Breaking News

ರಾಷ್ಟ್ರೀಯ

ನವನಗರದ ಸರಾಯಿ ಅಂಗಡಿ ವಿರುದ್ಧ ಮಹಿಯರಿಂದ ಮುಂದುವರೆದ ಪ್ರೊಟೆಸ್ಟ್

ನವನಗರದ ಸರಾಯಿ ಅಂಗಡಿ ವಿರುದ್ಧ ಮಹಿಯರಿಂದ ಮುಂದುವರೆದ ಪ್ರೊಟೆಸ್ಟ್….ಮಹಿಳೆಯರ ಹೋರಾಟಕ್ಕೆ ಸಾಥ್ ನೀಡಿದ ಪುರುಷರ್ …. ಕಳೆದೊಂದು ವಾರದಿಂದ ಧಾರವಾಡ ಹುಬ್ಬಳ್ಳಿಯ ನಡುವೆ ಬರೋ ನವನಗರದಲ್ಲಿ ನೂತನ ಎಂಆರ್‌ಪಿ ಶಾಪ್‌ ಸೇರಿ ಸಂಗಮ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿ ನೂತನ ಎಂಆರ್‌ಪಿ ಶಾಪ ಮುಂದೆ ಮಹಿಳೆಯರು ಪ್ರತಿದಿನ ಸಂಜೆ ನಡೆಸುತ್ತಿರೂವ ಪ್ರತಿಭಟನೆ ಮುಂದುವರೆದಿದ್ದು, ಕಳೆದ ಮಂಗಳವಾರ ತಡ ರಾತ್ರಿಯು ಮಹಿಳೆಯರು ಪ್ರತಿಭಟನೆ ಮಾಡಿ ಅಬಕಾರಿ ಇಲಾಖೆ …

Read More »

HSRP ನಂಬರ್ ಪ್ಲೇಟ್ ಅಳವಡಿಕೆಗೆ ನ.30 ಕೊನೇ ದಿನ

ಬೆಂಗಳೂರು, ನ.15- ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ನಿಗದಿಪಡಿಸಿರುವ ಕಾಲಮಿತಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.   ಕಳೆದ 2019ರ ಏಪ್ರಿಲ್ ಒಂದಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಬೇಕಾಗಿದೆ. ಈಗಾಗಲೇ ಈ ನೋಂದಣಿ ಫಲಕ ಅಳವಡಿಕೆಗೆ ನಿಗದಿಪಡಿಸಿದ್ದ ಅಂತಿಮ ಗಡುವನ್ನು ಸಾರಿಗೆ ಇಲಾಖೆ ಸುಮಾರು ನಾಲ್ಕು ಬಾರಿ ವಿಸ್ತರಣೆ ಮಾಡಿದೆ.

Read More »

ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

ಬೆಳಗಾವಿ: ಇತ್ತೀಚೆಗೆ ಮೈಸೂರು ಜಿಲ್ಲೆ ಎಚ್‌.ಡಿ. ಕೋಟೆಯಲ್ಲಿ ನಡೆದಿದ್ದ ಸಮಾರಂಭದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದ ಬೆನ್ನಲ್ಲೇ, ಇದೀಗ ಸಚಿವ ಸ್ಥಾನಕ್ಕೆ ಇಬ್ಬರು ಶಾಸಕರು ಬೇಡಿಕೆ ಇಟ್ಟಿದ್ದಾರೆ.   ಅಪರೇಷನ್‌ ಕಮಲ ಚರ್ಚೆಯ ನಡುವೆಯೇ, ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಹಾಗೂ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆಸಿಫ್ ಸೇಠ್ …

Read More »

ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

ನವದೆಹಲಿ: ಮಹಾರಾಷ್ಟ್ರದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಜಾರ್ಖಂಡ್‌ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಲ್ಲೂ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ. ಇತ್ತ ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ನಾಂದೇಡ್‌ ಲೋಕಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, …

Read More »

ಹೇರ್ ಡ್ರೈಯರ್’ ಸ್ಪೋಟಗೊಂಡು ಮಹಿಳೆಯ ಮುಂಗೈ. ಬೆರಳು ಕಟ್!

ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಹೇರ್ ಡ್ರೈರ್ ಸ್ಪೋಟಗೊಂಡು ಮಹಿಳೆಯ 2 ಕೈಗಳು ಛಿದ್ರವಾಗಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರು ಹೇರ್ ಡ್ರೈಯರ್ ಬಳಸುವಾಗ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದೆ. ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕೋರಿಯರ್ ಓಪನ್ ಮಾಡಿ …

Read More »

ಮೀನುಗಾರಿಕೆಗೆ ಹೋದಾಗ ನೀರುಪಾಲು: ಇಬ್ಬರು ಮಕ್ಕಳ ಮೃತದೇಹ ಪತ್ತೆ; ತಂದೆಗಾಗಿ ಶೋಧ

ಯಮಕನಮರಡಿ(ಬೆಳಗಾವಿ ಜಿಲ್ಲೆ): ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ತಂದೆಯೊಂದಿಗೆ ಮೀನುಗಾರಿಕೆಗೆ ಹೋದಾಗ ನೀರುಪಾಲಾಗಿದ್ದ ಇಬ್ಬರು ಮಕ್ಕಳ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿವೆ. ಬೆನಕನಹೊಳಿಯ ರಮೇಶ ಅಂಬಲಿ(15), ಯಲ್ಲಪ್ಪ ಅಂಬಲಿ(13) ಮೃತರು. ಅವರ ತಂದೆ ಲಕ್ಷ್ಮಣ ಅಂಬಲಿ(45) ಪತ್ತೆಗಾಗಿ ಅಗ್ನಿಶಾಮಕ ದಳ ತಂಡ ಹಾಗೂ ಪೊಲೀಸರಿಂದ ಕಾರ್ಯಾಚರಣೆ ಮುಂದುವರಿದಿದೆ. ‘ಲಕ್ಷ್ಮಣ ಅವರು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ರಾತ್ರಿ ಬೈಕ್‌ ನಿಲ್ಲಿಸಿ ತಮ್ಮ ಇಬ್ಬರು ಮಕ್ಕಳೊಂದಿಗೆ ಮೀನುಗಾರಿಕೆಗಾಗಿ …

Read More »

ಕಲ್ಲು ತೂರಾಟ. ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

ಮಹಾರಾಷ್ಟ್ರ: ಅಪರಿಚಿತ ಗುಂಪೊಂದು ಕಲ್ಲು ತೂರಾಟ ನಡೆಸಿದ ಪರಿಣಾಮ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಹಣೆಗೆ ಗಾಯವಾದ ಘಟನೆ ಭಾನುವಾರ(ನ.18) ರಾತ್ರಿ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ. ದೇಶಮುಖ್ ಅವರನ್ನು ಕೂಡಲೇ ಕಟೋಲ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾನುವಾರ ರಾತ್ರಿ ಸುಮಾರು ಎಂಟು ಗಂಟೆಯ ಸುಮಾರಿಗೆ ನಾರ್ಖೇಡ್ ಗ್ರಾಮದಲ್ಲಿ ನಡೆದ ಎನ್‌ಸಿಪಿ ನಾಯಕ ಶರದ್‌ಚಂದ್ರ ಪವಾರ್ ಅವರ ಸಭೆಯಲ್ಲಿ ಭಾಗವಹಿಸಿ ಕಟೋಲ್‌ಗೆ ಹಿಂತಿರುಗುತ್ತಿದ್ದಾಗ …

Read More »

ಇಂದಿನಿಂದ ಮೂರು ದಿನ ‘ಬೆಂಗಳೂರು ಟೆಕ್ ಶೃಂಗಸಭೆ’ ಆಯೋಜನೆ |Bangalore Tech Summit

ಬೆಂಗಳೂರು : ಬೆಂಗಳೂರು ಟೆಕ್ ಶೃಂಗಸಭೆ ಇಂದು ನವೆಂಬರ್ 19 ರಿಂದ 21ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 2024 ಇದೇ ನವೆಂಬರ್ 19 ರಿಂದ 21ರ ವರೆಗೆ ನಡೆಯಲಿದೆ.   ಆಸ್ಟ್ರೇಲಿಯಾ, ಬ್ರಿಟನ್, ಫ್ರಾನ್ಸ್, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್, ಇಸ್ರೇಲ್, …

Read More »

ಕನ್ನಡ ಪುಸ್ತಕಗಳಿಗೆ ಶೇಕಡ 50ರಷ್ಟು ಭಾರಿ ರಿಯಾಯಿತಿ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಅಕಾಡೆಮಿಗಳು, ಪ್ರಾಧಿಕಾರದಿಂದ ಪ್ರಕಟಿಸುವ ಪುಸ್ತಕಗಳನ್ನು ಶೇಕಡ 50 ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಾವೇರಿ ಜಿಲ್ಲೆ ಬಂಕಾಪುರದಲ್ಲಿ ಕನಕದಾಸರು ನೆಲೆಸಿದ್ದ ಸ್ಥಳ ಅಭಿವೃದ್ಧಿ ಪಡಿಸಬೇಕು. ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮಾಡುವುದಕ್ಕೆ ಒಪ್ಪಿಗೆ ನೀಡುವಂತೆ …

Read More »

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

ಮುಂಬೈ/ ರಾಂಚಿ: ಮಹಾರಾಷ್ಟ್ರದ ಎಲ್ಲಾ 288 ಕ್ಷೇತ್ರಗಳಿಗೆ ಹಾಗೂ ಜಾರ್ಖಂಡ್‌ನ‌ 38 ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆಯಲಿದ್ದು, ಸೋಮವಾರ ಉಭಯ ರಾಜ್ಯಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಉಭಯ ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಂತಹ ಘಟಾನುಘಟಿಗಳು ಪ್ರಚಾರ ನಡೆಸಿದ್ದು, ಫ‌ಲಿತಾಂಶ ಭಾರಿ ಕುತೂಹಲ ಮೂಡಿಸಿದೆ.   ಮಹಾರಾಷ್ಟ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ, ಅಜಿತ್‌ ಪವಾರ್‌ ಬಣದ …

Read More »