ಕೋಲ್ಕತ್ತಾ: ವಿಡಿಯೋ ಚಾಟ್ ಆ್ಯಪ್ ‘ಫ್ಯಾನ್ಸಿಯೂ’ ಪ್ರಚಾರಕ್ಕಾಗಿ ಒಪ್ಪಿಗೆಯಿಲ್ಲದೆ ನನ್ನ ಫೋಟೋವನ್ನು ಬಳಸಿದೆ ಎಂದು ನಟಿ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಕೋಲ್ಕತ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ನಟಿ ನುಸ್ರತ್ ಜಹಾನ್ ಟ್ವೀಟ್ ಮಾಡುವ ಮೂಲಕ ತಮ್ಮ ಫೋಟೋವನ್ನು ಬಳಸಿರುವುದಾಗಿ ದೂರು ನೀಡಿದ್ದಾರೆ. ಅಲ್ಲದೇ ವಿಡಿಯೋ ಚಾಟ್ ಆ್ಯಪ್‍ಗಾಗಿ ಜಾಹೀರಾತಿ ನೀಡಿರುವ ಸ್ಕ್ರೀನ್‍ಶಾಟ್ ಕ್ಲಿಕ್ಕಿಸಿಕೊಂಡಿದ್ದು, ಆ ಫೋಟೋವನ್ನು ಟ್ವಿಟ್ಟರಿನಲ್ಲಿ ಶೇರ್ ಮಾಡಿದ್ದಾರೆ. ನಂತರ ಈ ಟ್ವೀಟನ್ನು ಕೋಲ್ಕತಾ …
Read More »ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್‍ನ ಹಿಂಭಾಗದ ತಡೆಗೋಡೆ ಕುಸಿದಿದೆ.
ಉಡುಪಿ: ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದ್ದು, ಮಣಿಪಾಲ ಸಿಂಡಿಕೇಟ್ ಸರ್ಕಲ್ ನಲ್ಲಿರುವ ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್‍ನ ಹಿಂಭಾಗದ ತಡೆಗೋಡೆ ಕುಸಿದಿದೆ. ಕಮರ್ಷಿಯಲ್ ಕಂಪ್ಲೆಕ್ಸ್ ಆಗಿರುವ ಪ್ರೀಮಿಯರ್ ಕಟ್ಟಡದ ಜೊತೆ ವಸತಿ ಸಮುಚ್ಛಯ ಸಹ ಇರುವುದರಿಂದ ಅಲ್ಲಿನ ಎಲ್ಲ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಇದೇ ಕಟ್ಟಡದಲ್ಲಿ ವಾಸವಿದ್ದು, ಸದ್ಯ ಕಾಲೇಜುಗಳು ತೆರೆಯದ ಕಾರಣ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಮ್ಮಿ ಇದೆ. …
Read More »ಅಧಿವೇಶನಕ್ಕೆ ಮೊದಲ ದಿನವೇ ಬೆರಳೆಣಿಕೆಯಷ್ಟು ಜನಪ್ರತಿನಿಧಿಗಳು ಭಾಗವಹಿಸಿದ್ದು, ಕಲಾಪ ಕಾಟಾಚಾರಕ್ಕೆ ಸೀಮಿತವಾಗಿತ್ತು.
ಬೆಂಗಳೂರು, ಸೆ.21- ಕೋವಿಡ್ -19 ಆತಂಕದ ನಡುವೆಯೇ ಇಂದಿನಿಂದ ಆರಂಭವಾದ ಮಳೆಗಾಲದ ಅಧಿವೇಶನಕ್ಕೆ ಮೊದಲ ದಿನವೇ ಬೆರಳೆಣಿಕೆಯಷ್ಟು ಜನಪ್ರತಿನಿಧಿಗಳು ಭಾಗವಹಿಸಿದ್ದು, ಕಲಾಪ ಕಾಟಾಚಾರಕ್ಕೆ ಸೀಮಿತವಾಗಿತ್ತು. ಭಾರೀ ನಿರೀಕ್ಷೆ ಹಾಗೂ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೊರೊನಾ ಮಹಾಮಾರಿಯ ಆತಂಕ ಎಲ್ಲರಲ್ಲೂ ಮನೆ ಮಾಡಿತ್ತು. ಹೀಗಾಗಿ ವಿಧಾನಸಭೆ ಹಾಗೂ ವಿಧಾನಪರಿಷತ್‍ನಲ್ಲಿ ಕೇವಲ ಕೆಲವೇ ಕೆಲವು ಮಂದಿ ಸಚಿವರು ಹಾಗೂ ಶಾಸಕರು ಮಾತ್ರ ಭಾಗವಹಿಸಿದ್ದರು. 225 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಮುಖ ಮೂರು …
Read More »ಶಸ್ತ್ರಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ಸೂದ್
ಮುಂಬೈ, ಸೆ. 21- ಕೊರೊನಾದಿಂದ ಬಳಲುತ್ತಿರುವ ಸಂತ್ರಸ್ತರಿಗೆ ನೆರವು ನೀಡುತ್ತಾ ಬಂದಿರುವ ಬಾಲಿವುಡ್ ನಟ ಸೋನು ಸೂದ್ ಈಗ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ಮುಂದಾಗಿದ್ದಾರೆ. ತಮ್ಮ ತಾಯಿಯ ಹೆಸರಿನಲ್ಲಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಸೋನು ಮುಂದಾಗಿದ್ದು, ಈ ನಡುವೆ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರ ಶಸ್ತ್ರಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ್ದಾರೆ. ಅರ್ಜುನ್ ಚೌಹಣ್ ಎಂಬುವವರು ಮೊಣಕಾಲಿನ ನೋವಿನಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗೆ ನೆರವು ನೀಡುವಂತೆ ಸೋನುಸೂದ್‍ಗೆ …
Read More »ಕೆ.ಆರ್.ಪೇಟೆ ಮಾದರಿಯಲ್ಲಿ ಶಿರಾ ಉಪಚುನಾವಣೆ ಗೆಲ್ಲುತ್ತೇವೆ: ವಿಜಯೇಂದ್ರ
ತುಮಕೂರು: ಜಿಲ್ಲೆಯ ಶಿರಾ ವಿಧಾನಸಭೆ ಉಪಸಮರ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಶಿರಾ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಶಿರಾ ನಗರದ ಕೋಟೆ ಬೀದಿ, ಸಂತೆಪೇಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚಾರ ಮಾಡಿ ಮತದಾರರನ್ನು ಭೇಟಿ ಮಾಡಿದರು. ಈ ವೇಳೆ ಟಿಕೆಟ್ ಅಕಾಂಕ್ಷಿಗಳಾದ ಎಸ್. ಆರ್.ಗೌಡ ಬಿ.ಕೆ.ಮಂಜುನಾಥ್ ವಿಜಯೇಂದ್ರ ಅವರಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಕೆ.ಆರ್.ಪೇಟೆ …
Read More »ಪ್ರಭಾವಿ ರಾಜಕಾರಣಿಯ ಕೈವಾಡ ದೊಡ್ಡದಾಗಿದೆ – ಸಿಸಿಬಿ ತನಿಖೆ ಅಷ್ಟು ಖುಷಿ ಕೊಟ್ಟಿಲ್:ಇಂದ್ರಜಿತ್
ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ನಟಿಯರಷ್ಟೇ ಅಲ್ಲ ನಟರು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳಿದ್ದಾರೆ. ಸರ್ಕಾರದಲ್ಲೇ ಕೆಲಸ ಮಾಡುತ್ತಿರುವ ಹಿರಿಯ ನಿರ್ದೇಶಕರ ಮಗನನ್ನ ಯಾಕೆ ಇನ್ನೂ ಕರೆಸಿಲ್ಲ? ಬೇರೇ ಇಲ್ಲದೆ ಇರುವವರನ್ನು ಕರೆದುಕೊಂಡು ಬಂದು ಸುಮ್ಮನೆ ವಿಚಾರಣೆ ಮಾಡುತ್ತಿದ್ದಾರೆ. ಹೀಗಾಗಿ ಇದು ಯಾವುದೇ ರಾಜಕೀಯ ಪ್ರಭಾವ ಇಲ್ಲದೆ ನಡೆಸುತ್ತಿರುವ ವಿಚಾರಣೆ ಎಂದು ನಮಗೆ ಅನ್ನಿಸುತ್ತಿಲ್ಲ ಎಂದು ನಟ, ನಿರ್ದೇಶಕ ಇಂದ್ರಜಿತ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್, ನನಗೆ ಗೊತ್ತಿರುವ ವಿಚಾರವನ್ನು …
Read More »ಡ್ರಗ್ಸ್ ದಂಧೆಯಲ್ಲಿ ರಾಗಿಣಿ ಆ್ಯಕ್ಟಿವ್ ಮೆಂಬರ್ – ಸೆ.24ರವರೆಗೂ ರಾಗಿಣಿ, ಸಂಜನಾಗೆ ಜೈಲು ಫಿಕ್ಸ್
ಬೆಂಗಳೂರು: ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಎನ್‍ಡಿಪಿಎಸ್ ವಿಶೇಷ ಕೋರ್ಟ್, ವಿಚಾರಣೆಯನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಿ ಆದೇಶಿಸಿದೆ. ನಟಿ ಸಂಜನಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಸಿಸಿಬಿ ಕಾಲಾವಕಾಶ ಕೇಳಿತ್ತು. ಸಿಸಿಬಿ ಮನವಿಗೆ ಸಮ್ಮಿಸಿದ ನ್ಯಾಯಾಲಯ ಸಂಜನಾ ಬೇಲ್ ಅರ್ಜಿಯನ್ನ ಸೆಪ್ಟೆಂಬರ್ 24ಕ್ಕೆ ಮುಂದೂಡಲಾಗಿದೆ. ಹಾಗಾಗಿ ಸಂಜನಾ ಇನ್ನು ಮೂರು ದಿನ ಪರಪ್ಪನ ಅಗ್ರಹಾರದಲ್ಲಿರಬೇಕಾಗಿದೆ. ರಾಗಿಣಿ ಅರ್ಜಿಯ ವಿಚಾರಣೆ ನಡೆಸಿದ್ದು, …
Read More »ಶಾಸಕ ಐಹೊಳೆಗೆ ಕೋವಿಡ್ ದೃಢ.
ಬೆಳಗಾವಿ: ರಾಯಬಾಗ ಬಿಜೆಪಿ ಶಾಸಕ ಡಿ.ಎಂ. ಐಹೊಳೆ ಅವರಿಗೆ ಸೋಮವಾರ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಯಾವುದೇ ರೀತಿಯ ರೋಗದ ಲಕ್ಷಣಗಳಿಲ್ಲ. ಆರೋಗ್ಯವಾಗಿದ್ದು, ಬೆಂಗಳೂರಿನ ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗದಂತೆ ಬೆಂಗಳೂರಿನಿಂದಲೇ ನಿಗಾ ವಹಿಸುತ್ತೇನೆ’ ಎಂದು ತಿಳಿಸಿದ್ದಾರೆ.
Read More »ಜೂಜಾಟ: 22 ಮಂದಿ ಬಂಧನ.
ಬೆಳಗಾವಿ: ಇಲ್ಲಿನ ರಾಜಹಂಸ ಗಲ್ಲಿಯ ಸದಾನಂದ ಮಠದ ಪಕ್ಕದ ಗಲ್ಲಿಯಲ್ಲಿ ಭಾನುವಾರ ಮಧ್ಯರಾತ್ರಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ 22 ಮಂದಿಯನ್ನು ಟಿಳಕವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜೂರ ಚೋಪಧಾರ, ಪ್ರದೀಪ ಲಾಟೂಕರ, ಮೋಯಿಜ ಗಚವಾಲೆ, ವಿಜಯ ಪಾಟೀಲ, ಪರಶುರಾಮ ಮೇತ್ರಿ, ಸುಶೀಲ ಮುದೋಳಕರ, ಬಾಬು ಯಾದವ, ಅನಿಲ ಯಳ್ಳೂರಕರ, ಕಿಸನ ಪಾಟೀಲ, ಜಹಾಂಗೀರಖಾನ ಪಠಾಣ, ವಿಜಯ ಶಿಂದೋಳಕರ, ದೀಪಕ ಹೊನ್ಯಾಳಕರ, ಆಕಾಶ ಜಕ್ಕಾನೆ, ವಿನಾಯಕ ಗಣಾಚಾರಿ, ಸಾಗರ ಮುತಗೇಕರ, …
Read More »ವಿಧಾನಸಭೆಯಲ್ಲಿ ಸಂತಾಪ ಸೂಚನೆ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೊನಾ ಬಗ್ಗೆ ಆತಂಕ ವ್ಯಕ್ತಪಡಿಸಿದರು.
ಬೆಂಗಳೂರು: ಇಂದಿನಿಂದ ವಿಧಾನಸಭಾ ಕಲಾಪ ಆರಂಭವಾಗಿದ್ದು, ವಿಧಾನಸಭೆಯಲ್ಲಿ ಸಂತಾಪ ಸೂಚನೆ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೊನಾ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನನಗೆ, ನನ್ನ ಹೆಂಡತಿಗೆ, ಮಗನಿಗೆ ಕೊರೊನಾ ಬಂದುಬಿಟ್ಟಿತ್ತು. ಯಾರೂ ನಮ್ಮ ನೋಡಂಗಿಲ್ಲ, ನಮ್ಮ ಹತ್ರ ಬರಂಗಿಲ್ಲ. ಯಾರಿಗೆ ಕೊರೊನಾ ಬಂದಿದೆಯೋ ಅವರು ಯಾರೂ ಭಯಪಡಬೇಕಿಲ್ಲ ಎಂದರು ಈ ಕೊರೊನಾ ಇದ್ಯಲ್ಲಾ ಇದು ಬಹಳ ಅಪಾಯಕಾರಿ. ಅದರ ಬಗ್ಗೆ ನನಗೆ ಚೆನ್ನಾಗಿ ಗೊತ್ತು. ಈಶ್ವರಪ್ಪನಿಗೂ ಬಂದಿತ್ತು ಅಂತ …
Read More »