ಬೆಳಗಾವಿ: ‘ಲೋಕಸಭಾ ಚುನಾವಣೆಗೆ ಚಿಕ್ಕೋಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಲವರು ಪ್ರಯತ್ನ ನಡೆಸಿದ್ದಾರೆ. ಟಿಕೆಟ್ ಸಿಕ್ಕರೆ ನನ್ನ ಪುತ್ರ ಅಮಿತ್ ಸ್ಪರ್ಧಿಸಬಹುದು’ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು. ‘ಈ ಹಿಂದೆಯೇ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಅಮಿತ್‌ಗೆ ಅವಕಾಶ ಬಂದಿತ್ತು. ಆಗ ಅಸಕ್ತಿ ಇರಲಿಲ್ಲ. ಆದರೆ, ಈಗ ಗೆಳೆಯರು ಸ್ಪರ್ಧಿಸಲು ಒತ್ತಡ ಹೇರಿದ್ದಾರೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ‘ಚಿಕ್ಕೋಡಿ …
Read More »ಶೈಕ್ಷಣಿಕ ಸುಧಾರಣೆಗೆ ಆದ್ಯತೆ: ಸಚಿವೆ
ಬೆಳಗಾವಿ: ‘2024-2028ರ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವುದು ನನ್ನ ಉದ್ದೇಶ. ಅದಕ್ಕೆ ನಾನು ಬದ್ಧಳಾಗಿದ್ದೇನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸೋಮನಟ್ಟಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ‘ಕಳೆದ ಅವಧಿಯಲ್ಲಿ ಸಾಕಷ್ಟು …
Read More »ಸಂಚಾರ ನಿಯಮ ಪಾಲಿಸದವರ ವಿರುದ್ಧ ಕ್ರಮ: ಸಿಪಿಐ ರವೀಂದ್ರ
ಅಥಣಿ: ‘ಪೊಲೀಸ್ ಇಲಾಖೆಯಿಂದ ನಿರಂತರವಾಗಿ ಜಾಗೃತಿ ಮೂಡಿಸಿದರೂ, ಹಲವು ಚಾಲಕರು ಮತ್ತು ಸವಾರರು ಸಂಚಾರ ನಿಯಮ ಪಾಲಿಸದ್ದರಿಂದ ಅಪಘಾತ ಹೆಚ್ಚುತ್ತಿವೆ. ಮುಂದಿನ ದಿನಗಳಲ್ಲಿ ಸಂಚಾರ ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಪಿಐ ರವೀಂದ್ರ ನಾಯ್ಕೋಡಿ ಎಚ್ಚರಿಕೆ ನೀಡಿದರು. ಇಲ್ಲಿನ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ನಡೆದ ಆಟೋರಿಕ್ಷಾ ಹಾಗೂ ಖಾಸಗಿ ವಾಹನಗಳ ಚಾಲಕರ ಸಭೆಯಲ್ಲಿ ಮಾತನಾಡಿದ ಅವರು, ‘ಕಳೆದೊಂದು ವಾರದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಅಪಘಾತಗಳಲ್ಲಿ 25ಕ್ಕೂ …
Read More »ನೋಟರಿಗಳಿಗೆ ಸೌಲಭ್ಯ ಒದಗಿಸಲು ಪ್ರಯತ್ನ: ಕಡಾಡಿ
ಬೆಳಗಾವಿ: ‘ಜನರಿಗೆ ತ್ವರಿತವಾಗಿ ನ್ಯಾಯ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ನೋಟರಿಗಳಿಗೆ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭರವಸೆ ನೀಡಿದರು. ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ರಾಜ್ಯ ನೋಟರಿಗಳ ಸಂಘ ಭಾನುವಾರ ಹಮ್ಮಿಕೊಂಡಿದ್ದ 14ನೇ ರಾಜ್ಯಮಟ್ಟದ ನೋಟರಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವು ದೇಶವನ್ನು ಸರಿಯಾದ ದಿಕ್ಕಿನಲ್ಲಿ …
Read More »ಹಳ್ಳಿಗಳ ಅಭಿವೃದ್ಧಿಗೆ ಕಾಂಗ್ರೆಸ್ ಆದ್ಯತೆ: ಸತೀಶ ಜಾರಕಿಹೊಳಿ
ಹುದಲಿ: ‘ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಹಳ್ಳಿಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ. ನನ್ನ ಕ್ಷೇತ್ರದ ಹಳ್ಳಿಗಳಿಗೆ ನಾನು ಕಳೆದ 15 ವರ್ಷಗಳಲ್ಲಿ ಸಾಕಷ್ಟು ಅನುದಾನ ನೀಡಿದ್ದೇನೆ. ಕುಡಿಯುವ ನೀರು, ರಸ್ತೆ, ಶಾಲೆಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ, ಬೆಳಗಾವಿ ತಾಲ್ಲೂಕಿನ ಹುದಲಿ ಗ್ರಾಮದಲ್ಲಿ ಗ್ರಾಮದೇವಿ ಜಾತ್ರೆ ಅಂಗವಾಗಿ ಚರಂಡಿ, ಸಿಸಿ ರಸ್ತೆ ಹಾಗೂ ರಸ್ತೆ …
Read More »ಲೋಕಸಭಾ ಚುನಾವಣೆ: ಗೆಲ್ಲುವ ಕುದುರೆಗೆ ನಿಲ್ಲದ ಹುಡುಕಾಟ
ಬೆಳಗಾವಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳನ್ನು ಈ ಬಾರಿ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಆದರೆ, ಬಿಜೆಪಿಯಲ್ಲಿ ಮಾತ್ರ ಇನ್ನೂ ‘ಗುಮ್ಮನ ಗುಸುಕ’ ಎಂಬ ಸ್ಥಿತಿ ಇದೆ. ಯಾರನ್ನು ಕೇಳಿದರೂ ‘ಗೆಲ್ಲುವ ಕುದುರೆ ಹುಡುಕಾಟ’ ಎಂಬ ಉತ್ತರ ಸಿಗುತ್ತದೆ. ‘ನಾವು ಆಕಾಂಕ್ಷಿಗಳು’ ಎಂದು ಇಬ್ಬರು ಮಾತ್ರ ಮಾಧ್ಯಮದ ಮುಂದೆ ಹೇಳಿಕೆ ಕೊಟ್ಟಿದ್ದಾರೆ. ಕಾರ್ಯಕರ್ತರು, ಸಮುದಾಯದವರು ಸೇರಿ ಯಾರೂ ಸಹ ಇಂಥವರಿಗೇ ಟಿಕೆಟ್ ಕೊಡಬೇಕು ಎಂಬ …
Read More »ಊರಿನ ಸುತ್ತಲೂ ಕ್ರಷರ್ ಮಷಿನ್‌ಗಳ ಕರ್ಕಶ ಧ್ವನಿ. ದೂಳಿನ ಹಾವಳಿ.
ಚಿಕ್ಕೋಡಿ: ಊರಿನ ಸುತ್ತಲೂ ಕ್ರಷರ್ ಮಷಿನ್‌ಗಳ ಕರ್ಕಶ ಧ್ವನಿ. ದೂಳಿನ ಹಾವಳಿ. ಗ್ರಾಮದೊಳಗೆ ತಿಪ್ಪೆಗಳ ಸಾಲು. ಗ್ರಾಮ ಪಂಚಾಯಿತಿ ಕಚೇರಿ ಹತ್ತಿರವೇ ಕಸದ ರಾಶಿ. ತ್ಯಾಜ್ಯ ವಿಲೇವಾರಿ ಘಟಕದ ಬಳಿಯಂತೂ ಕಸವೋ ಕಸ. ವೀಳ್ಯದೆಲೆಗೆ ಪ್ರಸಿದ್ಧವಾದ ತಾಲ್ಲೂಕಿನ ಜೈನಾಪೂರ ಗ್ರಾಮದ ಸದ್ಯದ ನೋಟವಿದು. ಅಂದಾಜು 8,000 ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ 3 ವಾರ್ಡ್‌ಗಳಿದ್ದು, 10 ಸದಸ್ಯರಿದ್ದಾರೆ. ಈ ಪಂಚಾಯಿತಿ ವ್ಯಾಪ್ತಿಯ ತೋರಣಹಳ್ಳಿ ಗ್ರಾಮದಲ್ಲಿ 5,000 ಜನಸಂಖ್ಯೆ ಇದ್ದು, 6 ಸದಸ್ಯರಿದ್ದಾರೆ. ಜೈನಾಪೂರದಲ್ಲಿ …
Read More »ಕಾಣೆಯಾಗಿದ್ದ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆ
ಸುರತ್ಕಲ್: ಕಾಣೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಮುಲ್ಕಿ ಸಮೀಪ ಹಳೆಯಂಗಡಿ ಡ್ಯಾಂ ಬಳಿ ಫೆ. 27ರ ಮಂಗಳವಾರ ತಡರಾತ್ರಿ ಪತ್ತೆಯಾಗಿದೆ. ಈಜಲು ಹೋಗಿದ್ದ ವೇಳೆ ವಿದ್ಯಾರ್ಥಿಗಳು ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಮೃತ ದೇಹಗಳನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ವಿವರ: ಖಾಸಗಿ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ 1.30ಕ್ಕೆ ಶಾಲೆಯಿಂದ ಹೊರಗೆ ತೆರಳಿದ್ದು, ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಚಂದ್ರಕಾಂತ್, ನಿರುಪ್,ಅನ್ವಿತ್ ಹಾಗೂ ರಾಘವೇಂದ್ರ …
Read More »ವಸತಿ ಶಾಲೆಯಲ್ಲಿ ಬೆಂಕಿ ಅವಘಡ:
ಮುದ್ದೇಬಿಹಾಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರಗೊಂಡು ಹಲವರಿಗೆ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೃಷ್ಣಾ ನದಿ ತೀರದ ಘಾಳಪೂಜಿ ಗ್ರಾಮವೊಂದರಲ್ಲಿ ನಡೆದಿದೆ. ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ …
Read More »ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ: 70 ಮೊಬೈಲ್ ವಶ
ಬೆಂಗಳೂರು, ಫೆ.27- ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಗುರಿಯಾಗಿಟ್ಟುಕೊಂಡು ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರನ್ನು ನಗರ ಪೊಲೀಸರು ಬಂಧಿಸಿ 70 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಕೆಆರ್ ಪುರ: ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಹಿಂದಿನಿಂದ ಬೈಕ್‍ನಲ್ಲಿ ಬಂದ ದರೋಡೆಕೋರರು ಅವರ ಕೈಯಲಿದ್ದ ಮೊಬೈಲ್ ಪೋನ್ ಕಿತ್ತುಕೊಂಡು ಪರಾರಿಯಾಗಿದ್ದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 20 ಲಕ್ಷ ಬೆಲೆ ಬಾಳುವ ಒಟ್ಟು …
Read More »
Laxmi News 24×7