗೂರಿನಲ್ಲಿ ಬದುಕು ಕಟ್ಟಿಕೊಂಡು ವಾಸವಾಗಿದ್ದ ಹೆಚ್. ಎಂ. ಸ್ವಾಮಿ(73) ಕೊಲೆಯಾದ ದುರ್ದೈವಿ. …
Read More »ಬಿಹಾರ ಚುನಾವಣೆ *ಎನ್ ಡಿ ಎ ಬಹುಮತ:ಕಡಾಡಿ ಸಂತಸ*
ಬಿಹಾರ ಚುನಾವಣೆ *ಎನ್ ಡಿ ಎ ಬಹುಮತ:ಕಡಾಡಿ ಸಂತಸ* ಮೂಡಲಗಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸಿದ್ದ ಓಟ್ ಚೋರಿ ಎಂಬ ಸುಳ್ಳು ಅಭಿಯಾನವನ್ನು ಜನ ದಿಕ್ಕರಿಸಿ ಎನ್.ಡಿ.ಎ ಮೈತ್ರಿಕೂಟವನ್ನು ಬಾರಿ ಬಹುಮತದಿಂದ ಗೆಲ್ಲಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ನ-14 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕಾಂಗ್ರೆಸ್ ಅತೀಯಾಗಿ ತುಷ್ಟೀಕರಣ ರಾಜಕಾರಣದ ಮೂಲಕ ಒಂದು …
Read More »ಸೀನಿಮಿಯ ರೀತಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕುಖ್ಯಾತ ಆರೋಪಿಯನ್ನು ಯಮಕನಮರಡಿ ಪೊಲೀಸ್ ರು ಬಂಧಿಸಿ ಆತನಿಂದ ಸತ್ಯ ಕಕ್ಕಿಸಿದ್ದಾರೆ.
ಬೆಳಗಾವಿ: ಸೀನಿಮಿಯ ರೀತಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕುಖ್ಯಾತ ಆರೋಪಿಯನ್ನು ಯಮಕನಮರಡಿ ಪೊಲೀಸ್ ರು ಬಂಧಿಸಿ ಆತನಿಂದ ಸತ್ಯ ಕಕ್ಕಿಸಿದ್ದಾರೆ. ಬೆಳಗಾವಿ ಮಹಾತೇಂಶ ನಗರದ ಸುರೇಶ ಮಾರುತಿ ನಾಯಿಕ (ಸನದಿ ) (37) ಬಂಧಿತ ಆರೋಪಿ. ಯಮಕನಮರಡಿ ವ್ಯಾಪ್ತಿಯಲ್ಲಿರುವ ಮನೆಯ ಬಾಗಿಲ ಕೀಲಿ ಮುರಿದು ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಪ್ರಕರಣ ದಾಖಲಾಗಿತ್ತು. ಕಳ್ಳತನ ಪ್ರಕರಣದ ಪತ್ತೆಗಾಗಿ ಜಾಡು ಜಾಲಾಡಿದ ಯಮಕನಮರ್ಡಿ ಪೊಲೀಸ್ ರು ಆರೋಪಿಯ ಬಂಧಿಸಿ, ಆತನಿಂದ …
Read More »ಶಿಕ್ಷಣ ಮಕ್ಕಳನ್ನು ಕತ್ತಲೆಯಿಂದ ಬೆಳಕಿನ ಕಡೆ ಕೊಂಡೊಯ್ಯತ್ತದೆ:ಸಂಸದೆ ಪ್ರಿಯಾಂಕಾ ಜಾರಕಿಹೊಳಿ
ಶಿಕ್ಷಣ ಮಕ್ಕಳನ್ನು ಕತ್ತಲೆಯಿಂದ ಬೆಳಕಿನ ಕಡೆ ಕೊಂಡೊಯ್ಯತ್ತದೆ ಹಾಗಾಗಿ ಶಿಕ್ಷಕರು ಪ್ರಸ್ತುತ ಶೈಕ್ಷಣಿಕ ನೀತಿಗೆ ಹೊಂದಿಕೊಂಡು ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಚಿಕ್ಕೋಡಿ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಗರದ ಪಿ.ಎಂ.ಶ್ರೀ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಪೋಷಕರ – ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಬಗ್ಗೆ ಚಿಂತನೆ ಮಾಡದೆ ಶಿಕ್ಷಣಕ್ಕೆ ಮಹತ್ವ ನೀಡದೆ ಹೋದರೆ ದೇಶ ಏಳಿಗೆ ಸಾಧಿಸಲು …
Read More »ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಮುಂದೆ ಬರಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಮಹಿಳೆಯರ ಕಾರ್ಯಕ್ಷೇತ್ರದ ಕುರಿತು ನಡೆದ 4ನೇ ಸಿಐಐ ಸಮ್ಮೇಳನದಲ್ಲಿ ಸಚಿವರು ಭಾಗಿ*
ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಮುಂದೆ ಬರಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಮಹಿಳೆಯರ ಕಾರ್ಯಕ್ಷೇತ್ರದ ಕುರಿತು ನಡೆದ 4ನೇ ಸಿಐಐ ಸಮ್ಮೇಳನದಲ್ಲಿ ಸಚಿವರು ಭಾಗಿ* *ಬೆಂಗಳೂರು:* ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಮುಂದೆ ಬರಬೇಕು. ಇದಕ್ಕಾಗಿ ಮಹಿಳಾ ಉದ್ಯಮಿಗಳಿಗೆ ಸಿಐಐ ಉತ್ತಮ ವೇದಿಕೆ ನಿರ್ಮಿಸಿಕೊಟ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಹಿಳೆಯರ ಕಾರ್ಯಕ್ಷೇತ್ರದ ಕುರಿತು ನಡೆದ 4ನೇ …
Read More »ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಎಲ್ಲರೂ ಸಹಕಾರ ನೀಡಿ; ಸಭಾಪತಿ ಯು.ಟಿ. ಖಾದರ್
ಡಿಸೆಂಬರ್ 8 ರಿಂದ 19 ರ ವರೆಗೆ ಚಳಿಗಾಲದ ಅಧಿವೇಶನ ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಎಲ್ಲರೂ ಸಹಕಾರ ನೀಡಿ; ಸಭಾಪತಿ ಯು.ಟಿ. ಖಾದರ್ ಡಿಸೆಂಬರ್ 8 ರಿಂದ 19 ರ ವರೆಗೆ ಚಳಿಗಾಲದ ಅಧಿವೇಶನ ಉ. ಕ. ನಡೆಯುತ್ತಿರುವ ಅಧಿವೇಶನಕ್ಕೆ ಎಲ್ಲರೂ ಸಹಕಾರ ನೀಡಿ ಅಧಿವೇಶನವು ಯಶಸ್ವಿಯಾಗಿ ನಡೆಯಲಿದೆ ಸಭಾಪತಿ ಯು.ಟಿ. ಖಾದರ್ ಹೇಳಿಕೆ ಬೆಳಗಾವಿ ಸುವರ್ಣ ಸೌಧದಲ್ಲಿ ಡಿಸೆಂಬರ್ 8 ರಿಂದ 19 ರ ವರೆಗೆ ಚಳಿಗಾಲದ …
Read More »ಬಿಹಾರದಲ್ಲಿ ಗೆದ್ದು ಬೀಗಿದ ಬಿಜೆಪಿ ಹಿರೇಬಾಗೇವಾಡಿಯಲ್ಲಿ ಬಿಜೆಪಿ ವಿಜಯೋತ್ಸವ
ಬಿಹಾರದಲ್ಲಿ ಗೆದ್ದು ಬೀಗಿದ ಬಿಜೆಪಿ ಹಿರೇಬಾಗೇವಾಡಿಯಲ್ಲಿ ಬಿಜೆಪಿ ವಿಜಯೋತ್ಸವ ಬಿಹಾರದಲ್ಲಿ ಗೆದ್ದು ಬೀಗಿದ ಬಿಜೆಪಿ ಹಿರೇಬಾಗೇವಾಡಿಯಲ್ಲಿ ಬಿಜೆಪಿ ವಿಜಯೋತ್ಸವ ಮಾಜಿ ಶಾಸಕ ಸಂಜಯ್ ಪಾಟೀಲ್ ಸಂಭ್ರಮ ಪಟಾಕಿ ಸಿಡಿಸಿ – ಸಿಹಿ ಹಂಚಿದ ಬಿಜೆಪಿ ಕಾರ್ಯಕರ್ತರು ಬಿಹಾರ್ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ವಿಜಯೋತ್ಸವವನ್ನು ಆಚರಿಸಿದರು. ಬಿಹಾರ್ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ ಹಿನ್ನೆಲೆ ಇಂದು ಬೆಳಗಾವಿ …
Read More »ಸಾಲಬಾಧೆ ತಾಳಲಾರದೇ ಬೆಳಗಾವಿ ರೈತ ಆತ್ಮಹತ್ಯೆ: ನೊಂದ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕೆ ರೈತ ಸಂಘದ ಆಗ್ರಹ
ಬೆಳಗಾವಿ: ಸಾಲಬಾಧೆ ತಾಳಲಾರದೇ ರೈತನೋರ್ವ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದಲ್ಲಿ ನಡೆದಿದೆ. ಸಾವಿಗೆ ಖಾಸಗಿ ಸೊಸೈಟಿ ಕಿರುಕುಳ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಮನೆ ಮಾಲೀಕನ ಕಳೆದುಕೊಂಡ ಕುಟುಂಬ ಈಗ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ. ರೈತನ ಸಾವಿಗೆ ನ್ಯಾಯ ಕೊಡಿಸುವಂತೆ ರೈತ ಮುಖಂಡರು ಆಗ್ರಹಿಸಿದ್ದಾರೆ. ಕಡೋಲಿ ಗ್ರಾಮದ ರೈತ ಸಾತೇರಿ ಹೊನ್ನಪ್ಪ ರುಟಕುಟೆ(78) ಆತ್ಮಹತ್ಯೆ ಮಾಡಿಕೊಂಡ ರೈತ. ಅ.31ರಂದು ಮಧ್ಯರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಹಿತ್ತಲಿನಲ್ಲಿ …
Read More »
Laxmi News 24×7