Breaking News

ರಾಷ್ಟ್ರೀಯ

ಹೆಚ್‍ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಪ್ರವಾಸದಲ್ಲಿದ್ದು, ಕೆಲಕಾಲ ಹಾಸನದ ಖಾಸಗಿ ರೆಸಾರ್ಟ್‍ನಲ್ಲಿ ವಿಶ್ರಾಂತಿ

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್‍ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಪ್ರವಾಸದಲ್ಲಿದ್ದು, ಕೆಲಕಾಲ ಹಾಸನದ ಖಾಸಗಿ ರೆಸಾರ್ಟ್‍ನಲ್ಲಿ ವಿಶ್ರಾಂತಿ ಪಡೆದಿದ್ದಾರೆ. ಇತ್ತೀಚೆಗಷ್ಟೇ ಕುಟುಂಬ ಸಮೇತ ಮಡಿಕೇರಿಗೆ ಪ್ರವಾಸ ತೆರಳಿದ್ದ ಕುಮಾರಸ್ವಾಮಿಯವರು, ಅಲ್ಲಿ ಒಂದು ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದರು. ಈಗ ಹಾಸನದ ಬೇಲೂರು, ಹಳೆಬೀಡು, ಗೊರೂರಿಗೆ ಭೇಟಿ ನೀಡುವ ಸಲುವಾಗ ಪತ್ನಿ, ಮಗ, ಸೊಸೆ ಜೊತೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಕಳೆದ ಎರಡು ದಿನದ ಹಿಂದೆ ಮಾಜಿ ಸಚಿವ ಹೆಚ್‍ಡಿ ರೇವಣ್ಣ ವಿರುದ್ಧ ಅರಕಲಗೂಡು …

Read More »

ಸ್ನೇಹಿತರು ಕರೆದರೆಂದು ಹೋದವ ಹೆಣವಾದ- ಮಂಡ್ಯದಲ್ಲಿ ಒಂದೇ ತಿಂಗಳಲ್ಲಿ 7 ಕೊಲೆ

ಮಂಡ್ಯ: ಸಕ್ಕರೆ ನಾಡು ಖ್ಯಾತಿಯ ಮಂಡ್ಯ ಇತ್ತೀಚಿಗೆ ಮರ್ಡರ್ ಸಿಟಿಯಾಗುತ್ತಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಸೆಪ್ಟೆಂಬರ್ ತಿಂಗಳೊಂದರಲ್ಲೇ 7 ಮಂದಿಯ ಹತ್ಯೆ ನಡೆದಿದೆ. ಕಳೆದ ರಾತ್ರಿಯೂ ಯವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಮಂಡ್ಯ ತಾಲೂಕಿನ ಹೊಡಾಘಟ್ಟ ಗ್ರಾಮದಲ್ಲಿ 25 ವರ್ಷದ ಅಭಿಷೇಕ್‍ನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸ್ನೇಹಿತರು ಕರೆದರೆಂದು ಮನೆಯಿಂದ ಹೊರ ಹೋದವನು ಊರಿನ ಮಧ್ಯಭಾಗದಲ್ಲೇ ಹೆಣವಾಗಿದ್ದಾನೆ. ಘಟನೆಯಿಂದಾಗಿ ಜನರು ಬೆಚ್ಚಿಬಿದ್ದಿದ್ದಾರೆ. ನಿನ್ನೆ ರಾತ್ರಿ 10 …

Read More »

10 ತಿಂಗಳ ಮಗುವಿನ ಜೊತೆ ಸೊಸೆ ಮಾವನ ಜೊತೆ ಓಡಿ ಹೋಗಿದ್ದಾಳೆ.

ಚಂಡೀಗಢ: ವ್ಯಕ್ತಿಯೊಬ್ಬ ತನ್ನ ಮಗನ ಪತ್ನಿಯ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಕೊನೆಗೆ ಸೊಸೆಯ ಜೊತೆಯೇ ಎಸ್ಕೇಪ್ ಆಗಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ನಾಲ್ಕು ವರ್ಷಗಳ ಹಿಂದೆ ಮಹಿಳೆ ಸಲೀಂ ಮಗ ಅಬ್ದುಲ್ ಜೊತೆ ಮದುವೆಯಾಗಿದ್ದಳು. ಈ ದಂಪತಿಗೆ ಮೂರು ವರ್ಷದ ಮಗಳು ಮತ್ತು 10 ತಿಂಗಳ ಮಗ ಇದ್ದನು. ಆದರೆ ಮಾವ ಸಲೀಂ ತನ್ನ ಸೊಸೆ ಜೊತೆಯೇ ಅನೇಕ ದಿನಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಇವರ ಸಂಬಂಧದ ಬಗ್ಗೆ …

Read More »

ಕೇಂದ್ರ ಸರ್ಕಾರ ವೈಫಲ್ಯಗಳ  ಕುರಿತು ಸಂಸದ ಡಿ.ಕೆ. ಸುರೇಶ್  ಲೋಕಸಭೆಯಲ್ಲಿ  ಧ್ವನಿ ಎತ್ತಿದರು.

ಹೊಸದಿಲ್ಲಿ: ಕೋವಿಡ್ ನಿರ್ವಹಣೆ ವೈಫಲ್ಯ, ಜನ ಹಾಗೂ  ರೈತ ವಿರೋಧಿ ಕಾಯ್ದೆ, ಸಾಲದ ಹೊರೆ, ನಾನಾ ಇಲಾಖೆ ಖಾಸಹೀಕರಣ, ಜಿಡಿಪಿ ಕುಸಿತ, ರಸಗೊಬ್ಬರ ಕೊರತೆ ಸೇರಿ ಕೇಂದ್ರ ಸರ್ಕಾರ ವೈಫಲ್ಯಗಳ  ಕುರಿತು ಸಂಸದ ಡಿ.ಕೆ. ಸುರೇಶ್  ಲೋಕಸಭೆಯಲ್ಲಿ  ಧ್ವನಿ ಎತ್ತಿದರು.   2020-21ನೇ ಸಾಲಿನ ಬಜೆಟ್ ಅನುದಾನದ ಮೇಲಿನ ಚರ್ಚೆ ವೇಳೆ ಮಾತನಾಡಿದ ಸಂಸದ ಸುರೇಶ್ ಅವರು,   ಕೇಂದ್ರ ಸರ್ಕಾರ ದೇಶದ ಆರ್ಥಿಕತೆ ನಿರ್ವಹಣೆ ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ. …

Read More »

ಕೆಟ್ಟು ಹೋದ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಪಂಚಾಯಿತಿಗೆ ಬೀಗ ಮುತ್ತಿಗೆ ಹಿರಿಯರ ಮಧ್ಯಸ್ಥಿಕೆ ನಡುವೆ ಬೀಗ ತೆರವು

  ಅಥಣಿ : ತಾಲೂಕಿನ ಪಾರ್ಥನಹಳ್ಳಿ ಗ್ರಾಮದ ಮಾಯನಟ್ಟಿಯಿಂದ   ಶಿವನೂರು ಗ್ರಾಮದವರೆಗೆ  6 ಕಿಲೋ ಮೀಟರ್  ರಸ್ತೆ ಕೆಟ್ಟು ಗಿಡಗಂಟಿ ಮುಳ್ಳುಗಳು ಬೆಳೆದು ರಸ್ತೆ ಸಂಚಾರಕ್ಕೆ ಅವಕಾಶವಿಲ್ಲದಂತೆ ತುಂಬಾ ಕೆಟ್ಟು ಹೋಗಿದೆ ಎಂದು ಆರೋಪಿಸಿ ರಿಪೆರಿಗೆ ಒತ್ತಾಯಿಸಿ ಪಾರ್ಥನಹಳ್ಳಿ ಗ್ರಾಮ ಪಂಚಾಯಿತಿಗೆ ಶ್ರೀಶೈಲ್  ಕೆಂಪವಾಡ ನೇತೃತ್ವದಲ್ಲಿ  ಗ್ರಾಮಸ್ಥರು  ಬೀಗ ಜಡಿದು ಪ್ರತಿಭಟನೆ ವ್ಯಕ್ತಪಡಿಸಿದರು . ಗ್ರಾಮಸ್ಥ ಶ್ರೀಶೈಲ್  ಕೆಂಪವಾಡ ಮಾತನಾಡುತ್ತಾ  ಕಳೆದ ಎರಡು ಮೂರು ವರ್ಷಗಳಿಂದ ಮಾಯನಟ್ಟಿಯಿಂದ ಶಿವನೂರು ವರೆಗೆ ರಸ್ತೆ ತುಂಬಾ …

Read More »

130.00 ಲಕ್ಷಗಳಡಿ ಇಂದು ಗೋಕಾಕ ನಗರದಲ್ಲಿ ಪೌರಕಾರ್ಮಿಕರ ವಸತಿ ಸಮುಚ್ಚಯ ಕಟ್ಟಡಗಳ ಉದ್ಘಾಟನೆ.

ಗೋಕಾಕ : ಇಲ್ಲಿಯ ನಗರಸಭೆ ಅನುದಾನದಡಿ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ಅಂದಾಜು ರೂ.130.00 ಲಕ್ಷಗಳಡಿ G+2ಮಾದರಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಜುಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ರವಿವಾರದಂದು ನಗರದ ಮೆಳವಂಕಿ ರಸ್ತೆ, ಅಡಿಬಟ್ಟಿ ಕಾಲೋನಿಯ ನಾಕಾ ನಂಬರ್ 01ರಲ್ಲಿ ನಿರ್ಮಾಣವಾದ ಪೌರಕಾರ್ಮಿಕರ ವಸತಿ ಸಮುಚ್ಛಯ ಉದ್ಘಾಟಿಸಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪೌರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು …

Read More »

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರದಲ್ಲಿ ಪ್ರವಾಹ ಭೀತಿ

ವಿಜಯಪುರ,  ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬಸವನಾಡಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಉಗಮವಾಗುವ ಮೂರು ನದಿಗಳು ವಿಜಯಪುರ ಜಿಲ್ಲೆಯಲ್ಲಿ ಹರಿಯುತ್ತಿದ್ದೂ, ಮೂರೂ ನದಿಗಳು ಉಕ್ಕಿ ಹರಿಯುತ್ತಿವೆ. ಭೀಮಾ ನದಿಗೆ ಮಹಾರಾಷ್ಟ್ರ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರದ ಸಮಾನಾಂತರ ನಿರ್ಮಿಸಿರುವ ಎಲ್ಲ 8 ಬ್ಯಾರೇಜುಗಳೂ ಮುಳುಗಡೆಯಾಗಿವೆ. ಭೀಮಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಪಾರ ಪ್ರಮಾಮದ …

Read More »

ಎಡಬಿಡಂಗಿ, ಅವಕಾಶವಾದಿಯಿಂದ ನಾವು ಸ್ವಾಭಿಮಾನದ ಪಾಠ ಕಲಿಯಬೇಕಾಗಿಲ್ಲ; ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು : ಆತ್ಮವಂಚನೆಯ ರಾಜಕಾರಣಿಯಾದ ನಿಮ್ಮಿಂದ ಜೆಡಿಎಸ್​ ಪಕ್ಷದವರು ಕಲಿಯಬೇಕಾಗಿದ್ದು ಏನೂ ಇಲ್ಲ. ಅಧಿಕಾರದ ಆಸೆಗಾಗಿ ಬೇರೆ ಪಕ್ಷಕ್ಕೆ ಜಿಗಿದವರು ನೀವು. ನಿಮ್ಮಿಂದ ನಾವು ಕಲಿಯಬೇಕಾಗಿಲ್ಲ. ಈಗ ನಮ್ಮನ್ನು ಅವಕಾಶವಾದಿ ಪಕ್ಷ ಎಂದು ಹೇಳುತ್ತಿದ್ದೀರಿ. ಈ ಮೂಲಕ ನಿಮ್ಮ ಊಸರವಳ್ಳಿ ರಾಜಕಾರಣದ ಬಣ್ಣ ಬಯಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಸರಣಿ ಟ್ವೀಟ್​ಗಳನ್ನು ಮಾಡಿರುವ ಮಾಜಿ ಸಿಎಂ …

Read More »

ಮಕ್ಕಳಿಗೆ ಸಿಗಬೇಕಾದ ಪೌಷ್ಟಿಕ ಆಹಾರ ಅಂಗನವಾಡಿ ಕಾರ್ಯಕರ್ತೆಯರ ಮನೆಗೆ

ಬೀದರ್ : ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗಬೇಕು ಎಂಬ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ಮುಖಾಂತರ ಸರ್ಕಾರ‌ ಅಂಗನವಾಡಿಗಳ ಮೂಲಕ ಪೌಷ್ಠಿಕ ಆಹಾರ ನೀಡುತ್ತಿದೆ. ಆದರೆ ಗಡಿ ಜಿಲ್ಲೆ ಬೀದರನಲ್ಲಿ ಗರ್ಭಿಣಿಯರು, ಮಕ್ಕಳ ಹೊಟ್ಟೆ ಸೇರಬೇಕಾದ ಪೌಷ್ಠಿಕ ಆಹಾರ ಧಾನ್ಯ ಅಂಗನವಾಡಿ ಕಾರ್ಯಕರ್ತೆಯರ ಹೊಟ್ಟೆ ಪಾಲಾಗುತ್ತಿದೆ. ಪಾಲಕರ ತಿಳುವಳಿಕೆ ಕೊರತೆಯಿಂದ ಬೀದರ್ ಜಿಲ್ಲೆಯಲ್ಲಿ ಅಪೌಷ್ಟಿಕತೆ ಮಕ್ಕಳ ಪ್ರಮಾಣ ಗಣನೀಯವಾಗಿದೆ. ಈ ಸಮಸ್ಯೆಯನ್ನು ಕೇಂದ್ರ …

Read More »

ಅಕ್ರಮ ಸಂಬಂಧದ ಹಿನ್ನಲೆಯಲ್ಲಿ ಕೊಲೆ : ಆರು ಮಂದಿ ಆರೋಪಿಗಳ ಸೆರೆ

ಟಿ.ನರಸೀಪುರ, -ತಾಲೂಕಿನ ಕೇತುಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಬನ್ನೂರು ಪೋಲೀಸರು ಯಶಸ್ವಿಯಾಗಿದ್ದು ಘಟನೆಯ ಸಂಬಂಧ 7 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೇತುಪುರ ಗ್ರಾಮದ ಕೆ.ಆರ್.ಸುಭಾಷ್ (23),ಚಂದನ್(22),ಸಂಜಯ (24),ಪುನೀತ್ (22), ವಿನಯ (30),ರವಿ(24) ಹಾಗು ಚಂದ್ರು(25) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಸೆ.12 ರಂದು ಬನ್ನೂರು ಪೋಲೀಸ್ ಠಾಣಾ ವ್ಯಾಪ್ತಿಯ ಕೇತುಪುರ ಗ್ರಾಮದಲ್ಲಿ ಕೃಷ್ಣೇಗೌಡ ಎಂಬುವರ ಪುತ್ರ ಸಿದ್ದರಾಜು ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. …

Read More »