ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಅಭ್ಯರ್ಥಿಗಳಿಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ ಕುಮಾರ್, ಚುನಾವಣಾ ಪ್ರಚಾರದ ವೇಳೆ ಅಭ್ಯರ್ಥಿಗಳು ಗೌರವಯುತವಾಗಿ ನಡೆದುಕೊಳ್ಳಬೇಕು. ದ್ವೇಷ ಭಾಷಣ, ಶತ್ರುಗಳ ರೀತಿ ವರ್ತಿಸುವಂತಿಲ್ಲ. ಚುನಾವಣೆಯಿಂದ ಶತ್ರುಗಳು ಸ್ನೇಹಿತರಾಗಬಹುದು. ಅದಕ್ಕೆ ಸಾಕಷ್ಟು ಉದಾಹರಣೆಗಳು ಇವೆ ಎಂದಿದ್ದಾರೆ. ವಿಭಜಿಸಲು ಪ್ರೇರೇಪಿಸುವ ರಾಜಕೀಯ ಭಾಷಣ ಮಾಡುವಂತಿಲ್ಲ. ಈ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳಿಗೆ …
Read More »ಲೋಕಸಮರಕ್ಕೆ ಮುಹೂರ್ತ ಫಿಕ್ಸ್: 7 ಹಂತದಲ್ಲಿ ಮತದಾನ, ಏಪ್ರಿಲ್ 19 ರಂದು ಆರಂಭ, ಜೂನ್ 4ಕ್ಕೆ ಫಲಿತಾಂಶ
ನವದೆಹಲಿ: ಬಹುನಿರೀಕ್ಷಿತ 18ನೇ ಲೋಕಸಭಾ ಚುನಾವಣೆಯು ಒಟ್ಟು 543 ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ನಡೆಯಲಿದೆ. ಏಪ್ರಿಲ್ 19 ರಂದು ಮತದಾನ ಆರಂಭವಾಗಲಿದ್ದು ಜೂನ್ 4ಕ್ಕೆ ಫಲಿತಾಂಶ ಹೊರ ಬೀಳಲಿದೆ. ಮಧ್ಯಾಹ್ನ 3 ಗಂಟೆಗೆ ರಾಷ್ಟ್ರ ರಾಜಧಾನಿ ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕವನ್ನು ಪ್ರಕಟಿಸಲಾಯಿತು. ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧವಾಗಿದೆ. ರಾಷ್ಟ್ರಕ್ಕೆ ನಿಜವಾದ ಹಬ್ಬ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು …
Read More »ದೇಶದಲ್ಲಿ ಇಂದಿನಿಂದ ‘ನೀತಿ ಸಂಹಿತೆ’ ಜಾರಿ, ಏನಿದು.? ಯಾವುದರ ಮೇಲೆ ನಿರ್ಬಂಧ.? ಇಲ್ಲಿದೆ, ಮಾಹಿತಿ
ನವದೆಹಲಿ : ನವದೆಹಲಿ : ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸುತ್ತಿದ್ದು, ಲೋಕಸಭೆ ಚುನಾವಣಾಗೆ ದಿನಾಂಕವನ್ನ ಪ್ರಕಟಿಸಲಿದ್ದಾರೆ. ಇದರೊಂದಿಗೆ, ದೇಶಾದ್ಯಂತ ಮಾದರಿ ನೀತಿ ಸಂಹಿತೆ (MCC) ಸಹ ಜಾರಿಗೆ ಬರಲಿದೆ.ದೇಶದಲ್ಲಿ ನೀತಿ ಸಂಹಿತೆಯ ಇತಿಹಾಸ ಬಹಳ ಹಳೆಯದು. ಇದರ ಮೂಲವನ್ನ 1960ರ ಕೇರಳ ವಿಧಾನಸಭಾ ಚುನಾವಣೆಗಳಲ್ಲಿ ಗುರುತಿಸಬಹುದು, ಆಗ ಆಡಳಿತವು ರಾಜಕೀಯ ಪಕ್ಷಗಳಿಗೆ ನೀತಿ ಸಂಹಿತೆಯನ್ನ ರೂಪಿಸಲು ಪ್ರಯತ್ನಿಸಿತು. ಚುನಾವಣಾ ಆಯೋಗದ ಪ್ರಕಾರ, …
Read More »ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ? ಸೇರಿಸೋದು ಹೇಗೆ? ಇಲ್ಲಿದೆ ವಿವರ
ನವದೆಹಲಿ(ಮಾ.16): 2024 ರ ಲೋಕಸಭಾ ಚುನಾವಣೆಗೆ ದೇಶದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಲೋಕಸಭೆ ಎಲೆಕ್ಷನ್ ದಿನಾಂಕ ಘೋಷಣೆಗೂ ಮುನ್ನವೇ ಎಲ್ಲಾ ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳು ಸಕ್ರಿಯಗೊಂಡಿವೆ. ಮತದಾನ ಎಂಬುದು ದೇಶದ ಪ್ರಜೆಯ ಮೂಲಭೂತ ಹಕ್ಕು. ಪ್ರತಿಯೊಬ್ಬ ಭಾರತೀಯ ತನ್ನ ಹಕ್ಕು ಚಲಾಯಿಸಬೇಕು.ನಿಮ್ಮ ಹಕ್ಕು ನೀವು ಚಲಾಯಿಸಬೇಕೆಂದರೆ ನಿಮ್ಮ ಹೆಸರು ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ದಾಖಲಾಗಿರಬೇಕು. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಕೂಡಲೇ ನೀವು ಚುನಾವಣಾ ಆಯೋಗದ ಮತದಾರರ …
Read More »ಪುನೀತ್ ಹೆಸರಲ್ಲಿ ʻಹೃದಯ ಜ್ಯೋತಿ ಯೋಜನೆ’ ಜಾರಿ
ಬೆಂಗಳೂರು: ಹಠಾತ್ ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಧಾರವಾಡದಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು. ಪುನೀತ್ ರಾಜಕುಮಾರ್ ಅವರನ್ನ ನೆನಪಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್ ಅವರು, ಜನರ ಜೀವ ಉಳಿಸುವ ಇಂಥಹ ಕಾರ್ಯಕ್ರಮಗಳಿಗೆ ಪುನೀತ್ ರಾಜಕುಮಾರ್ ಅವರು ಮೇಲಿಂದಲೇ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು. ಹಠಾತ್ ಹೃದಯಾಘತಗಳನ್ನ ತಡೆಯಲು ಈ ಯೋಜನೆ ಮಹತ್ವದ್ದಾಗಿದೆ. ಯಾರಿಗೇ ಎದುನೋವು ಕಾಣಿಸಿಕೊಂಡಾಗ ನಿರ್ಲಕ್ಷ್ಯೆ ಮಾಡದೇ …
Read More »ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಗೋಮಾಳ ಗುಳುಂ
ಬೆಂಗಳೂರು ಗ್ರಾಮಾಂತರ, ಮಾ.15: ಆನೇಕಲ್(Anekal) ತಾಲ್ಲೂಕಿನ ಮಹಾಂತಲಿಂಗಾಪುರದಲ್ಲಿ ಸರ್ವೆ ನಂ. 48 ರ ಸರ್ಕಾರಿ ಗೋಮಾಳ ಜಾಗವಿದೆ.ಕೋಟ್ಯಾಂತರ ರೂಪಾಯಿಬೆಲೆ ಬಾಳುವ ಇದೇ ಸರ್ಕಾರಿ ಗೋಮಾಳ ಜಾಗವನ್ನ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮೈಲಸಂದ್ರ ವಾಸಿ ನಾರಾಯಣಸ್ವಾಮಿ ಮತ್ತು ಕಾಂತಮ್ಮ ಎಂಬುವವರ ವಿರುದ್ಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಜಮೀನಿಗೆ ಅಕ್ರಮ ದಾಖಲೆ ಸೃಷ್ಟಿಸಿ ಮಾರಾಟ, ವಂಚನೆ ಮತ್ತು ಕ್ರಿಮಿನಲ್ ಅಫೆನ್ಸ್ ಸೇರಿದಂತೆ …
Read More »ಕೆಕೆಆರ್‌ಟಿಸಿ ಅಧ್ಯಕ್ಷರಾಗಿ ಎಂ.ವೈ. ಪಾಟೀಲ ನೇಮಕ
ಕಲಬುರಗಿ: ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಹಾಗೂ ನೆರೆಯ ವಿಜಯಪುರ ಜಿಲ್ಲೆಯ ವ್ಯಾಪ್ತಿಯನ್ನು ಹೊಂದಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರನ್ನಾಗಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರನ್ನು ನೇಮಕ ಮಾಡಿ ಶುಕ್ರವಾರ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಆ ಮೂಲಕ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿಯೇ ಕಲಬುರಗಿ ಜಿಲ್ಲೆಗೆ ಸಿಂಹ ಪಾಲು ದೊರೆತಂತಾಗಿದೆ. ಹಿರಿಯ ಶಾಸಕರಾಗಿರುವ ಎಂ.ವೈ. ಪಾಟೀಲ ಅವರು ಸಚಿವ ಸ್ಥಾನದ …
Read More »ಕೃಷ್ಣಾ ನದಿಗೆ ನೀರು ಹರಿಸಲು ಕೇಂದ್ರಕ್ಕೆ ಒತ್ತಡ
ಜಮಖಂಡಿ: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಂದಾಜು 26 ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ನಗರದ ವಿವಿಧ ಕಾಲೊನಿಗಳಲ್ಲಿ ನಡೆದ ನಗರೋಥ್ಥಾನ ಯೋಜನೆ ಅನುದಾನದಡಿಯಲ್ಲಿ ₹2.90 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ‘ಸರ್ಕಾರದಿಂದ ಬರುವ ಅನುದಾನದಲ್ಲಿ ನಗರದ ಜನತೆಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತಿದೆ, ಹಂತ ಹಂತವಾಗಿ ಅಭಿವೃದ್ದಿ ಪಡಿಸಲಾಗುವುದು’ ಎಂದರು. ‘ಕೃಷ್ಣಾ ನದಿಗೆ ನೀರು ಹರಿಸುವಂತೆ ವಿರೋಧ …
Read More »ಪ್ರಧಾನಿ ನರೇಂದ್ರ ಮೋದಿ ಕೊಯಮತ್ತೂರು ರೋಡ್‌ಶೋಗೆ ಅನುಮತಿ ನೀಡಿದ ನ್ಯಾಯಾಲಯ
ತಮಿಳುನಾಡಿನ ಕೊಯಮತ್ತೂರಿನಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರ 4 ಕಿಮೀ ರೋಡ್‌ಶೋಗೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ಆದೇಶಿಸಿದೆ.ಕಾನೂನು-ಸುವ್ಯವಸ್ಥೆ ಮತ್ತು ಸಾರ್ವಜನಿಕ ಪರೀಕ್ಷೆಯ ನಿರ್ವಹಣೆಯನ್ನು ಉಲ್ಲೇಖಿಸಿ ಪೊಲೀಸರು ಶುಕ್ರವಾರ ಬೆಳಿಗ್ಗೆ ಪ್ರಧಾನಿ ಮೋದಿ ರೋಡ್‌ಶೋಗೆ ಅನುಮತಿ ನಿರಾಕರಿಸಿದ್ದರು. ಇತರ ರಾಜಕೀಯ ಪಕ್ಷಗಳಿಗೂ ಅನುಮತಿ ನಿರಾಕರಿಸಲಾಗಿದೆ, ಆದ್ದರಿಂದ ಇದರಲ್ಲಿ ರಾಜಕೀಯ ಹಿತಾಸಕ್ತಿಯ ಪ್ರಶ್ನೆಯೇ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ. ವಿಶೇಷ ಭದ್ರತಾ ವ್ಯವಸ್ಥೆ ಹೊಂದಿರುವ …
Read More »ಈಶ್ವರಪ್ಪಗೆ ತಾಕತ್ತಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿ: ಆಯನೂರು
ಶಿವಮೊಗ್ಗ: ಕೆ.ಎಸ್ ಈಶ್ವರಪ್ಪ ಹೇಳುತ್ತಿರುವುದು ಎಲ್ಲಾ ಸುಳ್ಳು. ಈಶ್ವರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣಿ. ಈಶ್ವರಪ್ಪ ಅವರಿಗೆ ಯಾರೂ ಟಿಕೆಟ್ ತಪ್ಪಿಸಲಿಲ್ಲ. 40% ಗೆ ಅವರೇ ಬಲಿದಾನ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ವಿಧಾನಸಭೆ, ಲೋಕಸಭೆ ಕೇಳಿದ್ದರು, ಎರಡೂ ತಪ್ಪಿ ಹೋಯ್ತು. ಈಗ ಶಿಕ್ಷಕರ ಕ್ಷೇತ್ರ, ಪದವೀಧರ ಕ್ಷೇತ್ರ ಕೇಳುತ್ತಿದ್ದಾರೆ. ಅದು ಸಿಗಲಿಲ್ಲವಾದರೆ ಜಿ.ಪಂ. ಇದೆಯಲ್ಲಾ. ಅದಕ್ಕಾಗಿ ಈ ರೀತಿ ಮಾತನಾಡ್ತಿದ್ದಾರೆ. ಈಶ್ವರಪ್ಪ ಖಂಡಿತವಾಗಿ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ. ಅವರಿಗೆ ಖಂಡಿತವಾಗಿ …
Read More »
Laxmi News 24×7