Breaking News

ರಾಜ್ಯ

ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಚುನಾವಣೆ ಸಮೀಪದಲ್ಲೇ ಬಿಜೆಪಿಗೆ (BJP) ಚುನಾವಣಾ ಆಯೋಗ ಶಾಕ್‌ ನೀಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (by vijayendra) ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ. ಏ. 17ರಂದು ಹೇಳಿಕೆ ನೀಡಿದ್ದ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ದೂರಿನನ್ವಯ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಧರ್ಮ, ಭಾಷೆ ಜಾತಿ , ಸೌಹಾರ್ದ್ಯತೆ ವಿಚಾರದಲ್ಲಿ …

Read More »

47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹ

ಮಣಿಪುರ: ಮಣಿಪುರದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹಿಸಿದೆ. ಈ ಮತಗಟ್ಟೆಗಳಲ್ಲಿ ಮತಗಳನ್ನು ರಿಗ್ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಗುಂಡು ಹಾರಿಸುವುದು, ಬೆದರಿಸುವಿಕೆ, ಕೆಲವು ಮತಗಟ್ಟೆಗಳಲ್ಲಿ ಇವಿಎಂ ಗಳನ್ನು ಹಾಳುಗೆಡವಿರುವುದು ಮಣಿಪುರದಲ್ಲಿ ವರದಿಯಾಗಿದೆ. ಮಣಿಪುರದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು ಶೇ.68 ರಷ್ಟು ಮತದಾನ ನಡೆದಿದೆ. ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ ಮಾತನಾಡಿ, ಮಣಿಪುರದ …

Read More »

ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ

ಬೆಂಗಳೂರು, ಏಪ್ರಿಲ್. 20: ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧವಾಗುವುದಕ್ಕಿಂತ ಹೆಚ್ಚಾಗಿ ನಮ್ಮ ಚುನಾವಣಾ ಆಯೋಗ ಹಲವು ರೀತಿಯಲ್ಲಿ ಸಿದ್ಧವಾಗುತ್ತದೆ. ಮತ ಚಲಾಯಿಸಲು ನಿರಾಸಕ್ತಿ ತೋರಿಸಲುವ ಮತದಾರರನ್ನು ಜನರನ್ನು ಮತಗಟ್ಟೆಗಳಿಗೆ ಕರೆತರಲು ಸಾಕಷ್ಟು ಕಷ್ಟ ಪಡುತ್ತಿದೆ. ಇದೇ ನಿಟ್ಟಿನಲ್ಲಿ ಚುನಾವಣಾ ಆಯೋಗ “ನಮ್ಮ ನಡೆ ಮತಗಟ್ಟೆ ಕಡೆಗೆ” ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮತದಾನವು ಎರಡು ಹಂತಗಳಲ್ಲಿ ನಡೆಯಲಿದೆ ದಿನಾಂಕ 26.04.2024 ಹಾಗೂ 07.05.2024 ಗಳಂದು ನಡೆಯಲಿದೆ. ಈ …

Read More »

ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್‌ ಸಾವಿಗೆ ಪಿತೂರಿ; ಎಎಪಿ ಆರೋಪ

ನವದೆಹಲಿ: ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಇನ್ಸುಲಿನ್‌ ಪಡೆಯಲು ಮತ್ತು ವೈದ್ಯರ ಸಹಾಯ ಪಡೆಯಲು ನಿರಾಕರಿಸುವ ಮೂಲಕ ಅವರನ್ನು ನಿಧಾನವಾಗಿ ಸಾವಿನೆಡೆಗೆ ತಳ್ಳಲಾಗುತ್ತಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ವಕ್ತಾರ ಸೌರಭ್‌ ಭಾರದ್ವಾಜ್‌, ‘ಕೇಜ್ರಿವಾಲ್‌ ಅವರು ಡಯಾಬಿಟಿಸ್‌ (ಮಧುಮೇಹ) ಹೊಂದಿದ್ದಾರೆ. ಆದ್ದರಿಂದ ಇನ್ಸುಲಿನ್‌ ಪಡೆಯಲು ಮತ್ತು ಅವರ ಕುಟುಂಬ ವೈದ್ಯರನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂಪರ್ಕಿಸಲು ಅನುಮತಿ …

Read More »

ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ

ಧಾರವಾಡ: ನೇಹಾ ಹಿರೇಮಠ ಹತ್ಯೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ನೇಹಾ ಕೊಲೆ ಮಾಡಿದ ಫಯಾಜ್ ತಾಯಿ ಮಮ್ತಾಜ್ ಹೇಳಿದ್ದಾರೆ. ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನನ್ನ‌ಮಗ ಫಯಾಜ್ ಮಾಡಿದ ಕೃತ್ಯಕ್ಕಾಗಿ ನಾನು ರಾಜ್ಯದ ಕ್ಷಮೆಯಾಚನೆ ಮಾಡುತ್ತೇನೆ.

Read More »

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಹೊಸದಿಲ್ಲಿ: ಮತದಾನ ಮಾಡಲು ಅರ್ಹರಾಗಿದ್ದೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ ದಾನ ಮಾಡದೇ ಹೋದರೆ ಅಂಥವರ ಬ್ಯಾಂಕ್‌ ಖಾತೆಯಿಂದ 350 ರೂ.ಗಳನ್ನು ಕಡಿತಗೊಳಿಸಲಾಗು ವುದು! ಹೀಗೆಂದು ಹಬ್ಬಿರುವ ಸುದ್ದಿ ಕೇವಲ ವದಂತಿ ಅಷ್ಟೇ ಎಂದು ಚುನಾವಣೆ ಆಯೋಗ ಸ್ಪಷ್ಟ ಪಡಿಸಿದೆ. ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದಿ ದ್ದರೆ ಅಂಥವರ ಖಾತೆಯಿಂದ 350 ರೂ. ಕಡಿತಗೊ ಳಿಸಲು ನಿರ್ಧರಿಸಲಾಗಿದೆ. ಅಂಥವರ ಮೊಬೈಲ್‌ ರಿಚಾರ್ಜ್‌ ಹಣ ಕಡಿತಗೊಳಿಸಲಾಗುತ್ತದೆ ಎಂಬ ಬಗ್ಗೆ ಪತ್ರಿಕೆಯ ವರದಿ ವೈರಲ್‌ ಆಗಿತ್ತು. ಇದರಿಂದ ಹಲವರಿಗೆ …

Read More »

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಿರುವ ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಎರಡೂ ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಮೇಲ್ಪಟ್ಟು ಜನ ಸೇರುವ ನಿರೀಕ್ಷೆ ಇದೆ. ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿಯಲ್ಲಿ ನಡೆಯುವ ಸಮಾವೇಶಕ್ಕೆ ಮಧ್ಯಾಹ್ನ 2 ಗಂಟೆಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಅಲ್ಲಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸುವ ಬೃಹತ್‌ ಸಾರ್ವಜನಿಕ ಸಭೆಗೆ ಸಂಜೆ 4 ಗಂಟೆಗೆ ಆಗಮಿಸಲಿದ್ದಾರೆ. ಇಲ್ಲಿ …

Read More »

ಅಧಿಕಾರಕ್ಕೆ ಬಂದ 2-3 ತಿಂಗಳಲ್ಲಿ ಕಾಡುಗೊಲ್ಲರಿಗೆ ನ್ಯಾಯ ದೊರಕಿಸಿ ಕೊಡುತ್ತೇವೆ-ಕುಮಾರಸ್ವಾಮಿ

ಚಿತ್ರರ್ದು, : ರಾಜ್ಯದಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು, ಕುಟುಂಬದ ಮುಖ್ಯಸ್ಥರಿಂದ 4-5 ಸಾವಿರ ಹಣ ವಸೂಲಿ ಮಾಡುವ ಕಾಂಗ್ರೆಸ್ ಪಿಕ್ ಪಾಕೆಟ್ ಸರ್ಕಾರವಿದೆ. ಅವರು ಇಲ್ಲಿಯವರೆಗೂ ಬಿಜೆಪಿ ಬೈಯುವುದನ್ನು ಬಿಟ್ಟು ಬೇರೆ ಏನು ಅಭಿವೃದ್ದಿ ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆರೋಪಿಸಿದರು. ನಗರದ ನೆಹರೂ ಮೈದಾನದಲ್ಲಿ ಮಾತನಾಡಿದ ಅವರು, ಕೇವಲ 2 ಸಾವಿರ ಕೊಟ್ಟಿರುವ ಕಾಂಗ್ರೆಸ್, ಬಡವರ ಬೆವರು ಸುರಿಸಿದ ತೆರಿಗೆಯ ಸುಮಾರು ೩೫೦ …

Read More »

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡಿದರು. ಮಾವ, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪರ ಮತ ಯಾಚಿಸಿದರು. ನಮ್ಮ ತಂದೆ ದಿ.ಸುರೇಶ ಅಂಗಡಿಯವರು ಜಿಲ್ಲೆಯ ಎಲ್ಲ ಗ್ರಾಮಗಳ ಜನರ ಜತೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದರು ಹಾಗೂ ಅವರ ಅಭಿವೃದ್ದಿಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಶ್ರದ್ಧಾ ಶೆಟ್ಟರ್ ತಿಳಿಸಿದರು. ತಾಲೂಕು …

Read More »

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಪುತ್ರಿ ಕೊಲೆ ಕೇಸ್: ನೇಹಾಳ ಜೊತೆ ಸಲುಗೆಯಲ್ಲಿರುವ ಫಯಾಜ್ ಪೋಟೋ ವೈರಲ್

ಹುಬ್ಬಳ್ಳಿ: ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯಲ್ಲಿ ನಿನ್ನೆ ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಹತ್ಯೆ ಪ್ರಕರಣ ಸುದ್ದಿ ಮಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ನೇಹಾ ಮತ್ತು ಫಯಾಜ್ ಇಬ್ಬರ ರೀಲ್ಸ್ ವೈರಲ್ ಆಗುತ್ತಿದೆ. ಹೌದು ನಿನ್ನೆ ಬಿವಿಪಿ ಕಾಲೇಜಿನ ಆವರಣದಲ್ಲಿ ಆರೋಪಿ ಫಯಾಜ್ ನೇಹಾಳನ್ನು 10 ಬಾರಿ ಇರಿದು ಬೀಗರ ವಾಗಿ ಕೊಲೆ ಮಾಡಿದ್ದಾನೆ. ಇದೀಗ ನೇಹಾ ಮತ್ತು ಫಯಾಜ್ ಒಟ್ಟಿಗೆ ಸಲುಗೆಯಿಂದ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ …

Read More »