Breaking News

ರಾಷ್ಟ್ರೀಯ

ಎನ್‍ಡಿಪಿಎಸ್ ಆಕ್ಟ್ ಸೆಕ್ಷನ್ 21, 21ಸಿ, 27ಬಿ, 27ಎ, 29, ಐಪಿಸಿ 120ಬಿ ಅಡಿ ಎಫ್‍ಐಆರ್ ದಾಖಲಾಗಿದೆ

ಬೆಂಗಳೂರು: ಎರಡು ಬಾರಿ ಎಂಡಿಎಂಎ (ಮೀಥೈಲ್ ಎನೆಡಿಯಾಕ್ಸಿ ಮೆಥಾಂಫೆಟಮೈನ್ ನನ್ನು ಎಕ್‍ಸಸ್ಟಿ ಮಾತ್ರೆ ಎಂದು ಕರೆಯಲಾಗುತ್ತದೆ) ಡ್ರಗ್ ತೆಗೆದುಕೊಂಡಿರೋದಾಗಿ ನಟಿ ರಾಗಿಣಿ ದ್ವಿವೇದಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ ಗೆಳೆಯ ರವಿಶಂಕರ್ ತಂದುಕೊಟ್ಟಿದ್ದ ಎಂಡಿಎಂಎ ಡ್ರಗ್ ಮನೆಯಲ್ಲಿಯೇ ಬಳಕೆ ಮಾಡಿದ್ದೇನೆ ಎಂದು ರಾಗಿಣಿ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎರಡು ಬಾರಿಯೂ ರವಿಶಂಕರ್ ಡ್ರಗ್ಸ್ ತಂದಿದ್ದನು. ಇತ್ತ ರಾಗಿಣಿ, ರವಿಶಂಕರ್ ಮತ್ತು ರಾಹುಲ್ ಬಳಸುತ್ತಿದ್ದ ಮೊಬೈಲ್ ಮಾಹಿತಿಯನ್ನ ಪುನಃ ಕಲೆ ಹಾಕಲಾಗಿದೆ. …

Read More »

ಮತ್ತೊಂದು ಡ್ರಗ್ಸ್ ಜಾಲದ ಮೇಲೆ ಸಿಸಿಬಿ ದಾಳಿ – 20 ಲಕ್ಷ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ಸಿಸಿಬಿ ಪೊಲೀಸರು ಎರಡು ಕಾರ್ಯಾಚರಣೆ ನಡೆಸಿದ್ದು, ಮೊತ್ತೊಂದು ಡ್ರಗ್ಸ್ ದಂಧೆ ಜಾಲವನ್ನು ಪತ್ತೆ ಮಾಡಿದ್ದಾರೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಮಿಷನರ್ ಕಮಲ್ ಪಂತ್, ಸಿಸಿಬಿ ಪೊಲೀಸರು ಕೆ.ಆರ್.ಪುರಂ ವ್ಯಾಪ್ತಿಯಲ್ಲಿ ಮತ್ತೊಂದು ಡ್ರಗ್ಸ್ ಜಾಲದ ಮೇಲೆ ದಾಳಿ ಮಾಡಿದ್ದಾರೆ. ಕಾರ್ಯಾಚರಣೆ ವೇಳೆ 2 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 20 ಲಕ್ಷಕ್ಕೂ ಅಧಿಕ ಬೆಲೆ ಇರಬಹುದು ಎಂದರು. ನಮಗೆ ಇರುವ …

Read More »

ಜಿಲ್ಲಾ ಉಸ್ತುವಾರಿ ಸಚಿವರು ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು.

ಗೋಕಾಕ್: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಂಜನಿಯರಿಂಗ್ ಇಲಾಖೆಯಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯಡಿಯಲ್ಲಿ 73.44 ಲಕ್ಷ ರೂಪಾಯಿ ವೆಚ್ಚದಲ್ಲಿ ಬೆಟಗೇರಿ ಗ್ರಾಮದಿಂದ …

Read More »

ರಾಗಿಣಿ ಸೇರಿ ಮೂರು ಮಂದಿ ಸಿಕ್ಕಿಬಿದ್ದಿದ್ದು ಹೇಗೆ? ಡ್ರಗ್ಸ್‌ ಮಾಫಿಯಾ ಬಹಿರಂಗವಾಗಿದ್ದು ಹೀಗೆ!

ಬೆಂಗಳೂರು : ಮಾದಕ ವಸ್ತು ಜಾಲದ ಪ್ರಕರಣದ ಸಿಸಿಬಿ ತನಿಖೆ ಮೇಲೆ ಯಾವುದೇ ರೀತಿಯ ಒತ್ತಡವಿಲ್ಲ. ಜಾಲ ಬಹು ವಿಸ್ತಾರವಾಗಿದ್ದು, ಈ ಜಾಲದಲ್ಲಿ ಸಿಲುಕಿರುವ ಪ್ರತಿಯೊಬ್ಬರನ್ನು ತನಿಖೆಗೊಳಪಡಿಸುತ್ತೇವೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಗುಡುಗಿದರು. ನಗರದ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್‌ ಜಾಲದ ಸಮಗ್ರವಾಗಿ ನಡೆಯಲಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಪ್ರತಿಯೊಬ್ಬರ ತನಿಖೆಯೂ ಹಂತ ಹಂತ ಹಂತವಾಗ ನಡೆಯಲಿದೆ ಎಂದರು. ಜಾಲ ಬಯಲಾಗಿದ್ದು …

Read More »

ಬಿಬಿಎಂಪಿ ಚುನಾವಣೆ ಮುಂದೂಡಿದ್ರೆ ಹೈಕೋರ್ಟ್‌ಗೆ ಮೊರೆ’

ಬೆಂಗಳೂರು : ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ಬಿಬಿಎಂಪಿ ಚುನಾವಣೆ ಮುಂದೂಡಲು ಪ್ರಯತ್ನಿಸುತ್ತಿದ್ದು, ಈ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗುವುದು ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜೀದ್‌ ಹೇಳಿದ್ದಾರೆ.   ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಿನ ಪಾಲಿಕೆಯ 198 ವಾರ್ಡ್‌ಗಳನ್ನು 225ಕ್ಕೆ ಹೆಚ್ಚಳ ಮಾಡುವುದರ ಹಿಂದೆ ಪಾಲಿಕೆ ಚುನಾವಣೆ ಮುಂದೂಡುವ ಉದ್ದೇಶ ಅಡಗಿದೆ. 2007ರಲ್ಲಿಯೂ ಅಂದಿನ ಬಿಜೆಪಿ ಸರ್ಕಾರ ಬಿಬಿಎಂಪಿಗೆ 110 ಹಳ್ಳಿಗಳನ್ನು ಸೇರಿಸುವ ನೆಪದಲ್ಲಿ …

Read More »

ಮಾದಕ ವಸ್ತು ಮಾರಾಟಕ್ಕೆ ಯತ್ನ: ವಿದೇಶಿ ಪ್ರಜೆಗಳ ಬಂಧನ

ಬೆಂಗಳೂರು : ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ್ದ ಮೂವರು ವಿದೇಶಿ ಪ್ರಜೆಗಳನ್ನು ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಪ್ರಜೆ ಕಿಜ್‌ ಪ್ರಿನ್ಸ್‌ (23), ಎನ್‌. ಝಿಗ್ವೆ ಎಝಿಕೆ (39) ಮತ್ತು ಐವೋರಿ ಕೋಸ್ಟ್‌ ದೇಶದ ನಿವಾಸಿ ದೊಸ್ಸಾ ಖಲೀಫಾ (26) ಬಂಧಿತರು. ಆರೋಪಿಗಳಿಂದ 13.760 ಗ್ರಾಂ ಕೋಕೇನ್‌, 2.850 ಗ್ರಾಂ ಎಂಡಿಎಂಎ ಮಾತ್ರೆ ಹಾಗೂ ಗ್ರಾಹಕರನ್ನು ಸಂಪರ್ಕಿಸಲು ಬಳಸುತ್ತಿದ್ದ ಐದು ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. …

Read More »

ಸಾಲ ಮಂಜೂರು ಮಾಡಿಸಲಿಲ್ಲ ಎಂದು ಮ್ಯಾನೇಜರ್‌ ಮನೆಯಲ್ಲಿ ದರೋಡೆ!

ಬೆಂಗಳೂರು : ಸಾಲ ಮಂಜೂರಾತಿ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಎಲ್‌ಐಸಿ ಹೌಸಿಂಗ್‌ ಕಂಪೆನಿಯ ಮ್ಯಾನೇಜರ್‌ವೊಬ್ಬರ ಪತ್ನಿಯ ಕೈ-ಕಾಲು ಕಟ್ಟಿ ಹಾಕಿ, ದರೋಡೆ ಮಾಡಿದ್ದ ತಮಿಳುನಾಡು ಮೂಲದ ಮೂವರು ಆರೋಪಿಗಳು ಇದೀಗ ಕೆ.ಆರ್‌.ಪುರಂ ಪೊಲೀಸರ ಅತಿಥಿಯಾಗಿದ್ದಾರೆ. ವಿ.ಬಿ.ಲೇಔಟ್‌ ನಿವಾಸಿ ಶಿವಕುಮಾರ್‌ (37), ಅತಿಥಿ ಬಡಾವಣೆ ನಿವಾಸಿಗಳಾದ ಸಿದ್ಧಾರ್ಥ (25) ಮತ್ತು ಡೇವಿಡ್‌ ಅಲಿಯಾಸ್‌ ಬುದ್ಧ ನೇಷನ್‌ (32) ಬಂಧಿತರು. ಆರೋಪಿಗಳಿಂದ ದ್ವಿಚಕ್ರ ವಾಹನ ಹಾಗೂ 6.50 ಲಕ್ಷ ಮೌಲ್ಯದ 170 ಗ್ರಾಂ …

Read More »

ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ: ಡಿ.ಕೆ .ಶಿ.

ಬೆಂಗಳೂರು: ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಕಳೆದ ಅಗಸ್ಟ್ 25ರಂದು ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರು ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ವೈದ್ಯರ ಸಲಹೆ ಮೇರೆಗೆ ಇನ್ನೂ ಕೆಲ ದಿನಗಳು ನಾನು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಪಿಸಿಸಿ …

Read More »

ಮಹಾನಾಯಕ’ ಧಾರಾವಾಹಿ ಪ್ರಸಾರ ನಿಲ್ಲಿಸಲು ಖಾಸಗಿ ವಾಹಿನಿ ಮೇಲೆ ಒತ್ತಡ

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನದ ಗಾಥೆಯ ಕುರಿತಾದ ಮಹಾನಾಯಕ ಧಾರವಾಹಿ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದು, ಇದೀಗ ಈ ಧಾರವಾಹಿಯ ಪ್ರಸಾರವನ್ನು ನಿಲ್ಲಿಸುವಂತೆ ಖಾಸಗಿ ವಾಹಿನಿ ಮೇಲೆ ಕೆಲವರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಮಹಾನಾಯಕ ಧಾರವಾಹಿ ನಿಲ್ಲಿಸುವಂತೆ ಹಲವಾರು ದೂರವಾಣಿ ಕರೆಗಳು ಬರುತ್ತಿವೆ. ಮಧ್ಯರಾತ್ರಿ ಕರೆ ಮಾಡಿ ಧಾರವಾಹಿ ನಿಲ್ಲಿಸುವಂತೆ ಕೆಲವರು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಘವೇಂದ್ರ …

Read More »

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕಾಗಿ ‘ಅರಿವು’ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಆಂಗ್ಲೋ-ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ನೀಡಲಿದೆ. ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಂದ ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ www.kmdc.kar.nic.in/arivu2 ನಲ್ಲಿ ಅರ್ಜಿ ಸಲ್ಲಿಸಿ, ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್‍ನೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆಪ್ಟಂಬರ್ …

Read More »