ನವದೆಹಲಿ, ಮಾ.8: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ.ಸುಧಾ ಮೂರ್ತಿ (Sudha Murty) ಅವರು ರಾಜ್ಯಸಭೆಗೆ (Rajya Sabha) ನಾಮನಿರ್ದೇಶ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ರಾಷ್ಟ್ರಪತಿಯವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ …
Read More »ಅಂಬಾನಿ ಕುಟುಂಬದ ಮದುವೆಗೆ ಮೊದಲ ಬಾರಿಗೆ ತಮ್ಮ ನಿಯಮ ಮುರಿದ ಅಕ್ಷಯ್ ಕುಮಾರ್
ನಟ ಅಕ್ಷಯ್ ಕುಮಾರ್ (Akshay Kumar) ತಮ್ಮ ಫಿಟ್ನೆಸ್ ಮೂಲಕ ಹೆಸರು ಮಾಡಿದ್ದಾರೆ. ಅಕ್ಷಯ್ ತಮ್ಮದೇ ಆದ ದಿನಚರಿ ನಿಗದಿಪಡಿಸಿಕೊಂಡಿದ್ದಾರೆ. ಅದನ್ನು ಅವರು ನಿಖರವಾಗಿ ಅನುಸರಿಸುತ್ತಾರೆ. ಶೂಟಿಂಗ್ ಸಮಯದಲ್ಲಿಯೂ ಅವರು ಊಟ ಮಾಡಲು ಹಾಗೂ ನಿದ್ರಿಸಲು ಸಮಯ ನಿಗದಿಪಡಿಸಿಕೊಂಡಿದ್ದಾರೆ. ಅವರ ಜೊತೆ ಕೆಲಸ ಮಾಡುವ ನಿರ್ದೇಶಕರು, ನಿರ್ಮಾಪಕರಿಗೆ ಇದು ಗೊತ್ತಿದೆ. ಅವರ ಟೈಮಿಂಗ್ಸ್ಗೆ ತಕ್ಕಂತೆ ಶೂಟಿಂಗ್ ಶೆಡ್ಯೂಲ್ ಮಾಡುತ್ತಾರೆ. ಆದರೆ ಮುಖೇಶ್ ಅಂಬಾನಿ ಅವರ ಕಾರ್ಯಕ್ರಮಕ್ಕಾಗಿ ಅಕ್ಷಯ್ ಕುಮಾರ್ ಈ ವಿಷಯದಲ್ಲಿ ರಾಜಿ ಮಾಡಿಕೊಂಡಿದ್ದರು. ಮುಖೇಶ್ …
Read More »ಬಾಂಬ್ ಸ್ಫೋಟದಂಥ ಪ್ರಕರಣಗಳಲ್ಲಿ ಸುಲೇಮಾನ್ ಸಿಗಬೇಕೇ ವಿನಹ ಶಿವಪ್ಪ ಸಿಗಲ್ಲ: ಯತ್ನಾಳ್
ವಿಜಯಪುರ, ಮಾರ್ಚ್ 8: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Bengaluru Rameshwaram cafe blast) ಪ್ರಕರಣ ಸಂಬಂಧ ಸುಲೇಮಾನ್ ಎಂಬಾತನನ್ನು ಎನ್ಐಎ ಪೊಲೀಸರು (NIA Police) ವಶಕ್ಕೆ ಪಡೆದ ವಿಚಾರವಾಗಿ ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ (Basangouda Patil Yatnal) ಪ್ರತಿಕ್ರಿಯೆ ನೀಡಿದ್ದಾರೆ. ಇಂಥ ಘಟನೆಗಳಲ್ಲಿ ಸುಲೇಮಾನ್ ಎಂಬ ಹೆಸರಿನ ವ್ಯಕ್ತಿ ಸಿಗಬೇಕೇ ವಿನಹ ಶಿವಪ್ಪ ಎಂಬವರು ಸಿಗಲ್ಲ. ಸುಲೇಮಾನ್, ಅಜಗರ್, ಅಹ್ಮದ್ ಇವರೇ ಸಿಗಬೇಕಲ್ಲಾ ಎಂದು ವಾಗ್ದಾಳಿ …
Read More »ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ: ಆರ್ ಅಶೋಕ
ಬೆಂಗಳೂರು, ಮಾ.8: ಲೋಕಸಭೆ ಚುನಾವಣೆಗೆ ಅಖಾಡಕ್ಕಿಳಿಯುವ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಹೈಕಮಾಂಡ್, ಎರಡನೇ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಇನ್ನೊಂದೆಡೆ, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸುತ್ತಿರುವ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಹಾಲಿ ಸಂಸದೆ ಸುಮಲತಾ (Sumalatha) ಅವರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಈ ಎಲ್ಲದರ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್.ಅಶೋಕ (R.Ashoka), ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ವಾಗ್ದಾಳಿಯೂ ನಡೆಸಿದರು. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ ಎಂದು ಹೇಳಿದ ಅಶೋಕ, ಮನಸ್ಸಿಗೆ …
Read More »ಕಲಬುರಗಿಯಿಂದ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುವುದು ಅನುಮಾನ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲಬುರಗಿಯಿಂದದಿಂದ ಸ್ಪರ್ಧಿಸುವುದಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಬಿಜೆಪಿಯ ಡಾ.ಉಮೇಶ್ ಜಾಧವ್ ವಿರುದ್ಧ ಖರ್ಗೆ ಸೋಲು ಕಂಡಿದ್ದರು. ಪ್ರಸ್ತುತ ಅವರು ಭಾರತ ಮೈತ್ರಿಕೂಟದಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತಿದ್ದಾರೆ. ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯ ಮುಂದೆ ನಿಲ್ಲಲಾಗದೆ ಮಲ್ಲಿಕಾರ್ಜುನ ಸೋಲನ್ನು ಎದುರಿಸಬೇಕಾಯಿತು. ಅವರು ಪ್ರಸ್ತುತ ರಾಜ್ಯಸಭೆಯ ಸಂಸದರಾಗಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಸಾಂಪ್ರದಾಯಿಕ ಕ್ಷೇತ್ರವಾದ …
Read More »ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್
ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ (Karnataka Electric Bike Taxi Scheme). ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ (BJP) ಸರ್ಕಾರ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗೆ 2021ರ ಜುಲೈ 14ರಂದು ಅನುಮತಿ ನೀಡಿತ್ತು. ಆದರೆ ಇಂದಿನ ಕಾಂಗ್ರೆಸ್ (Congress) ಸರ್ಕಾರ ಹಿಂದಿನ ಸರ್ಕಾರ ನೀಡಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಅನುಮತಿಯನ್ನು ವಾಪಸ್ಸು ಪಡೆದುಕೊಂಡಿದೆ. ಬಿಎಂಆರ್ಸಿಎಲ್ (BMRCL) ಎಂಡಿ …
Read More »ಶಿವರಾತ್ರಿಯಂದು ಜಾಗರಣೆ ಮಾಡುವುದೇಕೆ?
ಇಂದು ದೇಶಾದ್ಯಂತ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಬರುವ ಮಹಾಶಿವರಾತ್ರಿ ಪರಮೇಶ್ವರನ ಆರಾಧನೆಗೆ ಅತ್ಯಂತ ವಿಶೇಷ ದಿನ. ಶಾಸ್ತ್ರಗಳ ಪ್ರಕಾರ ದೇವರ ದೇವ ಮಹಾದೇವನ ಒಲುಮೆಗೆ ಪಾತ್ರರಾಗಲು ಇರುವಂತಹ ಒಂದು ಸರಳ ವಿಧಾನವೇನೂ ಅಂದ್ರೆ ಅದುವೇ ಶುದ್ಧ ಭಕ್ತಿಯಿಂದ ಶಿವನನ್ನ ಧ್ಯಾನಿಸುವುದು, ಪೂಜಿಸುವುದು, ಭಜಿಸುವುದು. ಇನ್ನು ಮಹಾಶಿವರಾತ್ರಿಯ ದಿನ ಶಿವನ ಭಕ್ತರು ಉಪವಾಸ ಕೈಗೊಳ್ಳುವ ಮೂಲಕ, ಧ್ಯಾನ, ಜಾಗರಣೆಗಳನ್ನು ಮಾಡುವ ಮೂಲಕ ಶಿವನನ್ನು …
Read More »ಮದುವೆಯಾಗಿ ಆಗಷ್ಟೇ 7 ತಿಂಗಳ ಗರ್ಭಿಣಿ, ಗಂಡ ವಿಧಿವಶವಾದಾಗ ಬದುಕು ಆಕೆಗೆ ಪಾಠ ಕಲಿಸಿತ್ತು! ಇಂದು ಅಮೆರಿಕನ್ನರ ಮೆಚ್ಚುಗೆ ಗಳಿಸಿದ್ದಾರೆ!
ಆಕೆಗೆ ಮದುವೆಯಾಗಿ ಆಗಷ್ಟೇ ಏಳು ತಿಂಗಳ ಗರ್ಭಿಣಿ ಈ ಸಂದರ್ಭದಲ್ಲಿ ಗಂಡ ಮೃತಪಡುತ್ತಾರೆ. ಇದಾದ ಬಳಿಕ ದಿಕ್ಕೇ ತೋಚದಾದ ಮಹಿಳೆ ಜೀವನವೇ ನಿಂತು ಹೋಯ್ತು ಅಂತಾ ಶಾಕ್ ಗೆ ಒಳಗಾಗಿ ಬಿಡ್ತಾಳೆ. ಆದ್ರೇ ಈ ಶಾಕ್ ನಿಂದ ಹೊರ ಬಂದು ಮೂರನೇ ಕ್ಲಾಸ್ ಪಾಸ್ ಆಗಿದ್ದ ಆಕೆ ಶುರು ಮಾಡಿದ್ದು ತಾನೇ ಕಲ್ತಿದ್ದ ಕಸುಬು. ಕೌದಿ ಹೊಲಿಯಲು ಆರಂಭಿಸಿದ ಆಕೆ ಇದೀಗ ವರ್ಷಕ್ಕೆ 50-60 ಲಕ್ಷ ರೂಪಾಯಿ ದುಡಿಯುವ ಹೆಣ್ಣು …
Read More »ಅಂಜಲಿ ನಿಂಬಾಳ್ಕರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಅನಂತ್ ಕುಮಾರ್ ಹೆಗಡೆ
ಬೆಳಗಾವಿ, ಮಾ.8: ಉತ್ತರ ಕನ್ನಡದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಅವರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಸಂಪಗಾಂವ ಗ್ರಾಮದಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ, ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ. ಚುನಾವಣೆಗೆ ಸ್ಪರ್ಧಿಸಿದರೆ ಎಂದರೆ ಕರಿಮಣಿ ಮಾಲೀಕ ನಾನಲ್ಲಾ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲ. ಕಾಂಗ್ರೆಸ್ನಲ್ಲಿದ್ದ ಪದಾಧಿಕಾರಿಗಳು ಹೋಗಿ ನೀವು ನಿಲ್ಲಿರಿ ಅಂದರೆ ಕರಿಮನಿ ಮಾಲೀಕ ನಾನಲ್ಲಾ ಎಂದು …
Read More »ನೀರಾವರಿ ಭರವಸೆ ನೀಡಿದರೆ ಕರ್ನಾಟಕಕ್ಕೆ ಸೇರಲು ಸಿದ್ಧ ಎಂದ ಮಹಾರಾಷ್ಟ್ರದ ಜತ್ತ ತಾಲೂಕಿನ ರೈತ ಮುಖಂಡರ ನಿಯೋಗ
ಬೆಳಗಾವಿ, : ಮಹಾರಾಷ್ಟ್ರದ ಜತ್ತ ತಾಲೂಕಿನ ರೈತ ಮುಖಂಡರ ನಿಯೋಗವು ಬೆಳಗಾವಿಯ (Belagavi) ಅಥಣಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕಾರ್ಯಕ್ರಮದ ವೇದಿಕೆಯಲ್ಲಿ ಭೇಟಿಯಾಗಿ ನೀರಿನ ಸಮಸ್ಯೆ ಸರಿಪಡಿಸುವಂತೆ ಮನವಿ ಪತ್ರವನ್ನು ಸಲ್ಲಿಸದೆ. ನೀರಾವರಿ ಭರವಸೆ ನೀಡಿದರೆ ಕರ್ನಾಟಕಕ್ಕೆ ಸೇರಲು ಸಿದ್ಧ ಎಂದು ಅವರು ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಮಹಾರಾಷ್ಟ್ರದ ಗಡಿ ಗ್ರಾಮಗಳ ಹೊಲಗಳಿಗೆ ರಾಜ್ಯದ ನೀರಾವರಿ ಯೋಜನೆಗಳಿಂದ ಸ್ವಲ್ಪ ನೀರು ಬಿಡುವಂತೆ ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ. ದಯವಿಟ್ಟು ನಮಗೆ ನೀರು ಕೊಡಿ …
Read More »
Laxmi News 24×7