Breaking News

ರಾಷ್ಟ್ರೀಯ

ಆರ್‌ಸಿಯುಗೆ 126 ಎಕರೆ ಮಂಜೂರು.

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ 126 ಎಕರೆ 27 ಗುಂಟೆ ಜಮೀನನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ. ಇದರೊಂದಿಗೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಹಾಗೂ ವಿಸ್ತರಣೆಗೆ ಉಂಟಾಗಿದ್ದ ಜಾಗದ ಕೊರತೆ ನಿವಾರಣೆಯಾದಂತಾಗಿದೆ. ‘ತಾಲ್ಲೂಕಿನ ಬಾಗೇವಾಡಿ (ಸಂಕನಾಯ್ಕನಕೊಪ್ಪ) ಗ್ರಾಮದ ರಿ.ಸ.ನಂ. 421/2, 423, 426, 427, 429 ಮತ್ತು 431ರಲ್ಲಿ 87 ಎಕರೆ 39 ಗುಂಟೆ ಹಾಗೂ ಹಾಲಗಿಮರ್ಡಿ ಗ್ರಾಮದ ರಿ.ಸ.ನಂ. 48, 48 ಹಾಗೂ 49ರ …

Read More »

ಗುಡ್ ನ್ಯೂಸ್ : ರಾಜ್ಯದಲ್ಲಿ ಇಳಿಯುತ್ತಿದೆ ಕೊರೋನಾ

ಬೆಂಗಳೂರು  : ರಾಜ್ಯದಲ್ಲಿ ಸೋಮವಾರ 7,339 ಮಂದಿಗೆ ಸೋಂಕು ದೃಢಪಟ್ಟಿದ್ದು 122 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5.26 ಲಕ್ಷಕ್ಕೆ ಹಾಗೂ ಕೊರೋನಾ ಸಾವಿನ ಸಂಖ್ಯೆ 8,145ಕ್ಕೆ ಏರಿಕೆಯಾಗಿದೆ. ಆದರೆ ಸಕ್ರಿಯ ಸೋಂಕಿ​ತರ ಸಂಖ್ಯೆ 98 ಸಾವಿ​ರ​ದಿಂದ 95,335ಕ್ಕೆ ಇಳಿ​ದಿ​ದೆ. ಇದೇ ವೇಳೆ 9,925 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 4.23 ಲಕ್ಷಕ್ಕೆ ಏರಿಕೆಯಾಗಿದೆ. ಸೋಮವಾರ ಒಟ್ಟು 42,691 ಪರೀಕ್ಷೆ ನಡೆಸಿದ್ದು, …

Read More »

ಗುತ್ತಿಗೆ ಆಧಾರದ NHM ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿಶೇಷ ಹೆಚ್ಚುವರಿ ಭತ್ಯೆ

ಬೆಂಗಳೂರು : ರಾಜ್ಯ ಸರ್ಕಾರವು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ದಡಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 14,252 ವಿವಿಧ ಹುದ್ದೆಗಳಿಗೆ ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ಆದೇಶಿಸಿದೆ. ಆಯುಷ್ ಮತ್ತು ಎಂಬಿಬಿಎಸ್ ವೈದ್ಯರು ಹಾಗೂ ತಜ್ಞರಿಗೆ 10 ಸಾವಿರ ರೂ. ಶುಶ್ರೂಷಕಿಯರಿಗೆ ಎ.ಎನ್. ಎಂ ಲ್ಯಾಬ್ ಟೆಕ್ನೀಷಿಯನ್ ಹಾಗೂ ಫಾರ್ಮಾಸಿಸ್ಟ್ ಗಳಿಗೆ ತಲಾ 5 ಸಾವಿರ ರೂ. ನಂತೆ ಮುಂದಿನ ಆರು ತಿಂಗಳ …

Read More »

ಒಪ್ಪಿಗೆಯಿಲ್ಲದೆ ಫೋಟೋ ಬಳಕೆ- ಆ್ಯಪ್ ಕಂಪನಿ ವಿರುದ್ಧ ಸಂಸದೆ ದೂರು

ಕೋಲ್ಕತ್ತಾ: ವಿಡಿಯೋ ಚಾಟ್ ಆ್ಯಪ್ ‘ಫ್ಯಾನ್ಸಿಯೂ’ ಪ್ರಚಾರಕ್ಕಾಗಿ ಒಪ್ಪಿಗೆಯಿಲ್ಲದೆ ನನ್ನ ಫೋಟೋವನ್ನು ಬಳಸಿದೆ ಎಂದು ನಟಿ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಕೋಲ್ಕತ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ನಟಿ ನುಸ್ರತ್ ಜಹಾನ್ ಟ್ವೀಟ್ ಮಾಡುವ ಮೂಲಕ ತಮ್ಮ ಫೋಟೋವನ್ನು ಬಳಸಿರುವುದಾಗಿ ದೂರು ನೀಡಿದ್ದಾರೆ. ಅಲ್ಲದೇ ವಿಡಿಯೋ ಚಾಟ್ ಆ್ಯಪ್‍ಗಾಗಿ ಜಾಹೀರಾತಿ ನೀಡಿರುವ ಸ್ಕ್ರೀನ್‍ಶಾಟ್ ಕ್ಲಿಕ್ಕಿಸಿಕೊಂಡಿದ್ದು, ಆ ಫೋಟೋವನ್ನು ಟ್ವಿಟ್ಟರಿನಲ್ಲಿ ಶೇರ್ ಮಾಡಿದ್ದಾರೆ. ನಂತರ ಈ ಟ್ವೀಟನ್ನು ಕೋಲ್ಕತಾ …

Read More »

ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್‍ನ ಹಿಂಭಾಗದ ತಡೆಗೋಡೆ ಕುಸಿದಿದೆ.

ಉಡುಪಿ: ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದ್ದು, ಮಣಿಪಾಲ ಸಿಂಡಿಕೇಟ್ ಸರ್ಕಲ್ ನಲ್ಲಿರುವ ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್‍ನ ಹಿಂಭಾಗದ ತಡೆಗೋಡೆ ಕುಸಿದಿದೆ. ಕಮರ್ಷಿಯಲ್ ಕಂಪ್ಲೆಕ್ಸ್ ಆಗಿರುವ ಪ್ರೀಮಿಯರ್ ಕಟ್ಟಡದ ಜೊತೆ ವಸತಿ ಸಮುಚ್ಛಯ ಸಹ ಇರುವುದರಿಂದ ಅಲ್ಲಿನ ಎಲ್ಲ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಇದೇ ಕಟ್ಟಡದಲ್ಲಿ ವಾಸವಿದ್ದು, ಸದ್ಯ ಕಾಲೇಜುಗಳು ತೆರೆಯದ ಕಾರಣ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಮ್ಮಿ ಇದೆ. …

Read More »

ಅಧಿವೇಶನಕ್ಕೆ ಮೊದಲ ದಿನವೇ ಬೆರಳೆಣಿಕೆಯಷ್ಟು ಜನಪ್ರತಿನಿಧಿಗಳು ಭಾಗವಹಿಸಿದ್ದು, ಕಲಾಪ ಕಾಟಾಚಾರಕ್ಕೆ ಸೀಮಿತವಾಗಿತ್ತು.

ಬೆಂಗಳೂರು, ಸೆ.21- ಕೋವಿಡ್ -19 ಆತಂಕದ ನಡುವೆಯೇ ಇಂದಿನಿಂದ ಆರಂಭವಾದ ಮಳೆಗಾಲದ ಅಧಿವೇಶನಕ್ಕೆ ಮೊದಲ ದಿನವೇ ಬೆರಳೆಣಿಕೆಯಷ್ಟು ಜನಪ್ರತಿನಿಧಿಗಳು ಭಾಗವಹಿಸಿದ್ದು, ಕಲಾಪ ಕಾಟಾಚಾರಕ್ಕೆ ಸೀಮಿತವಾಗಿತ್ತು. ಭಾರೀ ನಿರೀಕ್ಷೆ ಹಾಗೂ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೊರೊನಾ ಮಹಾಮಾರಿಯ ಆತಂಕ ಎಲ್ಲರಲ್ಲೂ ಮನೆ ಮಾಡಿತ್ತು. ಹೀಗಾಗಿ ವಿಧಾನಸಭೆ ಹಾಗೂ ವಿಧಾನಪರಿಷತ್‍ನಲ್ಲಿ ಕೇವಲ ಕೆಲವೇ ಕೆಲವು ಮಂದಿ ಸಚಿವರು ಹಾಗೂ ಶಾಸಕರು ಮಾತ್ರ ಭಾಗವಹಿಸಿದ್ದರು. 225 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಮುಖ ಮೂರು …

Read More »

ಶಸ್ತ್ರಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ಸೂದ್

ಮುಂಬೈ, ಸೆ. 21- ಕೊರೊನಾದಿಂದ ಬಳಲುತ್ತಿರುವ ಸಂತ್ರಸ್ತರಿಗೆ ನೆರವು ನೀಡುತ್ತಾ ಬಂದಿರುವ ಬಾಲಿವುಡ್ ನಟ ಸೋನು ಸೂದ್ ಈಗ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ಮುಂದಾಗಿದ್ದಾರೆ. ತಮ್ಮ ತಾಯಿಯ ಹೆಸರಿನಲ್ಲಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಸೋನು ಮುಂದಾಗಿದ್ದು, ಈ ನಡುವೆ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರ ಶಸ್ತ್ರಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ್ದಾರೆ. ಅರ್ಜುನ್ ಚೌಹಣ್ ಎಂಬುವವರು ಮೊಣಕಾಲಿನ ನೋವಿನಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗೆ ನೆರವು ನೀಡುವಂತೆ ಸೋನುಸೂದ್‍ಗೆ …

Read More »

ಕೆ.ಆರ್.ಪೇಟೆ ಮಾದರಿಯಲ್ಲಿ ಶಿರಾ ಉಪಚುನಾವಣೆ ಗೆಲ್ಲುತ್ತೇವೆ: ವಿಜಯೇಂದ್ರ

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭೆ ಉಪಸಮರ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಶಿರಾ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಶಿರಾ ನಗರದ ಕೋಟೆ ಬೀದಿ, ಸಂತೆಪೇಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚಾರ ಮಾಡಿ ಮತದಾರರನ್ನು ಭೇಟಿ ಮಾಡಿದರು. ಈ ವೇಳೆ ಟಿಕೆಟ್ ಅಕಾಂಕ್ಷಿಗಳಾದ ಎಸ್. ಆರ್.ಗೌಡ ಬಿ.ಕೆ.ಮಂಜುನಾಥ್ ವಿಜಯೇಂದ್ರ ಅವರಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಕೆ.ಆರ್.ಪೇಟೆ …

Read More »

ಪ್ರಭಾವಿ ರಾಜಕಾರಣಿಯ ಕೈವಾಡ ದೊಡ್ಡದಾಗಿದೆ – ಸಿಸಿಬಿ ತನಿಖೆ ಅಷ್ಟು ಖುಷಿ ಕೊಟ್ಟಿಲ್:ಇಂದ್ರಜಿತ್

ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ನಟಿಯರಷ್ಟೇ ಅಲ್ಲ ನಟರು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳಿದ್ದಾರೆ. ಸರ್ಕಾರದಲ್ಲೇ ಕೆಲಸ ಮಾಡುತ್ತಿರುವ ಹಿರಿಯ ನಿರ್ದೇಶಕರ ಮಗನನ್ನ ಯಾಕೆ ಇನ್ನೂ ಕರೆಸಿಲ್ಲ? ಬೇರೇ ಇಲ್ಲದೆ ಇರುವವರನ್ನು ಕರೆದುಕೊಂಡು ಬಂದು ಸುಮ್ಮನೆ ವಿಚಾರಣೆ ಮಾಡುತ್ತಿದ್ದಾರೆ. ಹೀಗಾಗಿ ಇದು ಯಾವುದೇ ರಾಜಕೀಯ ಪ್ರಭಾವ ಇಲ್ಲದೆ ನಡೆಸುತ್ತಿರುವ ವಿಚಾರಣೆ ಎಂದು ನಮಗೆ ಅನ್ನಿಸುತ್ತಿಲ್ಲ ಎಂದು ನಟ, ನಿರ್ದೇಶಕ ಇಂದ್ರಜಿತ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್, ನನಗೆ ಗೊತ್ತಿರುವ ವಿಚಾರವನ್ನು …

Read More »

ಡ್ರಗ್ಸ್ ದಂಧೆಯಲ್ಲಿ ರಾಗಿಣಿ ಆ್ಯಕ್ಟಿವ್ ಮೆಂಬರ್ – ಸೆ.24ರವರೆಗೂ ರಾಗಿಣಿ, ಸಂಜನಾಗೆ ಜೈಲು ಫಿಕ್ಸ್

ಬೆಂಗಳೂರು: ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಎನ್‍ಡಿಪಿಎಸ್ ವಿಶೇಷ ಕೋರ್ಟ್, ವಿಚಾರಣೆಯನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಿ ಆದೇಶಿಸಿದೆ. ನಟಿ ಸಂಜನಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಸಿಸಿಬಿ ಕಾಲಾವಕಾಶ ಕೇಳಿತ್ತು. ಸಿಸಿಬಿ ಮನವಿಗೆ ಸಮ್ಮಿಸಿದ ನ್ಯಾಯಾಲಯ ಸಂಜನಾ ಬೇಲ್ ಅರ್ಜಿಯನ್ನ ಸೆಪ್ಟೆಂಬರ್ 24ಕ್ಕೆ ಮುಂದೂಡಲಾಗಿದೆ. ಹಾಗಾಗಿ ಸಂಜನಾ ಇನ್ನು ಮೂರು ದಿನ ಪರಪ್ಪನ ಅಗ್ರಹಾರದಲ್ಲಿರಬೇಕಾಗಿದೆ. ರಾಗಿಣಿ ಅರ್ಜಿಯ ವಿಚಾರಣೆ ನಡೆಸಿದ್ದು, …

Read More »