ನವದೆಹಲಿ, : ಕೊರೆಯುವ ಚಳಿಯ ನಡುವೆಯೇ ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ರೈತರು ಮುಂದುವರೆಸಿದ್ದಾರೆ. ದೆಹಲಿ-ಹರ್ಯಾಣದ ಸಿಂಘು ಗಡಿಯಲ್ಲಿ ಪೊಲೀಸರು ರೈತರನ್ನು ತಡೆದಿದ್ದಾರೆ. ರೈತರು ದೆಹಲಿಯ ಬುರಾಡಿ ಮೈದಾನಕ್ಕೆ ಬಂದರೆ ಅವರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಆದರೆ, ಪ್ರತಿಭಟನೆ ನಡೆಸುತ್ತಿರುವ ರೈತರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಬೆಳಗ್ಗೆ 11ಗಂಟೆಗೆ ಮುಂದಿನ ಹೋರಾಟದ ಬಗ್ಗೆ ರೈತರು ಸಭೆ ನಡೆಸಲಿದ್ದಾರೆ. ದೆಹಲಿ …
Read More »ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ.
ನವದೆಹಲಿ : ದೀಪಾವಳಿ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ನಗರಕ್ಕೆ ಹಲವು ಅಭಿವೃದ್ಧಿ ಯೋಜನೆಗಳನ್ನು ಅವರು ಭೇಟಿ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ. ಇಂದು ಮಧ್ಯಾಹ್ನ 2.10ಕ್ಕೆ ನಗರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ರಾತ್ರಿ 8.50ರ ವರೆಗೂ ದೇವ್ ದೀಪಾವಳಿ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಪಟ್ಟಿಯ ಪ್ರಕಾರ, ಪಿಎಂ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಸುಮಾರು ಏಳು ಗಂಟೆಗಳ ಕಾಲ ಕಳೆಯಲಿದ್ದು, ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ ಘಾಟ್ …
Read More »ನೈಜೀರಿಯಾದ ಉತ್ತರ ಬೊರ್ನೊದ ಗದ್ದೆಗಳಲ್ಲಿ ಭಕ್ತ ಕಟಾವು ಮಾಡುತ್ತಿದ್ದ 40 ರೈತರು ಹತ್ತೆ
ಮೈದ್ಗುರಿ: ನೈಜೀರಿಯಾದ ಉತ್ತರ ಬೊರ್ನೊದ ಗದ್ದೆಗಳಲ್ಲಿ ಭಕ್ತ ಕಟಾವು ಮಾಡುತ್ತಿದ್ದ 40 ರೈತರು ಮತ್ತು ಮೀನುಗಾರರನ್ನು ಶಂಕಿತ ಇಸ್ಲಾಮಿಕ್ ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ. ಹಂತಕರು ಇಸ್ಲಾಮಿಕ್ ಉಗ್ರಗಾಮಿ ತಂಡದ ಬೊಕೊ ಹರಮ್ ಗುಂಪಿಗೆ ಸೇರಿದವರಾಗಿದ್ದಾರೆ. ಉತ್ತರ ಬೊರ್ನೊ ರಾಜ್ಯದ ಗರಿನ್-ಕ್ವಾಶೆಬೆಯ ಗದ್ದೆಯಲ್ಲಿ ರೈತರು ಭಕ್ತ ಕಟಾವು ಮಾಡುತ್ತಿದ್ದರು. ಈ ವೇಳೆ ಅವರನ್ನು ಸುತ್ತುವರಿದ ಶಸ್ತ್ರಸಜ್ಜಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. 60ಕ್ಕೂ ಹೆಚ್ಚು ರೈತರ ಮೇಲೆ ದಾಳಿ ನಡೆದಿದೆ. ಹಾಗೂ …
Read More »ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾ ಕಾರಣ ಅನ್ನೋದು ಇಡೀ ಜಗತ್ತಿಗೆ ಗೊತ್ತಿರುವ ವಿಚಾರ.
ದೆಹಲಿ: ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾ ಕಾರಣ ಅನ್ನೋದು ಇಡೀ ಜಗತ್ತಿಗೆ ಗೊತ್ತಿರುವ ವಿಚಾರ. ಇದೇ ಕಾರಣಕ್ಕೆ ಡ್ರ್ಯಾಗನ್ ರಾಷ್ಟ್ರ ವಿಶ್ವ ಭೂಪಟದ ಒಂದೊಂದು ರಾಷ್ಟ್ರಗಳಿಂದ ಉಗಿಸಿಕೊಳ್ಳುತ್ತಿದೆ. ಆದರೆ ತಾನು ಮಾಡಿರುವ ತಪ್ಪನ್ನು ಭಾರತದ ಮೇಲೆ ಹಾಕಲು ಈಗ ಚೀನಾ ಕುತಂತ್ರ ನಡೆಸಿದ್ದು, ಕೊರೊನಾ ವೈರಸ್ ಹರಡಲು ಭಾರತ ಕಾರಣ ಎಂಬ ಅವೈಜ್ಞಾನಿಕ ಮಾಹಿತಿ ನೀಡಿದೆ. ಡ್ರ್ಯಾಗನ್ ದೇಶದ ಹೇಳಿಕೆ ಜಾಗತಿಕವಾಗಿ ಅಪಹಾಸ್ಯಕ್ಕೆ ಗುರಿಯಾಗಿದೆ. ಕೊರೊನಾ …
Read More »ಕನ್ನಡ ಸಾಹಿತ್ಯ ಲೋಕಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನುಪಮವಾಗಿದೆ ಎಂದು ವಿಶ್ರಾಂತ ಪ್ರೋ ಚಂದ್ರಶೇಖರ್ ಅಕ್ಕಿ ಹೇಳಿದರು
ಕನ್ನಡ ಸಾಹಿತ್ಯ ಲೋಕಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನುಪಮವಾಗಿದೆ ಎಂದು ವಿಶ್ರಾಂತ ಪ್ರೋ ಚಂದ್ರಶೇಖರ್ ಅಕ್ಕಿ ಹೇಳಿದರು ರವಿವಾರದಂದು ನಗರದ ಬಸವ ತಸ್ಸಂಗ ಸಮಿತಿ ಸಭಾಂಗಣದಲ್ಲಿ ಭಾವಯಾನ ಮಹಿಳಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಬಸವ ತಸ್ಸಂಗ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು ಮಹಿಳಾ ಸಾಹಿತ್ಯ ಕ್ಷೇತ್ರ ಇಂದು ವಿಸ್ತಾರಗೊಂಡಿದೆ. ವೈಚಾರಿಕ ಮತ್ತು ವೈವಿಧ್ಯಮಯ ಸಾಹಿತ್ಯ ಓದುಗರನ್ನು ತಲುಪುವ ಮೂಲಕ ಅವರನ್ನು ಚಿಂತನಶೀಲರನ್ನಾಗಿಸಿ …
Read More »ಮನ್ನಿಕೇರಿ ಸಿದ್ಧ ಸಮಾಧಿ ಯೋಗದ ನೂತನ ಕಟ್ಟಡಕ್ಕೆ 6 ಲಕ್ಷ ರೂ. ದೇಣಿಗೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ ಸಮಾಧಿ ಯೋಗ ತರಬೇತಿ ಕೇಂದ್ರಕ್ಕೆ 6 ಲಕ್ಷ ರೂ.ಗಳನ್ನು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ ಸಮಾಧಿ ಯೋಗ(ಎಸ್‍ಎಸ್‍ವಾಯ್) …
Read More »ಬೆಳಗಾವಿಗೆ ನಾಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ
ಬೆಳಗಾವಿ : ರಾಜ್ಯ ಗೃಹ ಸಚಿವ ಹಾಗೂ ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ನ.30ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮೂರು ದಿನಗಳ ಕಾಲ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಪ್ರವಾಸ ಕೈಗೊಂಡಿರುವ ಸಚಿವರು ನಾಳೆ ಬೆಳಗಾವಿಗೆ ರಾತ್ರಿ 10 ಗಂಟೆಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಡಿಸೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಕೆಎಸ್ ಆರ್ ಪಿ 6ನೇ ತಂಡದ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ, …
Read More »ರೈತರ ಹೋರಾಟದಲ್ಲಿ ಕಾರಿಗೆ ಬೆಂಕಿ : ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನ
ಹೊಸದಿಲ್ಲಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ರೈತರಿಗೆ ಸಹಾಯ ಮಾಡಲೆಂದು ತೆರಳಿದ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾನೆ. ಕಾರಿನಲ್ಲಿ ಮಲಗಿದ್ದ ಸಮಯದಲ್ಲಿ ಕಾರಿಗೆ ಬೆಂಕಿ ತಗುಲಿದ್ದು, ಆತನ ಸಜೀವ ದಹನವಾಗಿದೆ. ಪಂಜಾಬ್ ನ ಬರ್ನಾಲಾ ಜಿಲ್ಲೆಯ ಧನೋಲುವಾ ಗ್ರಾಮದ ಜನಕರಾಜ್ (55) ಮೃತ ವ್ಯಕ್ತಿ. ರೈತ ಹೋರಾಟಕ್ಕೆಂದು ಅಲ್ಲಿಂದ ದೆಹಲಿಗೆ ಬಂದಿದ್ದ. ಟ್ರ್ಯಾಕ್ಟರ್ ಮೆಕಾನಿಕ್ ಆಗಿದ್ದ ಆತನನ್ನು ಹೋರಾಟ ನಿರತ ರೈತರ ಟ್ರ್ಯಾಕ್ಟರ್ಗಳನ್ನು ಸರಿ ಮಾಡಲೆಂದೇ ಕರೆಸಿಕೊಳ್ಳಲಾಗಿತ್ತು. ಶನಿವಾರ ರಾತ್ರಿ …
Read More »ಬೆಳಗಾವಿ ವಿಭಜನೆಗೆ ತಾಂತ್ರಿಕ ತೊಂದರೆ : ಡಿಸಿಎಂ ಲಕ್ಷ್ಮಣ ಸವದಿ
ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪಕ್ಷದ 17 ಜನರು ಬಿಜೆಪಿ ಪಕ್ಷಕ್ಕೆ ಬಂದ ಕಾರಣದಿಂದ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ಅವರ ಬಗ್ಗೆ ಗೌರವವಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಲು 17 ಜನರು ಕಾರಣ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಕ್ಷ ತೀರ್ಮಾನ ಮಾಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಫೈನಲ್ …
Read More »ಬೆಳಗಾವಿಯಲ್ಲಿ ನ.30ರಂದು ಮಹತ್ವದ ಸಭೆ ನಡೆಸಲಿರುವ ರಮೇಶ್ ಜಾರಕಿಹೊಳಿ
ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವರ ಸಭೆ ನಡೆಸಲಿದ್ದಾರೆ. ಕಳಸಾ ಬಂಡೂರ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಸೇರಿ ಇತರೆ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಉನ್ನತ ಮಟ್ಟದ ಸಭೆ ಹಮ್ಮಿಕೊಂಡಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿ, ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ …
Read More »