ಬೆಳಗಾವಿ: ‘ಲಿಂಗಾಯತ’ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ‘ಲಿಂಗಾಯತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ಕೊಡುವಲ್ಲಿ ಲೋಪದೋಷಗಳು ಉಂಟಾಗುತ್ತಿವೆ. ನಮ್ಮ ಮೂಲ ಜಾತಿ ‘ಲಿಂಗಾಯತ’ ಆಗಿದೆ. ಆದರೆ, ಕಂದಾಯ ಇಲಾಖೆಯಿಂದ ‘ವೀರಶೈವ ಲಿಂಗಾಯತ’ ಎಂದು ನಮೂದಿಸಿ ಪ್ರಮಾಣಪತ್ರ ಕೊಡಲಾಗುತ್ತಿದೆ. ಇದು ನಮಗೆ ಮುಜುಗರ ಉಂಟು ಮಾಡುತ್ತಿದೆ’ ಎಂದು ತಿಳಿಸಿದರು. ‘ಲಿಂಗಾಯತ’ ಎಂದು ನಮೂದಿಸಿದ ಪ್ರಮಾಣಪತ್ರ ನೀಡುವ ಮೂಲಕ …
Read More »ಬೆಳಗಾವಿ: ಸರ್ಕಾರಿ ವೈದ್ಯರ ಪ್ರತಿಭಟನೆ
ಬೆಳಗಾವಿ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು. ‘ಸೆ.21ರವರೆಗೆ ಸರ್ಕಾರಕ್ಕೆ ಯಾವುದೇ ವರದಿ ನೀಡದೆ ಕಾರ್ಯನಿರ್ವಹಿಸುತ್ತೇವೆ’ ಎಂದು ತಿಳಿಸಿದರು. ‘ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಅನುಷ್ಠಾನ ವಿಷಯದಲ್ಲಿ ಸರ್ಕಾರಕ್ಕೆ ವರದಿ ನೀಡುವುದನ್ನು ಸ್ಥಗಿತಗೊಳಿಸುತ್ತೇವೆ. ಸೆ. 21ರಿಂದ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಸ್ಥಗಿತಗೊಳಿಸಿ ಹೋರಾಟ ಮುಂದುವರಿಸಲಾಗುವುದು. ಬಳಿಕವೂ ಸ್ಪಂದಿಸದಿದ್ದಲ್ಲಿ ಬೆಂಗಳೂರು ಚಲೋ …
Read More »ಬೆಳಗಾವಿ-ಕರಾಡ ರೈಲು ಮಾರ್ಗ ವಿಸ್ತರಣೆ ಎಂದು?
ಚಿಕ್ಕೋಡಿ: ಕರ್ನಾಟಕ-ಮಹಾರಾಷ್ಟ್ರದ ಬಹು ಬೇಡಿಕೆಯ ಕರಾಡ-ಧಾರವಾಡ ಹೊಸ ರೈಲು ಮಾರ್ಗದ ಈಗಾಗಲೇ ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗಕ್ಕೆ ಹಸಿರು ನಿಶಾನೆ ಸಿಕ್ಕಿದ್ದು, ಉಳಿದ ಬೆಳಗಾವಿ-ಕರಾಡ ಹೊಸ ರೈಲು ಮಾರ್ಗ ವಿಸ್ತರಣೆ ಮಾಡಬೇಕು ಎಂದು ಗಡಿ ಜನರ ಒತ್ತಾಯವಾಗಿದೆ. ಗಡಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕರಾಡ-ಧಾರವಾಡ(ಕೊಲ್ಲಾಪುರ, ನಿಪ್ಪಾಣಿ, ಸಂಕೇಶ್ವರ, ಬೆಳಗಾವಿ, ಕಿತ್ತೂರು ಮಾರ್ಗವಾಗಿ) ಹೊಸ ರೈಲು ಮಾರ್ಗ ರಚನೆಯಾಗಬೇಕೆಂದು ಕಳೆದ 2012ರಲ್ಲಿ ರೈಲ್ವೆ ಇಲಾಖೆ ಸರ್ವೇ ಕಾರ್ಯ ಕೈಗೊಂಡಿತ್ತು. ಇದೀಗ ಧಾರವಾಡ-ಬೆಳಗಾವಿ …
Read More »ಒಳಚರಂಡಿ ಪೈಪ್‌ಲೈನ್ ಒಡೆದು ಕಲುಷಿತ ನೀರು ಸಂಗ್ರಹ
ಬೆಳಗಾವಿ: ಮೂರು ದೇವಸ್ಥಾನಗಳು ಇರುವ ಈ ಪ್ರದೇಶದಲ್ಲಿ ಒಳಚರಂಡಿ ಪೈಪ್‌ಲೈನ್ ಒಡೆದು ಕಲುಷಿತ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ಸ್ಥಳೀಯರು ಕೆಲ ದಿನಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ನಗರದ ಮಧ್ಯ ಭಾಗದಲ್ಲಿರುವ ಸೋಮವಾರ ಪೇಟೆಯಲ್ಲಿ ಮೂರು ದೇವಸ್ಥಾನಗಳ ನಡುವೆ ಒಳಚರಂಡಿ ಇದ್ದು, ಇದರ ಪೈಪ್‌ಲೈನ್ ಒಡೆದು ಹೋಗಿದ್ದರಿಂದ ಚರಂಡಿ ನೀರೆಲ್ಲ ರಸ್ತೆ ಮೇಲೆ ಹರಿಯುತ್ತಿದೆ. ಇಲ್ಲಿ ನಡೆದುಕೊಂಡು ಹೋಗುವುದು ಸ್ಥಳೀಯರಿಗೆ ಕಷ್ಟದ ಕೆಲಸವಾಗಿದೆ. ಪೈಪ್‌ಲೈನ್ ಒಡೆದು ಗಜೀಲು ರಸ್ತೆಗೆ ಹರಿಯುತ್ತಿದ್ದು, ಜನರ ಆರೋಗ್ಯದ …
Read More »ಬಿ.ವೈ. ಪವಾರಗೆ ‘ತಾಂತ್ರಿಕ ರತ್ನ’ ಪ್ರಶಸ್ತಿ
ಬೆಳಗಾವಿ: ‘ದೇಶ ಕಟ್ಟುವ ಪ್ರಯತ್ನದಲ್ಲಿ ಸಿವಿಲ್ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ’ ಎಂದು ಬೆಂಗಳೂರಿನ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಭಾ ಪುರಸ್ಕಾರ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಆರ್. ನಾಗರಾಜ್ ಹೇಳಿದರು. ಇಲ್ಲಿ ಲೋಕೋಪಯೋಗಿ ಇಲಾಖೆಯ ಎಸ್‌ಇ ಬಿ.ವೈ. ಪವಾರ ಅವರಿಗೆ ‘ತಾಂತ್ರಿಕ ರತ್ನ’ ಪ್ರಶಸ್ತಿ ನೀಡಿ ಮಾತನಾಡಿದರು. ‘ಸಿವಿಲ್ ಎಂಜಿನಿಯರ್‌ಗಳು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ, ಸದೃಢವಾದ ರಾಷ್ಟ್ರವನ್ನು ನಿರ್ಮಾಣ ಮಾಡಬಹುದು’ ಎಂದರು. ‘ಪ್ರತಿಷ್ಠಾನದಿಂದ ಸರ್ಕಾರದ ಅನುಮೋದನೆ ಮೇರೆಗೆ …
Read More »ರಾಗಿಣಿ ಸೇರಿ 6 ಮಂದಿಗೆ 14 ದಿನ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್..!
ಬೆಂಗಳೂರು,ಸೆ.14- ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿರುವ ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಸೇರಿ 6 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಹೋಗಬೇಕಾಗಿದೆ. ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿ ಸಿಸಿಬಿ ವಶದಲ್ಲಿರುವ ರಾಗಿಣಿ ಅವರ 12 ದಿನದ ಹಾಗೂ ಸಂಜನಾ ಅವರ ಒಂದು ವಾರದ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದು, ಈ ಇಬ್ಬರನ್ನು ಕೆಸಿಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಲಾಯಿತು. ವಿಡಿಯೋ …
Read More »ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿತಪ್ಪೇನು..?ರೇವಣ್ಣ
ಹಾಸನ ,ಸೆ.14- ಪಕ್ಷದ ಶಾಸಕರ ಕ್ಷೇತ್ರಗಳಿಗೆ ಸಹಕಾರ ಕೋರಿ ಮುಖ್ಯಮಂತ್ರಿಗಳನ್ನು ಭೇಟಿಯಾದರೆ ತಪ್ಪೇನು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಶಾಸಕರ ಕ್ಷೇತ್ರಗಳಿಗೆ ಸಹಾಯ ಕೋರಲ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು. ರಾಜಕೀಯ ಒತ್ತಡದಿಂದ ಕಾನೂನು ಬಾಹಿರ ಕೆಲಸಗಳನ್ನು ಮಾಡಿದರೆ ಅಂತಹ …
Read More »ಜಮೀರ್ ಪರ ಮಾತಾಡಿ ಸಿದ್ದರಾಮಯ್ಯನವರು ತಮ್ಮ ವ್ಯಕ್ತಿತ್ವ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ : ಸಚಿವ ಜಗದೀಶ್ ಶೆಟ್ಟರ್
ಧಾರವಾಡ : ಮಾಜಿ ಸಚಿವ ಜಮೀರ್ ಅಹಮ್ಮದ್ ಅವರು ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ತಮ್ಮ ವ್ಯಕ್ತಿತ್ವವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು ಕ್ಯಾಸಿನೋಗೂ ಹೋಗ ಬಾರದು, ಜೂಜು ಆಡಬಾರದು ಎಂದು ಸಿದ್ದರಾಮಯ್ಯ ಹೇಳಬೇಕಿತ್ತು. ಆದರೆ, ಜಮೀರ್ ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಅಂತಾ ಹೇಳಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು. …
Read More »ಡಿಸಿಎಂ ಕಾರಜೋಳ ನಿರಾಸಕ್ತಿ; ಕಾರ್ಖಾನೆ ಉಳಿವಿಗಾಗಿ ಬೀದಿಗಿಳಿದ ರೈತರು
ಬಾಗಲಕೋಟೆ: ಮುಧೋಳದ ರೈತರ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸುವಂತೆ ಒತ್ತಾಯಿಸಿ ಕೊನೆಗೂ ರೈತರು ಬೀದಿಗಿಳಿದಿದ್ದಾರೆ. ಮುಧೋಳದಿಂದ ಬಾಗಲಕೋಟೆವರೆಗೂ ಪಾದಯಾತ್ರೆ ಕೂಡ ಆರಂಭಿಸಿದ್ದಾರೆ. ರೈತರ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದು, ರೈತರ ಬಾಕಿ ಹಣ ಪಾವತಿಗಾಗಿ ಈಗಾಗಲೇ ಜಿಲ್ಲಾಡಳಿತ ೪೦ ಕೋಟಿ ರೂ.ಗಳ ಸಕ್ಕರೆಯನ್ನು ಮಾರಾಟ ಮಾಡಿ ಹಣ ಪಾವತಿಸುವ ವ್ಯವಸ್ಥೆ ಮಾಡಿಕೊಂಡಿದೆ. ತಾಂತ್ರಿಕ ಕಾರಣಗಳಿಂದ ಇದುವರೆಗೂ ಬಾಕಿ ಹಣ ಪಾವತಿ ಆಗಿಲ್ಲ. ಯಾವುದೇ ಕಾರಣಕ್ಕೂ …
Read More »ಮೇಕೆದಾಟು ಯೋಜನಾ ಪ್ರದೇಶಕ್ಕೆ ಭೇಟಿ ನೀಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
ರಾಮನಗರ: ಜಿಲ್ಲೆಯ ಮುಗ್ಗೂರು ಮತ್ತು ಹನೂರು ಅರಣ್ಯ ವಲಯದಲ್ಲಿರುವ ಒಂಟಿಗುಂಡುವಿನ ಬಳಿ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರ ಅನುಮತಿ ನೀಡಿದ ಕೂಡಲೇ ಯೋಜನೆ ಪ್ರಾರಂಭಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಮೇಕೆದಾಟು ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ಮಾಡಿದ ಸಚಿವರು, ಅಣೆಕಟ್ಟು ನಿರ್ಮಾಣ ಸಂಬಂಧ ಕೇಂದ್ರದ ಜಲಶಕ್ತಿ ಸಚಿವಾಲಯ ಈಗಾಗಲೇ ಅನುಮತಿ ನೀಡಿದೆ. …
Read More »