Breaking News

ರಾಷ್ಟ್ರೀಯ

ಮಹಿಳೆ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

ಹುಬ್ಬಳ್ಳಿ: ಮನೆ ಎದುರು ಗಲಾಟೆ ಮಾಡಿದಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಇಬ್ಬರನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಕೇಶ್ ಹೆಬ್ಬಳ್ಳಿ, ಸಚಿನ್ ಹೆಬ್ಬಳ್ಳಿ ಬಂಧಿತ ಆರೋಪಿಗಳು. ಹೆಗ್ಗರಿ ಬಡಾವಣೆಯಲ್ಲಿ ವಾಸವಿರುವ ಮಹಿಳೆ ಮನೆ ಮುಂದೆ ಸಹೋದರರಿಬ್ಬರು ಗಲಾಟೆ ಮಾಡುತ್ತಿದ್ದರು. ಇಬ್ಬರನ್ನು ಮಹಿಳೆ ಅಲ್ಲಿಂದ ಕಳುಹಿಸಿದ್ದಳು. ಇದೇ ವಿಚಾರವಾಗಿ ರಾತ್ರಿ ಆಕೆ ಮನೆಗೆ ಬಂದ ಇಬ್ಬರು ಚಾಕುವಿನಿಂದ ಇರಿದು, ಹೊಡೆದಿದ್ದರು. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಳೇ …

Read More »

ದೆಹಲಿ ರೈತ ಪ್ರತಿಭಟನೆ: ಚಳಿ ತಾಳಲಾರದೆ ಕಳೆದ 20 ದಿನಗಳಲ್ಲಿ 22 ರೈತರು ಸಾವು

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 20 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ವೇಳೆ 22 ರೈತರು ಸಾವನ್ನಪ್ಪಿದ್ದಾರೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿದೆ. ದೆಹಲಿ ಹಾಗೂ ಹರಿಯಾಣದ ಸಿಂಗು ಹಾಗೂ ಟಿಕ್ರಿ ಗಡಿ ಪ್ರದೇಶಗಳಲ್ಲಿ ರೈತರು ಭಾರಿ ಪ್ರಮಾಣದಲ್ಲಿ ಸೇರಿದ್ದು, ತೀವ್ರ ಚಳಿಯ ನಡುವೆಯೂ ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಟಿಕ್ರಿ ಹಾಗೂ ಸಿಂಘು …

Read More »

ಬೆಳಗಾವಿಯ ಸಾಹುಕಾರ್ ಗೆ ಶಾಕ್ ನೀಡಿದ ಸಿಎಂ ಬಿಎಸ್ ವೈ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದ ಕೆಲ ಮಹತ್ವದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುಮೋದನೆ ನೀಡಿದ್ದಾರೆ. ಬೆಳಗಾವಿ ಸಾಹುಕಾರ ಅವರ ರಾಜಕೀಯ ವೇಗಕ್ಕೆ ಕಡಿವಾಣ ಹಾಕಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂದೇಶ ರವಾನಿಸುವ ಸಲುವಾಗಿಯೇ ಆ ಕೆಲಸ ನಿರ್ವಹಿಸಿದರಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ. ಡಿಸೆಂಬರ್ 2, ಬೆಳಗಾವಿಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ನಡೆದಿತ್ತು. ರಮೇಶ ಜಾರಕಿಹೊಳಿ ಸಭೆಯಲ್ಲಿ …

Read More »

ಮೋದಿಯ ಬಣ್ಣದ ಮಾತಿಗೆ ದೇಶ ಮರುಳಾಗಿದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ರಾಯಬಾಗ: ‘ ಪ್ರಧಾನಿ ಮೋದಿಯ ಬಣ್ಣದ ಮಾತಿಗೆ ಈಗಾಗಲೇ ದೇಶ ಮರುಳಾಗಿದೆ. ಇದೇನು ಹೊಸದೆನಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಏನು ಹೊಸದಲ್ಲ. 1965ರಲ್ಲಿಯೇ ನೆಹರು ಅವರು ಜಾರಿಗೆ ತಂದಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳೆದು, ಅಲಂಕರಿಸಿ ಹೊರಟ್ಟಿದ್ದಾರೆ. ದೇಶದ ಜನರು ಬಣ್ಣದ ಮಾತಿಗೆ …

Read More »

ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ

ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.20ರಂದು ಸಂಜೆ 5 ಗಂಟೆಯಿಂದ ಡಿ.22 ಸಂಜೆ 5 ಗಂಟೆವರೆಗೆ ಸಾರಾಯಿ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಹತ್ವದ ಆದೇಶ ಹೊರಡಿಸಿದ್ದಾರೆ. ಅದೇ ರೀತಿ 2ನೇ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.25ರಂದು ಸಾಯಂಕಾಲ 5 ಗಂಟೆಯಿಂದ ಡಿ.27ರಂದು …

Read More »

ಬಿಜೆಪಿಯು ಸಮುದಾಯಗಳಲ್ಲಿ ಗಲಭೆ ಮತ್ತು ದ್ವೇಷದ ಹೊಸ ಧರ್ಮವನ್ನು ಸೃಷ್ಟಿಸಿದೆ’:

ಜಲ್‌ಪೈಗುರಿ: ‘ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಹುನ್ನಾರವನ್ನು ನಡೆಸುತ್ತಿರುವ ಕೇಂದ್ರ ಸರ್ಕಾರವು, ಪಶ್ಚಿಮ ಬಂಗಾಳವನ್ನು ಗಲಭೆಪೀಡಿತ ಗುಜರಾತ್ ರೀತಿಯಾಗಿ ಮಾರ್ಪಡಿಸಲು ಹೊರಟಿದೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ನಡೆದ ರ‍್ಯಾಲಿಯೊಂದರಲ್ಲಿ ಆರೋಪಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ರಾಜ್ಯದ ಐಪಿಎಸ್‌ ಅಧಿಕಾರಿಗಳಿಗೆ ಸಮನ್ಸ್ ನೀಡುವ ಮೂಲಕ ಕೇಂದ್ರ ಸರ್ಕಾರವು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ …

Read More »

ಗೋಕಾಕ್ ಶಹರ ಪೊಲೀಸ್ ಠಾಣೆಯಿಂದ ಭರ್ಜರಿ ಬೇಟೆ

  ಗೋಕಾಕ ಶಹರ ನಗರದಲ್ಲಿ ಜರುಗುತ್ತಿದ್ದ ಬೈಕ್‌ ಕಳ್ಳತನಗಳ ಪ್ರಕರಣದ ತನಿಖೆಯನ್ನು ಬೆಳಗಾವಿ ಎಸ್,ಪಿ, ಲಕ್ಷ್ಮಣ ನಿಂಬರಗಿ ಮತ್ತು ಹೆಚ್ಚುವರಿ ಎಸ್,ಪಿ, ಅಮರನಾಥ ರೆಡ್ಡಿ, ಗೋಕಾಕ ಡಿ,ಎಸ್,ಪಿ, ಜಾವೇದ ಇನಾಮದಾರ,ಸಿ,ಪಿ,ಆಯ್,ಗೋಪಾಲ ರಾಠೋಡ,ಇವರ ಮಾರ್ಗದರ್ಶನದಲ್ಲಿ ಪಿ,ಎಸ್,ಆಯ್,ಶ್ರೀ ಕೆ,ಬಿ,ವಾಲಿಕಾರ (ಕಾಸು) ,ಪಿ,ಎಸ್,ಆಯ್,ಶ್ರೀ ಅಮಿನಬಾಂವಿ,(ಸಿಬಿ)ಗೋಕಾಕ. ಶಹರ ಠಾಣೆಯ ಸಿಬ್ಬಂದಿಗಳಾದ ಬಿ,ಎಸ್,ಸಿದ್ನಾಳ, ಎಲ್,ಎಸ್ನಾಡಗೌಡರ,ಕೆ,ಬಿ,ಹಕ್ಯಾಗೋಳ,ಸಿ,ಎಸ್,ಬೀರಾದರ,ಆರ್,ಆರ್,ಮುರನಾಳ,ಎಸ್,ವಾಯ್,ಕುರಿ,ಎಂ,ಆರ್,ಅಂಬಿ,ಇವರು ಕಾರ್ಯಾಚರಣೆ ನಡೆಸಿ ಒರ್ವನನ್ನು ವಿಚಾರಣಗೆ ಒಳಪಡಿಸಿದಾಗ ಅವನಿಂದ ಕಳ್ಳತನ ಮಾಡಿದ 4 ಮೋಟಾರ್‌ ಬೈಕ್‌, 2 ಸೈಕಲ್ ಹಾಗೂ 4 ಮೊಬೈಲ್ಗಳನ್ನು …

Read More »

ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ ಕರೆಮ್ಮಾದೇವಿ ವೃತ್ತದಲ್ಲಿ ಅರಭಾಂವಿ ಮಂಡಲ ಭಾರತೀಯ ಜನತಾ ಪಕ್ಷದ ನೂತನ ಕಾರ್ಯಲಯವನ್ನು ಉದ್ಘಾಟಿಸಿ   ಮಾತನಾಡಿದ …

Read More »

ತಿರುಮಲ ತಿಮ್ಮಪ್ಪನ ದರ್ಶನ ಪಡೆದ ಸಚಿವ ರಮೇಶ್ ಜಾರಕಿಹೊಳಿ

ಆಂಧ್ರಪ್ರದೇಶ : ರಾಜ್ಯ ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಂಗಳವಾರ ತಿರುಮಲ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಚಿತ್ತೂರು ಜಿಲ್ಲೆಯ ತಿರುಮಲ ಬೆಟ್ಟದ ಪಟ್ಟಣದಲ್ಲಿನ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿದ್ದರೆ, ಸಚಿವ ರಮೇಶ್ ಜಾರಕಿಹೊಳಿ ಅವರು, ತಿಮ್ಮಪ್ಪ ದರ್ಶನಕ್ಕೆ ತೆರಳಿದ್ದಾರೆ. ಜತೆಗೆ ಶಾಸಕ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಬಿಜೆಪಿ ಮುಖಂಡರು …

Read More »

ಸಭಾಪತಿ ರಾಜ್ಯಪಾಲರ ಮಾತು ಕೇಳಬೇಕೆಂದಿಲ್ಲ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಸದನದಲ್ಲಿ ನಡೆದ ಘಟನೆ ಸರಿಯಲ್ಲ. ಈ ರೀತಿಯಾಗಿ ನಡೆಯಬಾರದಿತ್ತು ಅಂತಾ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ವಿಧಾನ ಪರಿಷತ್ ನ ಕಲಾಪದಲ್ಲಿ ನಡೆದ ಗಲಾಟೆ, ನೂಕಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಭಾಪತಿಗಳು ಸದನಕ್ಕೆ ಬರುವ ಮೊದಲೇ ಬಾಗಿಲು ಹಾಕಿದ್ದು, ಕಾನೂನು ಬಾಹಿರ. ಸಭಾಪತಿಗಳಿಗೆ ಅಪಮಾನ ಇತಿಹಾಸದಲ್ಲಿಯೇ ಇಲ್ಲ. ಎಂದರು. ಸಭಾಪತಿ ಇರುವಾಗಲೇ ಉಪ ಸಭಾಪತಿ ಪೀಠ ಅಲಂಕರಿಸಿರುವುದು ತಪ್ಪು. ರಾಜಭವನದ ಗೌರವ ಹಾಳು ಮಾಡಿದ್ದಾರೆ. ರಾಜ್ಯಪಾಲರು ನಿರ್ದೇಶನ …

Read More »