ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿ.4ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ವಿರುದ್ಧ ಪಟ್ಟಾಗಿ ಕುಸ್ತಿಗೆ ಇಳಿಯಲು ದೋಸ್ತಿಗಳು ಸಜ್ಜಾಗಿದ್ದಾರೆ. ರೇಸ್ಕೋರ್ಸ್ ರಸ್ತೆಯಲ್ಲಿನ ಅಪಾರ್ಟ್ವೆುಂಟ್ವೊಂದರಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ರಹಸ್ಯ ಸಮಾಲೋಚನೆ ನಡೆಸಿ, ಸದನದಲ್ಲಿ ಹೂಡಲಿರುವ ಜಂಟಿ ಸಮರದ ತಂತ್ರಗಳಿಗೆ ಅಂತಿಮ ಸ್ಪರ್ಶ ನೀಡಿದರು. ರಾಜ್ಯದ ಹಿತ, ರಚನಾತ್ಮಕವಾಗಿ ಜವಾಬ್ದಾರಿ ನಿರ್ವಹಣೆ, ಸದನದ ಅಮೂಲ್ಯ ಸಮಯ ವ್ಯರ್ಥವಾಗದಂತೆ ನೋಡಿಕೊಳ್ಳುವ ವಿಚಾರದಲ್ಲಿ ಉಭಯ ಪಕ್ಷಗಳು ಬದ್ಧವಾಗಿರಲು ಸಮ್ಮತಿಸಿವೆ. ವೈಫಲ್ಯಗಳನ್ನು ಎತ್ತಿ ಹಿಡಿಯುವ, ಕಟ್ಟಿಹಾಕುವ …
Read More »ತೆರಿಗೆ ಸಂಗ್ರಹ ಕುಸಿತ: ಗುರಿ ಮುಟ್ಟಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಬರ ಮತ್ತು ಜಾಗತಿಕ ಮಾರುಕಟ್ಟೆಯ ಏರಿಳಿತದಿಂದ ತೆರಿಗೆ ಸಂಗ್ರಹದಲ್ಲಿ ತೀವ್ರ ಕುಸಿತವಾಗುವ ಆತಂಕ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಆರ್ಥಿಕ ವರ್ಷದಲ್ಲಿ ತೆರಿಗೆ ಸಂಗ್ರಹದ ಗುರಿಯನ್ನು ತಲುಪಲು ಕಠಿಣ ಪರಿಶ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ತೆರಿಗೆ ಸಂಗ್ರಹದ ಪ್ರಗತಿ ಪರಿಶೀಲನೆಯನ್ನು ಸಿದ್ದರಾಮಯ್ಯ ಶುಕ್ರವಾರ ನಡೆಸಿದರು. 2023-24 ರ ಸಾಲಿಗೆ ರಾಜ್ಯ ಸರ್ಕಾರ ₹1.82 ಲಕ್ಷ ಕೋಟಿ ತೆರಿಗೆ ಸಂಗ್ರಹದ ಗುರಿ ನಿಗದಿ ಮಾಡಿದೆ. ವಾಣಿಜ್ಯ …
Read More »ನರೇಗಾ ಯೋಜನೆ ಬರಗಾಲದ ಸಂಕಷ್ಟದ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ನೆರವಾಗುತ್ತ
ಬೆಳಗಾವಿ: ನರೇಗಾ ಯೋಜನೆ ಬರಗಾಲದ ಸಂಕಷ್ಟದ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ನೆರವಾಗುತ್ತದೆ. ಆದರೆ ಇದೇ ಈಗ ರೈತರಿಗೆ ಸಂಕಷ್ಟ ತಂದೊಡ್ಡಿದ್ದು, ಬೆಳೆದು ನಿಂತಿರುವ ಭತ್ತದ ಕಟಾವಿಗೆ ಕೂಲಿ ಕಾರ್ಮಿಕರು ಸಿಗದೇ ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಅನ್ನದಾತರು ಪರದಾಡುತ್ತಿದ್ದಾರೆ. ಸುಗ್ಗಿ ಕಾಲದಲ್ಲಿ ಕೂಲಿ ಕೊಡಬೇಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹೌದು, ಮೊದಲೇ ಬರಗಾಲದಿಂದ ತತ್ತರಿಸಿ ಹೋಗಿದ್ದ ಕಡೋಲಿ ಗ್ರಾಮದ ರೈತರು ಕಷ್ಟಪಟ್ಟು ಭತ್ತ ಬೆಳೆದಿದ್ದರು. ಈಗ ಅದು ಕಟಾವಿಗೆ ಬಂದಿದೆ. ಆದರೆ, …
Read More »ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ರೈನಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ರೈನಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹುಸಿ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕು
ಬೆಂಗಳೂರು: ರಾಜಧಾನಿ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ 60 ಶಾಲೆಗಳಿಗೆ ಹುಸಿ ಬಾಂಬ್ ಕರೆ ಸಂಬಂಧ ಆಯಾ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹುಸಿ ಬಾಂಬ್ ಇಮೇಲ್ ಸಂದೇಶ ಎಲ್ಲಿಂದ ಬಂದಿದೆ? ಎಂಬುದರ ಬಗ್ಗೆ ಪತ್ತೆ ಹಚ್ಚುವ ಕಾಯಕದಲ್ಲಿ ಪೊಲೀಸರು ತೊಡಗಿಸಿಕೊಂಡಿದ್ದಾರೆ. ವಿಶೇಷ ತಂಡ ರಚಿಸಿ ಇಮೇಲ್ನ ಐಪಿ ಅಡ್ರೆಸ್ ಟ್ರೇಸ್ ಮಾಡುತ್ತಿದ್ದಾರೆ. ಈಗಾಗಲೇ ಸರ್ವರ್ ಪ್ರೊವೈಡರ್ಗಳಿಗೆ ಪತ್ರ ಬರೆದು ಮಾಹಿತಿ ಕೇಳಿದ್ದಾರೆ. ತನಿಖೆ ಕೈಗೊಂಡಿರುವ ಸ್ಥಳೀಯ …
Read More »ಮುರಗೋಡ, ಸೊಗಲ, ಕಾರಿಮನಿ, ಹೊಸೂರ ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆ
ಬೈಲಹೊಂಗಲ: ತಾಲ್ಲೂಕಿನ ಮುರಗೋಡ, ಸೊಗಲ, ಕಾರಿಮನಿ, ಹೊಸೂರ ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆ ಸುರಿಯಿತು. ತಾಸಿಗೂ ಹೆಚ್ಚು ಸಮಯ ಸುರಿದ ಮಳೆಯಿಂದ ಹಳ್ಳ, ಕಾಲುವೆ, ಚರಂಡಿಗಳು ತುಂಬಿ ಹರಿದವು. ದಕ್ಷಿಣ ಕಾಶಿ ಎಂದೇ ಹೆಸರಾದ ‘ಸೊಗಲ ಸೋಮೇಶ್ವರ’ ಕ್ಷೇತ್ರದ ಎರಡು ಜಲಪಾತಗಳಿಗೆ ಮಳೆಯಿಂದಾಗಿ ಮತ್ತೆ ಜೀವಕಳೆ ಬಂದಿದೆ. ದೇವಸ್ಥಾನದ ಕಿರು ಕಾಲುವೆಗಳೂ ತುಂಬಿದವು. ಕೆಲ ಗ್ರಾಮಗಳಲ್ಲಿ ಬಿರಿಗಾಳಿಗೆ ಹಲವು ಕಡೆ ವಿದ್ಯುತ್ ಕಂಬಗಳ ವಾಲಿದವು. ಜಮೀನುಗಳಲ್ಲಿ ಮಳೆ ನೀರು ನಿಂತು …
Read More »ರಸ್ತೆ ಅಪಘಾತ ತಗ್ಗಿಸಲು ಸಮೂಹ ಮಾಧ್ಯಮ ಅಭಿಯಾನ: ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಪ್ರಮಾಣ ತಗ್ಗಿಸಲು ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರ ವಾಹನಗಳ ವೇಗವನ್ನು ಕಡಿಮೆ ಮಾಡಲು ಸಮೂಹ ಮಾಧ್ಯಮ ಅಭಿಯಾನ ಆರಂಭಿಸಿದ್ದು, ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಜಂಟಿ ಅಭಿಯಾನಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ವಾಹನ ಚಲಾಯಿಸುವವರು ತಮ್ಮ ಕುಟುಂಬದ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡ ವಾಹನ ಚಲಾಯಿಸಿದಾಗ ಮಾತ್ರ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಸಾಧ್ಯ. ಏನೆಲ್ಲಾ …
Read More »ಭ್ರೂಣ ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪ; ಇಬ್ಬರು ಅಧಿಕಾರಿಗಳ ಅಮಾನತು
ನಗರದ ಮಾತಾ ಆಸ್ಪತ್ರೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ (Female foeticide) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ. ಮೈಸೂರಿನ ಹಿಂದಿನ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ರವಿ. ಪಿ ಮತ್ತು ಮೈಸೂರು ತಾಲೂಕು ಆರೋಗ್ಯಾಧಿಕಾರಿ ರಾಜೇಶ್ವರಿ ಅವರನ್ನು ಅಮಾನತು ಮಾಡಲಾಗಿದೆ. ಭ್ರೂಣ ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪವೆಸಗಿದ …
Read More »ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ಜನರು ಧರಣಿ
ಬೆಳಗಾವಿ : ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡು 43 ವರ್ಷ ಕಳೆದರೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ನ್ಯಾಯಕ್ಕೆ ಆಗ್ರಹಿಸಿ ಬೆಳಗಾವಿಯ ಡಿಸಿ ಕಚೇರಿ ಮುಂಭಾಗದಲ್ಲಿ ಸಂತ್ರಸ್ಥರು ಅನಿರ್ಧಿಷ್ಟಾವಧಿ ಧರಣಿಗೆ ಮುಂದಾಗಿದ್ದಾರೆ. ಹುಕ್ಕೇರಿ ತಾಲೂಕಿನ ಬೀರನಹಳ್ಳಿ, ಮನಗುತ್ತಿ, ಇಸ್ಲಾಂಪೂರ, ಗುಡಗನಟ್ಟಿ, ಹಳೇ ವಂಟಮೂರಿ ಸೇರಿ ಇನ್ನಿತರ ಗ್ರಾಮಗಳ ನೊಂದ ಜನರು ಇಂದು ಬೆಳಗಾವಿಯ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ‍್ಯಾಲಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಆರಂಭಿಸಿದರು. …
Read More »ಶಾಲೆಗಳಿಗೆ ಬೆದರಿಕೆ ಇ-ಮೇಲ್ ಕಳುಹಿಸಿದವರನ್ನು ಪತ್ತೆ ಹಚ್ಚಲು ಹೇಳಿದ್ದೇನೆ, ಆತಂಕ ಬೇಡ: ಸಿಎಂ
ಬೆಂಗಳೂರು: ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಕಳುಹಿಸಿದವರನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಬೆಂಗಳೂರಿನ ಶಾಲೆಗಳಿಗೆ ಬೆದರಿಕೆ ಇ-ಮೇಲ್ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಪೊಲೀಸರ ಜೊತೆ ಈಗಾಗಲೇ ಮಾತನಾಡಿದ್ದೇನೆ. ಎಲ್ಲಾ ಶಾಲೆಗಳನ್ನು ಪರಿಶೀಲನೆ ನಡೆಸಲು ತಿಳಿಸಿದ್ದೇನೆ. ಎಚ್ಚರದಿಂದ ಇರಲು ಹೇಳಿದ್ದೇನೆ. ಈ ರೀತಿ ಬೆದರಿಕೆ ಹಾಕಿದವರನ್ನು ಪತ್ತೆ ಹಚ್ಚಲು ಸೂಚಿಸಿದ್ದೇನೆ ಎಂದರು. ಈ ಹಿಂದೆಯೂ ಇಂಥ ಬೆದರಿಕೆಗಳು ಬಂದಿದ್ದವು. ಆದರೆ …
Read More »
Laxmi News 24×7