ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಜನ ಭಕ್ತರು ಅಸ್ವಸ್ಥಗೊಂಡಿದ್ದು ಐವರ ಸ್ಥಿತಿ ಗಂಭೀರವಾಗಿದೆ. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಸ್ಥಳೀಯ ಶಾಸಕ ಭೇಟಿ ನೀಡಿ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
Read More »ಮಹಿಳೆ ಅಪಹರಣ ಕೇಸ್: ಎಸ್‌ಐಟಿ ಪೊಲೀಸರಿಂದ ‘ಭವಾನಿ ರೇವಣ್ಣ ಕಾರು ಚಾಲಕ’ನಿಗೆ ಸಮನ್ಸ್ ಜಾರಿ
ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಜೈಲು ಸೇರಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಬೆನ್ನಲ್ಲೇ ಅವರ ಪತ್ನಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ. ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರಿಂದ ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಗೆ ಸಮನ್ಸ್ ನೀಡಲಾಗಿತ್ತು.
Read More »ಗೃಹಲಕ್ಷ್ಮೀ ಹಣದಿಂದ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಡ ಮಹಿಳೆ
ರಾಮದುರ್ಗ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಕಳೆದ 10 ತಿಂಗಳಿಂದ ರಾಜ್ಯದ ಬಡ ಮಹಿಳೆಯರ ಪಾಲಿಗೆ ಸಂಜೀವಿನಿಯಾಗುತ್ತಿದೆ. ಗೃಹಲಕ್ಷ್ಮಿ ಹಣದಿಂದ ಬಡ ಮಹಿಳೆಯೊಬ್ಬರು ಮೊನ್ನೆಯಷ್ಟೆ ತಮ್ಮ ಮನೆಗೆ ಫ್ರೀಜ್ ಖರೀದಿಸಿದ್ದರೆ, ಮತ್ತೋರ್ವ ಮಹಿಳೆ ತನಗಿಷ್ಟದ ಮೊಬೈಲ್ ಖರೀದಿಸಿದ್ದರು. ಬಡ ವಿದ್ಯಾರ್ಥಿಗಳ ಪಾಲಿಗೆ ಈ ಯೋಜನೆ ಹಲವು ರೀತಿಯಲ್ಲಿ ವರದಾನವಾಗಿದೆ. ಇದೀಗ ಬೆಳಗಾವಿಯ ರಾಮದುರ್ಗದ ಸುರೇಬಾನ ಮನಿಹಾಳ ಗ್ರಾಮದ ಮಹಿಳೆಯೊಬ್ಬರು ಕಳೆದ 10 …
Read More »ಡ್ರೈವಿಂಗ್ ಲೈಸೆನ್ಸ್; ಜೂನ್ 1ರಿಂದ ಹೊಸ ರೂಲ್ಸ್!
ಇನ್ನು ಮುಂದೆ ಚಾಲನಾ ಪರವಾನಗಿ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಬೇಕಿಲ್ಲ. ಬದಲಾಗಿ ಖಾಸಗಿ ಸಂಸ್ಥೆಗಳಿಂದಲೂ ಚಾಲನಾ ಪರವಾನಗಿ (Driving Licence New Rules) ಪಡೆಯಬಹುದಾಗಿದೆ. ಸರ್ಕಾರವು ಚಾಲನಾ ಪರವಾನಗಿ ಪಡೆಯುವ ನಿಯಮವನ್ನು (New Rules) ಬದಲಾಯಿಸಿದ್ದು, ಜೂನ್ 1ರಿಂದ ಇದು ಜಾರಿಗೆ ಬರಲಿದೆ. ಮೊದಲು ಇದು ಆಯ್ದ ನಗರಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಜಾರಿಯಾಗಲಿದೆ. ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಸುಮಾರು 9,00,000 ಹಳೆಯ ಸರ್ಕಾರಿ ವಾಹನಗಳನ್ನು …
Read More »ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್ ಸಿಬಿಐಗೆ ಕೊಡಲ್ಲ: ಗೃಹ ಸಚಿವ
ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಇಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ …
Read More »ಬೆಂಗಳೂರಲ್ಲಿ ತಡರಾತ್ರಿ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ: 25 ಯುವತಿಯರು, ಡ್ರಗ್ಸ್ ಪತ್ತೆ
ಬೆಂಗಳೂರು: ಬೆಂಗಳೂರಿನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್. ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದ್ದು, ಎಂಡಿಎಂಎ ಮಾತ್ರೆಗಳು ಮತ್ತು ಕೊಕೇನ್ ಪತ್ತೆಯಾಗಿದೆ. ಪಾರ್ಟಿಯಲ್ಲಿ 25ಕ್ಕೂ ಹೆಚ್ಚು ಯುವತಿಯರು ಇದ್ದರು. ಆಂಧ್ರಪ್ರದೇಶ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ತಡರಾತ್ರಿ ಎರಡು ಗಂಟೆಯಾದರೂ ಪಾರ್ಟಿ ನಡೆಯುತ್ತಿತ್ತು. ಅವಧಿ ಮೀರಿ ಪಾರ್ಟಿ ನಡೆಸಿದ್ದು, ಡ್ರಗ್ಸ್ ಬಳಕೆ ಮಾಡಲಾಗಿದೆ. ಹೈದರಾಬಾದ್ ಮೂಲದ ವಾಸು ಪಾರ್ಟಿ …
Read More »ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು
ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ರಾಯಬಾಗ ತಾಲ್ಲೂಕಿನ ಚಿಂಚಲಿ ಪಟ್ಟಣದ ನಿವಾಸಿಗಳಾದ ಭುಜೇಂದ್ರ ಹಾಗೂ ದೀಪಾ ದಂಪತಿಯ ಪುತ್ರಿ ಶಿವಾನಿ ಅಜ್ಜಿಯ ಮನೆಗೆ ಬಂದಿದ್ದಳು. ಶುಕ್ರವಾರ ರಾತ್ರಿ ತೋಟದ ಮನೆಯ ಮುಂದೆ ಆಟ ಆಡುವಾಗ ಬಾಲಕಿಯ ಕಾಲಿಗೆ ಹಾವು ಕಚ್ಚಿದೆ. ಕೂಡಲೇ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ …
Read More »ಮೊಸಳೆಗಳಿವೆ ಎಚ್ಚರಿಕೆ!
ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು ಕಡಿಮೆ ಆದ ಕೂಡಲೇ ಆಹಾರ ಅರಸಿ ದಡಕ್ಕೆ ಬರುವ ಮೊಸಳೆಗಳನ್ನು ಅಲ್ಲಿಯ ಜನರು ಏನು ಮಾಡುತ್ತಾರೆ? ನದಿಯಿಂದ ದಡಕ್ಕೆ ಮೊಸಳೆ ಬಂದಿದೆ ಎನ್ನುವ ಸುದ್ದಿ ಹರಡುತ್ತಿದ್ದಂತೆ ದೊಡ್ಡ ಗುಂಪೇ ಸೇರುತ್ತದೆ. ಹೊರ ಬಂದ ಮೊಸಳೆಯನ್ನು ಭಯದಿಂದಾಗಿ ಕಲ್ಲು, ಬಡಿಗೆಗಳಿಂದ ಹೊಡೆದು ಇಲ್ಲವೆ ಟ್ರ್ಯಾಕ್ಟರ್ ಹಾಯಿಸಿ ಕೊಂದ ಉದಾಹರಣೆಗಳು ಇವೆ. ಆದರೆ, ಈಗ ಪರಿಸ್ಥಿತಿ …
Read More »ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಾರಂಭಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ದಿನಾಂಕ:07-06-2024 ರಿಂದ 14-06-2024 ರವರೆಗೆ ನಡೆಸಲು …
Read More »ಬಂಧನ್ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ
ಬೆಂಗಳೂರು: ಬ್ಯಾಂಕ್ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್ ಚಾನ್ಸ್. ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್ ಬ್ಯಾಂಕ್ (Bandhan Bank) ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ (Bandhan Bank Assistant Notification 2024). 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ …
Read More »
Laxmi News 24×7