ಚಿಕ್ಕಮಗಳೂರು, ಫೆ.18- ಪ್ರತಿಭೆಗೆ ವಯಸ್ಸಿನ ಮಿತಿ ಇರುವುದಿಲ್ಲ. ಪ್ರತಿಯೊಬ್ಬರಲ್ಲೂ ತನ್ನದೇ ಆದ ಕೌಶಲ್ಯ, ಗ್ರಹಣ ಶಕ್ತಿ ಇರುತ್ತದೆ. ಇದಕ್ಕೆ ಉದಾಹರಣೆಯಾಗಿ 14 ತಿಂಗಳ ಪುಟಾಣಿ ತನ್ನ ಗ್ರಹಣ ಶಕ್ತಿ ಮೂಲಕ ಕಲಾಂ ವಲ್ರ್ಡ್ ರೆಕಾರ್ಡ್‍ಗೆ ಸೇರ್ಪಡೆಯಾಗಿದ್ದಾಳೆ. ಜಿಲ್ಲೆಯ ಕಂಬಿಹಳ್ಳಿ ನಿವಾಸಿ ಪ್ರಸ್ತುತ ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಡಿ.ಎಂ. ಧನಲಕ್ಷ್ಮಿ ಕುಮಾರಿ ಮತ್ತು ಹುಲಿಯಪ್ಪ ಗೌಡ ದಂಪತಿಯ 14 ತಿಂಗಳ ಮಗು ಮನಸ್ಮಿತಾಳನ್ನು ಕಲಾಂ ವರ್ಲ್ಡ್ ರೆಕಾರ್ಡ್ ಅವರು ಅಸಾಧಾರಣ …
Read More »ಮೈಸೂರಿನಲ್ಲಿ ಘರ್ಜಿಸಿದ ಜೆಸಿಬಿಗಳು,
ಮೈಸೂರು,ಫೆ.18- ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ತೆರವುಗೊಳಿಸಲಾಗಿದೆ.ಮೈಸೂರಿನ ನಜರ್ಬಾದ್ನಲ್ಲಿರುವ ಮಿನಿ ವಿಧಾನಸೌಧ ಹಿಂಭಾಗದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ತಲೆಯೆತ್ತಿದ್ದ ಕೆಲ ಮಳಿಗೆಗಳನ್ನು ನೆಲಸಮಗೊಳಿಸಲಾಗಿದೆ. ಹಲವು ವರ್ಷಗಳಿಂದ ಅಕ್ರಮವಾಗಿ ಈ ಕಟ್ಟಡವನ್ನು ನಿರ್ಮಿಸಿ ವಾಣಿಜ್ಯ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ. ಒಂದೇ ಸೂರಿನಡಿ ಐದು ಮಳಿಗೆಗಳನ್ನು ನಿರ್ಮಿಸಿ ಅದನ್ನು ಪತ್ರ ಬರಹಗಾರರ ಕಚೇರಿ, ಜೆರಾಕ್ಸ್ ಅಂಗಡಿ ಸೇರಿದಂತೆ ಕೆಲ ವಾಣಿಜ್ಯ ಚಟುವಟಿಕೆಗಳಿಗೆ ಬಾಡಿಗೆ ನೀಡಲಾಗಿತ್ತು. ಈ ಅಕ್ರಮ ಕಟ್ಟಡಕ್ಕೆ ಚೆಸ್ಕಾಂನಿಂದ ವಿದ್ಯುತ್ ಸಂಪರ್ಕವನ್ನು …
Read More »ರಾಜ್ಯಸಭೆ ಚುನಾವಣೆ : ಅಮಿತ್ ಷಾ ಜೊತೆ ಕುಮಾರಸ್ವಾಮಿ ಮಾತುಕತೆ
ದೆಹಲಿ,ಫೆ.22- ಮುಂಬರುವ ಲೋಕಸಭೆ ಚುನಾವಣೆ ಹಾಗೂ ಪ್ರಸಕ್ತ ರಾಜ್ಯಸಭೆ ಚುನಾವಣೆ ಕಾರ್ಯತಂತ್ರ ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಇಂದು ಮಾತುಕತೆ ನಡೆಸಿದ್ದಾರೆ. ನವದೆಹಲಿ ನಿವಾಸದಲ್ಲಿ ಅಮಿತ್ ಷಾ ಕುಮಾರಸ್ವಾಮಿ ಭೇಟಿಯಾಗಿ ಸುಮಾರು ಅರ್ಧಗಂಟೆ ಕಾಲ ರಾಜ್ಯಸಭೆ ಚುನಾವಣೆ ಕಾರ್ಯತಂತ್ರ, ಲೋಕಸಭೆ ಚುನಾವಣೆ ಸಿದ್ಧತೆ, ಬಿಜೆಪಿ-ಜೆಡಿಎಸ್ ನಡುವೆ ಕ್ಷೇತ್ರಗಳ ಹಂಚಿಕೆ, ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. …
Read More »ಮಲ್ಲಿಕಾರ್ಜುನ ಖರ್ಗೆಯವರೇ ಬಿಜೆಪಿಗೆ ಬರುವ ಸಾಧ್ಯತೆ ಇದೆ : ಯತ್ನಾಳ್
ಬೆಂಗಳೂರು, ಫೆ.22- ವಿಧಾನಸಭೆಯಲ್ಲಿ ಬಜೆಟ್ ಮೇಲೆ ಚರ್ಚೆಯ ನಡುವೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಮತ್ತೊಮ್ಮೆ ಗಮನ ಸೆಳೆಯುವ ಹೇಳಿಕೆ ನೀಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಬಿಜೆಪಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಿದರು. ಬಿಜೆಪಿ ಉಪನಾಯಕ ಅರವಿಂದ ಬೆಲ್ಲದ್ ಬಜೆಟ್ ಮೇಲೆ ಚರ್ಚೆ ಮಾಡುವಾಗ, ಸಿದ್ದರಾಮಯ್ಯ ಅವರ ಸರ್ಕಾರ ಸಾಲ ಮಾಡಿ ತುಪ್ಪ ತಿನ್ನುವಂತಹ ಬಜೆಟ್ ಮಂಡಿಸಿದೆ. ರೈತರ ಮೇಲಷ್ಟೆ ಅಲ್ಲ ಮುಖ್ಯಮಂತ್ರಿಯವರು ಡಿ.ಕೆ.ಶಿವಕುಮಾರ್ …
Read More »ಸಿದ್ದಗಂಗಾ ಮಠದಿಂದ ಅಕ್ಕಿ ಎರವಲು ಪ್ರಕರಣ: ಮತ್ತೋರ್ವ ಅಧಿಕಾರಿ ತಲೆದಂಡ
ತುಮಕೂರು,: ತುಮಕೂರು (Tumkur) ಜಿಲ್ಲೆಯ ಹಿಂದುಳಿದ ವರ್ಗಗಳ ಹಾಸ್ಟೆಲ್ಗೆ (BCM Hostel) ಸಿದ್ದಂಗಾ ಮಠದಿಂದ(Siddaganga Matt) ಅಕ್ಕಿ ಎರವಲು ಪಡೆದು ವಿತರಿಸಿದ್ದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಂಗಪ್ಪ ಅವರನ್ನು ಎತ್ತಂಗಡಿ ಮಾಡಿದೆ. ಈ ಮೂಲಕ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಜಿಲ್ಲಾ …
Read More »ಆನೇಕಲ್: ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ವ್ಯಕ್ತಿಗೆ ಚಾಕು ಇರಿದ ಸ್ನೇಹಿತರು
ಆನೇಕಲ್, ಫೆ.22: ಮದ್ಯದ ಪಾರ್ಟಿಯಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಇದೀಗ, ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ಬಳಿಯ ನಾರಾಯಣಪುರದಲ್ಲಿ ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ಯುವಕನಿಗೆ ಸ್ನೇಹಿತರೇಚಾಕು ಇರಿದಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣಪುರ ನಿವಾಸಿ ಮುರುಗೇಶ್ (42) ಇರಿತಕ್ಕೊಳಗಾದ ವ್ಯಕ್ತಿ. ಇದೇ ಊರಿನ ನಿವಾಸಿಗಳಾದ ಸತೀಶ್ ಮತ್ತು ನವೀನ್ ಎಂಬುವವರು ಚಾಕು ಇರಿದ ಆರೋಪಿಗಳಾಗಿದ್ದಾರೆ. ನಾರಾಯಣಪುರ ಸಮೀಪದ ಗುಲ್ಲಣ್ಣ ಲೇವೇಟ್ ಬಡಾವಣೆಯೊಂದರಲ್ಲಿ …
Read More »ತಪ್ಪಿಲ್ಲದೆ ಸಂವಿಧಾನ ಪೀಠಿಕೆ ಬೋಧಿಸಿದ 4 ವರ್ಷದ ಬಾಲಕ, ಎಲ್ಲೆಡೆ ಭಾರೀ ಮೆಚ್ಚುಗೆ
ಕೊಪ್ಪಳ, ಫೆ.22: ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ನಮ್ಮ ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ಜಗತ್ತಿಗೆ ಸಾರುತ್ತಿದೆ. ಸದ್ಯ ನಾಲ್ಕು ವರ್ಷದ ಭದ್ರೇಶ್ ಎಂಬ ಅಂಗನವಾಡಿ ಬಾಲಕ ಸಂವಿಧಾನದ ಪೀಠಿಕೆಯನ್ನು ಬೋಧಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇರೂರು ಗ್ರಾಮದ ಭದ್ರೇಶ್, ನಿನ್ನೆ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಎರಡೂವರೆ ನಿಮಿಷಗಳ ಕಾಲ ಸಂವಿಧಾನ ಪೀಠಿಕೆ ಬೋಧಿಸಿದ್ದಾನೆ. ಬಾಲಕ ತಪ್ಪುಗಳಿಲ್ಲದೆ ಸಂವಿಧಾನ ಪೀಠಿಕೆ …
Read More »ಲಂಚ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ: ಮರು ತನಿಖೆಗೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ
ಬೆಂಗಳೂರು, ಫೆಬ್ರವರಿ 22: ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಮುಖ್ಯಮಂತ್ರಿಯಾಗಿದ್ದಾಗ ಲಂಚ ಪಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah)ಈಗ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೆ, ಮರುತನಿಖೆ ನಡೆಸಿ ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ (Lokayukta) ಸೂಚನೆ ನೀಡಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ವಿದ್ಯಮಾನ ನಡೆದಿರುವುದು ರಾಜಕೀಯವಾಗಿ ಪ್ರತಿಪಕ್ಷ ಬಿಜೆಪಿಗೆ ಪ್ರಮುಖ ಅಸ್ತ್ರವಾಗುವ …
Read More »ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ
ಬೆಂಗಳೂರು, ಫೆ.22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ (Kempegowda International Airport Bengaluru) 22.5 ಲಕ್ಷ ಮೌಲ್ಯದ ಚಿನ್ನ (Gold Powder) ಜಪ್ತಿ ಮಾಡಲಾಗಿದೆ. ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನಿಂದ ಚಿನ್ನ ಜಪ್ತಿ ಮಾಡಿದ್ದಾರೆ. ಹಾಗೂ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದೆ. ಶಾರ್ಜಾದಿಂದ ಕೆಐಎಬಿಗೆ ವಿಮಾನದಲ್ಲಿ ಬಂದಿಳಿದಿದ್ದ ಆರೋಪಿ ಕಸ್ಟಮ್ ಅಧಿಕಾರಿಗಳ ಕಣ್ತಪ್ಪಿಸಲು ಡಿಸೈನ್ ಪ್ಯಾಂಟ್ …
Read More »ಬೆಂಗಳೂರು: ಚಿರತೆಗಾಗಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದು ನಾಯಿ!
ಬೆಂಗಳೂರು: ರಾಜರಾಜೇಶ್ವರಿನಗರದಲ್ಲಿ ಸೋಮವಾರ ಮತ್ತು ಮಂಗಳವಾರ ಚಿರತೆ ಕಾಣಿಸಿಕೊಂಡಿದೆ ಎಂದು ನಿವಾಸಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದರು. ನಂತರ ಚಿರತೆಗಾಗಿ ಶೋಧ ಕಾರ್ಯ ಆರಂಭಿಸಿದರು. ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ ಪ್ರದೇಶದಲ್ಲಿ ಅರಣ್ಯಾಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದರು. ಆದರೆ ಚಿರತೆ ಬದಲು ಈ ಪ್ರದೇಶದಲ್ಲಿ ನಾಯಿ ಪತ್ತೆಯಾಗಿದ್ದು ನಾವು ಈಗ ನಾಯಿಯ ಮಾಲೀಕರನ್ನು ಪತ್ತೆ ಮಾಡಬೇಕೇ? ಎಂದು ಅರಣ್ಯಾಧಿಕಾರಿಯೊಬ್ಬರು ಬೇಸರ ವ್ಯಕ್ತ ಪಡಿಸಿದ್ದಾರೆ. ಫೆಬ್ರವರಿ …
Read More »
Laxmi News 24×7