ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ಜನರು ಅರೆಸ್ಟ್ ಆಗಿದ್ದಾರೆ. ಅರೆಸ್ಟ್ ಆದ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರು. ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್ಗೆ ಸಜ್ಜಾಗಿದ್ರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆ ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ …
Read More »ಜನರೇ ಗಮನಿಸಿ, ಕೊರೊನಾ ಸೋಂಕಿತರ ಸಾವಿಗೆ ವಾಯುಮಾಲಿನ್ಯವೂ ಕಾರಣ
ನವದೆಹಲಿ: ಜನರೇ ವಾತಾವರಣವನ್ನು ಸ್ವಚ್ಛವಾಗಿರಿಸಿ. ಯಾಕೆಂದರೆ ಕೊರೋನಾ ಸಾವಿಗೆ ವಾಯುಮಾಲಿನ್ಯವೂ ಈಗ ಕಾರಣವಾಗಿರುವುದು ಅಧ್ಯಯನದಿಂದ ದೃಢಪಟ್ಟಿದೆ. ಮಾಲಿನ್ಯದ ಜೊತೆ ಸೇರಿ ಕೊರೋನಾ ಪ್ರಾಣಕ್ಕೆ ಕುತ್ತು ತರಬಹುದು ಹುಷಾರ್ ಅಂತ ಕೇಂದ್ರ ಆರೋಗ್ಯ ಇಲಾಖೆ ಹಾಗೂ ಐಸಿಎಂಆರ್ ಆತಂಕ ವ್ಯಕ್ತಪಡಿಸಿದೆ. ವಿದೇಶಗಳಲ್ಲಿ ನಡೆಸಿದ ಅಧ್ಯಯನದ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿಯನ್ನು ಹಂಚಿಕೊಂಡಿದೆ. ಏನಿದು ಅಧ್ಯಯನ? ಯುರೋಪ್, ಅಮೆರಿಕದ ಅಧ್ಯಯನದ ಪ್ರಕಾರ ಕಲುಷಿತ ಗಾಳಿಯೂ ಕೊರೊನಾ ರೋಗಿಗಳ ಸಾವಿಗೆ …
Read More »ಬಸ್ ಡಿಕ್ಕಿಯಲ್ಲಿದ್ದ 64 ಲಕ್ಷ ನಗದು ಸೀಜ್
ತುಮಕೂರು: ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ 64,40,000 ನಗದು ಪತ್ತೆಯಾಗಿದೆ.ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಸಿಕ್ಕಿರುವ ಯಾವುದೇ ದಾಖಲೆ ಇಲ್ಲದ 64,40,000 ಹಣ ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿರೋ ಕಳ್ಳಂಬೆಳ್ಳ ಚೆಕ್ ಪೋಸ್ಟ್ ನಲ್ಲಿ ಈ ಹಣ ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ ಸಿಕ್ಕಿದೆ. ಹಣವನ್ನು ಚುನಾವಣಾಧಿಕಾರಿ ನಂದಿನಿದೇವಿ ನೇತೃತ್ವದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.
Read More »2 ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಇದೀಗ ಆಕೆಯನ್ನು ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಲೆ
ಭೋಪಾಲ್: ಪೋಷಕರ ಒಪ್ಪಿಗೆಯ ನಂತರ ಪ್ರೀತಿಸಿದ್ದ ಯುವತಿಯನ್ನೇ 2 ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಇದೀಗ ಆಕೆಯನ್ನು ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಲೆ ಮಾಡಿ, ಶವದ ಮುಂದೆ ಕುಳಿತು ರೋಧಿಸಿದ್ದಾನೆ. ಮೊದಲಿಗೆ ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಂದ ಬಳಿಕ ಚೂರಿಯಿಂದ ಮನಸೋ ಇಚ್ಛೆ ಇರಿದಿದ್ದಾನೆ. ಇನ್ನು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯ ಪಕ್ಕ ಕೆಲ ಸಮಯ ಕುಳಿತ ಆರೋಪಿ ನಂತರ ತಂದೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಪತಿ …
Read More »ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಜನರಿಗೆ ರಾಜ್ಯೋತ್ಸವ ಪ್ರಕಟಿಸಿದೆ.
ಬೆಳಗಾವಿ: ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಜನರಿಗೆ ರಾಜ್ಯೋತ್ಸವ ಪ್ರಕಟಿಸಿದೆ. ಅದರಲ್ಲಿ ಉತ್ತರ ಕರ್ನಾಟಕ 16 ಈ ಪ್ರಶಸ್ತಿ ಭಾಜನರಾಗಿದ್ದಾರೆ. ಕಲೆ, ಸಾಹಿತ್ಯ, ಹಾಗೂ ಸಂಗೀತ, ಮಾಧ್ಯಮ ಸೇರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಹೆಸರು ಪ್ರಕಟಿಸಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು. ಸಾಹಿತ್ಯ ಕ್ಷೇತ್ರ ಪ್ರೊ. ಸಿ.ಪಿ ಸಿದ್ದರಾಮ್- ಧಾರವಾಡ ವಿ. ಮುನಿ ವೆಂಕಟಪ್ಪ- ಕೋಲಾರ ರಾಮಣ್ಣ ಬ್ಯಾಟಿ(ವಿಶೇಷ …
Read More »ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು .
ನವೆಂಬರ್ 3 ರಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು . ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ , ಬಿಜೆಪಿಯ ಅಭ್ಯರ್ಥ ಮುನಿರತ್ನ ನಾಯ್ಡು ಎಲ್ಲ ಮತದಾರರಿಗೆ ಮೋಸ ಮಾಡಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸಲು ಇದು ಉತ್ತಮ ಅವಕಾಶ , ಪ್ರಜಾಪ್ರಭುತ್ವ ಉಳಿಯಬೇಕಾದರೆ ಮುನಿರತ್ನರನ್ನು ಸೋಲಿಸಲೇಬೇಕು ಎಂದು …
Read More »ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ ,
ನವೆಂಬರ್ 3 ರಂದು ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ , ಹಣದ ಆಮಿಷವೊಡ್ಡುತ್ತಿರುವ ಕುರಿತು ಅರೋಪ- ಪ್ರತ್ಯಾರೋಪಗಳ ಪ್ರಕ್ರಿಯೆಯೂ ಶುರುವಿಟ್ಟುಕೊಂಡಿದೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ , ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರನ್ನೊಳಗೊಂಡ ನಿಯೋಗವೊಂದು , ಶಿರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಹಣ ಹಂಚುತ್ತಿದ್ದಾರೆಂದು ಆರೋಪಿಸಿ ಮುಖ್ಯ ಚುನಾವಣೆ ಅಧಿಕಾರಿಗೆ ಇಂದು ದೂರು ನೀಡಿತು …
Read More »ಇಂದು ಬಿಹಾರ ವಿಧಾನಸಭೆ ಮೊದಲ ಹಂತದ ಚುನಾವಣೆ
ಪಾಟ್ನಾ: ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ಇಂದಿನಿಂದ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಶಾಂತಿಯುತ ಚುನಾವಣೆಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 71 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. 16 ಜಿಲ್ಲೆಗಳ 71 ವಿಧಾನಸಭಾ ಕ್ಷೇತ್ರಗಳಲ್ಲಿ 114 ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 1,066 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. …
Read More »ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು.
ಗೋಕಾಕ: ಕಳೆದ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು. ಶೇ. 100 ರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ತಲಾ 7 ಶಾಲೆಗಳಿಗೆ ತಲಾ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಿಸಿದರು. ಬಳಿಕ ಮಾತನಾಡಿದ ಅವರು, ಗೋಕಾಕ ಮತಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ …
Read More »ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕೊರೋನಾ ಮಹಾಮಾರಿಯ ಸಂದರ್ಭದಲ್ಲಿ ಕೆಎಂಎಫ್ ರೈತರ ಹಾಗೂ ಗ್ರಾಹಕರ ಅಭ್ಯುದಯಕ್ಕಾಗಿ ನಿರಂತರ ಸೇವೆ ಮಾಡಿದೆ. ಸಂಕಷ್ಟದ ಕಾಲದಲ್ಲೂ ಕೆಎಂಎಫ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಟ್ಟು 8 ಕೋಟಿ ರೂ.ಗಳ ದೇಣಿಗೆ ನೀಡಿದೆ ( ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ) ಗೋಕಾಕದಲ್ಲಿ ನಂದಿನಿ ಎಕ್ಸ್‍ಕ್ಲೂಸಿವ್ ಪಾರ್ಲರ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ . ಗೋಕಾಕ : .ನವರಾತ್ರಿ ಹಬ್ಬದ ಆಚರಣೆ ಸಂದರ್ಭದಲ್ಲಿ 120 ಮೆಟ್ರಿಕ್ ಟನ್ ಸಿಹಿ …
Read More »