Breaking News

ರಾಜ್ಯ

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನಕ್ಕೆ 2,000 ಪೊಲೀಸರ ಸರ್ಪಗಾವಲು: ಪ್ರವಾಸಿಗರಿಗೆ, ದೋಣಿಗಳಿಗೆ ನೋ ಎಂಟ್ರಿ!

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನಕ್ಕೆ 2,000 ಪೊಲೀಸರ ಸರ್ಪಗಾವಲು: ಪ್ರವಾಸಿಗರಿಗೆ, ದೋಣಿಗಳಿಗೆ ನೋ ಎಂಟ್ರಿ! ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸುಮಾರು ಎರಡೂವರೆ ತಿಂಗಳ ಕಾಲ ದೇಶಾದ್ಯಂತ ಸುಮಾರು 200 ಚುನಾವಣಾ ರ್‍ಯಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರು ಕೊನೆಯ ಹಂತದ ಚುನಾವಣೆಗೂ ಮುನ್ನ ಕನ್ಯಾಕುಮಾರಿಯ (Kanyakumari) ಪ್ರಸಿದ್ಧ ವಿವೇಕಾನಂದ (Vivekananda) ರಾಕ್ ಸ್ಮಾರಕದಲ್ಲಿ ಎರಡು ದಿನಗಳ ಕಾಲ ಧ್ಯಾನ ಮಾಡಲಿದ್ದಾರೆ.   ಇದಕ್ಕಾಗಿ …

Read More »

ವಿದ್ಯಾರ್ಥಿಗಳು ಮಾನಸಿಕ ಸದೃಢತೆ ಕಾಪಾಡಿಕೊಂಡು ಅಧ್ಯಯನಕ್ಕೆ ಸಜ್ಜಾಗಿ: ಪ್ರವೀಣ

ಅಳ್ನಾವರ: ‘ಒತ್ತಡದ ಬದುಕಿನಲ್ಲಿ ಮಾನಸಿಕ ಸಮತೋಲನ ಕಾಪಾಡಿಕೊಂಡು ಅಧ್ಯಯನಕ್ಕೆ ವಿದ್ಯಾರ್ಥಿಗಳು ಸಜ್ಜಾಗಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರವೀಣ ಆನಂದಕಂದಾ ಹೇಳಿದರು. ಕಾಲೇಜಿನಲ್ಲಿ ತೆರೆದ ನೂತನ ಜಿಮ್ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಜಿಮ್‌ನಲ್ಲಿ ಅಧುನಿಕ ಸಲಕರಣೆಗಳನ್ನು ಅಳವಡಿಸಲಾಗಿದೆ. ಸತತ ಓದಿನ ಜೊತೆಗೆ ಏಕಾಗ್ರತೆ ಸಾಧಿಸಲು ಈ ಸಲಕರಣೆಗಳನ್ನು ಬಳಸಿಕೊಂಡು ದೈಹಿಕ ಶ್ರಮ ಹಾಕಬೇಕು’ ಎಂದರು. ಟೇಬಲ್ ಟೆನಿಸ್ ಕೋರ್ಟ್‌ನಲ್ಲಿ ಆಟವಾಡಿದ ಬಳಿಕ ಕ್ರೀಡಾ ವಿಭಾಗದ ಪ್ರಬಾರ ಮುಖ್ಯಸ್ಥ …

Read More »

ಸುಧಾಕರ್​​​ಗೆ ಒಂದೇ ಮತ ಹೆಚ್ಚು ಬಂದ್ರೂ ರಾಜೀನಾಮೆ ನೀಡುವೆ: ಪ್ರದೀಪ್ ಈಶ್ವರ್

ಬೆಂಗಳೂರು: ಈ ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಪಕ್ಕಾ ಗೆಲ್ತಾರೆ..ಬಿಜೆಪಿ ಅಭ್ಯರ್ಥಿ ಸುಧಾಕರ್​ ಅವರು ಒಂದೇ ಒಂದು ಮತ ಹೆಚ್ಚು ಪಡೆದರೆ, ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರದೀಪ್​ ಈಶ್ವರ್​ ಸವಾಲು ಹಾಕಿದ್ದಾರೆ. ಅಲ್ಲದೇ ತಮ್ಮ ರಾಜೀನಾಮೆ ಮಾತಿಗೆ ಬದ್ಧನಾಗಿರುತ್ತೇನೆ ಎಂದೂ ತಿಳಿಸಿದ್ದಾರೆ. ಇತ್ತೀಚೆಗೆ ಮಾಜಿ ಸಚಿವ ಸುಧಾಕರ್​​ ಅವರು ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಚಿಕ್ಕಬಳ್ಳಾಪುರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಕುಸಿದಿದೆ ಎಂದಿದ್ದ ಮಾತಿಗೂ ಈಶ್ವರ್​ …

Read More »

ಐಪಿಎಲ್​ ಫೈನಲ್ ಪಂದ್ಯ

IPL 2024: ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ರನ್ ಸುರಿಮಳೆಯಾಗುವ ಸಾಧ್ಯತೆಯಿದೆ. ಏಕೆಂದರೆ ಫೈನಲ್​ ಪಂದ್ಯಕ್ಕಾಗಿ ಬ್ಯಾಟಿಂಗ್​ಗೆ ಸಹಕಾರಿಯಾಗುವಂತಹ ಪಿಚ್ ಅನ್ನು ಸಿದ್ಧಪಡಿಸುತ್ತಿರುವುದಾಗಿ ಎಂಎ ಚಿದಂಬರಂ ಮೈದಾನದ ಕ್ಯುರೇಟರ್ ತಿಳಿಸಿರುವುದಾಗಿ ಐಪಿಎಲ್​ ವೀಕ್ಷಕ ವಿವರಣೆಗಾರ ಕೆವಿನ್ ಪೀಟರ್ಸನ್ ಹೇಳಿದ್ದಾರೆ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ …

Read More »

ಮಾಮೂಲಿ ಕೊಡದಿದ್ದಕ್ಕೆ ನನ್ನ ಗಂಡನನ್ನು ಪೊಲೀಸರೆ ಹೊಡೆದು ಸಾಯಿಸಿದ್ದಾರೆ : ಮೃತ ಆದಿಲ್ ಪತ್ನಿ ಆರೋಪ

ದಾವಣಗೆರೆ : ಒಂದು ತಿಂಗಳು ಮಾಮೂಲಿ ಕೊಡದಿದ್ದಕ್ಕೆ ನನ್ನ ಪತಿಯನ್ನು ಪೊಲೀಸರು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಆದಿಲ್ ಪತ್ನಿ ಹೀನಾಬಾನು ಚನ್ನಗಿರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಟ್ಕಾ ಆಡುತ್ತಿದ್ದ ಎಂದು ಆರೋಪಿಸಿ ಚೆನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ನಿನ್ನೆ ಆದಿಲ್ಲನ್ನು ಠಾಣೆಗೆ ಕರೆದುಕೊಂಡು ಹೋಗಿದ್ದರು.

Read More »

ಚಾಲಕ ಸಿಬ್ಬಂದಿಗಳಿಗೆ ಸಂಸ್ಥೆಯ ಖಡಕ್ ಎಚ್ಚರಿಕೆ

ಹುಬ್ಬಳ್ಳಿ, ಮೇ 24: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಚಾಲಕ ಚಾಲಕ ಕೊಡೆಯನ್ನು ಹಿಡಿದುಕೊಂಡು ವಾಹನ ಚಾಲನೆ ಮಾಡುವ ವಿಡಿಯೋ ಶುಕ್ರವಾರ ವೈರಲ್ ಆಗಿತ್ತು. ಸಿಬ್ಬಂದಿಗಳನ್ನು ಅಮಾನತು ಮಾಡಿ, ಸಂಸ್ಥೆ ಸ್ಪಷ್ಟೀಕರಣವನ್ನು ನೀಡಿತ್ತು. ಈಗ ಪ್ರಕಟಣೆಯೊಂದರಲ್ಲಿ ಪ್ರಿಯಾಂಗ ಎಂ., ವ್ಯವಸ್ಥಾಪಕ ನಿರ್ದೇಶಕರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಂಸ್ಥೆಯ ಎಲ್ಲಾ ಚಾಲನಾ ಸಿಬ್ಬಂದಿಗಳ ಗಮನಕ್ಕೆ ಎಂದು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.

Read More »

ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ

ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೋಟೆಲ್ ರೂಮಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಇಬ್ಬರು ಪುರುಷರೊಂದಿಗೆ ಚಕ್ಕಂದವಾಡುತ್ತಿದ್ದ ಸಂದರ್ಭದಲ್ಲಿ ಪತಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಆ ಮೂವರಿಗೂ ಪತಿಯ ಕೈಯಿಂದ ಸರಿಯಾಗಿ ಚಪ್ಪಲಿ ಏಟು ಬಿದ್ದಿದೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅನೈತಿಕ ಸಂಬಂಧಗಳ ಕಾರಣದಿಂದಾಗಿ ಅದೆಷ್ಟೋ ಸುಂದರ …

Read More »

ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ

ಬೆಂಗಳೂರು: ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಗೆ (Rave party) ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ (Telugu actress Hema) ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ. ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ …

Read More »

ಬೆಳಗಾವಿ: ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಜನ ಭಕ್ತರು ಅಸ್ವಸ್ಥಗೊಂಡಿದ್ದು ಐವರ ಸ್ಥಿತಿ ಗಂಭೀರವಾಗಿದೆ. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಸ್ಥಳೀಯ ಶಾಸಕ ಭೇಟಿ ನೀಡಿ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

Read More »

ಮಹಿಳೆ ಅಪಹರಣ ಕೇಸ್: ಎಸ್‌ಐಟಿ ಪೊಲೀಸರಿಂದ ‘ಭವಾನಿ ರೇವಣ್ಣ ಕಾರು ಚಾಲಕ’ನಿಗೆ ಸಮನ್ಸ್ ಜಾರಿ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಜೈಲು ಸೇರಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಬೆನ್ನಲ್ಲೇ ಅವರ ಪತ್ನಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ. ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರಿಂದ ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಗೆ ಸಮನ್ಸ್ ನೀಡಲಾಗಿತ್ತು.

Read More »