Breaking News

ರಾಷ್ಟ್ರೀಯ

ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಅಣೆಕಟ್ಟೆಗಳ ಪುನಶ್ಚೇತನ ಹಾಗೂ ಸುಧಾರಣಾ ಯೋಜನೆಗಳ ಅನುದಾನದಲ್ಲಿ ಕರ್ನಾಟಕ ಹಲವು ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದೆ. ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಅನುದಾನ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ಆಯೋಗವು ದೇಶದ ಪ್ರಮುಖ ಅಣೆಕಟ್ಟೆಗಳ ಸಬಲೀಕರಣಕ್ಕಾಗಿ ವಿಶ್ವಬ್ಯಾಂಕ್ ನೆರವಿನ ಡ್ರಿಪ್ …

Read More »

ಸಾನಿಧ್ಯ ವಹಿಸಿದ್ದ ಸ್ಥಳೀಯ ವಿಜಯ ಸಿದ್ಧೇಶ್ವರ ಸ್ವಾಮನ್ನಿಕೇರಿ : 50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ದೇವಸ್ಥಾನದ ಬಳಿ ಬುಧವಾರ ದಂದು ಕರ್ನಾಟಕ ನೀರಾವರಿ ನಿಗಮದ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಸಮುದಾಯ …

Read More »

ಗೋಕಾಕ್ : ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಗೋಕಾಕ : ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದೆ. ಇಂತಹ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ನಿರ್ಧಾರ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ತೀರ್ಮಾನ ಖಂಡನೀಯ ಎಂದು ಸಿಎಂ …

Read More »

ಎಚ್.ಐ.ವಿ, ಏಡ್ಸ್ ಪೀಡಿತರಿಗೆ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ: ಎಚ್.ಐ.ವಿ, ಏಡ್ಸ್ ಪೀಡಿತರಿಗೆ ರೇಷನ್ ಕಾರ್ಡ್, ವೈದ್ಯಕೀಯ ಸೌಲಭ್ಯ, ಶಾಲಾ ಪ್ರವೇಶ, ವಿದ್ಯಾರ್ಥಿ ವೇತನ, ವಸತಿ ಯೋಜನೆಯಡಿ ವಸತಿ ಸೇರಿದಂತೆ ಸರ್ಕಾರದಿಂದ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಎಚ್.ಐ.ವಿ., ಏಡ್ಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಚ್.ಐ.ವಿ. ಸೋಂಕಿತರಿಗೆ ಖಾಸಗಿ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿದರೆ …

Read More »

ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ

ಚೆನ್ನೈ: ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಸೇಲಂನ ಲಿನೆಮೇಡನಲ್ಲಿ ನಡೆದಿದೆ. ಸಾಲ ತೀರಿಸಲು ಹಣವಿಲ್ಲದೆ ಇರುವಾಗ ತಂದೆಯೇ ತನ್ನ 6 ತಿಂಗಳ ಮಗುವನ್ನು ಒಂದು ಲಕ್ಷರೂಪಾಯಿಗೆ ಮಾರಿದ್ದಾನೆ. ಆರೋಪಿ ತಂದೆಯನ್ನು ಸೌಕತ್ ಆಲಿ ಎಂದು ಗುರುತಿಸಲಾಗಿದೆ. ಈತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸೌಕತ್‍ನ ಗೆಳೆಯ ಸೆಡ್ಡು ಹಾಗೂ ಮಗುವನ್ನು ಖರೀದಿಸಿದ ಸುಂದರಮ್ ಮಗು ಮಾರಾಟದಲ್ಲಿ ಶಾಮಿಲಾಗಿದ್ದಾರೆ. ಮಗುವನ್ನು …

Read More »

ಕೊರೊನಾ ಎರಡನೇ ಅಲೆ ಭೀತಿ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧ

ನವದೆಹಲಿ: ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ವಿಮಾನಯಾನ ನಿರ್ದೇಶನಾಲಯ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ವಿದೇಶ ಸಂಚಾರವನ್ನು ನಿರ್ಬಂಧಿಸಲು ವಿಮಾನಯಾನ ನಿರ್ದೇಶನಾಲಯ ಗುರುವಾರ ಈ ಆದೇಶ ಹೊರಡಿಸಿದೆ. ಪ್ರಯಾಣಿಕರ ವಿಮಾನ ಸಂಚಾರವನ್ನು ನಿಬರ್ಂಧಿಸಲಾಗಿದ್ದರೂ ಸರಕು ಸಾಗಾಣೆ ವಿಮಾನಗಳ ಹಾರಾಟದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More »

ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು , ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಮುಂದಿನ ತಿಂಗಳಿನ ಮೊದಲ ವಾರದಲ್ಲಿ ಎರಡನೇ ಸುತ್ತಿನ ಸಭೆ ನಡೆಸಲಾಗುತ್ತದೆ. ಈ ವೇಳೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಮುಂದಿನ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಮತ… ಬೆಳಗಾವಿ ಜಿಲ್ಲೆ ವಿಭಜನೆಯಾಗಿ ಚಿಕ್ಕೋಡಿ, ಗೋಕಾಕ ಹೊಸ ಜಿಲ್ಲೆ ಅಸ್ತಿತ್ವಕ್ಕೆ ಬರಲಿ…

ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅಭಿಮತ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ …

Read More »

ಬಿಜೆಪಿಯನ್ನು ‘ಸುಳ್ಳಿನ ಕಸ’ ಮತ್ತು ‘ರಾಷ್ಟ್ರಕ್ಕೆ ಅತಿ ದೊಡ್ಡ ಶಾಪ’ ಎಂದ: ಮಮತಾ ಬ್ಯಾನರ್ಜಿ

ಬಂಕುರ (ಪಶ್ಚಿಮ ಬಂಗಾಳ): ‘ಬಿಜೆಪಿಗಾಗಲಿ ಇನ್ನಾವುದೇ ಸಂಸ್ಥೆಗಳಿಗಾಗಲಿ ನಾನು ಹೆದರುವುದಿಲ್ಲ. ಅವರಿಗೆ (ಬಿಜೆಪಿ) ತಾಕತ್ತಿದ್ದರೆ ನನ್ನನ್ನು ಬಂಧಿಸಿ, ಕಂಬಿಗಳ ಹಿಂದೆ ಕೂರಿಸಲಿ. ಜೈಲಿನಿಂದಲೇ ಚುನಾವಣೆ ಎದುರಿಸುತ್ತೇನೆ. ಟಿಎಂಸಿ ಪಕ್ಷ ಗೆಲ್ಲುವುದು ಖಚಿತ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲು ಹಾಕಿದರು. ‘ಕೋವಿಡ್ 19′ ನಂತರದ ಮೊದಲ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮ ಮಾತಿನ ಉದ್ದಕ್ಕೂ ಬಿಜೆಪಿ ವಿರುದ್ಧ ಹಾಗೂ ಪಕ್ಷಾಂತರ ಮಾಡಲು ಸಿದ್ಧವಾಗಿರುವ ತಮ್ಮ ಪಕ್ಷದ …

Read More »

ಪಿಕೆಪಿಎಸ್‍ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರ ಸಂಜೆ ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಲ್ಲೋಳಿ ಪಿಕೆಪಿಎಸ್ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ಈ …

Read More »