Breaking News

ರಾಷ್ಟ್ರೀಯ

30 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ. ಶನಿವಾರ 69,239 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ತನ್ನೆಲ್ಲ ಹಿಂದಿನ ದಾಖಲೆಗಳ ಬ್ರೇಕ್ ಮಾಡಿದೆ. ಕಳೆದ 24 ಗಂಟೆಯಲ್ಲಿ ಕೊರೊನಾದಿಂದಾಗಿ ಒಟ್ಟು 912 ಜನರು ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 56,706ಕ್ಕೆ ಏರಿಕೆಯಾಗಿದೆ. ಸದ್ಯ 7,07,668 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 30,44,941ಕ್ಕೆ ಏರಿಕೆಯಾಗಿದೆ. ಕೊರೊನಾದಿಂದ ಗುಣಮುಖ ಪ್ರಮಾಣ ಶೇ.74.89ರಷ್ಟಿದೆ. ಕಳೆದ 15 ದಿನದಲ್ಲಿಯೇ 20 ಲಕ್ಷ …

Read More »

ಎಸ್‍ಪಿಬಿ ಶೀಘ್ರಗುಣಮುಖರಾಗಲಿ: ಹಿರಿಯ ನಟಿ ಭಾರತಿ ವಿಷ್ಣುವರ್ಧನ್

ಬೆಂಗಳೂರು: ಕೊರೊನಾದಿಂದ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯ ಆರೋಗ್ಯದಲ್ಲಿ ಗಂಭೀರವಾದ ಹಿನ್ನೆಲೆಯಲ್ಲಿ ಎಸ್‍ಪಿಬಿ ಶೀಘ್ರಗುಣಮುಖರಾಗಲಿ ಅಂತ ದೇವರಲ್ಲಿ ಪ್ರಾರ್ಥಿಸೋಣ ಎಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.ಸೋಶಿಯಲ್ ಮೀಡಿಯಾದ ಮೂಲಕ ಭಾರತಿ ವಿಷ್ಣುವರ್ಧನ್ ಅವರು ಬಾಲಸುಬ್ರಹ್ಮಣ್ಯ ಬಗ್ಗೆ ಮಾತನಾಡಿದ್ದಾರೆ. ಈ ವಿಡಿಯೋವನ್ನು ನಟ ಅನಿರುದ್ಧ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮ್ಮ ಬಾಲಸುಬ್ರಹ್ಮಣ್ಯ ಅವರು ಕೊರೊನಾದಿಂದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದು, ಅದರಿಂದ ನರಳುತ್ತಿದ್ದಾರೆ. ಈ ಸುದ್ದಿ ಕೇಳಿ ನನಗೆ ಬಹಳ ಬೇಸರವಾಗಿದೆ. ಅಂತಹ …

Read More »

ಆ. 24,25 ರಂದು ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಕೆಶಿ ಭೇಟಿ

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರದಿಂದ ಎರಡು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸೋಮವಾರದಿಂದ ಎರಡು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಲಿದ್ದಾರೆ. ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ವಿಮಾನದ ಮೂಲಕ ಬಂದಿಳಿಯಲಿದ್ದು, ನಂತರ ಅವರು ಬೆಳಗಾವಿ ಜಿಲ್ಲೆಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಕಾರ್ಯಕಾರಿ …

Read More »

ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ

ಭಾರತಕ್ಕೆ ಸದಾ ಹೊರೆಯಾಗಿರೋ ನೆರೆ ರಾಷ್ಟ್ರ ಅಂದ್ರೆ ಅದು ಪಾಕಿಸ್ತಾನ. ಭಾರತಕ್ಕೆ ಕಿರುಕುಳ ನೀಡೋದ್ರಲ್ಲಿ ಸದಾ ಮುಂದಿರೋ ಪಾಪಿ ಪಾಕಿಸ್ತಾನ ಜಗತ್ತಿನ ಮುಂದೆ ಮತ್ತೊಮ್ಮೆ ಬೆತ್ತಲಾಗಿದೆ. ಈ ಮೂಲಕ ತನ್ನ ನರಿಬುದ್ಧಿಯನ್ನ ವಿಶ್ವದ ಎದುರು ಬಯಲಾಗಿದೆ. ಭಾರತಕ್ಕೆ ಬೇಕಿರೋ ಮೋಸ್ಟ್ ವಾಂಟೆಂಡ್ ಕ್ರಿಮಿನಲ್​ಗಳಿಗೆ ಪಾಕಿಸ್ತಾನದ ನೆಲದಲ್ಲಿ ಜಾಗ ನೀಡಿರುವುದನ್ನ ಒಪ್ಪಿಕೊಂಡಿದೆ ಅಂತಾ ಪಾಕಿಸ್ತಾನದಿಂದ್ಲೇ ವರದಿ ಹೊರಬಿದ್ದಿದೆ. ದಾವೂದ್ ತನ್ನ ನೆಲದಲ್ಲಿರೋದಾಗಿ ಒಪ್ಪಿಕೊಂಡಿತಾ ಪಾಕ್? ಪಾಕಿಸ್ತಾನದ ಸ್ಥಳೀಯ ಮಾಧ್ಯಮದ ವರದಿಯನ್ನ ಆಧರಿಸಿ, …

Read More »

ಆರೋಗ್ಯಾಧಿಕಾರಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಚಿವ ಸಿ.ಸಿ ಪಾಟೀಲ

ಗದಗ: ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಗದಗ ಜಿಲ್ಲೆ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ. ಈ ಕುರಿತು ಸಚಿವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವಿದ್ ಅಕ್ತರ್ ಅವರೊಂದಿಗೆ ಮಾತನಾಡಿದ್ದು, ಅವರು ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ಈಗಾಗಲೇ ಮಾತನಾಡಿದ್ದು, ಸರ್ಕಾರವು ಚಿಕಿತ್ಸೆ ವೆಚ್ಚ ಪಾವತಿಸಲಿದೆ. ಸರ್ಕಾರವು ಕೊರೊನಾ ವಾರಿಯರ್ಸ್ ಜೊತೆಗೆ ಇರಲಿದೆ ಎಂದು …

Read More »

ರಾಜ್ಯದ ಇಬ್ಬರು ಕೈ ನಾಯಕರಿಗೆ `AICC’ಯಲ್ಲಿ ಉನ್ನತ ಹುದ್ದೆ?

ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ನಾಯಕರಾದ ಕೆ.ಹೆಚ್. ಮುನಿಯಪ್ಪ ಹಾಗೂ ಹೆಚ್.ಕೆ.ಪಾಟೀಲ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಮುಂದಾಗಿದೆ ಎನ್ನಲಾಗಿದ್ದು, ಹೆಚ್.ಕೆ.ಪಾಟೀಲ್ ಅವರಿಗೆ ಸಿಡಬ್ಲ್ಯೂಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದ್ದು, ಕೆ.ಹೆಚ್. ಮುನಿಯಪ್ಪ ಅವರಿಗೆ ಎಸ್ಸಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ …

Read More »

ಹಬ್ಬದ ಸಂಭ್ರಮದ ಮಧ್ಯೆ ಊರಿನ ಹೊರಭಾಗದಲ್ಲಿ ಪತ್ತೆಯಾದ ಬ್ಯಾಗ್​ ತೆರೆದ ಗ್ರಾಮಸ್ಥರಿಗೆ ಶಾಕ್​!​

ಕಲಬುರಗಿ: ಮಹಾಮಾರಿ ಕರೊನಾ ವೈರಸ್​ ಭೀತಿಯ ನಡುವೆಯೂ ರಾಜ್ಯದೆಲ್ಲಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿರುವ ಸಮಯದಲ್ಲೇ ಕಲಬುರಗಿಯಲ್ಲಿ ನಡೆದಿರುವ ಅಮಾನವೀಯ ಘಟನೆಯೊಂದು ಕೋವಿಡ್​ಗಿಂತಲೂ ಕ್ರೂರಿ ಎಂಬುದನ್ನು ನಿರೂಪಿಸಿದೆ. ಬಹುತೇಕರು ನಮಗೆ ಮಕ್ಕಳಾಗಿಲ್ಲವಲ್ಲ ಎಂದು ದಿನನಿತ್ಯ ಕೊರಗುತ್ತಿರುತ್ತಾರೆ. ಗಂಡಾಗಲಿ ಅಥವಾ ಹೆಣ್ಣಾಗಲಿ ನಮಗೊಂದು ಮಗು ಕರುಣಿಸಪ್ಪಾ ಎಂದು ದೇವರಲ್ಲಿ ಪ್ರಾರ್ಥಿಕೊಳ್ಳುವವರಿಗೇನು ಕಡಿಮೆಯಿಲ್ಲ. ಆದರೆ, ಇವೆಲ್ಲದರ ನಡುವೆ ಮಗು ಜನಿಸಿದರು ಅದು ಬೇಡವೆಂದು ರಸ್ತೆಯಲ್ಲಿ ಅನಾಥವಾಗಿ ಎಸೆದು ಹೋಗುವವರನ್ನು ಎಷ್ಟು ಬೈದರು ಕಡಿಮೆಯೇ. …

Read More »

ಕೊರೊನಾ ಬುಲೆಟಿನ್ : ‘ಗಣೇಶ ಚತುರ್ಥಿ’ ದಿನದಂದೇ ರಾಜ್ಯದಲ್ಲಿ 7330 ಮಂದಿಗೆ ಸೋಂಕು ಧೃಡ, 93 ಬಲಿ

ಬೆಂಗಳೂರು : ಗೌರಿ ಗಣೇಶ ಹಬ್ಬದ ದಿನ ಕೂಡ ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದೆ.ರಾಜ್ಯದಲ್ಲಿ ಇಂದು 7330 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹೌದು, ರಾಜ್ಯದಲ್ಲಿ ಇಂದು 7330 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,71,876 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 93 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು. ಒಟ್ಟಾರೆ ಸಾವಿನ ಸಂಖ್ಯೆ 4615 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕಳೆದ 24 …

Read More »

ಕೊರೊನಾ ಹಾವಳಿಯಿಂದ ಕುಂದಿದ ಹಬ್ಬದ ಖರೀದಿ: ಸುಮಾರು 400 ಕೋಟಿ ರೂ. ವಹಿವಾಟು ಖೋತಾ?

ಬೆಂಗಳೂರು:ಕೊರೊನಾ ಮಹಾಮಾರಿ ದೇಶದ ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಿದೆ. ಈಗ ಅದರ ಹೊಡೆತ ಗಣೇಶೋತ್ಸವಕ್ಕೂ ತಗಲಿದ್ದು, ರಾಜ್ಯಾದ್ಯಂತ ಸುಮಾರು 400 ಕೋಟಿ ರೂಪಾಯಿಯಷ್ಟು ವಹಿವಾಟು ಖೋತಾ ಹೊಡೆದಿದೆ. ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಸೇರುವ ಆಚರಣೆಗಳಿಗೆ ಬ್ರೇಕ್ ಹಾಕಲಾಗಿದೆ.ಇದರ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಬೃಹತ್ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲು ರಾಜ್ಯ ಸರ್ಕಾರ ಅವಕಾಶ ನೀಡಿಲ್ಲ. ಹೀಗಾಗಿ, ಬೃಹತ್ ಗಣೇಶ ಮೂರ್ತಿಗಳು ವ್ಯಾಪಾರವಾಗದೆ, ಮೂರ್ತಿ ತಯಾರಕರಿಗೆ ಭಾರಿ …

Read More »

ಗಣೇಶೋತ್ಸವ: ಮಾರ್ಗಸೂಚಿ ಪಾಲನೆ ಕಡ್ಡಾಯ

ಹರಿಹರ: ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ನಗರಸಭೆ ಪೌರಾಯುಕ್ತೆ ಎಸ್‌.ಲಕ್ಷ್ಮಿ ತಿಳಿಸಿದ್ದಾರೆ. ದೇವಸ್ಥಾನ, ಮನೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬವನ್ನು 20 ಜನರ ಸಂಖ್ಯೆ ಮೀರದಂತೆ ಆಚರಿಸಬೇಕು. ಸಾರ್ವಜನಿಕ ಸ್ಥಳದ ಮೂರ್ತಿ 4 ಅಡಿ, ಮನೆಗಳಲ್ಲಿ 2 ಅಡಿ ಅಳತೆ ಮೀರಬಾರದು. ನಗರಸಭೆಯಿಂದ ಪೂರ್ವಾನುಮತಿ ಪಡೆಯಬೇಕು. ವಾರ್ಡ್‌ಗೆ ಅಥವಾ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು. ಮೆರವಣಿಗೆ ಸೇರಿದಂತೆ ಸಾಂಸ್ಕೃತಿಕ, ಸಂಗೀತ, …

Read More »