ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ ವಿಧ್ಯುಕ್ತ ಚಾಲನೆ ನೀಡಿದರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, …
Read More »ಚಿರು ಸಮಾಧಿ ಬಳಿ ಹೋಗಿ, ಸುಂದರ್ ರಾಜ್ ಕುಟುಂಬ ಪೂಜೆ ನೆರವೇರಿಸಲಿದ್ದಾರೆ.
ಚಿರು ಸರ್ಜಾ ಹುಟ್ಟುಹಬ್ಬದ ಹಿನ್ನೆಲೆ, ಪತ್ನಿ ಮೇಘನಾ ರಾಜ್ ಚಿರು ಸಮಾಧಿ ಬಳಿ ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ ಅನ್ನೋದು ತಿಳಿದು ಬಂದಿದೆ. ಚಿರು ಸಮಾಧಿ ಬಳಿ ಹೋಗಿ, ಸುಂದರ್ ರಾಜ್ ಕುಟುಂಬ ಪೂಜೆ ನೆರವೇರಿಸಲಿದ್ದಾರೆ. ಸದ್ಯ ಮೇಘನಾ ರಾಜ್ ಸರ್ಜಾ ತಮ್ಮ ಜೆ.ಪಿ.ನಗರದ ಮನೆಯಲ್ಲೇ ಇದ್ದಾರೆ. ಇನ್ನು, ಇಂದು ಮೇಘನಾರಾಜ್ಗೆ ಹೆರಿಗೆ ಅಗುವ ಊಹಾಪೋಹಗಳಿಗೆ ತಂದೆ ಸುಂದರ್ ರಾಜ್ ತೆರೆ ಎಳೆದಿದ್ದಾರೆ. ‘ಇವತ್ತು ಮೇಘನಾ ಆಸ್ಪತ್ರೆಗೆ ಅಡ್ಮಿಟ್ ಆಗೋದಿಲ್ಲ. ನಾವೆಲ್ಲರೂ …
Read More »ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ.
ಬೆಂಗಳೂರು: ಇಂದಿನಿಂದ ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ. ನವರಾತ್ರಿಯ ಮೊದಲ ದಿನದ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ. ಇಂದು ತಾಯಿ ಬನಶಂಕರಿಗೆ ಅರಿಶಿನ ಕೊಂಬಿನ ಅಲಂಕಾರ ಮಾಡಲಾಗಿದ್ದು ಭಕ್ತರ ಮನ ಸೆಳೆದಿದ್ದಾಳೆ. ದೇವಿಯ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ರು. ದೇವಿಗೆ ತುಪ್ಪ ಹಾಗೂ ನಿಂಬೆಹಣ್ಣಿನ ದೀಪ ಬೆಳಗುವ ಮೂಲಕ ಭಕ್ತರು ದೇವಿಗೆ ನಮಿಸಿದ್ರು. ದೇವಸ್ಥಾನದಲ್ಲಿ ನವರಾತ್ರಿಯ ರಂಗು ಮೇಳೈಸಿದೆ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ …
Read More »ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಫೇಲ್
ನವದೆಹಲಿ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಫೇಲ್ ಆಗಿದೆ. ಈ ಹಿನ್ನೆಲೆ ರಾಜ್ಯದ ಕೊರೊನಾ ವೈರಸ್ ನಿಯಂತ್ರಣ ಉಸ್ತುವಾರಿಗೆ ಕೇಂದ್ರ ಸರ್ಕಾರ ವಿಶೇಷ ತಂಡವನ್ನು ನಿಯೋಜಿಸಿದೆ. ಕರ್ನಾಟಕವೂ ಸೇರಿ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕೇರಳ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸಗಢ ರಾಜ್ಯಗಳಿಗೆ ಪ್ರತ್ಯೇಕ ತಜ್ಞರ ತಂಡಗಳನ್ನು ಕೇಂದ್ರ ಆರೋಗ್ಯ ಇಲಾಖೆ ನಿಯೋಜಿಸಿದೆ. ಕೇಂದ್ರದಿಂದ ನಿಯೋಜನೆಗೊಂಡಿರುವ ತಜ್ಞರ ತಂಡ ಕರ್ನಾಟಕಕ್ಕೆ …
Read More »ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವತಿ : ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾಳೆ
ಲಖನೌ: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವತಿಯೊಬ್ಬಳು ನ್ಯಾಯಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಕೋರಿ ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾಳೆ. ಗಂಡನ ಮನೆಯವರು ಕೊಡುವ ಹಿಂಸೆಯನ್ನು ಸಹಿಸಲಾರದೇ ಉತ್ತರ ಪ್ರದೇಶದ ವಿಧಾನಸಭಾ ಕಟ್ಟಡದ ಎದುರೇ ಮೊನ್ನೆ ಬೆಂಕಿಹಚ್ಚಿಕೊಂಡಿದ್ದ ಈ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ. ಅಂಜನಾ ತಿವಾರಿ ಅಲಿಯಾಸ್ ಆಯೇಷಾ ಈ ದುರ್ದೈವಿ. ಗಂಡನ ಮನೆಯವರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದರಿಂದ ಮುಖ್ಯಮಂತ್ರಿಗಳನ್ನೇ ಭೇಟಿ …
Read More »ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ.
ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ. ನಗರದಲ್ಲಿ ಗುರುವಾರ ರಾತ್ರಿಯಿಂದ ಜಿಟಿಜಿಟಿ ಮಳೆ ಬಿದ್ದಿತು. ಬೆಳಿಗ್ಗೆಯಿಂದಲೂ ಆಗಾಗ ಸಾಧಾರಣ ಮಳೆಯಾಗುತ್ತಿದೆ. ಚಿಕ್ಕೋಡಿ ತಾಲ್ಲೂಕಿನಲ್ಲಿ ಗುರುವಾರ ರಾತ್ರಿಯಿಂದ ಮಳೆ ಪ್ರಮಾಣ ಗಣನೀಯವಾಗಿ ಕ್ಷೀಣಿಸಿದೆ. ಆದರೆ, ಮಹಾರಾಷ್ಟ್ರದಿಂದ ಕೃಷ್ಣಾ ಮತ್ತು ಉಪ ನದಿಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಮಾತ್ರ ನಿರಂತರ ಏರಿಕೆ ದಾಖಲಾಗುತ್ತಿದೆ. ಶುಕ್ರವಾರ ಬೆಳಿಗ್ಗೆ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 1.04 ಲಕ್ಷ ಮತ್ತು ದೂಧ್‌ಗಂಗಾ ನದಿಯಿಂದ 15,135 ಕ್ಯುಸೆಕ್ ಸೇರಿದಂತೆ …
Read More »25 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್
ಬೆಳಗಾವಿ: ‘ಕಲ್ಯಾಣ ಹಾಗೂ ಮುಂಬೈ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖುದ್ದು ವೀಕ್ಷಿಸಬೇಕು ಮತ್ತು ಸಂತ್ರಸ್ತರ ನೆರವಿಗೆ ₹ 25 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದರು. ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ‘ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಭಾರಿ ಹಾನಿಯಾಗಿದೆ. ಆದರೆ, …
Read More »HD ದೇವೇಗೌಡ ಸೇತುವೆ ಮುಳುಗಡೆ: ಅಲ್ಲೇ ವಾಷಿಂಗ್, ಕ್ಲೀನಿಂಗ್, ಸ್ವಿಮ್ಮಿಂಗ್, ಡ್ಯಾನ್ಸಿಂಗ್!
ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಚ್ಚರಿಯ ಸಂಗತಿಯೆಂದರೆ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರಿನಲ್ಲೇ ಸ್ಥಳೀಯರು ತಮ್ಮ ವಾಹನಗಳನ್ನು ತೊಳೆಯುತ್ತಿದ್ದಾರೆ. ಅಷ್ಟೇ ಅಲ್ಲ, ಮಹಿಳೆಯರು ಬಟ್ಟೆ ಒಗೆಯುತ್ತಿರುವುದು ಹಾಗೂ ಮಕ್ಕಳು ನೀರಲ್ಲಿ ಈಜುತ್ತಾ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಸಹ ಕಂಡುಬಂದಿವೆ. HD …
Read More »ಕಳಪೆ ಕಾಮಗಾರಿ: ಸೇತುವೆ ಮುಳುಗಡೆಯಾಗದಿದ್ರೂ ವಾಹನ ಸಂಚಾರ ಬಂದ್
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮುಳುಗಡೆಯಾಗದಿದ್ದರೂ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಅಚ್ಚರಿಯ ಸಂಗತಿಯೆಂದರೆ, ಭೀಮಾ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದು 2 ವರ್ಷಗಳ ಹಿಂದಷ್ಟೆ ಉದ್ಘಾಟನೆಯಾಗಿದ್ದ ಸೇತುವೆಯ ಗುಣಮಟ್ಟ ಕಳಪೆಯಾಗಿರುವ ಆರೋಪ ಕೇಳಬಂದಿದೆ. ಹೀಗಾಗಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿಲ್ಲವೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ನಿನ್ನೆಯಿಂದಲೇ ಸೇತುವೆಯ ಮೇಲೆ ವಾಹನ ಸಂಚಾರ ಸ್ಥಗಿತವಾಗಿದ್ದ ಹಿನ್ನೆಲೆಯಲ್ಲಿ ಕಲಬುರಗಿ ಬೆಂಗಳೂರು …
Read More »ಪದವೀಧರ ಕ್ಷೇತ್ರಗಳಿಗೆ ಚುನಾವಣೆ: 118 ಬಂದೂಕು, ಪಿಸ್ತೂಲ್ ಪೊಲೀಸರ ವಶಕ್ಕೆ
ಹುಬ್ಬಳ್ಳಿ: ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಹಿನ್ನೆಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ವ್ಯಾಪ್ತಿಯಲ್ಲಿ ಲೈಸನ್ಸ್ ಹೊಂದಿರುವ ಸಾರ್ವಜನಿಕರ ಬಂದೂಕು ಮತ್ತು ಪಿಸ್ತೂಲ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 118 ಬಂದೂಕು ಮತ್ತು ಪಿಸ್ತೂಲ್ಗಳನ್ನು ಮಾಲೀಕರು ಪೊಲೀಸರ ವಶಕ್ಕೆ ನೀಡಿದ್ದಾರೆ. ಚುನಾವಣೆ ಫಲುತಾಂಶದ ಬಳಿಕ ಮಾಲೀಕರುಗಳಿಗೆ ಅದನ್ನು ಮರಳಿ ಹಸ್ತಾಂತರ ಮಾಡಲಾಗುತ್ತದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ …
Read More »