Breaking News

ರಾಷ್ಟ್ರೀಯ

ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ‌ ಬಂಧಿತನಾಗಿದ್ದ ಮೂವರು ಆರೋಪಿಗಳಲ್ಲಿ ಒಬ್ಬ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು, ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಮುಂಬೈನ ಚೆಂಬೂರಿನ ಕಣ್ಣನ್ ಮಣಿ (36) ಗುಂಡೇಟು ತಗುಲಿದ ಆರೋಪಿ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಜ.17 ರಂದು ಉಳ್ಳಾಲದ ಕೆ.ಸಿ. ರೋಡ್​ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್​ನಲ್ಲಿ ಪಿಸ್ತೂಲ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿರುವ …

Read More »

ದಂಪತಿ ಮನೆ ತೊರೆದ ವಿಚಾರ ತಿಳಿದು ಅವರ ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಖದೀಮನೊಬ್ಬನನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಹೆಂಡತಿಯೊಂದಿಗೆ ಜಗಳವಾಡಿಕೊಂಡು ಊರಿಗೆ ಹೋಗಿದ್ದ ವ್ಯಕ್ತಿಯ ಮನೆ ದೋಚಿದ್ದ ಕಳ್ಳನನ್ನ ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ತಮಿಳುನಾಡಿನ ವೆಲ್ಲೂರು ಮೂಲದ ಸತೀಶ್ ಬಂಧಿತ ಆರೋಪಿ. ಆರೋಪಿ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಸುಮಾರು 16.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ದಂಪತಿ ಮನೆ ತೊರೆದಾಗ ಕಳ್ಳನ ಕೈಚಳಕ: ಅಕ್ಕಸಾಲಿಗರಾಗಿದ್ದ ಮನೆ ಮಾಲೀಕ ಮನೆಯಲ್ಲಿ ಚಿನ್ನಾಭರಣಗಳ …

Read More »

ಸಾರಿಗೆ ಇಲಾಖೆಯ ವಾಹನವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಯ್ದಿದ್ದಾರೆ.

ಗಂಗಾವತಿ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ಇಲ್ಲಿನ ನ್ಯಾಯಾಲಯದ ಸಿಬ್ಬಂದಿ, ಮಂಗಳವಾರ ಸಾರಿಗೆ ಇಲಾಖೆಯ ವಾಹನವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಯ್ದಿದ್ದಾರೆ. ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ವಕೀಲರಾದ ಗೋವಿಂದರಾಜು, ಕವಿತಾ ನೇತೃತ್ವದಲ್ಲಿ ಆಗಮಿಸಿದ ನ್ಯಾಯಾಲಯದ ಸಿಬ್ಬಂದಿಗಳಾದ ಯಸೂಫ್ ಮಿಯಾ, ರಮೇಶ, ಉಸ್ಮಾನ್, ಸೈಯದ್ಖಾದರ್, ವೆಂಕಟೇಶ ಇತರರು, ಕೊಪ್ಪಳ ಘಟಕಕ್ಕೆ ಸೇರಿದ ವಾಹನವನ್ನು ಜಪ್ತಿ ಮಾಡಿಕೊಂಡು ನ್ಯಾಯಾಲಯದ …

Read More »

ರಸ್ತೆ ಸುರಕ್ಷತಾ ಬಗ್ಗೆ ಜನರಲ್ಲಿ ಅರಿವು ಮೂಡಿಸಿದ ನೇಸರ್ಗಿ ನಯರಾ ಪೆಟ್ರೋಲಿಯಂ ಹಾಗೂ ನೇಸರ್ಗಿ ಪೊಲೀಸ್ ಅಧಿಕಾರಿ ಸಿಪಿಐ ರಾಘವೇಂದ್ರ ಹವಾಲ್ದಾರ್

ರಸ್ತೆ ಸುರಕ್ಷತಾ ಬಗ್ಗೆ ಜನರಲ್ಲಿ ಅರಿವು ಮೂಡಿಸಿದ ನೇಸರ್ಗಿ ನಯರಾ ಪೆಟ್ರೋಲಿಯಂ ಹಾಗೂ ನೇಸರ್ಗಿ ಪೊಲೀಸ್ ಅಧಿಕಾರಿ ಸಿಪಿಐ ರಾಘವೇಂದ್ರ ಹವಾಲ್ದಾರ್ ಬೈಲಹೊಂಗಲ ತಾಲೂಕಿನ ನೇಸರ್ಗಿ ರಸ್ತೆ ಪಕ್ಕದಲ್ಲಿ ಇರುವಂತ ನಯರಾ ಪೆಟ್ರೋಲಿಯಂ ಹಾಗೂ ಪೋಲಿಸ್ ಅಧಿಕಾರಿ ಸಿಪಿಐ ರಾಘವೇಂದ್ರ ಹವಾಲ್ದಾರ್ ಸಬಾಗಿತ್ವದಲ್ಲಿ ರಸ್ತೆ ಸುರಕ್ಷತಾ ಮತ್ತು ಜಾಗೃತಿಯ ಬಗ್ಗೆ ಅರಿವು ಜನರಲ್ಲಿ ರಸ್ತೆ ಜಾಗೃತಿಯ ಮೂಡಿಸಲು ನೇಸರ್ಗಿ ನಯರಾ ಪೆಟ್ರೋಲಿಯಂ ಮಾಲೀಕರಾದ ಬಸವರಾಜ ಯಲ್ಲಪ್ಪ ಗುಜನಟ್ಟಿ ಮತ್ತು ನೇಸರ್ಗಿ …

Read More »

ಸಿದ್ಧಗಂಗಾ ಶ್ರೀ ಅವರನ್ನು ರಾಷ್ಟ್ರೀಯ ಸಂತ ಎಂದು ಘೋಷಣೆ ಮಾಡಲಿ: ಜಯಮೃತ್ಯುಂಜಯ ಸ್ವಾಮೀಜಿ

ದಾವಣಗೆರೆ, ಜನವರಿ 21: ಸಿದ್ಧಗಂಗಾ ಮಠದ ಶಿವೈಕ್ಯ ಡಾ. ಶಿವಕುಮಾರ ಸ್ವಾಮೀಜಿ (Shivakumara Swami) ಅವರನ್ನು ರಾಷ್ಟ್ರೀಯ ಸಂತ ಎಂದು ಘೋಷಣೆ ಮಾಡಲಿ ಎಂದು ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಜಯಮೃತ್ಯುಂಜಯ ಸ್ವಾಮೀಜಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ರಾಷ್ಟ್ರಪತಿ ಗಾಂಧೀಜಿ, ಸರೋಜಿನಿ ನಾಯ್ಡು ಭಾರತದ ಕೋಗಿಲೆ ಎಂಬ ರೀತಿಯಲ್ಲಿ ಸಿದ್ಧಗಂಗಾ ಶ್ರೀ ರಾಷ್ಟ್ರೀಯ ಸಂತ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಲಿ ಎಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಯಮೃತ್ಯುಂಜಯ ಸ್ವಾಮೀಜಿ, ನಡೆದಾಡುವ ದೇವರು, ಕಾಯಕ …

Read More »

ದರ್ಶನ್ ಬಳಿಯಿದ್ದ ಗನ್ ಸೀಜ್ ಮಾಡಿದ ಆರ್.ಆರ್.ನಗರ ಪೊಲೀಸರು

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದು ಹೊರಗಿರುವ ನಟ ದರ್ಶನ್ ಬಳಿಯಿರುವ ಗನ್ ಅನ್ನ ಆರ್.ಆರ್.ನಗರ ಪೊಲೀಸರು ಸೀಜ್ ಮಾಡಿದ್ದಾರೆ. ಗನ್ ಪರವಾನಗಿ ರದ್ದು ಹಿನ್ನೆಲೆಯಲ್ಲಿ ಪೊಲೀಸರು, ದರ್ಶನ್ ನಿವಾಸಕ್ಕೆ ತೆರಳಿ ಗನ್ ವಾಪಸ್ ಪಡೆದುಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಹಿನ್ನೆಲೆಯಲ್ಲಿ ಪ್ರಕರಣದ ಎರಡನೇ ಆರೋಪಿಯಾಗಿರುವ ದರ್ಶನ್ ಬಳಿಯಿದ್ದ ಪರವಾನಗಿ ಗನ್ ರದ್ದು ಸಂಬಂಧ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಇದಕ್ಕೆ ಉತ್ತರಿಸಿದ ದರ್ಶನ್, ನಾನೊಬ್ಬ ನಟನಾಗಿದ್ದು ತನಗೆ ಅಸಂಖ್ಯಾತ …

Read More »

ದಿನಗೂಲಿ ಕಾರ್ಮಿಕರ ಶೆಡ್‌ಗಳ ನೆಲಸಮ; ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್

ಬೆಂಗಳೂರು: ಯಾವುದೇ ತಿಳಿವಳಿಕೆ ನೀಡದೇ ದಿನಗೂಲಿ ನೌಕರರ ಶೆಡ್‌ಗಳನ್ನ ನೆಲಸಮಗೊಳಿಸಿ ಜಾತಿ ನಿಂದನೆ ಹಾಗೂ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇಲೆ ಶಾಸಕ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಸೋಮವಾರ (ಜ.20) ಬೆಳಗ್ಗೆ 11ಕ್ಕೆ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ದಿನಗೂಲಿ ಕಾರ್ಮಿಕರ ಮನೆಗಳನ್ನು ನೆಲಸಮ ಮಾಡಿರುವ ಆರೋಪ ಮುನಿರತ್ನ ಅವರ ವಿರುದ್ಧ ಕೇಳಿ ಬಂದಿದ್ದು, ಶಾಸಕರು ಸೇರಿದಂತೆ ಏಳು ಜನರ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ. ಪೀಣ್ಯ …

Read More »

ಜಿಮ್ಸ್ ನಿರ್ದೇಶಕ, ಅಧೀಕ್ಷಕಿ ನಡುವೆ ಅಧಿಕಾರಕ್ಕಾಗಿ ಪೈಟ್

ಗದಗ, ಜನವರಿ 21: ಜಿಮ್ಸ್ ಆಸ್ಪತ್ರೆ ಗದಗ ಜಿಲ್ಲೆ ಅಷ್ಟೇ ಅಲ್ಲ ಹಾವೇರಿ, ಕೊಪ್ಪಳ, ಬಾಗಲಕೋಟೆಯ ಗಡಿ ಭಾಗದ ಸಾವಿರಾರು ರೋಗಿಗಳ ಚಿಕಿತ್ಸಾ ತಾಣ. ಆದರೆ, ಇತ್ತೀಚಿಗೆ ಈ ಆಸ್ಪತ್ರೆಯಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಆರೋಪ ಕೇಳಿಬಂದಿದೆ. ಯಾಕಂದರೆ, ಮುಖ್ಯ ವೈದ್ಯಾಧಿಕಾರಿಗಳ ಕಿತ್ತಾಟದಿಂದ ಇಡೀ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಹಳಿ ತಪ್ಪಿದ ರೈಲು ಬಂಡಿಯಂತಾಗಿದೆ. ಜಿಮ್ಸ್ ನಿರ್ದೇಶಕ ಬಸವರಾಜ್ ಬೊಮ್ಮನಹಳ್ಳಿ ಹಾಗೂ ಜಿಮ್ಸ್ ಅಧೀಕ್ಷಕಿ ರೇಖಾ ಸೋನಾವನೆ ನಡುವೆ ಕಳೆದ ಎರಡು …

Read More »

ವಿಜಯಪುರದಲ್ಲಿ ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ಹಲ್ಲೆ, ಐವರು ಆರೋಪಿಗಳ ಬಂಧನ

ವಿಜಯಪುರ: ಇಟ್ಟಿಗೆ ಭಟ್ಟಿಯ ಮಾಲೀಕ ಹಾಗೂ ಇತರ ಮೂವರು ಸೇರಿಕೊಂಡು ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಹೊರಭಾಗದ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ. ಈ ಸಂಬಂಧ ಖೇಮು ರಾಠೋಡ, ಸಚಿನ ಮಾನವರ, ವಿಶಾಲ ಜುಮನಾಳ, ರೋಹನ್ ಗಾಂಧಿನಗರ ಮತ್ತು ಕನಕಮೂರ್ತಿ ಗೊಂದಳಿ ಎಂಬ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಗಡ ಹಣ ಪಡೆದಿದ್ದರ ಕೆಲಸ ಮಾಡುವ ವಿಚಾರದ ಕುರಿತು ಮೂವರು ಕಾರ್ಮಿಕರ ಕಾಲುಗಳನ್ನು ಕಟ್ಟಿ ಪೈಪ್​ಗಳಿಂದ …

Read More »

ಹುಣಶ್ಯಾಳ ಪಿಜಿ ಇಂಚರ ತೋಟದ ಶಾಲೆಯ ಗಣಿತ ಪ್ರಯೋಗಾಲಯಕ್ಕೆ ಮನಸೋತ ಶಾಸಕ ಬಾಲಚಂದ್ರ ಜಾರಕಿಹೊಳಿ

ಶಾಲೆಯ ಶಿಕ್ಷಕರಿಗೆ ಶಹಬ್ಬಾಸ್ಗಿರಿ ಕೊಟ್ಟ ಶಾಸಕರು ಮೂಡಲಗಿ- ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲದೇ ಶೂನ್ಯ ಬಂಡವಾಳದೊಂದಿಗೆ ಆರಂಭಿಸಲಾದ ಹುಣಶ್ಯಾಳ ಪಿಜಿ ಗ್ರಾಮದ ಇಂಚಲ ತೋಟದ ಶಾಲೆಯ ಕುರಿತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.   ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿರುವ ಇಂಚಲ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಶ್ರೀನಿವಾಸ ರಾಮಾನುಜನ ಗಣಿತ ಪ್ರಯೋಗಾಲಯದ ಕುರಿತು ಮೆಚ್ಚುಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ …

Read More »