ಕೋಲಾರ: ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಎರಡು ದಶಕಗಳ ನಂತರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತೆರೆಮರೆಯಲ್ಲಿ ತಯಾರಿಗಳು ನಡೆಯುತ್ತಿವೆ. ಈಗಾಗಲೇ ಚಿನ್ನದ ಗಣಿಯ ಭೂಮಿ ಹಾಗೂ ಮಣ್ಣಿನ ಪರೀಕ್ಷೆಗಳು ನಡೆಯುತ್ತಿದ್ದು, ಚಿನ್ನದ ನಾಡಿನ ಗತ ವೈಭವ ಮತ್ತೆ ಮರುಕಳಿಸುತ್ತಾ ಅನ್ನೋ ನಿರೀಕ್ಷೆ ಗರಿಗೆದರಿವೆ. ಜಿಲ್ಲೆಯ ಕೆಜಿಎಫ್ ನಗರ ಚಿನ್ನ ಬೆಳೆಯುತ್ತಿದ್ದ ನೆಲ. ಒಂದು ಕಾಲದಲ್ಲಿ ಇಡೀ ವಿಶ್ವಕ್ಕೆ ಚಿನ್ನವನ್ನು ಕೊಟ್ಟಂತಹ ಇತಿಹಾಸವೇ ಇದೆ. ಆದರೆ ಚಿನ್ನ ಬರಿದಾಗಿ …
Read More »ಆರು ವರ್ಷಗಳಿಂದ ರೈತರ ಮೇಲೆ ಮೋದಿಯವ್ರ ವಕ್ರದೃಷ್ಟಿ ಬಿದ್ದಿರ್ಲಿಲ್ಲ: ಕೃಷ್ಣಭೈರೇಗೌಡ
ಬೆಂಗಳೂರು: ಕಳೆದ ಆರು ವರ್ಷಗಳಿಂದ ರೈತರ ಮೇಲೆ ಪ್ರಧಾನಿ ಮೋದಿಯವರ ವಕ್ರದೃಷ್ಟಿ ಬಿದ್ದಿರಲಿಲ್ಲ. ಹೀಗಾಗಿ ರೈತರ ಆದಾಯ ಕಡಿಮೆ ಆಗಿರಲಿಲ್ಲ ಎಂದು ಶಾಸಕ ಕೃಷ್ಣಭೈರೇಗೌಡ ಹೇಳಿದ್ದಾರೆ. ನಗರದಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಈಗ ಅಂಬಾನಿ ಮತ್ತು ಅದಾನಿ ಮಾತ್ರ ಶ್ರೀಮಂತರಾದ್ರು. ದೇಶ ಹಿಂದೆ ಬಿದ್ರೆ ಅಂಬಾನಿ ಮಾತ್ರ ಪ್ರಪಂಚದಲ್ಲಿಯೇ ಐದನೇ ಶ್ರೀಮಂತರಾದ್ರು. ಬಿಜೆಪಿ ಇದೇ ರೀತಿ ಮುಂದುವರಿಯಲು ಬಿಟ್ರೆ ದೇಶ ಅಧೋಗತಿಗೆ ಹೋಗುತ್ತೆ. ಕೇಂದ್ರ ಮತ್ತು …
Read More »ಅಧಿವೇಶನಕ್ಕೆ ಬಂದ ಶಾಸಕರಿಗೆ ಕೊರೋನಾ ಭಯ, ಈಗಾಗಲೇ ಹಲವರಿಗೆ ಪಾಸಿಟಿವ್..!
ಬೆಂಗಳೂರು, ಸೆ.28- ವಿಧಾನಸಭೆ ಅವೇಶನ ಮುಗಿದ ಬಳಿಕ ಹಲವಾರು ಮಂದಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಸೋಂಕಿನ ಭೀತಿ ಎದುರಿಸುತ್ತಿದ್ದಾರೆ. ಈವರೆಗೆ ಶಾಸಕರಾದ ದಿನೇಶ್ ಗುಂಡುರಾವ್, ಎಚ್.ಕೆ.ಪಾಟೀಲ್ ಸೇರಿದಂತೆ ಹಲವಾರು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಪರೀಕ್ಷೆಗೆ ಒಳಗಾದ ಬಹಳಷ್ಟು ಮಂದಿ ತಮಗೆ ಸೋಂಕಿರುವ ಬಗ್ಗ ಹೇಳಿಕೊಳ್ಳದೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶನಿವಾರ ಮಧ್ಯ ರಾತ್ರಿ 11 ಗಂಟೆವೆರೆಗೂ ವಿಧಾನಮಂಡಲ ಮತ್ತು ವಿಧಾನಸಭೆ ಅವೇಶನ ನಡೆದಿತ್ತು. ದಿನೇಶ್ ಗುಂಡುರಾವ್, ಎಚ್.ಕೆ.ಪಾಟೀಲ್ ಭಾಗವಹಿಸಿದ್ದರು, …
Read More »ಅಧಿವೇಶನ ಯಶಸ್ವಿ ಹಾಗೂ ಅತ್ಯುತ್ತಮವಾಗಿ ನಡೆದಿದೆ : ವಿಧಾನಸಭಾಧ್ಯಕ್ಷ ಕಾಗೇರಿ
ಬೆಂಗಳೂರು,ಸೆ.28- 17ನೇ ವಿಧಾನಸಭೆಯ 7ನೇ ಅಧಿವೇಶನದ ಕಾರ್ಯಕಲಾಪಗಳು ಆರು ದಿನ, 40 ಗಂಟೆಗಳ ಕಾಲ ಅತ್ಯಂತ ಯಶಸ್ವಿಯಾಗಿ ಹಾಗೂ ಅತ್ಯುತ್ತಮವಾಗಿ ನಡೆದಿವೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.21ರಿಂದ 26ರ ರಾತ್ರಿ 11 ಗಂಟೆವರೆಗೂ ಅವೇಶನ ನಡೆಸಿದ್ದು ಶೇ.90ಕ್ಕಿಂತ ಹೆಚ್ಚಿನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಲಾಗಿದೆ. ಕೊರೊನಾ ಆತಂಕದ ನಡುವೆ ಕೈಗೊಂಡಿದ್ದ ಅಗತ್ಯ ಮುನ್ನೆಚ್ಚರಿಕೆ ಕ್ರಮವು ಯಶಸ್ವಿಯಾಗಿ ಅವೇಶನ ನಡೆಸಲಾಗಿದೆ ಎಂದರು. ವಿವಿಧ ಸ್ಥಾಯಿಸಮಿತಿಗಳಿಗೆ ಸದಸ್ಯರನ್ನು …
Read More »ಅಧಿಕಾರದ ಗದ್ದುಗೆ ಏರುತ್ತಿದ್ದಂತೆಯೇ ಹಸಿರು ಶಾಲಿನ ಒಳಗಿದ್ದ ಅವರ ರೈತ ವಿರೋಧಿ ಮನೋಭಾವ ಹೊರಬಂದಿದೆ
ಬೆಂಗಳೂರು: ಸರ್ಕಾರದ ಕೃಷಿ ಮಸೂದೆಗಳು ರೈತ ವಿರೋಧಿಯಾಗಿವೆ. ಭೂ ಸುಧಾರಣೆ ಮತ್ತು ಎಪಿಎಂಎಸಿ ಕಾಯ್ದೆ ತಿದ್ದುಪಡಿ ಮಾಡುತ್ತೇವೆಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿರಲಿಲ್ಲ. ಇವನ್ನ ಜಾರಿಗೆ ತರುವ ಯಾವ ನೈತಿಕತೆಯೂ ಅದಕ್ಕೆ ಇಲ್ಲ. ಈ ತಿದ್ದುಪಡಿಗಳಿಂದ ರೈತರ ಕಲ್ಯಾಣ ಆಗುತ್ತದೆ ಎಂಬ ಭರವಸೆ ಸರ್ಕಾರಕ್ಕೆ ಇದ್ದರೆ ಮೊದಲು ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ಕೃಷಿ …
Read More »ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದುಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ರೈತ
ಬೆಳಗಾವಿ : ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದು ರೈತ ಮುಖಂಡನೊಬ್ಬ ಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ಘಟನೆ ನಡೆದಿದೆ. ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಬಂದ್ ಗೆ ಕರೆ ನೀಡಿದ್ದೆವೆ. ಇಂತಹ ಸಂದರ್ಭದಲ್ಲಿ ಬಸ್ ಸಂಚಾರ ವ್ಯವಸ್ಥೆಯನ್ನು ನಡೆಸಿ, ಬಂದ್ ಗೆ ವಿರೋಧ ವ್ಯಕ್ತ ಪಡಿಸಿಬೇಡಿ, ಸಾರ್. ಬಸ್ ಸಂಚಾರ ನಿಲ್ಲಿಸಿ ಎಂದು ರೈತ ಮುಖಂಡ …
Read More »ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದ ಹೋರಾಟಗಾರರಿಗೆ ವಾಟಾಳ್ ನಾಗರಾಜ್
ಹಾಸನ: ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದು ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸುಮಾರು 3 ಸಾವಿರ ಕನ್ನಡಪರ ಸಂಘಟನೆಗಳು ಮತ್ತು ರೈತರು ಒಂದಾಗಿ ಬಂದ್‍ಗೆ ಬೆಂಬಲವನ್ನು ಕೊಟ್ಟಿದೆ. ಕನ್ನಡ ಒಕ್ಕೂಟದ ಮುಖಂಡರುಗಳಾದ ಸಾ.ರಾ. ಗೋವಿಂದ್, ಶಿವರಾಮೇಗೌಡ, ನಾರಾಯಣಗೌಡ, ಪ್ರವೀಣ್ ಶೆಟ್ಟಿ, ಕೆ.ಆರ್ ಕುಮಾರ್, ಮಂಜುನಾಥ್ ದೇವ್, ಗಿರೀಶ್ ಗೌಡ ಸೇರಿದಂತೆ ಅನೇಕ ಸಂಘಟನೆಗಳು ಬಂದ್‍ಗೆ ಕೈಜೋಡಿಸಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ …
Read More »ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್‌ಡಿಎಂಎ ಕಾಯ್ದೆ ಅಡಿ ಕೇಸ್ – ಕಮಲ್ ಪಂಥ್ ಎಚ್ಚರಿಕೆ
ಬೆಂಗಳೂರು: ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಎಚ್ಚರಿಕೆ ನೀಡಿದ್ದಾರೆ. ಬಂದ್ ಸಂಬಂಧ ನಾವು ಯಾರಿಗೂ ಅನುಮತಿಯನ್ನು ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಹೇಳಿದರು. ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಲು ಯತ್ನಿಸಿದರೆ ಕಾನೂನು ಕ್ರಮ …
Read More »ಸುಶಾಂತ್ ಸಿಂಗ್ ರಜಪೂತ್ ಅವರ ಜೊತೆ ಡೇಟಿಂಗ್ ಒಪ್ಪಿಕೊಂಡ ಸಾರಾ ಅಲಿ ಖಾನ್
ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ನಟಿ ಸಾರಾ ಅಲಿ ಖಾನ್ ಅವರು ವಿಚಾರಣೆ ನಡೆಸಿದಾಗ ತಾವು ಅಲ್ಪಕಾಲ ಸುಶಾಂತ್ ರನ್ನು ಡೇಟಿಂಗ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸಾರಾ 2018 ರ ಚಿತ್ರ ‘ಕೇದಾರನಾಥ್’ ಚಿತ್ರದೊಂದಿಗೆ ಸುಶಾಂತ್ ಎದುರು ಪಾದಾರ್ಪಣೆ ಮಾಡಿದರು. ಅವರ ವದಂತಿಯ ಪ್ರಣಯದ ವರದಿಗಳು ಆಗ ಹೆಚ್ಚು ಕಾಣಸಿಕೊಂಡಿದ್ದವು ಆದರೆ ಬಹಿರಂಗವಾಗಿ ಇಬ್ಬರು ಇದನ್ನು ಒಪ್ಪಿರಲಿಲ್ಲ.ಜೂನ್ 14 …
Read More »ನಾಳೆಯ ಹೋರಾಟ ಯಾವ ಸ್ವರೂಪ ಬೇಕಾದ್ರೂ ಪಡೀಬೋದು: ಕರವೇ ಅಧ್ಯಕ್ಷ ಎಚ್ಚರಿಕೆ
ಬೆಂಗಳೂರು: ಸೋಮವಾರ ಕರ್ನಾಟಕ ಬಂದ್ ಯಾವ ಸ್ವರೂಪ ಬೇಕಾದ್ರು ಪಡೆಯಬಹುದು ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ. ರೈಲು, ವಿಮಾನ, ಹೆದ್ದಾರಿ, ಸಾರಿಗೆ ಓಡಾಟದಲ್ಲಿ ಏನು ಬೇಕಾದ್ರು ಆಗಬಹುದು. ಭೂಸುಧಾರಣಾ, ಎಪಿಎಂಪಿ ಕಾಯ್ದೆ ವಿರುದ್ಧ ಹೋರಾಟ ನಿಲ್ಲಲ್ಲ. ಈ ಎರಡು ಕಾಯ್ದೆಗಳು, ರೈತರಿಗೆ ಮರಣ ಶಾಸನ ಬರೆದಂತೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಂಡ ಸರ್ಕಾರಗಳು. ರೈತರನ್ನು ಉದ್ದಾರ ಮಾಡ್ತೀವಿ ಅಂತಾರೆ. ಒಳ್ಳೆ ಬೆಲೆ ಸಿಗುತ್ತೆ ಅಂತಿದ್ದಾರೆ …
Read More »
Laxmi News 24×7