Breaking News

ರಾಷ್ಟ್ರೀಯ

ಸರ್ಕಾರಿ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ನಾಳೆಯಿಂದ ವಾರದ ‘6 ದಿನ ಮೊಟ್ಟೆ’ ವಿತರಣೆ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಾರಕ್ಕೆ 6 ದಿನ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ 1 ರಿಂದ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆಅವರಲ್ಲಿರುವ ಅಪೌಷ್ಟಿಕತೆ ನಿವಾರಿಸಲು, ರಕ್ತ ಹೀನತೆ ತಡೆಗಟ್ಟಲು, ಬಹು …

Read More »

ಮಳೆ: ರಸ್ತೆ ಮೇಲೆ ಹರಿದ ಚರಂಡಿ ನೀರು

ರಾಮದುರ್ಗ: ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಸುಮಾರು 30 ನಿಮಿಷಗಳ ಕಾಲ ಗುಡುಗು ಸಹಿತ ಭಾರೀ ಮಳೆ ಸುರಿಯಿತು. ರಭಸದಿಂದ ಸುರಿದ ಮಳೆಯಿಂದಾಗಿ ಪಟ್ಟಣದ ಇಕ್ಕೆಲಗಳಲ್ಲಿ ನೀರು ಹರಿದು ಸ್ವಚ್ಛಗೊಂಡಿತು. ರಸ್ತೆ, ಚರಂಡಿಗಳಲ್ಲಿ ನೀರು ತುಂಬಿ ಹರಿದು ಕೆಲಕಾಲ ರಸ್ತೆ ಸಂಚಾರ ನಿಂತಿತ್ತು.   ಪಟ್ಟಣದಲ್ಲಿ ಹಾಯ್ದು ಹೋಗಿರುವ ಕೆಶಿಫ್‌ ರಸ್ತೆ ಮಗ್ಗುಲಿಗೆ ಅವೈಜ್ಞಾನಿಕವಾಗಿ ನಿರ್ಮಿಸಿದ ಚರಂಡಿಗಳಲ್ಲಿ ಹೂಳು ತುಂಬಿಕೊಂಡು ರಸ್ತೆಯನ್ನೆಲ್ಲ ಆವರಿಸಿತ್ತು. ಪಕ್ಕದ ಅಂಬೇಡ್ಕರ್‌ ಕಾಲೊನಿಯಲ್ಲಿಯೂ ನೀರು …

Read More »

ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವಂತೆ ಆಗ್ರಹ: ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಬೆಳಗಾವಿ: ಸರ್ಕಾರಿ ಮಾರ್ಗಸೂಚಿ ಪ್ರಕಾರ, 100 ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ, ಸಫಾಯಿ ಕರ್ಮಚಾರಿ ಕಾವಲು ಸಮಿತಿ-ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ನೇತೃತ್ವದಲ್ಲಿ ಪೌರ ಕಾರ್ಮಿಕರು ಇಲ್ಲಿನ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಪೌರ ಕಾರ್ಮಿಕರ ದಿನಾಚರಣೆ ಬಹಿಷ್ಕರಿಸಿದ ಅವರು, ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ಸರ್ಕಾರ ಪೌರ ಕಾರ್ಮಿಕರ ದಿನವನ್ನು ಅದ್ದೂರಿಯಾಗಿ …

Read More »

ಅ‍ಪ್ರಾಪ್ತೆಯರ ಮೇಲೆ ಅತ್ಯಾಚಾರ: ಇಬ್ಬರು ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ

ಬೆಳಗಾವಿ: ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳಿಗೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೋಕ್ಸೊ ನ್ಯಾಯಾಲಯ, 20 ವರ್ಷ ಕಠಿಣ ಶಿಕ್ಷೆ ಮತ್ತು ತಲಾ ₹10 ಸಾವಿರ ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ. ರಾಯಬಾಗದ ನಿವಾಸಿಗಳಾದ ಆಶೀಷ್‌ ಧರ್ಮರಾಜ ಕಾಂಬಳೆ(25), ಅರ್ಬಾಜ್‌ ರಸೂಲ್‌ ನಾಲಬಂದ ಶಿಕ್ಷೆಗೆ ಒಳಗಾದವರು. 2016ರ ಡಿ.29ರಂದು ಬಾಲಕಿ ಅಪಹರಿಸಿದ್ದ ಆಶೀಷ್‌, ಮಹಾರಾಷ್ಟ್ರದ ಗಣೇಶವಾಡಿಗೆ ಬೈಕ್‌ನಲ್ಲಿ ಕರೆದೊಯ್ದು ಮನೆಯೊಂದರಲ್ಲಿ ಅತ್ಯಾಚಾರ ಎಸಗಿದ್ದ. ನಂತರ ಚಿಕ್ಕೋಡಿ ತಾಲ್ಲೂಕಿನ ಅಂಕಲಿಯವರೆಗೆ …

Read More »

ಅರಣ್ಯಾಧಿಕಾರಿ ಕಚೇರಿಯಲ್ಲೇ ಮರಗಳನ್ನು ಬುಡಸಮೇತ ಕತ್ತರಿಸಲಾಗಿದೆ.

ಬೆಳಗಾವಿ: ಇಲ್ಲಿನ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್‌) ಕಚೇರಿ ಎದುರಿದ್ದ ಕೆಲ ಮರಗಳನ್ನು ಬುಡಸಮೇತ ಕತ್ತರಿಸಲಾಗಿದೆ. ಹಳೆ ಉದ್ಯಾನ, ಕಾಂಪೌಂಡ್‌ ಕೂಡ ತೆರವು ಮಾಡಲಾಗಿದೆ. ಅದೇ ಜಾಗದಲ್ಲಿ ಸೌಂದರ್ಯೀಕರಣಕ್ಕೆ ₹10 ಲಕ್ಷ ಮೊತ್ತದ ಯೋಜನೆ ರೂಪಿಸಲಾಗಿದೆ. ಒಂದೇ ಆವರಣದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್‌), ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್‌), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್‌) ಕಚೇರಿಗಳಿವೆ. ಡಿಸಿಎಫ್‌ ಮರಿಯಾ ಕ್ರಿಸ್ಟೊ ರಾಜಾ ಡಿ ಅವರು ತಮ್ಮ ಕಚೇರಿ …

Read More »

ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಮುಂದಾದರೆ ನಾವು ಚಾಮುಂಡಿ ಚಲೋ ಮಾಡುತ್ತೇವೆ. ಮಹಿಷನ ಭಕ್ತರ ಕೈ ಮೇಲಾಗುತ್ತದೋ ಚಾಮುಂಡಿಯ ಭಕ್ತರ ಕೈ ಮೇಲಾಗುತ್ತದೋ ನೋಡಿಯೇ ಬಿಡುವ ಎಂದು ಮಹಿಷ ದಸರಾ ಆಚರಣೆ ಸಮಿತಿಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಸವಾಲು ಹಾಕಿದರು.   ಗಣೇಶೋತ್ಸವ ಸಮಯದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಕಲ್ಲು ಎಸೆತ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ಮುಸ್ಲಿಮರು ಮಹಿಷನನ್ನು ನಂಬುವುದಿಲ್ಲ, ಮುಂದೊಂದು ದಿನ ಮಹಿಷನ ಮೆರವಣಿಗೆ …

Read More »

ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

ಬೆಂಗಳೂರು: ಕೊಡಗು ಜಿಲ್ಲೆಯ ಅರಣ್ಯ ಜಮೀನು, ಸರಕಾರಿ ಜಮೀನು, ಪಶ್ಚಿಮಘಟ್ಟ ಪ್ರದೇಶ ಹಾಗೂ ಬಾಣೆ, ಜಮ್ಮಾ, ಜಾಗೀರು, ಉಂಬಳಿ ಜಮೀನಿನ ಹಿಡುವಳಿದಾರರ ಜಮೀನುಗಳಲ್ಲಿನ ಮರಗಳನ್ನು ಕಡಿಯುವುದನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.   ಈ ವಿಚಾರವಾಗಿ ಮಡಿಕೇರಿ ನಿವಾಸಿ ಕೆ.ಎ. ರವಿ ಚೆಂಗಪ್ಪ ಹಾಗೂ ವೀರಾಜಪೇಟೆ ನಿವಾಸಿ ಸಿ.ಸಿ. ದೇವಯ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. …

Read More »

ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

ಚಿಕ್ಕಮಗಳೂರು : ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆ ಕೂಡ ಬರಬೇಕು ಎಂದು ಆದೇಶ ನೀಡಿದ ಇಲಾಖೆಯ ನಿರ್ಧಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಬಿಜೆಪಿ ಕಿಡಿ ಕಾರಿದೆ. ಮೂಡಿಗೆರೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇಮಕಾತಿ ಆದೇಶ ಹೊರಡಿಸಿದ್ದು ಈ ಆದೇಶದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಬಿಜೆಪಿ ಕಿಡಿ ಕಾರಿದ್ದು ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಅಲ್ಪಸಂಖ್ಯಾತರನ್ನೇ ನೇಮಕ ಮಾಡಲು ಉರ್ದು …

Read More »

ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ

ಕಾರವಾರ: ತಾಲೂಕಿನ ಹಣಕೋಣ ಗ್ರಾಮದಲ್ಲಿ ರವಿವಾರ ಸೆ.22) ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ದಂಪತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಪುಣೆಯಲ್ಲಿ ಕೈಗಾರಿಕೆ ಸ್ಥಾಪಿಸಿರುವ ಉದ್ಯಮಿ ವಿನಾಯಕ ನಾಯ್ಕ (56) ಮನೆಯ ಕೋಣೆಯೊಂದರಲ್ಲಿ ಹತ್ಯೆಯಾಗಿದ್ದಾರೆ. ಅವರ ಪತ್ನಿ ವೈಶಾಲಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಅವರನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.‌ ವಿನಾಯಕ ನಾಯ್ಕ ಹಾಗೂ ವೈಶಾಲಿ ದಂಪತಿ ಹಣಕೋಣ ಮೂಲದವರಾಗಿದ್ದು, ಪುಣೆ ನಗರದಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಪುಣೆಯಿಂದ ಸಾತೇರಿ …

Read More »

ಟಿಎಸ್ಸಾರ್‌, ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ

ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಿಗೆ ನೀಡುವ ಟಿ.ಎಸ್‌.ರಾಮಚಂದ್ರ ರಾವ್‌ (ಟಿಎಸ್ಸಾರ್‌) ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ ನೀಡುವ “ಮೊಹರೆ ಹಣಮಂತರಾಯ’ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಸರಕಾರ ಶನಿವಾರ ಘೋಷಣೆ ಮಾಡಿದೆ. ಹಿರಿಯ ಪತ್ರಕರ್ತರಾದ ಶಿವಾಜಿ ಗಣೇಶನ್‌, ಪದ್ಮರಾಜ ದಂಡಾವತಿ, ಡಾ| ಆರ್‌. ಪೂರ್ಣಿಮಾ, ಸರಜೂ ಕಾಟ್ಕರ್‌ ಸೇರಿ ಐವರನ್ನು “ಟಿಎಸ್ಸಾರ್‌ಆರ್‌’ ಪ್ರಶಸ್ತಿಗೆ ಮತ್ತು ಇಂದೂಧರ ಹೊನ್ನಾಪುರ, ಪಾಲೆತ್ತಾಡಿ, ಕ್ರಾಂತಿ …

Read More »