ಚನ್ನಮ್ಮನ ಕಿತ್ತೂರು: ಹುಬ್ಬಳ್ಳಿಯಿಂದ ಬೆಳಗಾವಿಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ತಡೆರಹಿತ ರಾಜಹಂಸ ಬಸ್ ತಾಲ್ಲೂಕಿನ ತಿಮ್ಮಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು 10 ಪ್ರಯಾಣಿಕರಿಗೆ ಗಾಯಗಳಾಗಿವೆ. ಹೆದ್ದಾರಿ ಬದಿಗಿರುವ ಕಬ್ಬಿಣದ ತಡೆ ಸರಳುಗಳನ್ನು ಕಿತ್ತುಕೊಂಡು ಸರ್ವೀಸ್ ರಸ್ತೆಗೆ ಬಂದು ಬಸ್ ಬಿದ್ದಿದೆ. ಭಾರಿ ಸಪ್ಪಳವಾಗಿದ್ದರಿಂದ ತಿಮ್ಮಾಪುರ ಗ್ರಾಮಸ್ಥರು ಧಾವಿಸಿ ಬಂದು ವಾಹನದಲ್ಲಿ ಸಿಕ್ಕಿ ಬಿದ್ದಿದ್ದ ಪ್ರಯಾಣಿಕರನ್ನು ಹೊರತೆಗೆಯುವಲ್ಲಿ ನೆರವಾದರು. ಗಾಯಾಳುಗಳನ್ನು ಇಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. …
Read More »ನಿಪ್ಪಾಣಿ | ಸಿಇಟಿ ಪರೀಕ್ಷೆ: ಉಚಿತ ಬಸ್‍ಗಳ ವ್ಯವಸ್ಥೆ
ನಿಪ್ಪಾಣಿ: ಏ.18 ಹಾಗೂ 19ರಂದು ಜರುಗಲಿರುವ ಸಿಇಟಿ ಪರೀಕ್ಷೆಗಳಿಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗಾಗಿ ಸ್ಥಳೀಯ ವಿಎಸ್‍ಎಂ ಸೋಮಶೇಖರ ಆರ್. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯ(ವಿಎಸ್‍ಎಂಎಸ್‍ಆರ್‌ಕೆಐಟಿ)ದಿಂದ ಬಸ್‍ಗಳ ಸೌಲಭ್ಯ ಕಲ್ಪಿಸಲಾಗುವುದು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಉಮೇಶ ಪಾಟೀಲ ತಿಳಿಸಿದ್ದಾರೆ. ತಾಂತ್ರಿಕ ಮಹಾವಿದ್ಯಾಲಯ (ಪರೀಕ್ಞಾ ಕೇಂದ್ರ ಸಂಖ್ಯೆ – 315)ದಲ್ಲಿ ವಿದ್ಯಾರ್ಥಿಗಳ ಹಾಗೂ ಪಾಲಕರ ಅನುಕೂಲಕ್ಕಾಗಿ ಬಸ್‍ಗಳನ್ನು ಉಚಿತವಾಗಿ ಬಿಡಲಾಗುವುದು. ಪರೀಕ್ಷೆಗಳು ನಡೆಯಲಿರುವ ಎರಡೂ ದಿನ ಬೆಳಿಗ್ಗೆ 8.30 ರಿಂದ 9.30ರ ವರೆಗೆ ಸ್ಥಳೀಯ ಬಸ್ …
Read More »ಚಿಕ್ಕೋಡಿ ಲೋಕಸಭಾ ಕ್ಷೇತ್ರ | ತಿಂಗಳಲ್ಲಿ 79 ಪ್ರಕರಣ:₹1.17 ಕೋಟಿ ವಶ
ಚಿಕ್ಕೋಡಿ: ‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16ರಿಂದ ಏಪ್ರಿಲ್ 16ರವರೆಗೆ ₹1.17 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ’ ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ವಿವಿಧ ಮಾದರಿ ನೀತಿ ಸಂಹಿತೆ ತಂಡಗಳು ₹ 1.17 ನಗದು, ₹ 7.05 ಲಕ್ಷ ಮೌಲ್ಯದ 1948.151 ಲೀಟರ್ ಮದ್ಯ, ₹ 2.21 ಲಕ್ಷ ಮೌಲ್ಯದ 8.813 ಕೆ.ಜಿ. ಮಾದಕ, ಅಮಲು ಪದಾರ್ಥಗಳು ಹಾಗೂ ₹ 9.88 …
Read More »ನಮ್ಮದು ಮೊಘಲ್ ಸರ್ಕಾರವಲ್ಲ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ಚಾಟಿ
ಬೆಂಗಳೂರು: ‘ನಮ್ಮದು ಜನರ ಕಲ್ಯಾಣಕ್ಕಾಗಿ ಶ್ರಮಿಸುವ ಆಡಳಿತ ವ್ಯವಸ್ಥೆ ಎಂಬುದನ್ನು ಮರೆಯಬೇಡಿ. ಇದು ಮೊಘಲರ ಸರ್ಕಾರವಲ್ಲ’ ಎಂದು ಹೈಕೋರ್ಟ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಚಾಟಿ ಬೀಸಿದೆ. ಸಿದ್ಧಸಿರಿ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ನೀಡಲಾಗಿದ್ದ ನೋಟಿಸ್ ರದ್ದುಪಡಿಸುವಂತೆ ಕೋರಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕ ರಮಣಗೌಡ ಬಿ.ಪಾಟೀಲ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ …
Read More »ತೀಯ ಪಿಯುಸಿ ಪರೀಕ್ಷೆ-2’ಕ್ಕೆ ನೋಂದಾಯಿಸಿ ಕೊಳ್ಳಲು ದಿನಾಂಕ ವಿಸ್ತರಣೆ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕೆಲ ದಿನಗಳ ಹಿಂದೆ ಪ್ರಕಟಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸದಿರುವಸ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ದಿನಾಂಕವನ್ನು …
Read More »ತೆರಿಗೆದಾರರ’ ಮೇಲಿನ ಹೊರೆ ಕಡಿಮೆ ಮಾಡಬೇಕು: ಪ್ರಧಾನಿ ಮೋದಿ
ನವದೆಹಲಿ: ದೇಶದ ತೆರಿಗೆದಾರರ ಕೊಡುಗೆಯನ್ನು ಆಚರಿಸಬೇಕು ಮತ್ತು ಗೌರವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ, “ಮಧ್ಯಮ ವರ್ಗದ ತೆರಿಗೆದಾರರಿಗೆ ಸಂಬಂಧಿಸಿದಂತೆ ಅವರನ್ನು ಆಚರಿಸಬೇಕು ಮತ್ತು ಗೌರವಿಸಬೇಕು.ನಾವು ತೆರಿಗೆದಾರರನ್ನು ಹಗಲು ರಾತ್ರಿ ನಿಂದಿಸಿದರೆ ದೇಶ ಹೇಗೆ ಕಾರ್ಯನಿರ್ವಹಿಸುತ್ತದೆ?” ಎಂದು ಕೇಳಿದರು. ದಕ್ಷ ಮತ್ತು ಪಾರದರ್ಶಕ ತೆರಿಗೆ ಸಂಗ್ರಹ ವ್ಯವಸ್ಥೆಯ ಬಗ್ಗೆ ಮಾತನಾಡಿದ ಪಿಎಂ ಮೋದಿ, ತಮ್ಮ ಸರ್ಕಾರದ ಅಡಿಯಲ್ಲಿ …
Read More »ಖಾಸಗಿ ಬಸ್ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು
ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿ ಬಳಿ ಖಾಸಗಿ ಬಸ್ ಮತ್ತು ಫಾರ್ಚ್ಯೂನರ್ ಕಾರು ನಡುವೆ ಅಪಘಾತ ಸಂಭವಿಸಿ ಆಂಧ್ರ ಪ್ರದೇಶ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಹುಬ್ಬಳ್ಳಿ ಮಾರ್ಗವಾಗಿ ಕಾರವಾರ ಕಡೆಗೆ ಹೊರಟಿದ್ದ ಕಾರು ಹಾಗೂ ಮಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ನಡುವೆ ಈ ಅವಘಡ ನಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಗಾಯಾಳು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ …
Read More »ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ
ಕೊಪ್ಪಳ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ನಾಳೆ ಸಮಯ ನಿಗದಿಯಾಗಿದ್ದು ಅವರ ಭೇಟಿ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದು ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿದರು ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ಸಿಎಂ ಹಾಗೂ ಡಿಸಿಎಂ ಭೇಟಿಗೆ ನನ್ನ ಆತ್ಮೀಯ ಮಿತ್ರರೂ ಆದ ಶಾಸಕ ಲಕ್ಷ್ಮಣ ಸವದಿ ವ್ಯವಸ್ಥೆ ಮಾಡಿದ್ದಾರೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಕೂಡ …
Read More »ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ: ದೇವೆಗೌಡರು ಇರುವ ಮೈತ್ರಿ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರು ನುಗ್ಗಿರುವುದು ಅತ್ಯಂತ ಖಂಡನೀಯ ವಿಚಾರ. ಅಭಿಪ್ರಾಯ ಭಿನ್ನ ಇರಬಹುದು. ಕನ್ನಡಿಗರ ಹೆಮ್ಮೆಯ ಮಾಜಿ ಪ್ರಧಾನಿ ಅವರ ಸಭೆಯಲ್ಲಿ ಹೀಗೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ರೌಡಿಸಂನ್ನು ಜನರು ತಿರಸ್ಕಾರ ಮಾಡುತ್ತಾರೆ. ಇದು ಕಾಂಗ್ರೆಸ್ ನವರ ಹತಾಶೆ ತೋರಿಸುತ್ತದೆ. ಹಲವು ಸಂದರ್ಭದಲ್ಲಿ ಕರ್ನಾಟಕ, ಕನ್ನಡದ ಪರ ನಿಂತವರು ಎಂದರು. ಗ್ಯಾರಂಟಿ …
Read More »ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ; ಈಶ್ವರಪ್ಪ ಕಿಡಿ
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ, ಇಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕಿಳಿಯುವುದಾಗಿ ಹೇಳಿಕೆ ನೀಡಿದ ಈಶ್ವರಪ್ಪ ಅವರು ಇಂದು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಬಳಿ ಪ್ರಚಾರ ನಡೆಸಿದರು. ಈ ಕುರಿತು ಮಾಹಿತಿ ನೀಡಿದ ಅವರು ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಇವತ್ತು ಕೋರ್ಟ್ ಮುಂಭಾಗದಲ್ಲಿ ವಕೀಲರನ್ನ ಭೇಟಿ ಮಾಡಿದ್ದೇನೆ. ವಕೀಲರು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಿಮ್ಮ ನಿರ್ಧಾರ ಸರಿಯಿದೆ ಬೆಂಬಲ ಕೊಡ್ತೇವೆ ಎಂದಿದ್ದಾರೆ …
Read More »
Laxmi News 24×7