ಹುಬ್ಬಳ್ಳಿ: ರೈತ ಮಹಿಳೆಯೊಬ್ಬರ ಖಾತೆಯಿಂದ ಹಂತ ಹಂತವಾಗಿ 64 ಸಾವಿರ ರೂಪಾಯಿಯನ್ನು ಸೈಬರ್ ವಂಚಕರು ಲಪಟಾಯಿಸಿರುವ ಘಟನೆ ಬೆಳೆಕಿಗೆ ಬಂದಿದೆ. ಕುಂದಗೋಳ ತಾಲೂಕು ಯರಿನಾರಾಯಣಪುರ ಗ್ರಾಮದ ಮಲ್ಲವ್ವ ಅಶೋಕ ಮುಲ್ಲಹಳ್ಳಿ ಎಂಬ ರೈತ ಮಹಿಳೆ ವಂಚನೆಗೊಳಗಾದವರು. ಇವರು ಯರಗುಪ್ಪಿಯ ಕೆವಿಜಿ ಬ್ಯಾಂಕ್ನಲ್ಲಿ ಖಾತೆ ಹೊಂದಿದ್ದಾರೆ. ಅರ್ಧ ಎಕರೆ ಜಮೀನು ಹೊಂದಿರುವ ಇವರು ಕೃಷಿ ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದಾರೆ. ಇವರ ಖಾತೆಯಲ್ಲಿ ಗೃಹಲಕ್ಷ್ಮಿ ಸೇರಿದಂತೆ ವಿವಿಧ ಮೂಲದಿಂದ ಉಳಿತಾಯ ಮಾಡಿದ ಹಣವನ್ನು ಇಟ್ಟಿದ್ದರು. …
Read More »ತೆಲಂಗಾಣದಲ್ಲಿ ಜಾಹೀರಾತು ಪ್ರಕಟ: ಕರ್ನಾಟಕ ಸರಕಾರಕ್ಕೆ ಇಸಿ ನೋಟಿಸ್
ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ತೆಲಂಗಾಣ ಪತ್ರಿಕೆಗಳಲ್ಲಿ ಸರಕಾರಿ ಜಾಹೀರಾತು ನೀಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕರ್ನಾಟಕ ಸರಕಾರಕ್ಕೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ತೆಲಂಗಾಣದ ಪತ್ರಿಕೆಗಳಲ್ಲಿ ನಿಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಪ್ರಕಟಣೆಗಳನ್ನು ನೀಡುವುದರ ಅರ್ಥವೇನು? ಎಂದು ಚುನಾವಣಾ ಆಯೋಗ ಪ್ರಶ್ನೆ ಮಾಡಿದ್ದು, ನೀಡಿರುವ ನೋಟಿಸ್‌ಗೆ ನವೆಂಬರ್ 28ರ ಸಂಜೆ 5ಗಂಟೆಯೊಳಗೆ ಉತ್ತರಿಸುವಂತೆ ಆದೇಶ ಜಾರಿಮಾಡಿದೆ. ಕರ್ನಾಟಕ ರಾಜ್ಯ ಸರ್ಕಾರದ ಘೋಷಣೆಗಳ ವಿಷಯವನ್ನು …
Read More »ಕಾಂಗ್ರೆಸ್ ಡೋಂಗಿತನ ಕಳಚುತ್ತಿದೆ ಎಂದು ಬಿಜೆಪಿ ಆರೋಪ: ಬಿಜೆಪಿ
ಕಾಂಗ್ರೆಸ್ ಸರ್ಕಾರ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ, ಇದೀಗ ಕಾಂಗ್ರೆಸ್ ಡೋಂಗಿತನ ಕಳಚುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ತೆಲಂಗಾಣ ಪತ್ರಿಕೆಗಳಲ್ಲಿ ಗ್ಯಾರೆಂಟಿ ಬಗ್ಗೆ ಜಾಹೀರಾತು ನೀಡಿದ್ದು, ಈಗಾಗಲೇ ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ನೊಟೀಸ್ ನೀಡಿದೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು, ಸಿಎಂ ಸಿದ್ದು ತೆಲಂಗಾಣದಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದಿದೆ. ತೆರಿಗೆದಾರರ …
Read More »ಬೆಳಗಾವಿ, ಚಿಕ್ಕೋಡಿ ಮೇಲೆ ಕಾಂಗ್ರೆಸ್ ಕಣ್ಣು: ಯಾರಿಗೆ ಒಲಿಯುತ್ತದೆ ಲೋಕಸಭೆ TIKET
ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ. ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ. ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ಸ್ಥಾನಗಳಲ್ಲಿ …
Read More »ಬೆಳಗಾವಿ ವಿಧಾನಮಂಡಲ ಅಧಿವೇಶನ: ಹಣಕಾಸು ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲಿ; ಬಿಜೆಪಿ ಆಗ್ರಹ
ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷ ಬಿಜೆಪಿ ಸೋಮವಾರ ಹೇಳಿದೆ. ಬೆಂಗಳೂರು: ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷ ಬಿಜೆಪಿ ಸೋಮವಾರ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿಪಕ್ಷ ನಾಯಕ ಆರ್.ಅಶೋಕ್ ಅವರು, “ಗ್ಯಾರಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ …
Read More »ಚಿಕ್ಕೋಡಿ ಲೋಕಸಭಾ ಟಿಕೆಟ್ ಕೇಳಿದ್ರಾ ರಮೇಶ್ ಕತ್ತಿ?
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದು, ಭೇಟಿ ವೇಳೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರು: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದು, …
Read More »ಟಿ20 ಸರಣಿ ಗೆಲುವಿನತ್ತ ಭಾರತದ ಚಿತ್ತ
ಗುವಾಹಟಿ(ಅಸ್ಸಾಂ): ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಕ್ರಿಕೆಟ್ ಸರಣಿಯ 3ನೇ ಪಂದ್ಯ ಇಲ್ಲಿನ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಸಂಜೆ 7 ಗಂಟೆಗೆ ನಡೆಯಲಿದೆ. ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳುವ ಗುರಿ ಹೊಂದಿರುವ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಬಳಗ ಆಸ್ಟ್ರೇಲಿಯಾ ವಿರುದ್ಧದ ಹೊಸ ಹೋರಾಟಕ್ಕೆ ಸಜ್ಜಾಗಿದೆ. ಈ ಪಂದ್ಯದ ಗೆಲುವಿನೊಂದಿಗೆ ಭಾರತ ಸರಣಿ ವಶಪಡಿಸಿಕೊಳ್ಳುತ್ತಾ ಅಥವಾ ಆಸ್ಟ್ರೇಲಿಯಾ ಪುಟಿದೇಳುತ್ತಾ ಎಂಬುದು ಕುತೂಹಲಕಾರಿಯಾಗಿದೆ. ಮೊದಲ ಪಂದ್ಯವನ್ನು …
Read More »ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ಹೊಸ ಕಾರ್ಯಕ್ರಮ ರೂಪಿಸುತ್ತಿರುವ ರಾಜ್ಯ ಸರ್ಕಾರ
ಬೆಂಗಳೂರು: ಹಲವಾರು ವರ್ಷಗಳಿಂದ ಸರ್ಕಾರದ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿರುವವರಿಗೆ ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ರಾಜ್ಯ ಸರ್ಕಾರ ಹೊಸ ಕಾರ್ಯಕ್ರಮ ರೂಪಿಸುತ್ತಿದೆ. ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ವ್ಯವಸ್ಥೆ ಜಾರಿಯಲ್ಲಿದ್ದು, ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57 ರಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಈ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿ ವಿತರಣೆ ಮಾಡಲು ರಾಜ್ಯ ಸರ್ಕಾರ ಈ ವ್ಯವಸ್ಥೆ ಜಾರಿಗೊಳಿಸಿದೆ. ಹದಿನೈದು ವರ್ಷಗಳಿಂದ ಉಳುಮೆ ಮಾಡುತ್ತಿರುವವರಿಗೆ ಮಾತ್ರ ಸಕ್ರಮಕ್ಕೆ …
Read More »ಶಬರಿಮಲೆಗೆ ವೋಲ್ವೊ ಬಸ್ ಸೇವೆ ಆರಂಭ
ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳಲು ಪ್ರಯಾಣಿಕರ ಅನುಕೂಲತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೆಂಗಳೂರಿನಿಂದ ನೇರ ಶಬರಿಮಲೆಗೆ ವೋಲ್ವೊ ಬಸ್ ಸೇವೆ ಆರಂಭ ಮಾಡಲಿದೆ. ಡಿಸೆಂಬರ್ 1 ರಿಂದ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್ ಸಂಚಾರ ಪ್ರಾರಂಭವಾಗಲಿದೆ. ಪ್ರತಿ ನಿತ್ಯ ಬೆಂಗಳೂರು – ನೀಲಕ್ಕಲ್ (ಪಂಪಾ- ಶಬರಿಮಲೈ) ನಡುವೆ ಬಸ್ ಸಂಚಾರ ಇರಲಿದೆ. ವೋಲ್ವೊ ಬಸ್ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿದೆ. ಪ್ರತಿದಿನ ಮಧ್ಯಾಹ್ನ 1.50 ಗಂಟೆಗೆ ಹೊರಡಲಿರುವ …
Read More »ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ.ಅತೀಕ್ ಅವರನ್ನು ನೇಮಿಸಿದ ಸರ್ಕಾರ
ಬೆಂಗಳೂರು: ರಾಜ್ಯ ಸರ್ಕಾರದಮುಖ್ಯ ಕಾರ್ಯದರ್ಶಿ (ಸಿಎಸ್) ಹುದ್ದೆಗೆ ಡಾ.ರಜನೀಶ್ ಗೋಯೆಲ್ ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾದ ಸಿಎಂ ಅವರ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್.ಕೆ.ಅತೀಕ್ ಅವರನ್ನು ನೇಮಿಸಲಾಗಿದೆ. ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಪ್ರಭಾರಿ ಹೊಣೆಯನ್ನು ಎಲ್.ಕೆ.ಅತೀಕ್ ಅವರಿಗೆ ವಹಿಸಲಾಗಿದೆ. ಇದಕ್ಕೂ ಮುನ್ನ ಎಲ್.ಕೆ.ಅತೀಕ್ ಅವರಿಗೆ ಐಎನ್‌ಎಸ್ ಪ್ರಸಾದ್ ನಿವೃತ್ತಿಯಿಂದ ತೆರವಾದ ಹಣಕಾಸು ಇಲಾಖೆಯ …
Read More »
Laxmi News 24×7