Breaking News

ರಾಷ್ಟ್ರೀಯ

ಕೋವಿಡ್ ವಾರ್ಡಿನಲ್ಲಿ ಗ್ರಂಥಾಲಯದ ಸೌಲಭ್ಯ

ಶಿವಮೊಗ್ಗ: ಕೊರೊನಾ ಸೋಂಕಿತರು ಮಾನಸಿಕ ಖಿನ್ನತೆ ಹಾಗೂ ಒಂಟಿತನದಿಂದ ಹೊರ ಬರುವ ಸಲುವಾಗಿ ಶಿವಮೊಗ್ಗ ಜಿಲ್ಲೆ ಸಾಗರದ ಕೋವಿಡ್ ವಾರ್ಡಿನಲ್ಲಿ ಆರೋಗ್ಯ ಸಿಬ್ಬಂದಿ ಸೋಂಕಿತರಿಗಾಗಿ ಗ್ರಂಥಾಲಯ ತೆರೆದಿದ್ದಾರೆ.ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಹಲವು ಮಂದಿ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಕೊರೊನಾ ತುತ್ತಾಗಿ ಚಿಕಿತ್ಸೆ ಪಡೆಯಬೇಕಾದರೆ ತಮ್ಮವರಿಂದ ದೂರವಿದ್ದು ಚಿಕಿತ್ಸೆ ಪಡೆಯುವ ಅನಿವಾರ್ಯತೆ ಇದೆ. ಹೀಗಾಗಿ ಸೋಂಕಿತರಿಗೆ ಒಂಟಿತನ ಕಾಡುತ್ತಿದೆ. ಈ ಮಾನಸಿಕ ಖಿನ್ನತೆ ಹಾಗೂ ಒಂಟಿತನದಿಂದ ಸೋಂಕಿತರು ಹೊರ …

Read More »

ಬೆಂಗಳೂರಿಗೆ ಬರುವಾಗ ದಾರಿ ಮಧ್ಯೆ ವಿಮಾನದಲ್ಲಿ ಯಶಸ್ವಿ ಹೆರಿಗೆ

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಗರ್ಭಿಣಿಯೊಬ್ಬರು ವಿಮಾನದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ವೇಳೆ ವಿಮಾನದಲ್ಲಿ ಪ್ರಸೂತಿ ತಜ್ಞೆ ಬೆಂಗಳೂರಿನ ಕ್ಲೌಡ್‌ ನೈನ್‌ ಆಸ್ಪತ್ರೆಯ ಡಾ. ಶೈಲಜಾ ವಲ್ಲಭನಿ ಪ್ರಯಾಣಿಸುತ್ತಿದ್ದರು. ಹೆರಿಗೆ ನೋವಾಗುತ್ತಿದ್ದಂತೆ ಇಂಡಿಗೋ ಸಿಬ್ಬಂದಿ ಸಹಕಾರದಿಂದ ಡಾ. ಶೈಲಜಾ ಅವರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ ಆಗುತ್ತಿದ್ದಂತೆ ಅಂಬುಲೆನ್ಸ್‌ ಸಿದ್ಧವಾಗಿ ನಿಂತಿತ್ತು. ಅಂಬುಲೆನ್ಸ್‌ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ ಈಗ ಪ್ರಯಾಣಿಕರು …

Read More »

ಸಚಿವ ಪ್ರಹ್ಲಾದ್ ಜೋಶಿಯವರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇತ್ತೀಚೆಗೆ ಕೊರೊನಾ ಸೋಂಕು ರಾಜಕಾರಣಿಗಳನ್ನು ಬೆನ್ನು ಬಿಡದೆ ಕಾಡುತ್ತಿದೆ. ಇತ್ತೀಚೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೂ ಕೂಡ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಕೇಂದ್ರ ಸಚಿವರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ತಮಗೆ ಕೊರೊನಾ ಸೋಂಕು ತಗಲಿರುವ ಸುದ್ದಿಯನ್ನು ಸ್ವತಃ ಸಚಿವರೇ ಟ್ವೀಟ್ ಮಾಡಿ ಖಚಿತ ಪಡಿಸಿದ್ದಾರೆ. ಸೋಂಕು ತಗುಲಿರುವ ವಿಚಾರವಾಗಿ …

Read More »

ರಾಜ್ಯದಲ್ಲಿ ಮೊದಲ ಬಾರಿಗೆ 1 ಲಕ್ಷ ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ 1 ಲಕ್ಷ ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಒಟ್ಟು 48,658 ಮಂದಿಗೆ ಆಂಟಿಜನ್ ಟೆಸ್ಟ್ 55,690 ಮಂದಿಗೆ ಆರ್‌ಟಿಪಿಸಿಆರ್‌ ಮತ್ತು ಇತ್ಯಾದಿ ಪರೀಕ್ಷೆ ಸೇರಿದಂತೆ ಒಟ್ಟು 1,04,348 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 55,24,302 ಕೊರೊನಾ ಪರೀಕ್ಷೆ ಮಾಡಲಾಗಿದೆ. ಇಂದು ರಾಜ್ಯದಲ್ಲಿ 10,947 ಮಂದಿಗೆ ಸೋಂಕು ಬಂದಿದ್ದು, ಆಸ್ಪತ್ರೆಯಿಂದ 9,832 ಮಂದಿ ಬಿಡುಗಡೆಯಾಗಿದ್ದಾರೆ. 113 ಮಂದಿ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ …

Read More »

ಭಾರತದ ವಾಯುಪಡೆ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು

ನವದೆಹಲಿ,ಅ.7- ವಿಶ್ವದ ಅತ್ಯಂತ ಪ್ರಬಲ ವಾಯುಪಡೆಗಳಲ್ಲಿ ಒಂದಾದ ಇಂಡಿಯನ್ ಏರ್ ಫೋರ್ಸ್ (ಐಎಎಫ್)ನ 88ನೇ ವಾರ್ಷಿಕ ದಿನಾಚರಣೆ ಪ್ರಯುಕ್ತ ನಾಳೆ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿವೆ. ಒಂದೆಡೆ ಚೀನಾ, ಇನ್ನೊಂದೆಡೆ ಪಾಕಿಸ್ತಾನದಿಂದ ಗಡಿಭಾಗಗಳಲ್ಲಿ ಆಗಾಗ ಉಪಟಳ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಐಎಎಫ್ ಡೇ ಸಮಾರಂಭದಲ್ಲಿ ಭಾರತೀಯ ವಾಯುಪಡೆಯ ಅಗಾಧ ಶಕ್ತಿ ಅನಾವರಣಗೊಳ್ಳಲಿದೆ. ಐಎಎಫ್‍ನ ಜಾಗ್ವಾರ್, ಮಿಗಿ 29, ಮಿಗಿ 21, ಸುಕೋಯ್ ಯುದ್ಧ ವಿಮಾನಗಳು ನಾಳಿನ ವಾಯುಪಡೆ ದಿನಾಚರಣೆ ಸಂದರ್ಭದಲ್ಲಿ ಬಾನಾಂಗಳದಲ್ಲಿ ರೋಚಕ …

Read More »

ಕೊರೋನಾ ಆತಂಕದಲ್ಲಿದ್ದ ವಿಶ್ವಕ್ಕೆ ಸಮಾಧಾನಕರ ಸುದ್ದಿ ಕೊಟ್ಟ WHO..!

ವಿಶ್ವಸಂಸ್ಥೆ,ಅ.7-ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕು ಪೀಡಿತರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಹಲವು ಏಳುಬೀಳುಗಳ ನಡುವೆಯೇ ಕೋವಿಡ್-19 ಸೋಂಕಿನ ಚಿಕಿತ್ಸೆಗೆ ಈ ವರ್ಷಾಂತ್ಯಕ್ಕೆ ಔಷ ಲಭ್ಯವಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೋಸ್ ಅದನೌ ಗೆಬ್ರಿಯಾಸಿಸ್ ಇದನ್ನು ಪ್ರಕಟಿಸಿದ್ದು, ಈ ವರ್ಷದ ಅಂತ್ಯದವರೆಗೆ ಕೊರೊನಾಗೆ ಔಷ ಲಭ್ಯವಾಗಲಿದೆ. ವರ್ಷಾಂತ್ಯಕ್ಕೆ ಔಷ ಸಿಗಲಿದೆ ಎಂಬ ಆಶಾ ಭಾವನೆಯನ್ನು ಹೊಂದಿದ್ದೇವೆ. ಇನ್ನು …

Read More »

ಈಗ ಸಿ.ಟಿ.ರವಿ ಏಕಕಾಲಕ್ಕೆ ಐದು ರಾಜ್ಯ, ಎರಡು ಕೇಂದ್ರಾಡಳಿತ ಪ್ರದೇಶಗಳ ಉಸ್ತುವಾರಿ

ಬೆಂಗಳೂರು,ಅ.7- ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದ ಸಚಿವ ಸಿ.ಟಿ.ರವಿ ಅವರಿಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳ ಉಸ್ತುವಾರಿಯನ್ನು ನೀಡಲಾಗಿದೆ. ನವದೆಹಲಿಯಲ್ಲಿ ನಿನ್ನೆ ನಡೆದ ಪಕ್ಷದ ಪ್ರಮುಖ ಪದಾಕಾರಿಗಳ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಕೆಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ. ಇದರಲ್ಲಿ ಸಚಿವ ಸಿ.ಟಿ.ರವಿ ಅವರಿಗೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಲಕ್ಷದ್ವೀಪಗಳ ಉಸ್ತುವಾರಿಯನ್ನು ವಹಿಸಲಾಗಿದೆ. …

Read More »

ವಿಶ್ವದ ಅತಿ ಎತ್ತರದ ಗಗನಚುಂಬಿ ಕಟ್ಟಡವಾಗಿರುವ ಬುರ್ಜ್​ ಖಲೀಫಾ

ಮರಳುಗಾಡಿನ ಮಧ್ಯೆ ವಿಶ್ವದ ಪ್ರಮುಖ ವಾಣಿಜ್ಯ ಕೇಂದ್ರವಾಗಿ ಪರಿಣಮಿಸಿರುವ ನಗರವೆಂದರೆ ಅದು ದುಬೈ. ವಿಶ್ವದ ಅತಿ ಎತ್ತರದ ಗಗನಚುಂಬಿ ಕಟ್ಟಡವಾಗಿರುವ ಬುರ್ಜ್​ ಖಲೀಫಾವನ್ನು ಹೊಂದಿರುವ ಖ್ಯಾತಿ ಸಹ ದುಬೈ ಪಡೆದಿದೆ. ಇದೀಗ, ಇದೇ ದುಬೈ ನಗರ ಮತ್ತೊಂದು ದಾಖಲೆ ಸೃಷ್ಟಿಸಲು ಮುಂದಾಗಿದೆ. ಹೌದು, ಇದೇ ಅಕ್ಟೋಬರ್​ 22ರಂದು ದುಬೈ ಪ್ರಪಂಚದ ಅತಿದೊಡ್ಡ ಕಾರಂಜಿಯನ್ನು ಲೋಕಾರ್ಪಣೆ ಮಾಡಲಿದೆ. ಈ ಮೂಲಕ ಪ್ರಪಂಚದ ಅತಿದೊಡ್ಡ ಕಾರಂಜಿ ಎಂಬ ಗಿನ್ನಿಸ್​ ದಾಖಲೆ ರಚಿಸಲು ಮುಂದಾಗಿದೆ. …

Read More »

ಆರ್‌ಬಿಐ ಎಂಪಿಸಿಗೆ ಕನ್ನಡಿಗ ಶಶಾಂಕ್ ಭಿಡೆ ನೇಮಕ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಹಣಕಾಸು ನೀತಿ ಸಮಿತಿಗೆ (ಎಂಪಿಸಿ) ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಶಾಂಕ್ ಭಿಡೆ ಸದಸ್ಯರಾಗಿ ನೇಮಕವಾಗಿದ್ದಾರೆ. ಹಣಕಾಸು ನೀತಿ ಸಮಿತಿಯ ಸದಸ್ಯರ ಆಯ್ಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ನೇಮಕಾತಿ ಸಮಿತಿಯು (ಸಿಸಿಎ) ಅನುಮೋದನೆ ನೀಡಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ಶಶಾಂಕ್ ಭಿಡೆ ಯಾರು? ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಜನಿಸಿದ್ದ ಶಶಾಂಕ್ ಭಿಡೆ …

Read More »

7 ಲಕ್ಷ ಲಂಚ – ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಲೇಡಿ ತಹಶೀಲ್ದಾರ್

ಬೆಂಗಳೂರು: 7 ಲಕ್ಷ ಲಂಚ ಪಡೆಯುವ ವೇಳೆ ಮಹಿಳಾ ತಹಶೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಜಿ ರೋಡ್‍ನಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೇಡ್ ಹ್ಯಾಂಡ್ ಆಗಿ …

Read More »