ಗೋಕಾಕ : ಮಾನವ ಬಂಧುತ್ವ ವೇದಿಕೆಯ ಡಿ.6ರಂದು ನಡೆಸುವ ಮಹಾ ಪರಿನಿರ್ಮಾಣ ದಿನ ಈ ಬಾರಿ ವಿಶೇಷತೆಯಿಂದ ಕೂಡಿತ್ತು. ಸ್ಮಶಾನ ಭೂಮಿಯಲ್ಲಿ ವಾಹನಕ್ಕೆ ಚಾಲನೆ, ಬರ್ತಡೇ ಆಚರಿಸಿ, ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು 2014ರಿಂದ ಮೌಢ್ಯ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಪ್ರತಿ ವರ್ಷವೂ ಸಹ ವಿಶೇಷ , ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನರಲ್ಲಿರುವ ಮೂಢನಂಬಿಕೆ ಹೊಗಲಾಡಿಸಲು ಸಮಾರಂಭ ಏರ್ಪಡಿಸಲಾಗಿತ್ತು. …
Read More »ಗೋಕಾಕದಲ್ಲಿ ಬಿಜೆಪಿ ಎಸ್ಸಿ ಮೊರ್ಚಾ ನಗರ ಘಟಕದಿಂದ ಮಹಾ ಪರಿನಿರ್ವಾಣ ದಿನ ಆಚರಣೆ
ಗೋಕಾಕ ನಗರದ ಆದಿಜಾಂಬವ ನಗರದಲ್ಲಿರುವ ಅಂಬೇಡ್ಕರ ಭವನದಲ್ಲಿ ಭಾರತ ರತ್ನ ,ಸಂವಿಧಾನ ಶಿಲ್ಲಿ ಡಾ: ಬಾಬಾ ಸಾಹೇಬರ ಪುಣ್ಯಸ್ಮರಣೆಯ ಮಹಾ ಪರಿ ನಿರ್ವಾಣ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗೋಕಾಕದಲ್ಲಿ ಬಿಜೆಪಿ ಎಸ್ಸಿ ಮೊರ್ಚಾ ನಗರ ಘಟಕದಿಂದ ಮಹಾ ಪರಿನಿರ್ವಾಣ ದಿನ ಆಚರಣೆ ಮಾಡಿ ಇವತ್ತಿನ ಯುವಕರು ಮೊಬೈಲಗೆ ಮೊರೆ ಹೊಗದೆ ಜೀವನದಲ್ಲಿ ಬಾಬಾ ಸಾಹೇಬರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಖಬೇಕಾಗಿದೆಎಂದು ಗೋಕಾಕ ಎಸ್ಸಿ ಮೊರ್ಚಾ ಅದ್ಯಕ್ಷರಾದ ಮಂಜು …
Read More »ಸಮಾನತೆಯ ಸಮಾಜ ನಿರ್ಮಾಣ ನಮ್ಮ ಗುರಿಯಾಗಲಿ: ಸತೀಶ್ ಜಾರಕಿಹೊಳಿ
ಗೋಕಾಕ: ಬುದ್ಧ, ಬಸವ, ಅಂಬೇಡ್ಕರ್ ರವರು ಕಂಡಿದ್ದ ಸಮಾನತೆಯ ಸಮಾಜವನ್ನು ನಾವು ಕಟ್ಟಬೇಕಿದೆ. ಇದಕ್ಕೆ ತಮ್ಮೆಲ್ಲರ ಸಹಕಾರ, ಒಗಟ್ಟು ನಮಗೆ ತುಂಬ ಮುಖ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಮರಾಠ ಸಮಾಜ ಭೂಮಿಯಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಪ್ರತಿವರ್ಷ ನಡೆಯುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನದಂದು ಆಚರಿಸುವ ಮೌಢ್ಯ ವಿರೋಧಿ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನ್ಯಾಯಕ್ಕೆ ಒಳಗಾಗಿರುವ ಜನರನ್ನು …
Read More »ಅಂಬೇಡ್ಕರ್ ಕನಸನ್ನು ನೆನೆಸು ಮಾಡುವುದು ಸತೀಶ್ ಜಾರಕಿಹೊಳಿ ಅವರ ಕನಸು: ಡಾ.ಯಲ್ಲಪ್ಪ ಹಿಮ್ಮಡಿ
ಗೋಕಾಕ: ಸಮಾಜದ ಒಳಿತಿಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕಂಡಿದ್ದ ಕನಸನ್ನು ನೆನೆಸು ಮಾಡಲು ಶ್ರಮಿಸುತ್ತಿರುವರು ಶಾಸಕ ಸತೀಶ್ ಜಾರಕಿಹೊಳಿ ಅವರು ಎಂದು ಬಂಡಾಯ ಸಾಹಿತ್ಯ ಸಂಘಟನೆಯ ಡಾ. ಯಲ್ಲಪ್ಪ ಹಿಮ್ಮಡಿ ಹೇಳಿದರು. ನಗರದ ಮರಾಠ ಸಮಾಜ ಭೂಮಿಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಪ್ರತಿವರ್ಷ ನಡೆಯುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನದಂದು ಆಚರಿಸುವ ಮೌಢ್ಯ ವಿರೋಧಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. …
Read More »ಸತೀಶ ಜಾರಕಿಹೊಳಿ ವೈಚಾರಿಕತೆ ಚಿಂತನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ತುಂಬ ಹಬ್ಬಲಿ: ಅಶೋಕ ಪೂಜಾರಿ
ಗೋಕಾಕ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಗತ್ತಿನ ಶ್ರೇಷ್ಟ ನಾಯಕ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಬಣ್ಣಿಸಿದರು. ನಗರದ ಮರಾಠಾ ರುದ್ರಭೂಮಿಯಲ್ಲಿ ನಡೆದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪರಿನಿರ್ವಾಣ ನಿಮಿತ್ತ ಮಾನವ ಬಂಧುತ್ವ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೌಡ್ಯ ವಿರೋಧಿ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೂಢನಂಬಿಕೆ ವಿರುದ್ದ ಹೋರಾಡುತ್ತಿರುವ ಸತೀಶ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಬೇಕಿದೆ. ಮಾನವ ಬಂಧುತ್ವ ವೇದಿಕೆ ವೈಚಾರಿಕತೆ ಹೋರಾಟ ಕರ್ನಾಟಕ ಅಷ್ಟೇ ಅಲ್ಲ. …
Read More »ಗ್ರಾಪಂ.ಚುನಾವಣೆಗೆ ಡಿ.7 ಮತ್ತು 11ರಂದು ಅಧಿಸೂಚನೆ : ಚುನಾವಣಾ ಅಕ್ರಮ ತಡೆಗೆ-ಬಿಗಿ ಬಂದೋಬಸ್ತ್
ಬೆಳಗಾವಿ: ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ(ಡಿ.11) ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾನುವಾರ (ಡಿ.6) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಅಧಿಸೂಚನೆ ಹೊರಡಿಸಿದ ಬಳಿಕ ನಾಮಪತ್ರಗಳನ್ನು ಸ್ವೀಕಾರ ಪ್ರಕ್ರಿಯೆ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಮೊದಲನೇ ಹಂತಕ್ಕೆ ಡಿ.11; ಎರಡನೇ ಹಂತಕ್ಕೆ ಡಿ.16 ಕಡೆಯ ದಿನವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆ ಮೊದಲನೇ ಹಂತಕ್ಕೆ ಡಿ.12; …
Read More »ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ : ಕುದರಿ
ಘಟಪ್ರಭಾ : ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ. ದೇಶಕ್ಕೆ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ನೀಡಿರುವ ಅಂಬೇಡ್ಕರ ಅವರನ್ನು ಗೌರವಿಸಿ ಪೂಜಿಸಬೇಕಾದ ಅಗತ್ಯವಿದೆ ಎಂದು ಅರಭಾವಿ ಮಂಡಲ ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ ಹೇಳಿದರು. ಭಾನುವಾರದಂದು ಇಲ್ಲಿಗೆ ಸಮೀಪದ ಅರಭಾವಿ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನದಲ್ಲಿ ಜರುಗಿದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ ಅವರ ಪರಿನಿರ್ವಾಣ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ ಅವರನ್ನು ಕೇವಲ …
Read More »ಮದ್ವೆಗೆ ಮೂರು ದಿನ ಮುನ್ನ ಯುವಕನ ಮರ್ಮಾಂಗ ಕತ್ತರಿಸಿದ ಗೆಳೆಯರು!
ಲಕ್ನೋ: ಮದುವೆಗೆ ಮೂರು ದಿನವಿರುವಾಗಲೇ ಯುವಕನ ಮರ್ಮಾಂಗ ಕತ್ತರಿಸಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಕೊಟ್ಟಾಲಿ ನಗರದ ಇದಗ್ ಪ್ರದೇಶದಲ್ಲಿ ನಡೆದಿದೆ.ಸಮೀರ್ ಹಲ್ಲೆಗೊಳಗಾದ ಯುವಕ. ಸಮೀರ್ ಮದುವೆಗೆ ಮೂರು ದಿನಗಳ ಬಾಕಿ ಇತ್ತು. ಫರ್ವೇಜ್ ಎಂಬಾತನ ಬಳಿ ಸಮೀರ್ ಒಂದು ಲಕ್ಷ ರೂ. ಸಾಲ ಪಡೆದುಕೊಂಡಿದ್ದನು. ಅದೇ ವಿಚಾರವಾಗಿ ಇಬ್ಬರ ಮಧ್ಯೆ ಹಲವು ಬಾರಿ ಜಗಳ ನಡೆದಿತ್ತು. ಹಣಕಾಸಿನ ಸಂಬಂಧ ಸಮೀರ್ ಮತ್ತು ಫರ್ವೇಜ್ ನಡುವೆ ದ್ವೇಷದ ಜ್ವಾಲೆ ಹೊತ್ತಿಕೊಂಡಿತ್ತು. …
Read More »ಸರ್ಕಾರ ಕೆಡುವುವ ಶಕ್ತಿ ಇದೆ, ಗೋಕಾಕ ಜಿಲ್ಲೆ ಮಾಡೋಕೆ ಯಾಕೆ ಆಗಲ್ಲ.. ?
ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಗೋಕಾಕ ಮತ್ತು ಚಿಕ್ಕೋಡಿ ಇವರಲ್ಲಿ …
Read More »ಗೋಕಾಕದಲ್ಲಿ ಮರಾಠಿ ಪ್ರಾದಿಕಾರ ಅಬಿವೃದ್ದಿ ವಿರೋದಿಸಿ ಪ್ರತಿಭಟನೆ
ಗೋಕಾಕ: ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಮತ್ತು ಕನ್ನಡಪರ ಸಂಘಟನೆಗಳು ಒಕ್ಕೂಟ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಗೋಕಾಕದ ಬಸವೇಶ್ವರ ವೃತ್ತದಲ್ಲಿ ತಾಲೂಕಾ ಕನ್ನಡಪರ ಸಂಘಟನೆಯ ಒಕ್ಕೂಟದಿಂದ ಪ್ರತಿಬಟನೆ ಮಾಡಲಾಯಿತು. ಈ ಪ್ರತಿಬಟನೆಯಲ್ಲಿ ಕನ್ನಡಪರ ಸಂಘಟನೆಯ ಮುಖಂಡರಾದ ಕಿರಣ ಡಮಾಮಗರ, ಸಂತೋಷ ಖಂಡ್ರಿ, ಮಲಿಕ್ ತಳವಾರ.ಯಲ್ಲಪ್ಪ ಗೌಡರ, ಅರುಣ ರಂಗಸುಭೆ, ಅಜೀಜ ಮೊಕಾಶಿ, ಅಮಿತ ಗುಡವಾಲೆ, ಮುಬಾರಕ ಬಾಳೆಕುಂದ್ರಿ, ಕಲ್ಲಯ್ಯಾ ಮಠಪತಿ ಸೇರಿದಂತೆ ಅನೇಕರು …
Read More »
Laxmi News 24×7