Breaking News

ರಾಜ್ಯ

‘ವಚನ ಕಟ್ಟು ರಕ್ಷಿಸಿದ ಮಾಚಿದೇವ’

ಸವದತ್ತಿ: ‘ಹನ್ನೆರಡನೇ ಶತಮಾನದ ಬಸವಣ್ಣನವರ ಕಾಲದಲ್ಲಿನ ವಚನ ಕಟ್ಟುಗಳನ್ನು ರಕ್ಷಿಸುವಲ್ಲಿ ಮಾಚಿದೇವ ಪ್ರಮುಖ ಪಾತ್ರ ವಹಿಸಿದ್ದರು. ಜೊತೆಗೆ ಸಕಲ ಶರಣರ ವಸ್ತ್ರಗಳನ್ನು ಶುಚಿಗೊಳಿಸುವಲ್ಲಿ ತಲ್ಲೀನರಾಗಿದ್ದರು’ ಎಂದು ತಹಶೀಲ್ದಾರ್‌ ಎಂ.ಎನ್.ಹೆಗ್ಗನ್ನವರ ಹೇಳಿದರು.‌ ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಮಡಿವಾಳ ಮಾಚಿದೇವರ ಜಯಂತಿ ಆಚರಿಸಿ ಮಾತನಾಡಿದ, ವಚನಗಳ ರಕ್ಷಣೆ ವೇಳೆ ಮಾಚಿದೇವರು ವೀರಭದ್ರನ ಅವತಾರ ತಾಳಿದ್ದು ವಿಶೇಷ. ಇಂದು ಮಡಿವಾಳ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಶ್ಲಾಘನೀಯವೆಂದರು. ಶಾಸಕರ ಸಹೋದರ ಅಶ್ವತ್ ವೈದ್ಯ …

Read More »

‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ಹೈಕಮಾಂಡ್‌ ಹೇಳಿದಂತೆ ಕೇಳಲು ನಾನು ಫುಟ್‌ಬಾಲ್‌ ಅಲ್ಲ: ಪ್ರಕಾಶ ಹುಕ್ಕೇರಿ

ಚಿಕ್ಕೋಡಿ: ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಇರುತ್ತೇನೆ. ಹೈಕಮಾಂಡ್‌ ಹೇಳಿದಂತೆ ಕೇಳಲು ನಾನು ಫುಟ್‌ಬಾಲ್ ಅಲ್ಲ’ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ ಪ್ರಶ್ನಿಸಿದರು.   ತಾಲ್ಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘2014ರಲ್ಲಿ ರಾಜ್ಯದಲ್ಲಿ ಸಚಿವನಾಗಿದ್ದ ವೇಳೆ ಒಮ್ಮೆ ಒದ್ದರು, ದೆಹಲಿಗೆ ಹೋಗಿ ಬಿದ್ದೆ. ಅಲ್ಲಿಂದ ಒದ್ದರು, ವಿಧಾನ ಪರಿಷತ್‌ಗೆ ಬಂದೆ. ಈಗ ಮತ್ತೆ …

Read More »

ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿಫೆ.3 ರಂದು ರಾಯಬಾಗ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

ಫೆ.3 ರಂದು ರಾಯಬಾಗ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಬೆಳಗಾವಿ, ಫೆ.2(ಕರ್ನಾಟಕ ವಾರ್ತೆ): ರಾಯಬಾಗ ತಾಲೂಕಿನ ವಿವಿಧ ಇಲಾಖೆಯ ತಾಲೂಕಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಶನಿವಾರ (ಫೆ.03) ನಂದಿಕುರಳಿ ರಸ್ತೆಯಲ್ಲಿ ಬರುವ ಹೆಸ್ಕಾಂ ವಿಭಾಗೀಯ ಕಚೇರಿಯ ಸಭಾ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆದಕಾರಣ ತಾಲೂಕಿನ ಸಾರ್ವಜನಿಕರು ತಮಗೆ ಸಂಬಂಧಿಸಿದ ಕುಂದುಕೊರತೆಗಳ …

Read More »

ಜಿಲ್ಲಾಸ್ಪತ್ರೆಯಲ್ಲಿ ‘ಅಮೃತಧಾರೆ’ ಎದೆಹಾಲು ಸಂಗ್ರಹ ಬ್ಯಾಂಕ್ ಉದ್ಘಾಟನೆಯಾಗಿ ಎರಡು ತಿಂಗಳಾದರೂ ಕಾರ್ಯಾರಂಭ ಮಾಡಿಲ್ಲ.

ಬೆಳಗಾವಿ: ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬಿಮ್ಸ್‌) ಜಿಲ್ಲಾಸ್ಪತ್ರೆಯಲ್ಲಿ ‘ಅಮೃತಧಾರೆ’ ಎದೆಹಾಲು ಸಂಗ್ರಹ ಬ್ಯಾಂಕ್ ಉದ್ಘಾಟನೆಯಾಗಿ ಎರಡು ತಿಂಗಳಾದರೂ ಕಾರ್ಯಾರಂಭ ಮಾಡಿಲ್ಲ. ಎದೆಹಾಲಿನ ಕೊರತೆಯಿಂದ ಬಳಲುತ್ತಿರುವ ಶಿಶುಗಳಿಗೆ ನೆರವಾಗಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳಗಾವಿ, ಕಲಬುರಗಿ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ಎದೆಹಾಲು ಸಂಗ್ರಹ ಬ್ಯಾಂಕ್‌ ಆರಂಭಿಸಲು ಮುಂದಾಗಿತ್ತು. ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಗೆ ಬಂದಿದ್ದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ 2023ರ ಡಿಸೆಂಬರ್ 13ರಂದು ಉದ್ಘಾಟಿಸಿದ್ದರು. ‘ಬೆಳಗಾವಿಯೊಂದಿಗೆ …

Read More »

ನೀರಾವರಿ ಜೋಳ:‌ ಬಂಪರ್ ಕಾಳು

ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಮೇಟ್ಯಾಲ್ ಗ್ರಾಮದ ಪ್ರಗತಿಪರ ಕೃಷಿಕ ಶಿವಾನಂದ ಸಿದ್ದಪ್ಪ ಅಗಸಿಮನಿ ಬಿತ್ತನೆ ಮಾಡಿರುವ ಹೈಬ್ರಿಡ್ ತಳಿಯ ಜೋಳ ತೆನೆಗಟ್ಟಿದ್ದು, ಸಹಸ್ರಾರು ಕಾಳುಗಳನ್ನು ಒಳಗೊಂಡಿರುವುದು ವಿಶೇಷವಾಗಿದೆ. ಕೈಕೊಟ್ಟ ಮುಂಗಾರು ಮಳೆಯಿಂದಾಗಿ ಕಂಗೆಡದ ಅವರು, ಹಿಂಗಾರಿನಲ್ಲಿ ವಾತಾವರಣ ಆಶ್ರಯಿಸಿ ಬರುವ ‘ಹವಾಜೋಳ’ ಬೀಜ ಬಿತ್ತನೆ ಮಾಡಲಿಲ್ಲ. ಬದಲಿಗೆ ನೀರಾವರಿ ಮೇಲೆ ಅವಲಂಬಿಸಿರುವ ಜೋಳದ ತಳಿ ಖರೀದಿಸಿ ಬಿತ್ತನೆ ಮಾಡಿದರು. ಅವರ ನಿರೀಕ್ಷೆಯೂ ಹುಸಿಯಾಗಲಿಲ್ಲ. ಹೆಚ್ಚಿನ ಇಳುವರಿಯ ಕನಸೂ ತೆನೆಗಟ್ಟಿ ಮುಖದಲ್ಲಿ ಮಂದಹಾಸ …

Read More »

ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ:C.M.

ಬೆಂಗಳೂರು : ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ.   ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ …

Read More »

ಹಲವಾರು ಅಕ್ರಮಗಳು ನಡೆಯುತ್ತಿದ್ದರೂ ಕಾನೂನಿನ ಕಣ್ಣು ಕೇವಲ ಹನುಮ ಧ್ವಜದ ಮೇಲೆ ಬಿದ್ದಿದ್ಯಾಕೆ? ಸುಮಲತಾ ಅಂಬರೀಶ್

ಬೆಂಗಳೂರು: ಮಂಡ್ಯದ ಕೆರಗೋಡುನಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದು ಬಹಳ ಸೂಕ್ಷ್ಮ ವಿಷಯವಾಗಿತ್ತು ಆದರೆ ಅದನ್ನು ಸೂಕ್ತವಾಗಿ ನಿರ್ವಹುಸುವಲ್ಲಿ ರಾಜ್ಯಸರ್ಕಾರ (state government) ಪ್ರಮಾದವೆಸಗಿದೆ ಎಂದುಮಂಡ್ಯ ಸಂಸದೆ ಸುಮಲತಾ ಅಂಬರೀಶ್(Sumalatha Ambareesh) ಹೇಳಿದರು.   ನಗರದ ಅವರ ನಿವಾಸದಲ್ಲಿ ಟಿವಿ9 ವರದಿಗಾರನೊಂದಿಗೆ ಮಾತಾಡಿರುವ ಸುಮಲತಾ, ಸರ್ಕಾರ ಕಟ್ಟುನಿಟ್ಟಾಗಿ ಕಾನೂನನ್ನು ಜಾರಿಗೊಳಿಸುತ್ತಿರುವ ಬಗ್ಗೆ ಹೇಳಿಕೊಳ್ಳುತ್ತ್ತಿರುವುದಾದರೆ, ಯಾರ ಭಾವನೆಗಗಳಿಗೂ (sentiments) ಧಕ್ಕೆ ಉಂಟು ಮಾಡದ ಹನುಮ ಧ್ವಜ ಮಾತ್ರ ಅದರ ಕಣ್ಣಿಗೆ ಬಿತ್ತೇ? ಮಂಡ್ಯ ಸೇರಿದಂತೆ …

Read More »

ನಾಲ್ವರು ಐಪಿಎಸ್​ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು, ಫೆಬ್ರುವರಿ 1: ನಾಲ್ವರು ಐಪಿಎಸ್​ (IPS)ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು), ಡಾ.ಎಂ.ಬಿ.ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ) ಮತ್ತು ಎ.ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ. 4 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಅಮಿತ್ ಸಿಂಗ್: ಡಿಐಜಿ, …

Read More »

ಫೆ.02 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ

ವಿಜಯನಗರ, ಫೆ.01: ನಾಳೆಯಿಂದ(ಫೆ.02) ಮೂರು ದಿನಗಳ ಕಾಲ ಹಂಪಿ ಉತ್ಸವ(Hampi Utsava) ನಡೆಯಲಿದೆ. ಈ ಹಿನ್ನಲೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಲ್ಕು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಅದರಂತೆಹಂಪಿ ಉತ್ಸವದ ಅಂತಿಮ ಹಂತದ ಸಿದ್ಧತೆಯನ್ನು ವಿಜಯನಗರ ಜಿಲ್ಲಾಧಿಕಾರಿ ದಿವಾಕರ್, ಎಸ್ಪಿ ಶ್ರೀಹರಿಬಾಬು ಬಿಎಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯವೇದಿಕೆಯ ನಿರ್ಮಾಣ ಮಾಡುತ್ತಿರುವ ಕಲಾವಿದ ಅರುಣ್ ಸಾಗರ್ ಅವರಿಂದ ಮಾಹಿತಿ ಪಡೆದ ಡಿಸಿ, ಎಸ್ಪಿ. ಮೂರು ದಿನಗಳ ಕಾಲ ನಡೆಯುವ ಹಂಪಿ ಉತ್ಸವಕ್ಕೆ …

Read More »

2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು, : 2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ ಹಿನ್ನೆಲೆ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ನಿರ್ದೇಶನ ಕೋರಿ ರಾಜ್ಯ ಯುವ ಜನತಾ ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ(nikhil kumaraswamy)ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮತ್ತಿತರರಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ, ಗ್ಯಾರಂಟಿ ಕಾರ್ಡ್ ನೀಡಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ. ಕರ್ನಾಟಕ ಮಾಡಲ್ ಇನ್ನು ಮರುಕಳಿಸದಂತೆ ಕ್ರಮಕೈಗೊಳ್ಳುವಂತೆ …

Read More »