Breaking News

ರಾಜ್ಯ

ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ!

ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ!   ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಸೂಚಿಸಿದ್ದಾರೆ. ವಿಜಯಪುರ: ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ …

Read More »

ಚಳಿಗಾಲದ ಅಧಿವೇಶನದಲ್ಲಿ ಎಪಿಎಂಸಿ ಕಾಯ್ದೆಯನ್ನು ರಾಜ್ಯ ಸರ್ಕಾರ ಹಿಂಪಡೆಯುವ ಸಾಧ್ಯತೆ

ಬೆಂಗಳೂರು: ಸದ್ಯ ಅಸ್ತಿತ್ವದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅದನ್ನು ಮಂಡಿಸುವ ಸಾಧ್ಯತೆ ಇದೆ. ಬೆಂಗಳೂರು: ಸದ್ಯ ಅಸ್ತಿತ್ವದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅದನ್ನು ಮಂಡಿಸುವ ಸಾಧ್ಯತೆ ಇದೆ. ರೈತರಿಂದ ಸರಕು ಖರೀದಿಸಲು ಖಾಸಗಿ ವ್ಯಕ್ತಿಗಳು ಎಪಿಎಂಸಿ …

Read More »

2024ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರವು 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2ನೇ ಶನಿವಾರ, 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳನ್ನು ಹೊರತುಪಡಿಸಿ 2024 ರಲ್ಲಿ 21 ಸಾರ್ವತ್ರಿಕ ರಜಾ ದಿನಗಳು ಇರಲಿವೆ. ಬೆಂಗಳೂರು: ರಾಜ್ಯ ಸರ್ಕಾರವು 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2ನೇ ಶನಿವಾರ, 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳನ್ನು ಹೊರತುಪಡಿಸಿ 2024 ರಲ್ಲಿ 21 ಸಾರ್ವತ್ರಿಕ …

Read More »

ನ. 27 ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬೆಳಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ

ಬೆಂಗಳೂರು : ನ. 27 ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬೆಳಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ (Janata Darshana) ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ. ಮುಖ್ಯಮಂತ್ರಿ …

Read More »

ಜಾತಿಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜಾತಿಗಣತಿ (Caste census) ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಈ ವಿಚಾರದಲ್ಲಿ ಸರ್ಕಾರ ಸುಮ್ಮನೆ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubli) ಮಾತನಾಡಿದ ಅವರು, ಜಾತಿ ಜನಗಣತಿ ವಿಚಾರದಲ್ಲಿ ದೊಡ್ಡ ಪ್ರಮಾಣದ ಗೊಂದಲ‌ ಸೃಷ್ಟಿಯಾಗುತ್ತಿದೆ. ಇದು ಆಡಳಿತ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತೆ. ಜಾತಿ ಜನಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಜಾತಿಗಣತಿ …

Read More »

ಶೀಘ್ರವೇ ಬರ ಪರಿಹಾರ ಬಿಡುಗಡೆಗೊಳಿಸಿ: ನಿರ್ಮಲಾ ಸೀತಾರಾಮನ್​ಗೆ ರಾಜ್ಯ ಸಚಿವರ ಮನವಿ

ದೆಹಲಿ/ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ ಶೀಘ್ರ ನಿರ್ಧಾರ ತೆಗೆದುಕೊಂಡು ಬರ ಪರಿಹಾರ ಹಣ ಬಿಡುಗಡೆಗೊಳಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಕೃಷಿ ಸಚಿವ ಚೆಲುವರಾಯಸ್ವಾಮಿ ಜೊತೆಗೂಡಿ ಗುರುವಾರ ದೆಹಲಿಯಲ್ಲಿ ಸಚಿವೆಯನ್ನು ಭೇಟಿ ಮಾಡಿದ ನಂತರ ಪತ್ರಕರ್ತರ ಜೊತೆ ಮಾತನಾಡಿದ ಕೃಷ್ಣ ಬೈರೇಗೌಡ, ರಾಜ್ಯದ 223 ತಾಲೂಕುಗಳನ್ನು …

Read More »

ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆಗೆ ನೀಡಿದ್ದ ಆದೇಶ ವಾಪಸ್​ ಪಡೆದ ಸರ್ಕಾರ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿ ಆದೇಶಿಸಿದ್ದ ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.   ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಡಿಕೆಶಿ ವಿರುದ್ಧ ತನಿಖೆಯನ್ನು ಸಿಬಿಐಗೆ ವಹಿಸಲು ಹಿಂದಿನ‌ ಸರ್ಕಾರ ನಿರ್ಣಯ ಮಾಡಿತ್ತು. ಕಾನೂನಾತ್ಮಕವಾಗಿ ಸ್ಪೀಕರ್ ರಿಂದ ನಿರ್ಣಯ ಪಡೆಯಬೇಕಿತ್ತು. ಅದನ್ನು …

Read More »

ರಾಜ್ಯ ಸರ್ಕಾರದಿಂದ ದರೋಡೆಕೋರರ ರಕ್ಷಣೆ:H.D.K.

ಬೆಂಗಳೂರು: ದರೋಡೆಕೋರರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ನಿಂತಿದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಜೆ.ಪಿ.ನಗರದ ತಮ್ಮ ನಿವಾಸದ ಬಳಿ ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ತನಿಖೆಗಾಗಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್​ ಪಡೆದ ವಿಚಾರಕ್ಕೆ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಈ ಸರ್ಕಾರದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಮಾತನಾಡುವುದು ಬಹಳ ಇದೆ. ಚರ್ಚೆ ಮಾಡೋಣ, ಇದರ ಬಗ್ಗೆ ಆತುರ ಬೇಡ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಮಾತು …

Read More »

ತಹಶೀಲ್ದಾರ್ ಬಂಧನಕ್ಕೆ ವಾರಂಟ್ ಜಾರಿ

ಹಾಸನ: ಜಮೀನು ವ್ಯಾಜ್ಯ ಪ್ರಕರಣವೊಂದರಲ್ಲಿ ಸಾಕ್ಷ್ಯ ಹೇಳಲು ಕೋರ್ಟ್‌ಗೆ ಹಾಜರಾಗದ ಹಾಸನ ತಹಶೀಲ್ದಾರ್ ಶ್ವೇತಾ ವಿರುದ್ಧ ಸಿಟಿ ಸಿವಿಲ್ ಕೋರ್ಟ್ ಬಂಧನ ವಾರಂಟ್‌ ಹೊರಡಿಸಿದೆ. ಶ್ವೇತಾ ಅವರನ್ನು ಕರೆದುಕೊಂಡು ಹೋಗಲು ಗುರುವಾರ ಕೋರ್ಟ್‌ ಸಿಬ್ಬಂದಿ ಮತ್ತು ವಕೀಲರು ಕಚೇರಿಗೆ ಆಗಮಿಸಿದ್ದರು. ಆದರೆ ಶ್ವೇತಾ ಕಚೇರಿಯಲ್ಲಿರಲಿಲ್ಲ. ಪ್ರಕರಣವೇನು?: ಹಾಸನ ತಾಲೂಕಿನ ಹೇಮಾ ಎಂಬವರ ಭೂಮಿ 6/1 ಭಾಗಕ್ಕೆ ಆದೇಶವಾಗಿದ್ದು, ನಂತರ ಹದ್ದುಬಸ್ತ್‌ಗಾಗಿ ಸ್ವಾಧೀನ ಮಾಡಬೇಕು ಎಂದು ಕೋರ್ಟ್‌ ಆದೇಶಿಸಿತ್ತು. 2014ರಿಂದ ಇಲ್ಲಿವರೆಗೂ ಈ ಕುರಿತು …

Read More »

ಅಟ್ರಾಸಿಟಿ ಕೇಸ್ ರದ್ದತಿಗೆ ನಕಾರ: ಆಧುನಿಕ ಯುಗದಲ್ಲೂ ಅಸ್ಪೃಶ್ಯತೆ ಆಚರಣೆಗೆ ಹೈಕೋರ್ಟ್ ಬೇಸರ

ಬೆಂಗಳೂರು: ಆಧುನಿಕ ಯುಗದಲ್ಲಿಯೂ ಗ್ರಾಮೀಣ ಪ್ರದೇಶಗಳಲ್ಲಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವ ಕುರಿತು ಆಘಾತ ವ್ಯಕ್ತಪಡಿಸಿರುವ ಹೈಕೋರ್ಟ್, ಸಾರ್ವಜನಿಕ ಸ್ಥಳದಂತಿರುವ ದೇವಾಲಯಕ್ಕೆ ದಲಿತ ಕುಟುಂಬ ಪ್ರವೇಶಕ್ಕೆ ಅಡ್ಡಿಪಡಿಸಿ, ಜಾತಿ ಹೆಸರಿನಲ್ಲಿ ನಿಂದಿಸಿ ಹಲ್ಲೆ ನಡೆಸಿದ ಆರೋಪದಲ್ಲಿ ಎಂಟು ಮಂದಿಯ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಿಸಿತು.   ತಮ್ಮನ್ನು ಪ್ರಕರಣದಿಂದ ಮುಕ್ತಗೊಳಿಸುವಂತೆ ಕೋರಿ ಪಾಂಡುರಗ ಭಟ್ ಸೇರಿದಂತೆ ಇತರೆ ಏಳು ಮಂದಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪಪೀಠ, …

Read More »