Breaking News

ರಾಷ್ಟ್ರೀಯ

ರಾಜ್ಯಸಭಾ ಸದಸ್ಯರಾಗಿ ದೇವೇಗೌಡರು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಮತ್ತು ಜಾತ್ಯಾತೀತ ಜೆಡಿಎಸ್ ಮುಖ್ಯಸ್ಥ ಎಚ್.ಡಿ.ದೇವೇಗೌಡ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಸಂಸತ್‍ನ ಮುಂಗಾರು ಅಧಿವೇಶನ ಭಾನುವಾರ ಕೂಡ ನಡೆಯುತ್ತಿದೆ. ಹೀಗಾಗಿ ದೇವೇಗೌಡರು ಶನಿವಾರ ರಾತ್ರಿಯೇ ದೆಹಲಿಗೆ ಹೋಗಿದ್ದರು. ಇಂದು ಬೆಳಗ್ಗೆ ಸುಮಾರು 9 ಗಂಟೆಗೆ ರಾಜ್ಯಸಭೆ ಸಭಾಧ್ಯಕ್ಷ ವೆಂಕಯ್ಯನಾಯ್ಡು ಸಮ್ಮುಖದಲ್ಲಿ ಎಚ್.ಡಿ.ದೇವೇಗೌಡ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಸಭೆ ಸದಸ್ಯರಾದ ಬಳಿಕ …

Read More »

ಸಾವಿರಾರು ಎಕರೆ ರೈತರ ಫಲವತ್ತಾದ ಭೂಮಿ ಸರ್ಕಾರದ ಸ್ವಾಧೀನಕ್ಕೆ’

ನಾಗಮಂಗಲ  : ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿ ಎಂಬ ಕಾರಣಕ್ಕೆ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಪ್ರದೇಶದ ಬರಡು ಭೂಮಿಯಲ್ಲಿ ಕೈಗಾರಿಕಾ ಯೋಜನೆ ರೂಪಿಸಿದ್ದೆ. ಆದರೀಗ ಕೃಷಿಗೆ ಯೋಗ್ಯವಾದ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಏನೇ ಆದರೂ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ತಾಲೂಕಿನ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ರೈತರ ಕೃಷಿಗೆ ಯೋಗ್ಯವಾದ …

Read More »

ಎಸ್‍ಪಿಬಿ ಆರೋಗ್ಯದಲ್ಲಿ ಚೇತರಿಕೆ- ಕುಳಿತುಕೊಳ್ತಾರೆ, ಊಟ ಮಾಡ್ತಾರೆ ಗಾನ ಗಾರುಡಿಗ

ಚೆನ್ನೈ: ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಸ್ವಲ್ಪ ಮಟ್ಟಿಗೆ ಕುಳಿತುಕೊಳ್ಳುವುದು ಹಾಗೂ ಸ್ವಲ್ಪ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಅವರ ಪುತ್ರ ಚರಣ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, ಆಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್‍ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ. ಇದೀಗ ಅವರು …

Read More »

ಉಡುಪಿಯಲ್ಲಿ ವರುಣನ ಅಬ್ಬರ – ಮನೆಗಳು ಮುಳುಗಡೆ,

ಉಡುಪಿ: ರಾಜ್ಯದಲ್ಲಿ ಮುಂದಿನ ಎರಡು ದಿನ ಮಹಾ ಮಳೆ ಆಗಲಿದೆ ಅಂತ ಹವಾಮಾನ ಇಲಾಖೆ ಕಟ್ಟೆಚ್ಚರಿಕೆ ನೀಡಿದೆ. ಇತ್ತ ಉಡುಪಿಯಲ್ಲಿ ಶನಿವಾರ ಮಧ್ಯಾಹ್ನದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನದಿಪಾತ್ರದ ಊರುಗಳಿಗೆ ನೀರು ನುಗ್ಗಿದ ಉಡುಪಿ ನಗರದ ಕೆಲಭಾಗ ಕೂಡ ಮುಳುಗಡೆಯಾಗಿದೆ. ಕಲ್ಸಂಕ, ಬೈಲಕೆರೆ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಬಾರಿ ನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತಡೆಯಾಗಿದೆ. ಸ್ವರ್ಣ ನದಿ ಉಕ್ಕಿ ಹರಿಯುತ್ತಿದ್ದು, ಮಲ್ಪೆ ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಸ್ತಬ್ಧವಾಗಿದೆ. ಹಿರಿಯಡ್ಕದಲ್ಲಿ ಸೇತುವೆ …

Read More »

ದಿಲ್ಲಿಯಿಂದಲೇ ಬ್ರೇಕಿಂಗ್ ನ್ಯೂಸ್ ಕೊಟ್ಟ ಬಿಎಸ್‌ವೈ, ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ನವದೆಹಲಿ : ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ಭಾರೀ ಕುತೂಹಲ ಮೂಡಿಸುತ್ತಿದೆ. ಮತ್ತೊಂದೆಡೆ ಆಕಾಂಕ್ಷಿಗಳಂತೂ ತುದಿಗಾಲಲ್ಲಿ ನಿಂತಿದ್ದು, ಸಂಪುಟ ಸೇರ್ಪಡೆಯ ಅದೃಷ್ಟ ಯಾರಿಗೆ ಒಲಿಯುವುದೋ ಎಂಬ ತವಕದಲ್ಲಿದ್ದಾರೆ. ಈ ನಡುವೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನವದೆಹಲಿಗೆ ತೆರಳಿ ವರಿಷ್ಠರ ಜತೆ ಸಂಪುಟ ವಿಸ್ತರಣೆ ಕುರಿತ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಇಂದು (ಶನಿವಾರ) ಸಂಜೆ ಬಿಗ್ ಬ್ರೇಕಿಂಗ್ ನ್ಯೂಸ್ ಕೊಡುವ ಸುಳಿವು ಸಹ ಕೊಟ್ಟಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ …

Read More »

ಬ್ರೇಕಿಂಗ್ : ದೆಹಲಿಯಿಂದ ಬೆಂಗಳೂರಿಗೆ ಸಿಎಂ ಯಡಿಯೂರಪ್ಪ ವಾಪಾಸ್ : ಸದ್ಯದಲ್ಲೇ ಸಂಪುಟ ವಿಸ್ತರಣೆ.?

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿದಂತೆ ಕೇಂದ್ರದ ಬಿಜೆಪಿ ವರಿಷ್ಠರ ಭೇಟಿಯ ಬಳಿಕ, ದೆಹಲಿಯಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿಗೆ ಹಿಂದಿರುಗಿದ್ದಾರೆ. ಹೀಗಾಗಿ ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗುತ್ತಾ ಎನ್ನುವ ಕುತೂಲಹ ಮೂಡಿಸಿದೆ. BIG BREAKING : ಮುಂದಿನವಾರ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲು …

Read More »

ʼಆಕೆ ಸಂಜನಾ ಗಿಲ್ರಾನಿ ಅಲ್ಲ ಮಾಹಿರಾʼ: ನಟಿಮಣಿಯ ಬುರ್ಕಾವತಾರ ಬಯಲು..!

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿ ‘ಸಂಜನಾ ಗಲ್ರಾನಿʼ ಬಗ್ಗೆ ಮತ್ತೊಂದು ಹೊಸ ವಿಷ್ಯ ಬಹಿರಂಗವಾಗಿದ್ದು, ಸಮಾಜೀಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ಆಕೆ ಸಂಜನಾ ಗಿಲ್ರಾನಿ ಅಲ್ಲ ಮಹಿರಾ ಎಂದು ಹೇಳಿದ್ದಾರೆ. ಹೌದು, ಪ್ರಶಾಂತ್‌ ಸಂಬರಗಿ ಈ ಕುರಿತು ಪೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದು, ‘ ಸಂಜನಾ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ …

Read More »

ಸುರತ್ಕಲ್: ತಡೆಗೋಡೆ ಕುಸಿದು ಕಾರ್ಮಿಕ ಸಾವು, ಇಬ್ಬರು ಅಪಾಯದಿಂದ ಪಾರು

ಸುರತ್ಕಲ್: ತಡೆಗೋಡೆಯೊಂದು ಬಿದ್ದ ಪರಿಣಾಮ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಅಪಾಯದಿಂದ ಪಾರಾದ ಘಟನೆ ಕೂಳೂರಿನಲ್ಲಿ ಶನಿವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ನೀರುಮಾರ್ಗ ನಿವಾಸಿ ಉಮೇಶ (38) ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಕಾರ್ಮಿಕರಾದ ಬಸವರಾಜ್ ಹಾಗೂ ನಾರಾಯಣ ಎನ್ನಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದ ಇಲ್ಲಿನ ನಿವಾಸಿ ಜಗದೀಶ್ ಎನ್ನುವವರ ಮನೆಯ ಕೆಲಸ ನಡೆಯುತಿದ್ದ ಸಂದರ್ಭ ಕಲ್ಲಿನಿಂದ ಕಟ್ಟಿದ ತಡೆಗೋಡೆ ಕುಸಿದು …

Read More »

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ತೀರ್ಮಾನ: ರಮೇಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಜೊತೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ (Ramesh Jarakiholi) ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು. ಪತ್ರಿಕಾಗೋಷ್ಠಿ ಪ್ರಮುಖಾಂಶಗಳು ಹೀಗಿವೆ. ನದಿ ಪಾತ್ರದ ತೆರವು ಕುರಿತು ಮಹತ್ವದ ಮೊದಲ ಸಭೆ ಇಂದು ಆಯೋಜಿಸಲಾಗಿದೆ. * ಮಲಪ್ರಭಾ, ಘಟಪ್ರಭಾ, ಬಳ್ಳಾರಿ …

Read More »

ಖಡಕಲಾಟ ಪೊಲೀಸರ್ ಭರ್ಜರಿ ಕಾರ್ಯಾಚರಣೆ 8.61 ಲಕ್ಷ ಮೌಲ್ಯದ ವಸ್ತುಗಳು ವಶ

  ಚಿಕ್ಕೋಡಿ:ರಸ್ತೆ ಬದಿಯಲ್ಲಿರುವ ಹಾಗೂ ಹೊಲ ಮನೆಯ ಹತ್ತಿರ ನಿಲ್ಲಿಸಿದ ಟ್ರಾಕ್ಟರ್ ಟ್ರೇಲರ್‌ಗಳನ್ನು ಹಾಗೂ ಡಿಸ್ಕ ಸಮೇತ 46 ಟಾಯರಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಖಡಕಲಾಟ ಪೋಲಿಸರು ಬಂಧಿಸಿದ್ದಾರೆ.   ಆರೋಪಿತರು ನಿಪ್ಪಾಣಿ ತಾಲೂಕಿನ ಗಳತಗಾ ಗ್ರಾಮದ ಮಾರುತಿ ಬಸಪ್ಪಾ ಠೊಣ್ಣೆ (24), ಮಹಾದೇವ ಮುರಾರಿ ಮಾಕಾಳೆ (27), ‌ಬಾಬು ಸಿದ್ದಪ್ಪಾ ಡಾಲೆ (37), ಶಿವಾನಂದ ಮಾರುತಿ ಗಜಬರ (29), ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದ ಸಂಜು ಬಿಷ್ಟಪ್ಪಾ ಅಂಬಡಗಟ್ಟಿ …

Read More »