ಬೆಳಗಾವಿ: ಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? ಕಾಂಗ್ರೆಸ್ ನವರೇ ಟಾರ್ಗೆಟ್ ಯಾಕೆ ? ಎಂದು ಖಾರವಾಗಿ ಪ್ರಶ್ನಿಸಿರುವ ಕೆಪಿಸಿಸಿ ಕರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಯಾರೂ ಹರಿಶ್ಚಂದ್ರ ಇರುವುದಿಲ್ಲ, ಆದ್ರೆ ಎಲ್ಲದಕ್ಕೂ ಇತಿ ಮೀತಿ ಇರಬೇಕು. ಪ್ರಹ್ಲಾದ ಜೋಶಿ ತಮ್ಮ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮುಚ್ಚಿಟ್ಟಿದ್ದಾರೆ. ನಮ್ಮ ಸರ್ಕಾರವನ್ನು 10 ಪರ್ಸೆಂಟೆಜ್ …
Read More »ನಟಿ ಕಾಜಲ್ ಅಗರ್ವಾಲ್ ಇದೇ ಅಕ್ಟೋಬರ್ 30ರಂದು ಸಾಂಸಾರಿಕ ಜೀವನಕ್ಕೆ ಕಾಲಿಡಲಿದ್ದಾರೆ.
ಹೈದರಾಬಾದ್: ನಟಿ ಕಾಜಲ್ ಅಗರ್ವಾಲ್ ಇದೇ ಅಕ್ಟೋಬರ್ 30ರಂದು ಸಾಂಸಾರಿಕ ಜೀವನಕ್ಕೆ ಕಾಲಿಡಲಿದ್ದಾರೆ. ಇನ್‍ಸ್ಟಾಗ್ರಾಂನಲ್ಲಿ ಮದ್ವೆಯ ಮಾಹಿತಿಯನ್ನ ಕಾಜಲ್ ಹಂಚಿಕೊಂಡಿದ್ದಾರೆ. ನಾನು ಇದೇ ಅಕ್ಟೋಬರ್ 30ರಂದು ಗೌತಮ್ ಕಿಟ್ಚು ಅವರನ್ನು ಮುಂಬೈನಲ್ಲಿ ಮದುವೆ ಆಗುತ್ತಿದ್ದೇನೆ. ಮದುವೆಗೆ ಕೇವಲ ಕುಟುಂಬಸ್ಥರು ಮತ್ತು ಆಪ್ತರನ್ನ ಮಾತ್ರ ಆಹ್ವಾನಿಸಲಾಗಿದೆ. ಹೊಸ ಜೀವನಕ್ಕೆ ಕಾಲಿಡಲು ನಾನು ಥ್ರಿಲ್ ಆಗಿದ್ದೇನೆ. ಇಷ್ಟು ದಿನ ನೀವು ತೋರಿಸಿದ ಅನಿಯಮಿತ ಪ್ರೀತಿಗೆ ಅಭಾರಿಯಾಗಿದ್ದು, ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರಲಿ. ಹೊಸ …
Read More »ಈ ರಾಜಕಾರಣಕ್ಕೆ ಡಿಕೆ ಶಿವಕುಮಾರ್ ಹೆದರುವ ಮಗ ಅಲ್ಲ.ಯಾವುದಕ್ಕೂ ಜಗ್ಗಲ್ಲ: ಡಿಕೆಶಿ
ಬೆಂಗಳೂರು: ಈ ರಾಜಕಾರಣಕ್ಕೆ ಡಿಕೆ ಶಿವಕುಮಾರ್ ಹೆದರುವ ಮಗ ಅಲ್ಲ. ಇದು ಸದ್ಯಕ್ಕೆ ಮುಗಿಯುವುದಿಲ್ಲ. ಚುನಾವಣೆ ನಡೆಯುವವರೆಗೂ ಇರುತ್ತದೆ ಎಂದು ಡಿಕೆಶಿ ಹೇಳಿದ್ದಾರೆ ಸಿಬಿಐ ದಾಳಿ ಬಳಿಕ ನಿವಾಸದಿಂದ ಹೊರಬಂದು ಕಾರ್ಯರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 30 ವರ್ಷಗಳಿಂದ ಇರುವ ಎಲ್ಲ ಮಂತ್ರಿಗಳು ಹರಿಶ್ಚಂದ್ರನ ಮೊಮ್ಮಕ್ಕಳು. ಈಗ ನನಗೆ ರಾಜಕೀಯವಾಗಿ ತೊಂದರೆ ನೀಡುತ್ತಿದ್ದರಲ್ಲ ಅವರೆಲ್ಲ ಚೆನ್ನಾಗಿರಲಿ ಎಂದರು.ನಾನು ನನ್ನ ಸಹೋದರ, ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ನಿಮ್ಮ ಅಭಿಮಾನಕ್ಕೆ ತಲೆ …
Read More »ಬೆಳಗ್ಗೆ 6 ಗಂಟೆಯಿಂದ ಸಿಬಿಐ ನಡೆಸುತ್ತಿದ್ದ ದಾಳಿ ಅಂತ್ಯ
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಂಬಂಧಿಕರ ನಿವಾಸಗಳ ಮೇಲೆ ಇಂದು ಬೆಳಗ್ಗೆ 6 ಗಂಟೆಯಿಂದ ಸಿಬಿಐ ನಡೆಸುತ್ತಿದ್ದ ದಾಳಿ ಅಂತ್ಯಗೊಂಡಿದೆ. ವಾಡಿಕೆಯ ಪ್ರಕಾರ ಸಿಬಿಐ,ಇಡಿ ಮುಂತಾದ ತನಿಖಾ ಸಂಸ್ಥೆಗಳು ದಾಳಿ ನಡೆಸಿದ ಬಳಿಕ, ಆರೋಪಿಗಳನ್ನು ತತ್ಕ್ಷಣ ಬಂಧಿಸುವುದಿಲ್ಲ. ಅಕಸ್ಮಾತ್ ಆರೋಪಿಗಳು ವಿದೇಶಕ್ಕೆ ಪರಾರಿಯಾಗುವ ಅಥವಾ ಸಾಕ್ಷ್ಯ/ದಾಖಲೆಗಳನ್ನು ನಾಶ ಪಡಿಸುತ್ತಾರೆ ಎಂಬ ಗುಮಾನಿ ಬಂದ್ರೆ ಬಂಧನಕ್ಕೆ ಮುಂದಾಗುತ್ತದೆ. ಪ್ರಸ್ತುತ, ಡಿ.ಕೆ.ಶಿವಕುಮಾರ್ ಮನೆ ಸೇರಿ ಹಲವೆಡೆ ಸಿಬಿಐ ದಾಳಿ ನಡೆಸಿದ …
Read More »ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ, ಕುಗ್ಗಲ್ಲ – ಸಿಬಿಐ ದಾಳಿಗೆ ಡಿ.ಕೆ ಸುರೇಶ್ ಪ್ರತಿಕ್ರಿಯೆ
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು ಎಂದು ಸಿಬಿಐ ದಾಳಿಗೆ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಡಿ.ಕೆ.ಸುರೇಶ್ ಟ್ವೀಟ್ ಮಾಡುವ ಮೂಲಕ ಸಿಬಿಐ ದಾಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. “ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ” …
Read More »ಆರ್.ಆರ್.ನಗರದಲ್ಲಿ ಡಿ.ಕೆ.ರವಿ ಪತ್ನಿ ಕಣಕ್ಕಿಳಿಯುವುದು ಫಿಕ್ಸ್..!
ಬೆಂಗಳೂರು, ಅ.5- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ದಕ್ಷ ಐಎಎಸ್ ಅಕಾರಿಯಾಗಿದ್ದ ದಿವಂಗತ ಡಿ.ಕೆ.ರವಿ ಅವರ ಪತ್ನಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಅವರನ್ನು ಸೋಲಿಸಲು ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಸೂಕ್ತ ಎಂದು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಹಾಗಾಗಿ ಇಂದು ಕುಸುಮಾ ಅವರು ಕಾಂಗ್ರೆಸ್ ಕಚೇರಿಗೆ ಬಂದು ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ.ಕುಸುಮಾ ಅವರ ತಂದೆ ಹನುಮಂತರಾಯಪ್ಪ ಬಹಳ ವರ್ಷ ಕಾಂಗ್ರೆಸ್‍ನಲ್ಲಿದ್ದವರು. ನಗರಸಭೆ ಅಧ್ಯಕ್ಷರಾಗಿ, ನೈಸ್ ಪ್ರಾಕಾರದ …
Read More »“ನದಿ ಮೂಲ, ಋಷಿ ಮೂಲದಂತೆ ಸುದ್ದಿ ಮೂಲ ಕೆದಕಿಕೊಂಡು ಹೋಗಬೇಡಿ” : C.T..ರವಿ
ಬೆಂಗಳೂರು, ನದಿ ಮೂಲ, ಋಷಿ ಮೂಲದಂತೆ ಸುದ್ದಿ ಮೂಲವನ್ನು ಕೆದಕಿಕೊಂಡು ಹೋಗಬಾರದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದರು. ಡ್ರಗ್ಸ್ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಯ ಹಸ್ತಕ್ಷೇಪದ ಆರೋಪದ ವಿಚಾರಕ್ಕೆ ಸಂಬಂಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳಷ್ಟು ಸುದ್ದಿಗಳ ಆಯಸ್ಸು ಗಂಟೆಗಳಷ್ಟೇ ಇರುತ್ತದೆ. ಅದರ ಮೂಲ ಯಾವುದೆಂದು ಹುಡುಕಿಕೊಂಡು ಹೋಗಬಾರದು. ಸುದ್ದಿ ಮೂಲ ಯಾವುದು ಎಂಬುದಕ್ಕೆ ಹಲವು ಬಾರಿ ಉತ್ತರ ಸಿಗುವುದಿಲ್ಲ. ಸುದ್ದಿಗಳಿಗೆ ಸತ್ವ ಇಲ್ಲದಿದ್ದರೆ ಬಹಳ ಕಾಲ ಉಳಿಯುವುದಿಲ್ಲ. ಜನರ …
Read More »ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ
https://www.facebook.com/105350550949710/videos/756737581723043/?sfnsn=wiwspmo ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು …
Read More »ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ.
ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …
Read More »ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ: ‘ಏಣಗಿ ಬಾಳಪ್ಪ ಸ್ಮಾರಕ ಟ್ರಸ್ಟ್ ಸ್ಥಾಪಿಸಬೇಕು’ ಎಂದು ಒತ್ತಾಯಿಸಿ ಸಾಹಿತಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶನಿವಾರ ಮನವಿ ಸಲ್ಲಿಸಿದರು. ‘ನಗರದ ಟಿಳಕವಾಡಿಯಲ್ಲಿ ಪುನರ್ ನಿರ್ಮಾಣವಾಗುತ್ತಿರುವ ಕಲಾಮಂದಿರಕ್ಕೆ ಏಣಗಿ ಬಾಳಪ್ಪ ಅವರ ಹೆಸರು ನಾಮಕರಣ ಮಾಡಬೇಕು. ಪ್ರಮುಖ ರಸ್ತೆಗೆ ಅವರ ಹೆಸರಿಡಬೇಕು’ ಎಂದು ಕೋರಿದರು. ‘ಅವರ ಹೆಸರಿನಲ್ಲಿ ಟ್ರಸ್ಟ್ ರಚಿಸಲು ಸರ್ಕಾರ ಹಿಂದೇಟು ಹಾಕುತ್ತಿರುವ ಕಾರಣ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ, ಶಾಸಕರು ಮತ್ತು ಸಂಸದರ ನಿಧಿಯಿಂದ ವಂತಿಗೆ ಸಂಗ್ರಹಿಸಿ ನಾಟಕ …
Read More »