ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಭಾರತದ ಸಂವಿಧಾನ ದಿನಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಮಾತನಾಡಿದರು. ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಅದರ ಬಗ್ಗೆ ಒಂದು ಸಭೆ ಮಾಡಿ ಸೂಕ್ತ ಕ್ರಮದ ನಿರ್ಣಯ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. …
Read More »ಉತ್ತರಕನ್ನಡದಲ್ಲಿ ಈ ಬಾರಿ ಮತ್ತೆ ಸಂಸದ ಅನಂತಕುಮಾರ್ ಹೆಗಡೆ ಸ್ಪರ್ಧಿಸಲ್ಲ ಎಂಬ ಊಹಾಪೋಹ
ಕಾರವಾರ: ಮುಂಬರುವ ಲೋಕಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳುಗಳು ಬಾಕಿ ಇರುವಾಗಲೇ ರಾಜಕೀಯ ಮುಖಂಡರು ಸ್ಪರ್ಧೆ ಬಗ್ಗೆ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಉತ್ತರಕನ್ನಡ ಜಿಲ್ಲೆಯಲ್ಲಿ ಬರಡಾಗಿದ್ದ ಜೆಡಿಎಸ್ ಪಾಲಿಗೆ ಓಯಸಿಸ್ ಸಿಕ್ಕಂತಾಗಿದೆ. ಇಷ್ಟು ದಿನಗಳ ಕಾಲ ಸೈಲೆಂಟ್ ಆಗಿದ್ದ ಜೆಡಿಎಸ್ ನಾಯಕರು ಇದೀಗ ಲೋಕಸಭೆ ಚುನಾವಣೆಗೆ ತಾವೂ ಕೂಡ ಆಕಾಂಕ್ಷಿಗಳೆಂದು ಹೇಳಿಕೊಂಡಿದ್ದಾರೆ. ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು …
Read More »ಟೈಮ್ ಬಂದಾಗ ಮಾಜಿ, ಹಾಲಿ ಶಾಸಕರನ್ನು ವಿದೇಶಕ್ಕೆ ಕರೆದುಕೊಂಡು ಹೋಗೋಣ:ಸತೀಶ್ ಜಾರಕಿಹೊಳಿ
ಬೆಳಗಾವಿ: “ಟೈಮ್ ಬಂದಾಗ ಮಾಜಿ, ಹಾಲಿ ಶಾಸಕರನ್ನು ವಿದೇಶಕ್ಕೆ ಕರೆದುಕೊಂಡು ಹೋಗೋಣ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ ಎಂದು ಕೃಷಿ ಇಲಾಖೆಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳನ್ನು ಸೇರಿಸಲು ಸರ್ಕಾರ ಮುಂದಾಗಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಕೆಲವು ಇಲಾಖೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ಅವಶ್ಯಕತೆ ಇಲ್ಲವೆಂದು, 10 ವರ್ಷಗಳ ಹಿಂದೆಯೇ ಈ ಇಲಾಖೆಗಳನ್ನು ಒಟ್ಟಿಗೆ ಸೇರಿಸಬೇಕೆಂದು ವರದಿ ಕೊಟ್ಟಿದ್ದಾರೆ. ಅದರ …
Read More »ಮಕ್ಕಳನ್ನು ಬಸ್ ನಿಲ್ದಾಣದ ಬಳಿ ಬಿಟ್ಟು ಮಹಿಳೆ ನಾಪತ್ತೆ
ಕಾರವಾರ (ಉತ್ತರ ಕನ್ನಡ) : ಮಕ್ಕಳನ್ನು ಬಸ್ ನಿಲ್ದಾಣದ ಬಳಿ ಬಿಟ್ಟು ನಾಪತ್ತೆಯಾಗಿದ್ದ ಮಹಿಳೆಯೋರ್ವಳ ಬೈಕ್ ಕುಮಟಾದ ಹೆಡ್ ಬಂದರು ಬಳಿ ಪತ್ತೆಯಾಗಿದೆ. ಬೈಕ್ನಲ್ಲಿ ಮಹಿಳೆ ಬರೆದಿಟ್ಟಿದ್ದರು ಎನ್ನಲಾದ ಡೆತ್ನೋಟ್ ಸಹ ಸಿಕ್ಕಿದೆ. ಇದೀಗ ಕಣ್ಮರೆಯಾಗಿರುವ ಮಹಿಳೆಗಾಗಿ ಸಮುದ್ರದಲ್ಲಿ ಹುಡುಕಾಟ ಮುಂದುವರೆದಿದೆ. ಕುಮಟಾ ತಾಲೂಕಿನ ಸಾಂತಗಲ್ ಮೂಲದ ನಿವೇದಿತಾ ನಾಗರಾಜ ಭಂಡಾರಿ ನಾಪತ್ತೆಯಾಗಿರುವ ವಿವಾಹಿತೆ. ಶನಿವಾರ ಮನೆಯಿಂದ ಇಬ್ಬರು ಗಂಡುಮಕ್ಕಳನ್ನು ಸ್ಕೂಟಿ ಮೇಲೆ ಕರೆತಂದಿದ್ದ ಈಕೆ ಕುಮಟಾದ ಪಿಕ್ಅಪ್ ಬಸ್ ನಿಲ್ದಾಣದ …
Read More »ಮೈಸೂರು: ಮಹಿಳೆ ಬಲಿ ಪಡೆದ ಹುಲಿ ಸೆರೆಗೆ 3 ಸಾಕಾನೆ, 207 ಸಿಬ್ಬಂದಿಯಿಂದ ಕಾರ್ಯಾಚರಣೆ
ಮೈಸೂರು: ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದ ಬೆಳ್ಳೂರು ಹುಂಡಿ ಜಮೀನಿನಲ್ಲಿ ದನಗಾಹಿ ಮಹಿಳೆಯನ್ನು ಹುಲಿಯೊಂದು ಕೊಂದು ಹಾಕಿದ ಬೆನ್ನಲ್ಲೇ ಅರಣ್ಯ ಇಲಾಖೆ ಎಚ್ಚರಿಕೆ ವಹಿಸಿದೆ. ಇಲ್ಲಿನ ಸುತ್ತಮುತ್ತಲ ಗ್ರಾಮಸ್ಥರು ಒಳಗೊಂಡಂತೆ 207 ಸಿಬ್ಬಂದಿಯೊಂದಿಗೆ ಅರಣ್ಯ ಇಲಾಖೆ ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿದೆ. ಡ್ರೋನ್ ಮೂಲಕವೂ ಕಾರ್ಯಾಚರಣೆ: ಹುಲಿ ಚಲನವಲನಗಳ ಪತ್ತೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ವಲಯದಲ್ಲಿ ಕಾರ್ಯಾಚರಣೆ ಚುರುಕುಗೊಂಡಿದೆ. ಇದಕ್ಕಾಗಿ ಪಾರ್ಥ, ರೋಹಿತ್, ಹಿರಣ್ಯ ಎಂಬ ಸಾಕಾನೆಗಳನ್ನು ಬಳಸಿಕೊಳ್ಳಲಾಗಿದೆ. ಹುಲಿ …
Read More »ಎಕ್ಸ್ ಅಂಡ್ ವೈ’ ಹಿಂದೆ ಬಿದ್ದ ರಾಮಾ ರಾಮಾ ರೇ ನಿರ್ದೇಶಕ ಸತ್ಯ ಪ್ರಕಾಶ್
ರಾಮಾ ರಾಮಾ ರೇ ನಿರ್ದೇಶಕ ಡಿ ಸತ್ಯ ಪ್ರಕಾಶ್ ಅವರು ‘ಎಕ್ಸ್ ಅಂಡ್ ವೈ’ ಎಂಬ ಚಿತ್ರದ ಮೂಲಕ ಮತ್ತೆ ಸಿನಿಮಾ ಅಖಾಡಕ್ಕೆ ಇಳಿದಿದ್ದಾರೆ. ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಡಿ. ಸತ್ಯ ಪ್ರಕಾಶ್ ಚಿತ್ರ ಸೆಟ್ಟೇರಿತು ಎಂದರೆ ಹಲವು ವಿಶೇಷತೆಗಳನ್ನು ಹೊಂದಿರುತ್ತದೆ ಎಂದು ಪ್ರೇಕ್ಷಕರು ಮತ್ತು ಚಿತ್ರೋದ್ಯಮದ ಮಂದಿ ಎದುರು ನೋಡುತ್ತಾರೆ. ಅದೇ ರೀತಿ ಸತ್ಯ ಪ್ರಕಾಶ್ ಕೂಡ ಕಂಟೆಂಟ್ ಹಾಗೂ ಸಂದೇಶ ಇರುವ ಚಿತ್ರಗಳನ್ನು …
Read More »ಗುಜರಾತ್ ಕ್ಯಾಪ್ಟನ್ಸಿ ಬಿಟ್ಟು ಮತ್ತೆ ಮುಂಬೈ ಪಾಲಾಗ್ತಾರಾ ಹಾರ್ದಿಕ್ ಪಾಂಡ್ಯ?
ಮುಂಬೈ, ಮಹಾರಾಷ್ಟ್ರ: ಟೀಂ ಇಂಡಿಯಾ ಟಿ 20 ನಾಯಕ ಹಾರ್ದಿಕ್ ಪಾಂಡ್ಯ ಮತ್ತೆ ಮುಂಬೈ ತಂಡಕ್ಕೆ ಮರಳುತ್ತಾರಾ?, ಗುಜರಾತ್ ಟೈಟಾನ್ಸ್ ನಾಯಕತ್ವವನ್ನು ಬಿಟ್ಟುಕೊಡಲು ಅವರು ಸಿದ್ಧರಿದ್ದೀರಾ?, ಮೊದಲ ಸೀಸನಲ್ಲೇ ಟ್ರೋಫಿ ತಂದುಕೊಟ್ಟಿದ್ದ ನಾಯಕನನ್ನು ಕೈಬಿಡಲು ಗುಜರಾತ್ ಒಪ್ಪಿಕೊಂಡಿದೆಯೇ? ಐಪಿಎಲ್ ಫ್ರಾಂಚೈಸಿಗಳು ಆಟಗಾರರನ್ನು ವಿನಿಮಯ ಮಾಡಿಕೊಳ್ಳುವ ಟ್ರೇಡಿಂಗ್ ವಿಂಡೋ ಮುಗಿಯಲು ಇನ್ನೊಂದು ದಿನ ಬಾಕಿ ಇರುವಂತೆಯೇ ಹಾರ್ದಿಕ್ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ಗೆ ಮರಳಲಿದ್ದಾರೆ ಎಂಬ ವರದಿಗಳಿವೆ. ಆದರೆ …
Read More »ಪಿಎಚ್‌ಡಿ ಪಡೆದ ಬುಡಕಟ್ಟು ಸಮುದಾಯದ ಮೊದಲ ಯುವತಿ ಈ ಎಸ್.ಆರ್. ದಿವ್ಯ
ಮೈಸೂರು: ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ವಾಸಿಸುತ್ತಿರುವ ಪಣಿಯನ್ ಬುಡಕಟ್ಟಿನ ಸಮುದಾಯದ ಯುವತಿಯೊಬ್ಬರು ಮೊದಲ ಬಾರಿಗೆ ಡಾಕ್ಟರೇಟ್ ಪದವಿ ಪಡೆದು ಹಿರಿಮೆಗೆ ಪಾತ್ರರಾಗಿದ್ದಾರೆ. ಎಚ್.ಡಿ. ಕೋಟೆ ತಾಲೂಕಿನ ಡಿ.ಬಿ. ಕುಪ್ಪೆ ಗ್ರಾಪಂ ವ್ಯಾಪ್ತಿಯ ಸೇಬಿನಕೊಲ್ಲಿ ಹಾಡಿ ಪ್ರದೇಶದಲ್ಲಿ ನೆಲೆಸಿರುವ ರಾಜು ಮತ್ತು ಲಕ್ಷ್ಮಿ ದಂಪತಿ ಪುತ್ರಿ ಎಸ್.ಆರ್. ದಿವ್ಯ ಅವರು ತಮ್ಮ ಸಮುದಾಯದಲ್ಲಿಯೇ ಪ್ರಥಮ ಬಾರಿಗೆ ಪಿಎಚ್‌ಡಿ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ.ಕೆ.ಎಂ. …
Read More »ಮಗಳಿಗೆ 50 ಕೋಟಿ ಮೌಲ್ಯದ ಬಂಗಲೆ ಉಡುಗೊರೆಯಾಗಿ ಕೊಟ್ಟ ಬಿಗ್ ಬಿ
ಜನಪ್ರಿಯ ನಟ ಅಮಿತಾಭ್ ಬಚ್ಚನ್ ತಮ್ಮ ಹೆಸರಿನಲ್ಲಿದ್ದ ಬಂಗಲೆಯನ್ನು ಮಗಳ ಹೆಸರಿಗೆ ಮಾಡಿಸಿದ್ದಾರೆ. ಭಾರತೀಯ ಚಿತ್ರರಂಗದ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ತಮ್ಮ ಪುತ್ರಿ ಶ್ವೇತಾ ನಂದಾ ಅವರಿಗೆ ಅಪಾರ ಬೆಲೆಬಾಳುವ ಆಸ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ತಮ್ಮ ಹೆಸರಿನಲ್ಲಿದ್ದ ಬಂಗಲೆಯನ್ನು ಮಗಳ ಹೆಸರಿಗೆ ಮಾಡಿಸಿದ್ದಾರೆ. ಈಗಾಗಲೇ ನೋಂದಣಿ ಕಾರ್ಯ ಕೂಡ ಮುಗಿದಿದೆ ಎಂಬ ಮಾತು ಕೇಳಿ ಬರುತ್ತಿವೆ. ಅಲ್ಲದೇ ಬಂಗಲೆಯ ಮೌಲ್ಯ ತಿಳಿದ ಅಭಿಮಾನಿಗಳು ಹುಬ್ಬೇರಿಸಿದ್ದಾರೆ ಪ್ರಸಿದ್ಧ ನಟ …
Read More »ಸಾವಿನಲ್ಲೂ ಸಾರ್ಥಕತೆ ಮೆರೆದ ಶುಶ್ರೂಷಕ: ಅಂಗಾಂಗ ದಾನ ಮಾಡಿ 6 ಜನರಿಗೆ ಜೀವ ತುಂಬಿದ ಶೇಖರ್!
ಎರ್ನಾಕುಲಂ (ಕೇರಳ): ಮೆದುಳು ನಿಷ್ಕ್ರಿಯಗೊಂಡು ಸಾವಿಗೀಡಾದ ತಮಿಳುನಾಡಿನ ಶುಶ್ರೂಷಕರೊಬ್ಬರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ 6 ಜನರ ಬಾಳಿಗೆ ಹೊಸ ಬೆಳಕು ನೀಡಲಿದ್ದಾರೆ. ಇದರಲ್ಲಿ ಕೊಚ್ಚಿಯ ವ್ಯಕ್ತಿಯೊಬ್ಬರಿಗೆ ಹೃದಯ ಕಸಿ ಮಾಡಲಾಗಿದೆ. ಇನ್ನೂ ಐವರಿಗೆ ವಿವಿಧ ಅಂಗಗಳನ್ನು ವೈದ್ಯರು ಜೋಡಿಸಲಿದ್ದಾರೆ. ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಶುಶ್ರೂಷಕ ಆಗಿದ್ದ ಸೆಲ್ವಿನ್ ಶೇಖರ್ (36) ಮೆದುಳು ನಿಷ್ಕ್ರಿಯದಿಂದ ಸಾವಿಗೀಡಾದವರು. ಪತ್ನಿಯೂ ನರ್ಸ್ ಆಗಿದ್ದು, ಪತಿಯ ಅಂಗಾಂಗ ದಾನ ಮಾಡಲು …
Read More »
Laxmi News 24×7