ಯಮಕನಮರಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದು, ಸೋಮವಾರ (ನ.18) ಬೆಳಿಗ್ಗೆಯಿಂದ ಅವರ ಮೃತದೇಹದ ಹುಡುಕಾಟ ನಡೆದಿದೆ. ಬೆನಕನಹೊಳಿಯ ಲಕ್ಷ್ಮಣ ರಾಮ ಅಂಬಲಿ (49) ಅವರ ಮಕ್ಕಳಾದ ರಮೇಶ (14), ಯಲ್ಲಪ್ಪ(12) ಮೃತರು. ಲಕ್ಷ್ಮಣ ಹಾಗೂ ಅವರ ಮಕ್ಕಳು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ಸಂಜೆ ಬೈಕ್ …
Read More »ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
ಬೆಳಗಾವಿ: ಸುಮಾರು 20 ಗುಂಟೆ ಜಾಗಕ್ಕೆ ಸಂಬಂಧಿಸಿದಂತೆ ವಿವಾದ ನಡೆದಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ 15 ಅಧಿಕ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ರವಿವಾರ ರಾತ್ರಿ ಬೆಳಗಾವಿ ತಾಲೂಕಿನ ಯಳ್ಳೂರ ಬಳಿಯ ಸುಳಗಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತ ಅರವಿಂದ ಪಾಟೀಲ ಸೇರಿ ನಾಲ್ವರ ಮೇಲೆ ಹಲ್ಲೆ ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಳ್ಳೂರು ಗ್ರಾಮದಲ್ಲಿರುವ 20 ಗುಂಟೆ …
Read More »BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
ದಾವಣಗೆರೆ: ‘ವಕ್ಫ್ ಆಸ್ತಿ ವಿಚಾರವಾಗಿ ಪ್ರತ್ಯೇಕವಾಗಿ ಪಾದಯಾತ್ರೆ ಹೊರಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಪಕ್ಷದ ರಾಷ್ಟ್ರೀಯ ವರಿಷ್ಠರು ತಡೆಯಬೇಕು. ಇಲ್ಲದಿದ್ದರೆ ಅನಿವಾರ್ಯವಾಗಿ ನಾವೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಚರ್ಚಿಸಿ ಪ್ರತ್ಯೇಕ ಪಾದಯಾತ್ರೆ ನಡೆಸಬೇಕಾಗುತ್ತದೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ಶನಿವಾರ (ನ16)ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೇಣುಕಾಚಾರ್ಯ ‘ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ರಾಜಕೀಯ ಏಳಿಗೆ ಸಹಿಸದ ಕೆಲವರು ತಮ್ಮ …
Read More »ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಕಿಚ್ಚ ಸುದೀಪ್ (Kiccha Suddep) ಈ ವಾರ ತಮ್ಮದೇ ಮಾತಿನ ಶೈಲಿಯಲ್ಲಿ ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ವಾರ ನಡೆದ ಟಾಸ್ಕ್ ಹಾಗೂ ಇತರೆ ವಿಚಾರಗಳ ಕಿಚ್ಚ ಮಾತನಾಡಿದ್ದಾರೆ. ತಲೆ ತಿರುಗಿ ಬಿದ್ದಿದ್ದ ಚೈತ್ರಾ ಅವರು ಚಿಕಿತ್ಸೆ ಪಡೆದು ದೊಡ್ಮನೆಗೆ ಬಂದಿದ್ದಾರೆ. ಮನೆಗೆ ಬಂದ ಕೂಡಲೇ ಚೈತ್ರಾ ಅವರು ಹೊರಗಿನ ಕೆಲ ವಿಚಾರಗಳನ್ನು ಮಂಜು ಅವರ ಬಳಿ ಪಿಸು ದನಿಯಲ್ಲಿ ಹೇಳಿದ್ದಾರೆ. ವಿಕ್ಕಿ ಅಣ್ಣ ನಿಮಗೆ …
Read More »ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ ಹುಬ್ಬಳ್ಳಿ: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದರಿಂದ ಪಡಿತರ ಚೀಟಿಗಳನ್ನು ಕಡಿತ ಮಾಡುತ್ತಿದ್ದೆ. ದಿಢೀರ್ ಆಗಿ ಯಾಕೆ ಬಿಪಿಎಲ್ ಕಾರ್ಡ್ ಕಡಿತ ಯಾಕೆ ಎಂಬುದು ತಿಳಿಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬೇಸರ ವ್ಯಕ್ತಪಡಿಸಿದರು. ರಾಜ್ಯದ ಆಹಾರ ಮತ್ತು ನಾಗರಿಕ ಸಚಿವ ಕೆ.ಎಚ್.ಮುನಿಯಪ್ಪ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಕೇಂದ್ರ ಸರ್ಕಾರ ಪ್ರತಿಯೊಬ್ಬ ಅರ್ಹ ಪಡಿತರದಾರನಿಗೆ 5 ಕೆ.ಜಿ.ಯಷ್ಟು …
Read More »ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು ಮಾಡಲಾಗುವುದು. ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಬಾಗಲಕೋಟೆಯಲ್ಲಿ ರವಿವಾರ (ನ.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ …
Read More »ಜಮೀರ್ ಹೇಳಿದ್ದು ಸರಿಯಲ್ಲ. ಕಪ್ಪು ಬಿಳುಪು ಅಂತ ಕರೆಯೋದು ಸರಿಯಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್
ಕುಮಾರಸ್ವಾಮಿಯವರನ್ನು ಕರಿಯ ಎಂದು ಕರೆದ ಜಮೀರ್ ಅಹ್ಮದ್… ಜಮೀರ್ ಹೇಳಿದ್ದು ಸರಿಯಲ್ಲ. ಕಪ್ಪು ಬಿಳುಪು ಅಂತ ಕರೆಯೋದು ಸರಿಯಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್ ಕುಮಾರಸ್ವಾಮಿಯವರನ್ನು ಕರಿಯ ಎಂದು ಕರೆದ ಜಮೀರ್ ಅಹ್ಮದ್… ಜಮೀರ್ ಹೇಳಿದ್ದು ಸರಿಯಲ್ಲ. ಕಪ್ಪು ಬಿಳುಪು ಅಂತ ಕರೆಯೋದು ಸರಿಯಲ್ಲ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಚನ್ನಪಟ್ಟಣ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಕರಿಯ …
Read More »ಬಟ್ಟೆ ಹರಿದು ಮಹಿಳೆಯರ ಮೇಲೆ ಹಲ್ಲೆ: ದೂರು ದಾಖಲು
ಬೆಳಗಾವಿ: ಇಲ್ಲಿನ ವಡ್ಡರವಾಡಿ ಪ್ರದೇಶದಲ್ಲಿ ಮಹಿಳೆಯರಿಬ್ಬರನ್ನು ರಸ್ತೆಗೆ ಎಳೆದು ತಂದು ಬಟ್ಟೆ ಹರಿದು ಹಲ್ಲೆ ಮಾಡಿದ ಪ್ರಕರಣ ತಡವಾಗಿ ಗೊತ್ತಾಗಿದೆ. ಕಳೆದ ಸೋಮವಾರ (ನ.11) ರಾತ್ರಿ ಘಟನೆ ನಡೆದಿದೆ. ಶನಿವಾರ ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇಂದ್ರಾ ಅಷ್ಟೇಕರ್, ಹೂವಪ್ಪ ಅಷ್ಟೇಕರ್, ಮಣಿಕಂಠ ಅಷ್ಟೇಕರ್ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಆರೋಪಿಗಳು ಎಂದು ಮಾಳಮಾರುತಿ ಠಾಣೆಯಲ್ಲಿ ದೂರು ದಾಖಲಾಗಿದೆ. ವಡ್ಡರವಾಡಿಯ ಮಹಿಳೆಯೊಬ್ಬರನ್ನು ಮಹಾರಾಷ್ಟ್ರಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಅವರಿಗೆ …
Read More »ಕಬ್ಬು ಕಟಾವು ಋತು: ಮಹಾರಾಷ್ಟ್ರದಲ್ಲಿ ಮತದಾನದಿಂದ 12 ಲಕ್ಷ ಮಂದಿ ವಂಚಿತ?
ಪುಣೆ: ನವೆಂಬರ್ 20 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭೆಯ ಚುನಾವಣೆಯಲ್ಲಿ ಮರಾಠವಾಡ, ಉತ್ತರ ಮಹಾರಾಷ್ಟ್ರ ಹಾಗೂ ವಿದರ್ಭ ಭಾಗದ ಸುಮಾರು 12 ಲಕ್ಷ ಮಂದಿ ಕಬ್ಬು ಕಟಾವು ಕಾರ್ಮಿಕರು ಮತದಾನದಿಂದ ವಂಚಿತರಾಗುವ ಸಾಧ್ಯತೆ ಇದೆ. ನವೆಂಬರ್ 15 ರಿಂದ ಕಬ್ಬು ಕಟಾವು ಋತು ಆರಂಭವಾಗಲಿದ್ದು, ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಕಬ್ಬು ಕಟಾವು ಮಾಡುವ ಕಾರ್ಮಿಕರು ಪಶ್ಚಿಮ ಮಹಾರಾಷ್ಟ್ರ ಹಾಗೂ ಇತರ ರಾಜ್ಯಗಳಿಗೆ ವಲಸೆ ಹೋಗಿದ್ದಾರೆ ಎಂದು ಮಹಾರಾಷ್ಟ್ರ ಕಬ್ಬು ಕಟಾವುಗಾರರ …
Read More »ಮೀಸಲಾತಿ ಸಿಗದಿದ್ದರೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ: ಬಸನಗೌಡ ಪಾಟೀಲ ಯತ್ನಾಳ
ಮುಗಳಖೋಡ: ‘ಪಂಚಮಸಾಲಿ ಸಮುದಾಯಕ್ಕೆ ಡಿ.9ರೊಳಗೆ ಪ್ರವರ್ಗ ‘2ಎ’ ಮಿಸಲಾತಿ ಸಿಗದಿದ್ದರೆ, ವಿಧಾನಮಂಡಲ ಚಳಿಗಾಲ ಅಧಿವೇಶನ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಇಲ್ಲಿನ ಬಸವಶ್ರೀ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬುಧವಾರ ನಡೆದ ರಾಯಬಾಗ ತಾಲ್ಲೂಕಿನ ಪಂಚಮಸಾಲಿ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು, ‘ರೈತರು, ವಿದ್ಯಾರ್ಥಿಗಳು, ವಕೀಲರು ಸೇರಿದಂತೆ ಪಂಚಮಸಾಲಿ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸಲು ಸಿದ್ದರಾಗಬೇಕು’ ಎಂದು ಕರೆ ನೀಡಿದರು. …
Read More »
Laxmi News 24×7