Breaking News

ರಾಷ್ಟ್ರೀಯ

ಜಿಲ್ಲಾಧಿಕಾರಿ ಕಾಳಜಿಗೆ ಮನಸೋತು ಮಗುವಿಗೆ ಡಿಸಿ ಹೆಸರಿಟ್ಟ ದಂಪತಿ

ಬಳ್ಳಾರಿ: ಜನ್ಮವಿತ್ತ ಮಗುವಿಗೆ ತಮ್ಮ ಜಿಲ್ಲೆಯ ಡಿಸಿ ಹೆಸರನ್ನೇ ನಾಮಕರಣ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ದಾವಣಗೆರೆಯಲ್ಲಿ ನೆಲೆಸಿರುವ ದಂಪತಿ ತಮ್ಮ ಮಗುವಿಗೆ ಡಿಸಿ ಎಸ್.ಎಸ್.ನಕುಲ್ ಅವರ ಹೆಸರನ್ನಿಟ್ಟಿದ್ದಾರೆ. ಮಹಿಳೆಯ ತವರು ಮನೆ ಬಳ್ಳಾರಿಯಾಗಿದ್ದರಿಂದ ಕಳೆದ ಎರಡು ತಿಂಗಳ ಹಿಂದೆ ಹೆರಿಗೆಗೆಂದು ಬಳ್ಳಾರಿಗೆ ಬಂದಿದ್ದರು. ಈ ವೇಳೆ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಈ ವೇಳೆ ಹೆರಿಗೆಯನ್ನು ಯಶಸ್ವಿಯಾಗಿಯೇ ಬಳ್ಳಾರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಮಾಡಿಸಲಾಗಿತ್ತು. ಅದೃಷ್ಟವಶಾತ್ ತಾಯಿಗೆ …

Read More »

ರಾಮನಗರ: ಹೇಗೇ ಸತ್ತರೂ ಕೊರೋನಾ ಸಾವೆಂದು ದಾಖಲಿಸಿ ಹಣ ಲೂಟಿ; ಜಿಲ್ಲಾಧಿಕಾರಿ ವಿರುದ್ಧ ಸಿಡಿದ ಜನ

ರಾಮನಗರ : ಕೊರೋನಾ ವರದಿಯಲ್ಲಿ ನೆಗೆಟಿವ್ ಬಂದಿದ್ದರೂ ಸಹ ಕೊರೋನಾ ಪಾಸಿಟಿವ್ ಇದೇ ಎಂದು ಚಿಕಿತ್ಸೆ ನೀಡಿ ಹಣ ವಸೂಲಿ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ರಾಮನಗರ ತಾಲೂಕಿನ ಅಂಜನಾಪುರ ಗ್ರಾಮದ 65 ವರ್ಷದ ಹೊನ್ನಮ್ಮ ಎಂಬುವರು ಕೆಮ್ಮು ಹಾಗೂ ಇತರೆ ಆರೋಗ್ಯ ಸಮಸ್ಯೆಯಿಂದಾಗಿ ರಾಮನಗರ ಜಿಲ್ಲಾಸ್ಪತ್ರೆಗೆ 17-09-2020 ರಂದು ದಾಖಲಾಗಿದ್ದರು. ನಂತರ ಆರೋಗ್ಯದಲ್ಲಿ ವ್ಯತ್ಯಾಸವಾದ ಕಾರಣ ಅವರನ್ನ ಕೋವಿಡ್ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (26-09-2020-ಶನಿವಾರ)

ನಿತ್ಯ ನೀತಿ: ಸರ್ವರನ್ನು ಸಮಬುದ್ಧಿಯಿಂದ ಪ್ರೀತಿಸು. ಸರ್ವ ಕಾರ್ಯ ಗಳನ್ನು ಸಮರ್ಪಣ ಬುದ್ಧಿಯಿಂದ ಮಾಡು. ಚಿತ್ತದಲ್ಲಿ ಸತ್ಕಾಮನೆಗಳನ್ನು ಬಿತ್ತಿದರೆ ಸತಲವೇ ದೊರೆ ಯುತ್ತದೆ. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 26.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.13 ಚಂದ್ರ ಉದಯ ಬೆ.02.38 / ಚಂದ್ರ ಅಸ್ತ ರಾ.02.18 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / …

Read More »

ಅಂಗಡಿ ಉತ್ತರಾಧಿಕಾರಿ ಯಾರು? ಉಪ ಚುನಾವಣೆ ಚರ್ಚೆ ಆರಂಭ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಎದುರಾಗುವ ಉಪ ಚುನಾವಣೆಗೆ ಅಭ್ಯರ್ಥಿಗಳು ಯಾರಾಗಬಹುದು ಎನ್ನುವ ಚರ್ಚೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಅಂಗಡಿ ಅವರು 2004ರಿಂದ ಒಟ್ಟು 4 ಚುನಾವಣೆಗಳಲ್ಲಿ ಸತತವಾಗಿ ಜಯ ಗಳಿಸಿದ್ದರು. ಇದರಿಂದಾಗಿ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಪ್ರಬಲ ಹಿಡಿತ ಹೊಂದಿದ್ದ ಅಂಗಡಿ ಅವರ ಹಠಾತ್ ನಿಧನದಿಂದ ಬಿಜೆಪಿ ವಲಯದಲ್ಲಿ ಆಘಾತ ಉಂಟಾಗಿದೆ. ಹೀಗಾಗಿ, ಉತ್ತರಾಧಿಕಾರಿ ಯಾರಾಗುತ್ತಾರೆ ಎನ್ನುವ ಕುತೂಹಲ …

Read More »

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ ಅನ್ನದಾತರು

ಬೆಂಗಳೂರು, – ಅನ್ನದಾತರ ಆಕ್ರೋಶ ಬುಗಿಲೆದ್ದಿದೆ. ಎಪಿಎಂಸಿ, ಭೂ ಸುಧಾರಣೆ ಸೇರಿದಂತೆ ಹಲವು ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ರೈತರು, ಕಾರ್ಮಿಕರು, ಕನ್ನಡಪರ ಹಾಗೂ ದಲಿತ ಸಂಘಟನೆಗಳ ಕಾರ್ಯಕತರು ಇಂದು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಕೃಷಿ ಕಾಯ್ದೆ ತಿದ್ದುಪಡಿಗಳು ಮಾಲೀಕರು ಮತ್ತು ಬಂಡವಾಳ ಶಾಹಿಗಳ ಪರವಾಗಿವೆ. ರೈತರ ಪಾಲಿಗೆ ಕಂಟಕವಾಗಿದೆ ಎಂದು ರೈತ ಸಂಘಟನೆಗಳು ವಿವಿಧ …

Read More »

ಮುಂದಿನ ಜನ್ಮದಲ್ಲಿ ಕನ್ನಡ ನಾಡಿನಲ್ಲಿ ಹುಟ್ಟಲು ಇಷ್ಟಪಡ್ತೀನಿ ಅಂದಿದ್ರು ಗಾನ ಗಂಧರ್ವ

ದಕ್ಷಿಣ ಭಾರತದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕನ್ನಡ ಅಂದರೆ ಅದೇನೋ ಪ್ರೀತಿ. ಮುಂದಿನ ಜನ್ಮದಲ್ಲಿ ಕನ್ನಡ ನಾಡಿನಲ್ಲಿ ಹುಟ್ಟಲು ಇಷ್ಟಪಡುತ್ತೇನೆ ಎಂದು ಅನೇಕ ಬಾರಿ ಹೇಳಿದ್ದರು. ಒಂದು ದಶಕಗಳ ಕಾಲ ಎದೆತುಂಬಿ ಹಾಡುವೆನು ಕಾರ್ಯಕ್ರಮವನ್ನು ನಡೆಸಿಕೊಂಡವುದರ ಜೊತೆಗೆ ಬೇರೆ ಭಾಷೆಗಳಲ್ಲಿ ಕೂಡ ಸಂಗೀತದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಜೊತೆಗೆ ತಾವೇ ತೀರ್ಪುಗಾರರಾಗಿ ಹತ್ತು ಹಲವು ಸಂಗೀತದ ಶೋಗಳಲ್ಲಿ ಕುಳಿತಿದ್ದರು. ಈ ವೇಳೆ ಪುಟಾಣಿ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸಂಗೀತದ ಸರಿ-ತಪ್ಪುಗಳನ್ನು …

Read More »

3 ವರ್ಷ ಡೇಟಿಂಗ್, ಮದ್ವೆಯಾಗಿ 2 ವಾರ – ವಿಚ್ಛೇದನಕ್ಕೆ ಮುಂದಾದ ಪೂನಂ ಪಾಂಡೆ

ನವದೆಹಲಿ: ಮದುವೆಯಾದ ಎರಡು ವಾರದಲ್ಲೇ ಪತಿ ವಿರುದ್ಧ ದೂರು ನೀಡಿದ್ದ ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಇದೀಗ ವಿಚ್ಛೇದನ ನೀಡಲು ಮುಂದಾಗಿದ್ದಾರೆ. ಪತಿ ಸ್ಯಾಮ್ ಬಾಂಬೆ ತನಗೆ ಕಿರುಕುಳ ನೀಡಿ ಬೆದರಿಕೆ ಹಾಕುತ್ತಾನೆ ಎಂದು ಹೇಳಿ ನಟಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಹೀಗಾಗಿ ಗೋವಾ ಪೊಲೀಸರು ಸ್ಯಾಮ್ ನನ್ನು ಬಂಧಿಸಿದ್ದರು. ಸ್ಯಾಮ್ ಹಾಗೂ ಪೂನಂ ಸೆಪ್ಟೆಂಬರ್ 10ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇದಕ್ಕೂ ಮೊದಲು ಇವರಿಬ್ಬರು ಮೂರು ವರ್ಷಗಳ …

Read More »

ಲಾಕ್‍ಡೌನ್ ವೇಳೆ ಅನುಷ್ಕಾ ಜೊತೆ ಪ್ರಾಕ್ಟೀಸ್- ಕ್ಯಾಚ್ ಡ್ರಾಪ್ ಕುರಿತು ಗವಾಸ್ಕರ್ ಕಾಮೆಂಟ್

ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಎರಡು ಕ್ಯಾಚ್ ಕೈಚೆಲ್ಲಿದ್ದರು. ಈ ಕುರಿತಂತೆ ವಿಶ್ಲೇಷಣೆ ನೀಡಿದ್ದ ಗವಾಸ್ಕರ್ ಅವರ ಕಾಮೆಂಟ್‍ಗಳು ಸದ್ಯ ವಿವಾದಕ್ಕೆ ಕಾರಣವಾಗಿದೆ. ಗವಾಸ್ಕರ್ ಕಾಮೆಂಟ್ ವಿರುದ್ಧ ಸಾಮಾಜಿಕ ಜಾಲತಾಣಲದಲ್ಲಿ ಆಕ್ರೋಶ ಹೊರ ಹಾಕಿರುವ ಕ್ರಿಕೆಟ್ ಅಭಿಮಾನಿಗಳು ಸುನಿಲ್ ಗವಾಸ್ಕರ್ ಅವರ ವಿರುದ್ಧ ಕಿರಿಕಾರಿದ್ದಾರೆ. ಅಲ್ಲದೇ ಕಾಮೆಂಟರಿ ಬಾಕ್ಸ್ ನಿಂದ ಅವರನ್ನು ಮನೆಗೆ ವಾಪಸ್ ಕಳುಹಿಸಲು ಆಗ್ರಹಿಸಿದ್ದಾರೆ. ಸೆ.24 ರಂದು ದುಬೈನಲ್ಲಿ …

Read More »

ದೀಪಿಕಾರನ್ನು ರೋಲ್ ಮಾಡೆಲ್ ಆಗಿ ಹಿಂಬಾಲಿಸ್ತಿರೋರಿಗೆ ಬೇಸರದ ಸಂಗತಿ: ಮಾಳವಿಕಾ

ಬೆಂಗಳೂರು: ಸ್ಯಾಂಡಲ್‍ವುಡ್ ನಂತೆ ಬಾಲಿವುಡ್ ನಲ್ಲಿಯೂ ಡ್ರಗ್ಸ್ ಹೊಗೆಯಾಡುತ್ತಿದ್ದು, ನಟ- ನಟಿಯ ವಿಚಾರಣೆ ನಡೆಯುತ್ತಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೊಣೆಯವರನ್ನು ಕೂಡ ಎನ್‍ಸಿಬಿ ವಿಚಾರಣೆಗೆ ಕರೆದಿದ್ದು, ದೀಪಿಕಾರನ್ನು ರೋಲ್ ಮಾಡೆಲ್ ಆಗಿ ಹಿಂಬಾಲಿಸ್ತಿರೋರಿಗೆ ಬೇಸರದ ಸಂಗತಿ ಎಂದು ನಟಿ ಕಂ ರಾಜಕಾರಣಿ ಮಾಳವಿಕಾ ಅವಿನಾಶ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಖಿನ್ನತೆ ಎನ್ನುವ ಕಥೆ ಕಟ್ಟಿ, ಆ ಮೂಲಕ ದೀಪಿಕಾ ಸಾಮಾಜಿಕ ಕಳಕಳಿಯ ಪ್ರಚಾರ ಪಡೆದಿರುವ ವಿಚಾರ …

Read More »

ಸಿಆರ್‌ಪಿಎಫ್‌ ಯೋಧರ ಮೇಲೆ ಮತ್ತೆ ಉಗ್ರರ ದಾಳಿ

ಶ್ರೀನಗರ,  -ಕಾಶ್ಮೀರ ಕಣಿವೆಯಲ್ಲಿ ಯೋಧರನ್ನು ಗುರಿಯಾಗಿರಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸುವ ಪ್ರಕರಣಗಳು ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್‍ನಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‍ಪಿಎಫ್) ಯೋದರ ಮೇಲೆ ದಾಳಿ ನಡೆಸಿ ವಿಧ್ವಂಸಕ ಕೃತ್ಯ ಎಸಗಲು ಯತ್ನಿಸಿದ್ದಾರೆ. ಸುದೈವವಶಾತ್ ಭಯೋತ್ಪಾದಕರ ಆಕ್ರಮಣದಲ್ಲಿ ಸಾವು-ನೋವು ಸಂಭವಿಸಿಲ್ಲ. ಮಿನಿ ಸೆಕ್ರೆಟರಿಯೇಟ್ (ಪುಟ್ಟ ಸಚಿವಾಲಯ)ನ ಭದ್ರತೆಗೆ ನಿಯೋಜಿಸಿದ್ದ ಸಿಆರ್‍ಪಿಎಫ್ ಯೋಧರನ್ನು ಹತ್ಯೆ ಮಾಡಲು ಉಗ್ರರು ಗುಂಡು ಹಾರಿಸಿ ಪರಾರಿಯಾದರು. ಅದೃಷ್ಟವಶಾತ್ …

Read More »