ಬೆಂಗಳೂರು: ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇತ್ತೀಚೆಗೆ ಕೊರೊನಾ ಸೋಂಕು ರಾಜಕಾರಣಿಗಳನ್ನು ಬೆನ್ನು ಬಿಡದೆ ಕಾಡುತ್ತಿದೆ. ಇತ್ತೀಚೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೂ ಕೂಡ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಕೇಂದ್ರ ಸಚಿವರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ತಮಗೆ ಕೊರೊನಾ ಸೋಂಕು ತಗಲಿರುವ ಸುದ್ದಿಯನ್ನು ಸ್ವತಃ ಸಚಿವರೇ ಟ್ವೀಟ್ ಮಾಡಿ ಖಚಿತ ಪಡಿಸಿದ್ದಾರೆ. ಸೋಂಕು ತಗುಲಿರುವ ವಿಚಾರವಾಗಿ …
Read More »ರಾಜ್ಯದಲ್ಲಿ ಮೊದಲ ಬಾರಿಗೆ 1 ಲಕ್ಷ ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ 1 ಲಕ್ಷ ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಒಟ್ಟು 48,658 ಮಂದಿಗೆ ಆಂಟಿಜನ್ ಟೆಸ್ಟ್ 55,690 ಮಂದಿಗೆ ಆರ್‌ಟಿಪಿಸಿಆರ್ ಮತ್ತು ಇತ್ಯಾದಿ ಪರೀಕ್ಷೆ ಸೇರಿದಂತೆ ಒಟ್ಟು 1,04,348 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 55,24,302 ಕೊರೊನಾ ಪರೀಕ್ಷೆ ಮಾಡಲಾಗಿದೆ. ಇಂದು ರಾಜ್ಯದಲ್ಲಿ 10,947 ಮಂದಿಗೆ ಸೋಂಕು ಬಂದಿದ್ದು, ಆಸ್ಪತ್ರೆಯಿಂದ 9,832 ಮಂದಿ ಬಿಡುಗಡೆಯಾಗಿದ್ದಾರೆ. 113 ಮಂದಿ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ …
Read More »ಭಾರತದ ವಾಯುಪಡೆ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು
ನವದೆಹಲಿ,ಅ.7- ವಿಶ್ವದ ಅತ್ಯಂತ ಪ್ರಬಲ ವಾಯುಪಡೆಗಳಲ್ಲಿ ಒಂದಾದ ಇಂಡಿಯನ್ ಏರ್ ಫೋರ್ಸ್ (ಐಎಎಫ್)ನ 88ನೇ ವಾರ್ಷಿಕ ದಿನಾಚರಣೆ ಪ್ರಯುಕ್ತ ನಾಳೆ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿವೆ. ಒಂದೆಡೆ ಚೀನಾ, ಇನ್ನೊಂದೆಡೆ ಪಾಕಿಸ್ತಾನದಿಂದ ಗಡಿಭಾಗಗಳಲ್ಲಿ ಆಗಾಗ ಉಪಟಳ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಐಎಎಫ್ ಡೇ ಸಮಾರಂಭದಲ್ಲಿ ಭಾರತೀಯ ವಾಯುಪಡೆಯ ಅಗಾಧ ಶಕ್ತಿ ಅನಾವರಣಗೊಳ್ಳಲಿದೆ. ಐಎಎಫ್‍ನ ಜಾಗ್ವಾರ್, ಮಿಗಿ 29, ಮಿಗಿ 21, ಸುಕೋಯ್ ಯುದ್ಧ ವಿಮಾನಗಳು ನಾಳಿನ ವಾಯುಪಡೆ ದಿನಾಚರಣೆ ಸಂದರ್ಭದಲ್ಲಿ ಬಾನಾಂಗಳದಲ್ಲಿ ರೋಚಕ …
Read More »ಕೊರೋನಾ ಆತಂಕದಲ್ಲಿದ್ದ ವಿಶ್ವಕ್ಕೆ ಸಮಾಧಾನಕರ ಸುದ್ದಿ ಕೊಟ್ಟ WHO..!
ವಿಶ್ವಸಂಸ್ಥೆ,ಅ.7-ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕು ಪೀಡಿತರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಹಲವು ಏಳುಬೀಳುಗಳ ನಡುವೆಯೇ ಕೋವಿಡ್-19 ಸೋಂಕಿನ ಚಿಕಿತ್ಸೆಗೆ ಈ ವರ್ಷಾಂತ್ಯಕ್ಕೆ ಔಷ ಲಭ್ಯವಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೋಸ್ ಅದನೌ ಗೆಬ್ರಿಯಾಸಿಸ್ ಇದನ್ನು ಪ್ರಕಟಿಸಿದ್ದು, ಈ ವರ್ಷದ ಅಂತ್ಯದವರೆಗೆ ಕೊರೊನಾಗೆ ಔಷ ಲಭ್ಯವಾಗಲಿದೆ. ವರ್ಷಾಂತ್ಯಕ್ಕೆ ಔಷ ಸಿಗಲಿದೆ ಎಂಬ ಆಶಾ ಭಾವನೆಯನ್ನು ಹೊಂದಿದ್ದೇವೆ. ಇನ್ನು …
Read More »ಈಗ ಸಿ.ಟಿ.ರವಿ ಏಕಕಾಲಕ್ಕೆ ಐದು ರಾಜ್ಯ, ಎರಡು ಕೇಂದ್ರಾಡಳಿತ ಪ್ರದೇಶಗಳ ಉಸ್ತುವಾರಿ
ಬೆಂಗಳೂರು,ಅ.7- ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದ ಸಚಿವ ಸಿ.ಟಿ.ರವಿ ಅವರಿಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳ ಉಸ್ತುವಾರಿಯನ್ನು ನೀಡಲಾಗಿದೆ. ನವದೆಹಲಿಯಲ್ಲಿ ನಿನ್ನೆ ನಡೆದ ಪಕ್ಷದ ಪ್ರಮುಖ ಪದಾಕಾರಿಗಳ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಕೆಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ. ಇದರಲ್ಲಿ ಸಚಿವ ಸಿ.ಟಿ.ರವಿ ಅವರಿಗೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಲಕ್ಷದ್ವೀಪಗಳ ಉಸ್ತುವಾರಿಯನ್ನು ವಹಿಸಲಾಗಿದೆ. …
Read More »ವಿಶ್ವದ ಅತಿ ಎತ್ತರದ ಗಗನಚುಂಬಿ ಕಟ್ಟಡವಾಗಿರುವ ಬುರ್ಜ್ ಖಲೀಫಾ
ಮರಳುಗಾಡಿನ ಮಧ್ಯೆ ವಿಶ್ವದ ಪ್ರಮುಖ ವಾಣಿಜ್ಯ ಕೇಂದ್ರವಾಗಿ ಪರಿಣಮಿಸಿರುವ ನಗರವೆಂದರೆ ಅದು ದುಬೈ. ವಿಶ್ವದ ಅತಿ ಎತ್ತರದ ಗಗನಚುಂಬಿ ಕಟ್ಟಡವಾಗಿರುವ ಬುರ್ಜ್ ಖಲೀಫಾವನ್ನು ಹೊಂದಿರುವ ಖ್ಯಾತಿ ಸಹ ದುಬೈ ಪಡೆದಿದೆ. ಇದೀಗ, ಇದೇ ದುಬೈ ನಗರ ಮತ್ತೊಂದು ದಾಖಲೆ ಸೃಷ್ಟಿಸಲು ಮುಂದಾಗಿದೆ. ಹೌದು, ಇದೇ ಅಕ್ಟೋಬರ್ 22ರಂದು ದುಬೈ ಪ್ರಪಂಚದ ಅತಿದೊಡ್ಡ ಕಾರಂಜಿಯನ್ನು ಲೋಕಾರ್ಪಣೆ ಮಾಡಲಿದೆ. ಈ ಮೂಲಕ ಪ್ರಪಂಚದ ಅತಿದೊಡ್ಡ ಕಾರಂಜಿ ಎಂಬ ಗಿನ್ನಿಸ್ ದಾಖಲೆ ರಚಿಸಲು ಮುಂದಾಗಿದೆ. …
Read More »ಆರ್‌ಬಿಐ ಎಂಪಿಸಿಗೆ ಕನ್ನಡಿಗ ಶಶಾಂಕ್ ಭಿಡೆ ನೇಮಕ
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಹಣಕಾಸು ನೀತಿ ಸಮಿತಿಗೆ (ಎಂಪಿಸಿ) ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಶಾಂಕ್ ಭಿಡೆ ಸದಸ್ಯರಾಗಿ ನೇಮಕವಾಗಿದ್ದಾರೆ. ಹಣಕಾಸು ನೀತಿ ಸಮಿತಿಯ ಸದಸ್ಯರ ಆಯ್ಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ನೇಮಕಾತಿ ಸಮಿತಿಯು (ಸಿಸಿಎ) ಅನುಮೋದನೆ ನೀಡಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ಶಶಾಂಕ್ ಭಿಡೆ ಯಾರು? ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಜನಿಸಿದ್ದ ಶಶಾಂಕ್ ಭಿಡೆ …
Read More »7 ಲಕ್ಷ ಲಂಚ – ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಲೇಡಿ ತಹಶೀಲ್ದಾರ್
ಬೆಂಗಳೂರು: 7 ಲಕ್ಷ ಲಂಚ ಪಡೆಯುವ ವೇಳೆ ಮಹಿಳಾ ತಹಶೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಜಿ ರೋಡ್‍ನಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೇಡ್ ಹ್ಯಾಂಡ್ ಆಗಿ …
Read More »ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮ ,ಯಾರಿಗೆ ಕೊರೊನಾ ಟೆಸ್ಟ್ ಕಡ್ಡಾಯ.. ?
ಬೆಂಗಳೂರು: ರಾಜ್ಯ ಸರ್ಕಾರ ಇಷ್ಟು ದಿನ ಮೈಮರೆತು ಕುಳಿತಿದ್ದ ಕಾರಣ ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದ್ದರೆ ರಾಜ್ಯದಲ್ಲಿ ಮಾತ್ರ ಕಳೆದ ಮೂರು ವಾರಗಳಿಂದ ತೀವ್ರತೆ ಶೇ.39ರಷ್ಟು ಹೆಚ್ಚಾಗಿದೆ. ಹೀಗಾಗಿ, ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ಸರ್ಕಾರ ಮನಸ್ಸು ಮಾಡಿದಂತೆ ಕಾಣುತ್ತಿದೆ. ಸರ್ಕಾರದ ಬತ್ತಳಿಕೆಯಲ್ಲಿದ್ದ ಮತ್ತೆ ಹಳೇ ನಿಯಮಗಳನ್ನು ಒಂದೊಂದಾಗಿ ಜಾರಿ ಮಾಡುತ್ತಿದೆ.ಮೊನ್ನೆಯಷ್ಟೇ …
Read More »ನನ್ನ ಹತ್ತಿರ ಹೆಲ್ಮೆಟ್ ಕೊಳ್ಳೋಕೂ ದುಡ್ಡಿಲ್ಲ. ಇನ್ನು ಮಾಸ್ಕ್ಗೆ ದಂಡ ಎಲ್ಲಿಂದ ಕಟ್ಟೋದು
ಬೆಂಗಳೂರು: ನಗರದಲ್ಲಿ ಮಾಸ್ಕ್ ಧರಿಸದವರಿಗೆ ಬಿಬಿಎಂಪಿ ಮಾರ್ಷಲ್ಗಳು ದಂಡ ವಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮಾರ್ಷಲ್ಗಳು ಕಾರ್ಯಾಚರಣೆಗೆ ಮುಂದಾದರು. ಈ ನಡುವೆ ಸರ್ ನನ್ನ ಹತ್ತಿರ ಕಾಸಿಲ್ಲ. ಹಾಗಾಗಿ ಮಾಸ್ಕ್ ಕೊಳ್ಳೋಕೆ ಆಗ್ಲಿಲ್ಲ. ಬೇಕಿದ್ರೆ ನನ್ ಬ್ಯಾಗ್ ಚೆಕ್ ಮಾಡಿ ಅಂತಾ ಯುವಕನೊಬ್ಬ ಮಾರ್ಷಲ್ಗಳಿಗೆ ಹೇಳಿದ್ದಾನೆ. ಮಾರ್ಷಲ್ಗಳು ಪ್ರಶ್ನಿಸುತ್ತಿದ್ದಂತೆ ಜೇಬಿನಲ್ಲಿ ಕೈಹಾಕಿ ಮಾಸ್ಕ್ಗಾಗಿ ಹುಡುಕಾಟ ನಡೆಸಿದನು. ಬಳಿಕ ಮಾಸ್ಕ್ ಹಾಕಿಲ್ಲ, ಫೈನ್ ಕಟ್ಟಿ ಅಂತಿದ್ದ ಹಾಗೆ ಗಳಗಳನೆ ಅಳಲು …
Read More »
Laxmi News 24×7