Breaking News

ರಾಷ್ಟ್ರೀಯ

ಕುರ್ಚಿ ಬಿಟ್ಟು ಎದ್ದೇಳಿ, ರೈತರ ಮೇಲೆ ಟಿಯರ್ ಗ್ಯಾಸ್ ಮತ್ತು ಅವರ ಮೇಲೆ ದಬ್ಬಾಳಿಕೆ ನಡೆಸುವುದನ್ನು ಬಿಡಿ: ರಾಹುಲ್ ಗಾಂಧಿ,

ಹೊಸದಿಲ್ಲಿ:   ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅವರ ಹಕ್ಕುಗಳನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅನ್ನದಾತರು ರಸ್ತೆಯಲ್ಲಿ ಕುಳಿತಿದ್ದರೇ ಟಿವಿಯಲ್ಲಿ ಭಾಷಣಗಳು ಬರುತ್ತಿವೆ, ಶ್ರಮಜೀವಿಗಳ ಋಣದಲ್ಲಿದ್ದೇವೆ, ಅವರಿಗೆ ನ್ಯಾಯ ಒದಗಿಸುವ ಮೂಲಕ ಅವರ ಋಣ ತೀರಿಸಬೇಕಿದೆ. ರೈತರ ಶ್ರಮಕ್ಕೆ ಎಲ್ಲರೂ ಆಭಾರಿಯಾಗಿದ್ದಾರೆ, ಹೀಗಾಗಿ ಅವರಿಗೆ ನ್ಯಾಯ ಒದಗಿಸುವ ಮೂಲಕ ನಾವು ಅವರು ಋಣವನ್ನು ತೀರಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಕುರ್ಚಿ ಬಿಟ್ಟು …

Read More »

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ವಿಶೇಷ ಪೂಜೆ

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ ಹಿಂಪಡೆಯಬೇಕು. ಕೃಷಿಕರ ಹೋರಾಟ ಯಶಸ್ವಿಯಾಗಬೇಕು ಎಂಬ ಉದ್ದೇಶದಿಂದ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ ಎಂದು ಗುರುದ್ವಾರ ವ್ಯವಸ್ಥಪನಾ ಮಂಡಳಿ ಮಂಜಿಂದರ್ ಸಿಂಗ್ ತಿಳಿಸಿದ್ದಾರೆ. ಹೋರಾಟ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳು ಹಾಗೂ ಭಯೋತ್ಪಾದಕರಿಗೆ ಹೋಲಿಸಿರುವ ಬಿಜೆಪಿ ಮುಖಂಡರ ಹೇಳಿಕೆಗೆ ತಿರುಗೇಟು ನೀಡಿರುವ …

Read More »

ದೇವಸ್ಥಾನ ಜಮೀನು ವಿವಾದ: ಬೆಳಗಾವಿಯಲ್ಲಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಸ್ಥಿತಿ ಚಿಂತಾಜನಕ

ಬೆಳಗಾವಿ : ತಾಲ್ಲೂಕಿನ ಗೌಂಡವಾಡ ಗ್ರಾಮದ ಕಾಳಬೈರವನಾಥ್ ದೇವಸ್ಥಾನದ ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಐದು ಜನರ ಗುಂಪು ಓರ್ವ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಗೌಂಡವಾಡ ಗ್ರಾಮದ ಸತೀಶ್ ಪಾಟೀಲ(34) ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಚಿಂತಾಜನಕವಾಗಿದೆ. ನಿನ್ನೆ ರಾತ್ರಿ 9.30 ರ ಸುಮಾರಿಗೆ ಬೆಳಗಾವಿ ನಗರದ ಮರಾಠ ಮಂಡಳ ಕಾಲೇಜ್ ಸಮೀಪವಿರುವ ತಮ್ಮ ಅಂಗಡಿಯನ್ನು ಬಂದ್ ಮಾಡಿಕೊಂಡು ಮನೆಗೆ …

Read More »

ರಾಜಕಾರಣದಲ್ಲಿ ಯಾವ ಶಾಪವೂ ತಟ್ಟುವುದಿಲ್ಲ: ಸಾರಾ ಮಹೇಶ್ ಗೆ ಸಚಿವ ರಮೇಶ್ ತಿರುಗೇಟು

ಬೆಳಗಾವಿ : ಎಚ್.ವಿಶ್ವನಾಥ್ ಅವರಿಗೆ ಚಾಮುಂಡೇಶ್ವರಿ ಶಾಪ ತಟ್ಟಿದೆ ಎಂದು ಸಾ.ರಾ ಮಹೇಶ್ ಹೇಳಿಕೆಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ ತಿರುಗೇಟು ನೀಡಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾವುದೇ ಶಾಪ ತಟ್ಟುವುದಿಲ್ಲ. ಎಚ್.ವಿಶ್ವನಾಥ್ ಅವರ ಹೈಕೋರ್ಟ್ ಆದೇಶದ ಕುರಿತು ಸುಪ್ರೀಂ ಕೋರ್ಟ್ ಅಪೀಲು ಸಲ್ಲಿಸುತ್ತೇವೆ ಎಂದಿದ್ದಾರೆ. ವಿಶ್ವನಾಥ್ ಅವರ ಜೊತೆಗೆ ನೂರಕ್ಕೆ ನೂರರಷ್ಟು 17 ಜನರು ಜೊತೆಗಿದ್ದೇವೆ. ಸುಪ್ರೀಂ ಕೋರ್ಟ್ ಬಾಗಿಲು ತಟ್ಟುತ್ತೇವೆ ಎನ್ನುವ …

Read More »

ಭೀಕರ ಅಪಘಾತ : ಸ್ಥಳದಲ್ಲೇ ಬೈಕ್ ಸವಾರಿಬ್ಬರು ಸಾವು

ದಕ್ಷಿಣ ಕನ್ನಡ : ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕೃಷ್ಣ ಪ್ರಸಾದ್ ಶೆಟ್ಟಿ, ಜಯರಾಮ್ ಗೌಡ ಮೃತ ದುರ್ದೈವಿಗಳು. ದ್ವಿಚಕ್ರ ವಾಹನದ ಮೇಲೆ ಇಬ್ಬರು ಮನೆಗೆ ತೆರಳುತ್ತಿದ್ದರು. ಹಿಂದಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದರು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದರು. ಸ್ಥಳೀಯರು ಮಾಹಿತಿ ನೀಡಿದ ಆದಾರದ ಮೇಲೆ ಕಾರ್ಯಾಚರಣೆ ನಡೆಸಿ ಪೊಲೀಸರು …

Read More »

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ

  ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಮಧ್ಯಾಹ್ನ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಬಿಜೆಪಿ , ಕಾಂಗ್ರೆಸ್ ಮತ್ತು ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿವೆ. ಗ್ರಾಮ ಪಂಚಾಯಿತಿ ಗೆಲುವಿಗೆ ತಂತ್ರ ಪ್ರತಿತಂತ್ರಗಳನ್ನು ರೂಪಿಸುವ ಮೂಲಕ ಮತ್ತೊಂದು ಮತ ಸಮರಕ್ಕೆ ಇಳಿಯಲಿವೆ. ಬಿಜೆಪಿ ಈಗಾಗಲೇ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದೆ. ಜೆಡಿಎಸ್ ಕೂಡ ಪ್ರಮುಖರ ಸಭೆ ನಡೆಸಿ ತೊಡೆ ತಟ್ಟಲು ರೆಡಿಯಾಗಿದೆ. …

Read More »

ಅರಬಿ ಸಮುದ್ರದಲ್ಲಿ ಪತನಗೊಂಡ ಮಿಗ್‌ ಅವಶೇಷ ಪತ್ತೆ : ಪೈಲಟ್ ಸುಳಿವು ಇನ್ನೂ ಸಿಕ್ಕಿಲ್ಲ

ಹೊಸದಿಲ್ಲಿ: ಅರಬಿ ಸಮುದ್ರದಲ್ಲಿ ಗುರುವಾರ ಪತನಗೊಂಡಿದ್ದ ಭಾರತೀಯ ವಾಯುಸೇನೆಯ ಮಿಗ್‌-29 ಕೆ ಯುದ್ಧವಿಮಾನದ ಕೆಲವು ಭಾಗಗಳು ಪತ್ತೆಯಾಗಿವೆ. ಆದರೆ ನಾಪತ್ತೆಯಾಗಿರುವ ಪೈಲಟ್‌ನ ಸುಳಿವು ಸಿಕ್ಕಿಲ್ಲ. ಗುರುವಾರ ಸಂಜೆ ಐಎನ್‌ಎಸ್‌ ವಿಕ್ರಮಾದಿತ್ಯ ಸಮರ ನೌಕೆಯಿಂದ ಹಾರಾಟ ನಡೆಸುವ ವೇಳೆ ಈ ಮಿಗ್‌ ವಿಮಾನ ಪತನಗೊಂಡಿತ್ತು. ರವಿವಾರ ಅದರ ಟರ್ಬೋ ಚಾರ್ಜರ್‌, ಇಂಧನ ಟ್ಯಾಂಕ್‌ ಮತ್ತು ಕೆಲವು ಭಾಗಗಳನ್ನು ನೌಕಾಪಡೆಯ ಶೋಧ ತಂಡ ಪತ್ತೆ ಹಚ್ಚಿದೆ. ಇಬ್ಬರು ಪೈಲಟ್‌ಗಳ ಪೈಕಿ ಓರ್ವರನ್ನು ಗುರುವಾರವೇ …

Read More »

ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ

ತುಮಕೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ವಿವಿಗಳಲ್ಲಿ ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಕೃಷಿ, ತೋಟಗಾರಿಕೆ, ಪಶುಪಾಲನಾ ಪದವಿಯಲ್ಲಿ ಮೀಸಲಾತಿ ಹೆಚ್ಚಳವಾಗಲಿದ್ದು, ಇದರಲ್ಲಿ ದೊಡ್ಡ ಮತ್ತು ಸಣ್ಣ ರೈತರ ಮಕ್ಕಳು ಎಂಬ ಬೇಧ ಮಾಡದೇ ಎಲ್ಲರಿಗೂ ಸೌಲಭ್ಯ ಕಲ್ಪಿಸಲು …

Read More »

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರವು ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಗ್ರಾಮಗಳ ಸಶಕ್ತಿಕರಣಕ್ಕೆ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೂ 1.5 ಕೋಟಿ ರೂ. ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೂ 1.5 ಕೋಟಿ ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದ್ದು, ಅದರ ಜೊತೆಗೆ ಗ್ರಾಮಪಂಚಾಯಿತಳ ಅಭಿವೃದ್ಧಿಗೆ 31 ಸಾವಿರ ಕೋಟಿ ರೂ. ಹಣ …

Read More »

ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿ.1 ರಂದು ಶಿವಸೇನೆಗೆ ಸೇರ್ಪಡೆ

ಮುಂಬಯಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿಸಂಬರ್ 1 ರಂದು ಶಿವಸೇನೆಗೆ ಸೇರಲಿದ್ದಾರೆ. ನಟಿ ಊರ್ಮಿಳಾ ಮಂಗಳವಾರ ಶಿವಸೇನೆ ಪಕ್ಷ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಊರ್ಮಿಳಾ ಸೋತಿದ್ದರು. ನಂತರ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯದಿಂದ ಬೇಸತ್ತಿದ್ದ ಊರ್ಮಿಳಾ ಪಕ್ಷ ತೊರೆದಿದ್ದರು. ಊರ್ಮಿಳಾ ಹೆಸರನ್ನು …

Read More »