Breaking News

ರಾಷ್ಟ್ರೀಯ

ಡಿಸೆಂಬರ್ 5ರಂದು ಬಂದ್.. ಬಂದ್.. ಬಂದ್.. ಕರ್ನಾಟಕದ, ಕನ್ನಡದ, ಕನ್ನಡಿಗರ ಹಿತರಕ್ಷಣೆಗೆ ನಾವು ಬದ್ಧ.

ಬೆಂಗಳೂರು: ಡಿಸೆಂಬರ್ 5ರಂದು ಬಂದ್.. ಬಂದ್.. ಬಂದ್.. ಕರ್ನಾಟಕದ, ಕನ್ನಡದ, ಕನ್ನಡಿಗರ ಹಿತರಕ್ಷಣೆಗೆ ನಾವು ಬದ್ಧ. ಸರ್ಕಾರದ ಯಾವುದೇ ಬೆದರಿಕೆಗೆ ನಾವು ಬಗ್ಗಲ್ಲ. ಸರ್ಕಾರ ನಮ್ಮ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದ್ರೂ ನಾವು ಸುಮ್ಮನಿರಲ್ಲ. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧವಿದೆ. ಹೀಗಾಗಿ ನಾವು ಬಂದ್ ಮಾಡೇ ಮಾಡ್ತೀವಿ ಅಂತಾ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದು, ನಾಳೆ ಕರ್ನಾಟಕ ಕಂಪ್ಲೀಟ್ ಬಂದ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೆ …

Read More »

ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. 150 ಸ್ಥಾನಗಳ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಮತ ಎಣಿಕೆಯಲ್ಲಿ ಬಿಜೆಪಿ 73 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. ಇದೇ ವೇಳೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) 28 ಸೀಟುಗಳಲ್ಲಿ ಮತ್ತು ಕಾಂಗ್ರೆಸ್ 2 ವಾರ್ಡ್ ನಲ್ಲಿ ಮುನ್ನಡೆಯಲ್ಲಿದೆ @10.06 AM. ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್​ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದ್ರೆ ಮ್ಯಾಜಿಕ್ ನಂಬರ್ 76 ಅಗತ್ಯವಿದೆ. 2023ರ …

Read More »

ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ.

ಧಾರವಾಡ: ಜಿಲ್ಲಾ ಪಂಜಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಹಿನ್ನೆಲೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ. ಹುಟ್ಟುಹಬ್ಬವನ್ನು ಕೂಡ ಜೈಲಿನಲ್ಲಿಯೇ ಆಚರಿಸಿಕೊಂಡಿದ್ದ ವಿನಯ್, ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 24 ವರ್ಷ ಕಳೆಯಿತು. 2016 ಜೂನ್ 15ರಂದು ನಡೆದ ಹತ್ಯೆಗೆ ಸಂಬಂಧಿಸಿ ಇದೇ ನವೆಂಬರ್ 5 ರಂದು ಬಂಧನಕ್ಕೊಳಗಾಗಿರೊ ವಿನಯ್​ಗೆ ಸ್ನೇಹಿತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಿವಾಹ ವಾರ್ಷಿಕೋತ್ಸವದ ಶುಭ ಕೋರಿದ್ದಾರೆ. ನವೆಂಬರ್ …

Read More »

ಬಿ.ಸಿ. ಪಾಟೀಲ್‍ರಿಂದ ರೈತ ಸಮುದಾಯಕ್ಕೆ ಅವಮಾನ: ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೈತರ ಕುರಿತಾಗಿ ಸಚಿವ ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕುತೋಚದಂತಾಗದೆ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತರು ಹೇಡಿಯಲ್ಲ ಎಂದು ತಿಳಿಸಿದ್ದಾರೆ. ರೈತ ನೆಲವನ್ನೆ ನಂಬಿ ಬದುಕುವ ಕಷ್ಟಜೀವಿ. ಅಂತಹ ರೈತ …

Read More »

ಕರವೇಗೆ ‘ಕಳ್ಳರ ರಕ್ಷಣಾ ವೇದಿಕೆ’ ಎಂದ ಶಾಸಕ ಬಸನಗೌಡ ಪಾಟೀಲ್

ವಿಜಯಪುರ: ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ಯಾರೂ ನಕಲಿ ಕನ್ನಡ ಪರ ಸಂಘಟನೆಗಳಿಗೆ ಹೆದರಬೇಡಿ. ಡಿ. 5 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ವಿಫಲಗೊಳಿಸಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಕರವೇ ವಿರುದ್ಧ ಮತ್ತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ. ಡಿ. 5 ರ ಕರ್ನಾಟಕ ಬಂದ್ ವಿರೋಧಿಸಿ ನಡೆದ ನಾನಾ ಸಂಘಟನೆಗಳು ಮತ್ತು ಸಮಾಜಗಳ ಸಭೆಯಲ್ಲಿ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ …

Read More »

ಲಿಂಗಾಯತ ಸಂಸ್ಕೃತಿ, ಗುಣ ಉಳಿಸಿದವರು ಪಂಚಮಸಾಲಿ ಲಿಂಗಾಯತರು : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಗಳು

ಗೋಕಾಕ : ಎಲ್ಲರನ್ನು ಕಟ್ಟಿಕೊಂಡು ಹೊಗುತ್ತಿದ್ದ ಸಮಾಜ ಇವತ್ತು ಸೌಲಬ್ಯ ವಂಚಿರಾಗಿದ್ದೆವೆ, ಅದನ್ನುಪಡೆಯುವಗೊಸ್ಕರ ನಾವೆಲ್ಲರೂ ಹಕ್ಕಿಗಾಗಿ ಹೊರಾಡಬೇಕಾಗಿದೆ, ಎಂದು ಗೋಕಾಕದ ಗಣಪತಿ ದೇವಸ್ಥಾನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲೂಕಾ ಘಟಕ, ಇದರ ಪದಾದಿಕಾರಿಗಳ ನೇಮಕ ಮತ್ತು ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಬಟ್ಟೆ ವಿತರಿಸಿ ಮಾತನಾಡಿದ ಕೂಡಲಸಂಗಮದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಮಾತನಾಡಿ ಸ್ವಾಮಿಜಿಯಿಂದ ಘಟಕಕ್ಕೆ ಹೆಸರು ಬರಬೇಕು, ಇತಿ ಮಿತಿಯಲ್ಲಿದ್ದರೆ ಮಾತ್ರ ಸಮಾಜಕ್ಕೆ …

Read More »

ಗೋಕಾಕ ತಾಲ್ಲೂಕಿನ ಶಿಂಡಿಕುರಬೇಟ ಗ್ರಾಮದಲ್ಲಿ ಕನಕದಾಸರ ಜಯಂತಿಯನ್ನು ಆಚರಣೆ ಮಾಡಲಾಯಿತು.

ಇಂದು ಶಿಂಡಿಕುರಬೇಟನಲ್ಲಿ ಸಂತ ಶೇಷ್ಟ ಕನಕದಾಸರ ಜಯಂತಿಯನ್ನು ರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆ ಶಿಂದಿಕುರಬೇಟ ಕನಕದಾಸರ ಜಯಂತ್ಯುತ್ಸವ ಆಚರಣೆ ಈ ಸಂದರ್ಭ ದಲ್ಲಿ ಕರವೇ ಗಜ ಸೇನೆಯ ತಾಲೂಕಾ ಅಧ್ಯಕ್ಷ ರಾಜು ಸಿದ್ದಪ್ಪ ನಿಲಜಗಿ ಗ್ರಾಮ ಘಟಕದ ಅಧ್ಯಕ್ಷ ಭೀರಪ್ಪ ಜೋತೆನ್ನವರ ಮಲ್ಲಿಕಾರ್ಜುನ ಗುಜನಟ್ಟಿ ಆನಂದ ಪತ್ತಾರ ಕಾಡೇಶ ತೇಳಗೇರಿ ಮಾರ್ಕಂಡೇಯ ಮಹಿಮಗೋಳ ಸಂಗೀತಾ ಕದಂ ಹಣಮಂತ ಮಾನೆ ಬಾಳಪ್ಪಾ ಮಾಯನ್ನವರ ವಿಠ್ಠಲ ಕಾಶಪ್ಪಗೋಳ ಅಜೀತ ಪೂಜಾರಿ ಲಗಮಣ್ಣಾ …

Read More »

ಮೊದಲ ರಾತ್ರಿಯೇ ಕಂಠ ಪೂರ್ತಿ ಕುಡಿದುಬಂದ ಪತಿ ಮದುವೆಯಾದ ಒಂದೇ ತಿಂಗಳಲ್ಲಿ ಮುರಿದುಬಿತ್ತು ದಾಂಪತ್ಯ ಜೀವನ

    ಬೆಂಗಳೂರು: ಪತಿ ಮಹಾಶಯ ಫಸ್ಟ್ ನೈಟ್ ದಿನವೇ ಕಂಠಪೂರ್ತಿ ಕುಡಿದು ಬಂದು ಥಳಿಸಿದ್ದೂ ಅಲ್ಲದೇ ಅದಾಗಲೇ ಒಂದು ಮದೆಯಾಗಿದ್ದ ವಿಷಯವನ್ನೂ ಮುಚ್ಚಿಟ್ಟು ವಂಚಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಕ್ಟೋಬರ್ 29ರಂದು ಭರತ್ ಎಂಬಾತನನ್ನು ವಿವಾಹವಾಗಿದ್ದ ಯುವತಿ, ಇದೀಗ ಪತಿಯ ವಿರುದ್ಧ ದೂರು ದಾಖಲಿಸಿದ್ದಾಳೆ. ಫಸ್ಟ್ ನೈಟ್ ದಿನವೇ ಕುಡಿದು ಬಂದ ಪತಿಯನ್ನು ಕಂಡು ಶಾಕ್ ಆದ ಯುವತಿ ಫಸ್ಟ್ …

Read More »

ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ

ಚಿಕ್ಕಮಗಳೂರು:ಗ್ರಾಮ ಪಂಚಾಯತ್‌ ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಆನ್‌ಲೈನ್‌ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ಕೂಡ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರೀಕ ಹಿತರಕ್ಷಣಾ ವೇದಿಕೆ ಹಾಗೂ ಸರ್ವಜನಿಕರು ಸೂಚಿಸಿದ್ದಾರೆ.ಶತಮಾನಗಳ ಬದುಕೆ ಬೀದಿಗೆ ಬೀಳುವಾಗ ಚುನಾವಣೆ ಬೇಕೇ …

Read More »

ಬಿಜೆಪಿ ಸೇರಿದ 17 ಶಾಸಕರೂ ಸಚಿವರಾಗಲು ಅರ್ಹರು: ನಳೀನ್ ಕುಮಾರ್ ಕಟೀಲ್

ಬೆಂಗಳೂರು : ಬಿಜೆಪಿಯಲ್ಲಿ ಮೂಲ, ವಲಸಿಗ ಬಿಜೆಪಿಗರು ಎಂಬುದು ಇಲ್ಲ. ನಾವೆಲ್ಲರೂ ಒಂದೇ ಯಾಗಿದ್ದೇವೆ. ಬಿಜೆಪಿ ಸೇರಿದ 17 ಶಾಸಕರೂ ಸಚಿವರಾಗಲು ಅರ್ಹರು. ಸಿಎಂ ಹಾಗೂ ಬಿಜೆಪಿ ವರಿಷ್ಠರ ಜೊತೆಗೆ ಚರ್ಚಿಸಿ ಸಚಿವ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.   ಬೆಂಗಳೂರಿನ ಆನೇಕಲ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲ, ಪುನರ್ ರಚನೆಯಾಗಲಿದೆ ಎಂಬ ಸುಳಿವು ನೀಡಿದರು. ರಾಜ್ಯದಲ್ಲಿ ಮೂಲ …

Read More »